Thursday 16 October 2014

ರವಾಸ ಕಾರ್ಯಕ್ರಮ ಮೈಸೂರು, ಅ 16 , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೇಂದ್ರ ಸಚಿವ ಡಾ|| ಹರ್ಷವರ್ಧನ ಅವರು ಅಕ್ಟೋಬರ್ 17 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು ಅಂದು ಬೆಳಿಗ್ಗೆ 9 ಗಂಟೆಗೆ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಧ್ಯಾಹ್ನ 1 ಗಂಟೆಗೆ ಮೈಸೂರು ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.ಸಂಜೆ 4-30 ಕ್ಕೆ ಜಿಲ್ಲಾ ಪಂಚಾಯತ್ ಸದಸ್ಯರು, ಸ್ವಯಂ ಸೇವಾ ಸಂಸ್ಥೆ ಹಾಗೂ ಜಿಲ್ಲಾ ಪಂಚಾಯತ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಅಖಿಲ ಭಾರತ ರೈತರ ಸಬಲೀಕರಣ ಕಾರ್ಯಾಗಾರ ಮೈಸೂರು, ಅ 16 . ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯದ ವತಿಯಿಂದ ಅಕ್ಟೋಬರ್ 17 ರಂದು ಸಂಜೆ 4 ಗಂಟೆಗೆ ಸಿ.ಎಫ್.ಟಿ.ಆರ್.ಐನಲ್ಲಿರುವ ಐ.ಎಫ್.ಟಿ.ಟಿ.ಸಿ ಸಭಾಂಗಣದಲ್ಲಿ ಅಖಿಲ ಭಾರತ ರೈತರ ಸಬಲೀಕರಣ ಕಾರ್ಯಾಗಾರದ ಉದ್ಘಾಟನಾ ಸಮಾರಂಭ ನಡೆಯಲಿದೆ. ಕೃಷಿ ಸಚಿವ ಕೃಷ್ಣ ಭೈರೇಗೌಡ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು,ಚಾಮರಾಜನಗರ ಲೋಕಸಭಾ ಸದಸ್ಯ ಆರ್.ಧ್ರುವ ನಾರಾಯಣ ಅವರು ಸ್ಮರಣಾ ಸಂಚಿಕೆ ಬಿಡುಗಡೆ ಮಾಡುವರು. ಮೈಸೂರು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರು ಕಾರ್ಯಾಗಾರದ ಲಾಂಛನ ಅನಾವರಣಗೊಳಿಸಲಿದ್ದಾರೆ. ಕಿಸಾನ್ ಮೋರ್ಚದ ರಾಷ್ಟ್ರೀಯ ಉಪಾಧ್ಯಕ್ಷ ಎ. ಪಾಷಾ ಪಟೇಲ್, ರಾಷ್ಟ್ರೀಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕು.ಶಾಂತ ಕುಮಾರ್, ನಾಬಾರ್ಡ್ ಜನರಲ್ ಮ್ಯಾನೇಜರ್ ಜಿ.ಆರ್.ಚಿಂತಲಾ ಹಾಗೂ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯದ ನಿರ್ದೇಶಕ ಪ್ರೋ ರಾಮ್ ರಾಜಶೇಖರನ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಾಮಾನ್ಯ ಸಭೆ ಮೈಸೂರು, ಅ 16. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಡಾ||ಪುಷ್ಪಾ ಅಮರನಾಥ್ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 28 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಾಮಾನ್ಯ ಸಭೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ.ಎ.ಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರವಾಸ ಕಾರ್ಯಕ್ರಮ ಮೈಸೂರು, ಅ 16 .ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು.ಟಿ. ಖಾದರ್ ಅವರು ಅಕ್ಟೋಬರ್ 17 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು ಅಕ್ಟೋಬರ್ 17 ರಂದು ಬೆಳಿಗ್ಗೆ 9 ಗಂಟೆಗೆ ಆಲ್ ಇಂಡಿಯಾ ಇನ್ಸ್‍ಟಿಟ್ಯೂಟ್ ಆಫ್ ಸ್ಪೀಚ್ ಅಂಡ್ ಹಿಯರಿಂಗ್ ನಲ್ಲಿ ಅಡಿಯೋಮೆಟ್ರಿಕ್ ಬ್ಲಾಕ್ ಮತ್ತು ನಾಲೆಜ್ ಪಾರ್ಕ್ ಉದ್ಘಾಟನಾ ಸಮಾರಂಭ ಹಾಗೂ ಸೆಂಟರ್ ಆಫ್ ಎಕ್ಸೆಲೆನ್ಸ್ ಮತ್ತು ಮ್ಯೂಸಿಯಂ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಿದ ನಂತರ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಎಸ್.ಎ. ಅಶ್ರಫುಲ್ ಹಸನ್ ಅವರು ತಿಳಿಸಿದ್ದಾರೆ. ಪ್ರವಾಸ ಕಾರ್ಯಕ್ರಮ ಮೈಸೂರು, ಅ 16.ಪೌರಾಡಳಿತ, ಸಾರ್ವಜನಿಕ ಉದ್ದಿಮೆಗಳು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ , ವಕ್ಫ್ ಸಚಿವ ಡಾ|| ಖಮರುಲ್ ಇಸ್ಲಾಂ ಅವರು ಅಕ್ಟೋಬರ್ 19 ಹಾಗೂ 20 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು ಅಕ್ಟೋಬರ್ 19 ರಂದು ಸಂಜೆ 7 ಗಂಟೆಗೆ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಅಕ್ಟೋಬರ್ 20 ರಂದು ಬೆಳಿಗ್ಗೆ 11ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪೌರಾಡಳಿತ ಹಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3-00 ಗಂಟೆಗೆ ಪತ್ರಿಕಾ ಗೋಷ್ಟಿಯಲ್ಲಿ ಭಾಗವಹಿಸಿದ ನಂತರ ಸಂಜೆ 5 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಕಲಚೇತನರು –ಅವಕಾಶಗಳು ಮತ್ತು ಸವಾಲುಗಳು ಕುರಿತು ಕಾರ್ಯಾಗಾರ ಮೈಸೂರು, ಅ 16 .ಬೆಂಗಳೂರು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮೈಸೂರು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ನ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 18 ರಂದು 10-30 ಗಂಟೆಗೆ ರಾಣಿ ಬಹದ್ದೂರ್ ಸಭಾಂಗಣದಲ್ಲಿ ವಿಕಲಚೇತನರು –ಅವಕಾಶಗಳು ಮತ್ತು ಸವಾಲುಗಳು ಕುರಿತು ಕಾರ್ಯಾಗಾರ ನಡೆಯಲಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಡಾ||ಪುಷ್ಪಾ ಅಮರನಾಥ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ ಅಮಿತಾ ಪ್ರಸಾದ್ ಅವರು ಪ್ರಸ್ತಾವಿಕ ಭಾಷಣ ಮಾಡಲಿದ್ದಾರೆ. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನಿರ್ದೇಶಕ ಪಿ.ಸಿ.ಜಯಣ್ಣ, ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ರಂಗಪ್ಪ, ಜಿಲ್ಲಾಧಿಕಾರಿ ಸಿ.ಶಿಖಾ ಹಾಗೂ ಜಿಲ್ಲಾ ಪಂಚಾಐತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪಿ.ಎ.ಗೋಪಾಲ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಕಾನೂನು ಅವಕಾಶಗಳ ವಿಷಯದಡಿ ಅಂಗವಿಕಲರ ಅಧಿನಿಯಮ 1995 ರ ಅನ್ವಯ ವಿಕಲಚೇತನರಿಗೆ ಲಭ್ಯವಿರುವ ಕಾನೂನು ಅವಕಾಶಗಳು, ನ್ಯಾಷನಲ್ ಟ್ರಸ್ಟ್ ಕ್ಟ್ ನಿಯಮಗಳು ಮತ್ತು ಅವಕಾಶಗಳು, ವಿಕಲಚೇತನರಿಗೆ ಉದ್ಯೋಗದಲ್ಲಿ ಮೀಸಲಾತಿ, ವಿಕಲಚೇತನ ಸ್ನೇಹಿ ಕಟ್ಟಡಗಳ ರಚನೆ, ವಿಕಲಚೇತನರಿಗೆ ವೈದ್ಯಕೀಯ ಪ್ರಮಾಣಪತ್ರ ನೀಡುವ ಕುರಿತಂತೆ ಉಪನ್ಯಾಸ ನಡೆಯಲಿದೆ. ಮಧ್ಯಾಹ್ನ 2-15 ರಿಂದ ಜೀವನೋಪಾಯ ಅವಕಾಶಗಳು ವಿಷಯದಡಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅನುಷ್ಠನಗೊಳಿಸುತ್ತಿರುವ ಯೋಜನೆಗಳು, ಉದ್ಯಮಶೀಲತಾ ಅಭಿವೃದ್ಧಿ-ಕೌಶಲ್ಯ ತರಬೇತಿ ಹಾಗೂ ಉದ್ಯೋಗಾವಕಾಶ, ವಿಕಲಚೇತನರಿಗೆ ಸಾಮಾಜಿಕ, ಆರ್ಥಿಕ ಮತ್ತು ಸಮುದಾಯ ಆಧಾರಿತ ಪುನರ್ವಸತಿ ಕುರಿತು ಉಪನ್ಯಾಸ ನಡೆಯಲಿದೆ. ಮಧ್ಯಾಹ್ನ 3-40 ರಿಂದ ಅಂಗವಿಕಲತೆ ಕಾರಣಗಳು, ಗುರುತಿಸುವಿಕೆ, ಸವಾಲುಗಳು ಹಾಗೂ ಪರಿಹಾರೋಪಾಯಗಳು ವಿಷಯದಡಿ ದೈಹಿಕ ಅಂಗವಿಕಲತೆ, ದೃಷ್ಟಿದೋಷ, ಶ್ರವಣದೋಷ, ಮಾನಸಿಕ ಅಸ್ವಸ್ಥತೆ, ಬುದ್ಧಿ ಮಾಂದ್ಯತೆಯ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.

No comments:

Post a Comment