Tuesday 7 October 2014


ಮಾವುತ, ಕಾವಡಿಗರಿಗೆ ವಿಶೇಷ ಭೋಜನ
    ಮೈಸೂರು,ಅ.7-ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಕಾರ್ಯಕ್ರಮಗಳು ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮಾವುತ, ಕಾವಡಿ ಹಾಗೂ ಅವರ ಕುಟುಂಬದ ಸದಸ್ಯರುಗಳಿಗೆ ಜಿಲ್ಲಾಡಳಿತದಿಂದ ವಿಶೇಷ ಭೋಜನದ ವ್ಯವಸ್ಥೆಯನ್ನು ಅರಮನೆ ಆವರಣದಲ್ಲಿ ಇಂದು ಮಾಡಲಾಗಿತ್ತು.
    ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರು ಮಾವುತ ಮತ್ತು  ಕಾವಡಿಗಳ ಕುಟುಂಬದ ಸದಸ್ಯರೊಂದಿಗೆ ಕುಳಿತು ರುಚಿಯಾದ ಭೋಜನವನ್ನು ಸವಿದರು. ಇದ್ದಕ್ಕೂ ಮುನ್ನ  ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಅರಮನೆ ಆವರಣದಲ್ಲಿ ಜಂಬೂ ಸವಾರಿಯಲ್ಲಿ ಪಾಲ್ಗೊಂಡ ಆನೆಗಳಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಬೀಳ್ಕೊಡಲಾಯಿತು. 
   ಶಾಸಕÀ ತನ್ವೀರ್ ಸೇಠ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಡಾ| ಬಿ. ಪುಷ್ಪ ಅಮರನಾಥ್, ಜಿಲ್ಲಾಧಿಕಾರಿ ಸಿ.ಶಿಖಾ, ಮುಡಾ ಆಯುಕ್ತ  ಪಾಲಯ್ಯ, ಮೈಸೂರು ಅರಮನೆ ಮಂಡಳಿ ನಿರ್ದೇಶಕಿ ಗ್ರಾಯಿತ್ರಿ, ಉಪನಿರ್ದೇಶಕ ಸುಬ್ರಮಣ್ಯ ಹಾಗೂ ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. 
ಪ್ರವಾಸ ಕಾರ್ಯಕ್ರಮ
     ಮೈಸೂರು,ಅ.7.ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ನಾಡೋಜಾ ಡಾ|| ಎಸ್.ಆರ್. ನಾಯಕ್ ಅವರು ಅಕ್ಟೋಬರ್ 10 ರಿಂದ 12  ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
    ಅಕ್ಟೋಬರ್ 10 ರಂದು ಮಧ್ಯಾಹ್ನ 3-30 ಗಂಟೆಗೆ ಮೈಸೂರಿಗೆ ಆಗಮಿಸಿ ನ್ಯಾಯನಿವಾಸ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅಕ್ಟೋಬರ್ 11 ರಂದು ಸಂಜೆ 5 ಗಂಟೆಗೆ ಜೆ.ಎಸ್.ಎಸ್. ಕಾನೂನು ಕಾಲೇಜಿನಲ್ಲಿ  ಆಯೋಜಿಸಿರುವ ಪದವಿ ಪ್ರಧಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ನಂತರ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅಕ್ಟೋಬರ್ 12 ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ತೆರಳುವರು.
ಪ್ರಗತಿ ಪರಿಶೀಲನಾ ಸಭೆ
     ಮೈಸೂರು,ಅ.7.ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮಗಳು ಸೇರಿದಂತೆ) 2014ನೇ ಸೆಪ್ಟೆಂಬರ್ ಮಾಹೆಯ ಅಂತ್ಯಕ್ಕೆ ಸಾಧಿಸಿದ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 15 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷಾ ತರಬೇತಿ ಶಿಬಿರ
      ಮೈಸೂರು,ಅ.7.ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ವತಿಯಿಂದ ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷಾ ತರಬೇತಿ ಶಿಬಿರವನ್ನು ಅಕ್ಟೋಬರ್ 9 ರಂದು ಬೆಳಿಗ್ಗೆ 10 ಗಂಟೆಗೆ ಕಾವೇರಿ ಸಭಾಂಗಣದಲ್ಲಿ ಮೈಸೂರಿನ ಸಂತ ಫಿಲೋಮಿನಾ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ| ಎಂ.ಕೃಷ್ಣೇಗೌಡ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕುಲಪತಿ ಪ್ರೊ.ಎಂ.ಜಿ. ಕೃಷ್ಣನ್ ಅವರು ಅಧ್ಯಕ್ಷತೆ ವಹಿಸುವರು.
ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಗೆ ಸರ್ಕಾರಿ ನೌಕರರ ಕಡ್ಡಾಯ ಹಾಜರಾತಿ
   ಮೈಸೂರು,ಅ.7.ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಅಂಗವಾಗಿ ಅಕ್ಟೋಬರ್ 8 ರಂದು ಬೆಳಿಗ್ಗೆ 10-15 ಗಂಟೆಗೆ ಕೋಟೆ ಆಂಜನೇಯ ದೇವಸ್ಥಾನದಿಂದ ಮೆರವಣಿಗೆಯ ಹೊರಡಲಿದೆ. ನಂತರ ಮಧ್ಯಾಹ್ನ 11 ಗಂಟೆಗೆ ಕಲಾಮಂದಿರದಲ್ಲಿ ಸಭಾ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಸದರಿ ಕಾರ್ಯಕ್ರಮಕ್ಕೆ ಸರ್ಕಾರಿ ನೌಕರರು ಕಡ್ಡಾಯವಾಗಿ ಹಾಜರಾಗಲು ಜಿಲ್ಲಾಧಿಕಾರಿ ಸಿ.ಶಿಖಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅ. 8 ರಂದು ಮಹರ್ಷಿ ವಾಲ್ಮೀಕಿ ಜಯಂತಿ
      ಮೈಸೂರು,ಅ.7.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಮೈಸೂರು ಮಹಾನಗರಪಾಲಿಕೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಜಿಲ್ಲೆಯ ನಾಯಕ ಜನಾಂಗದ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 8 ರಂದು ಮಧ್ಯಾಹ್ನ 11 ಗಂಟೆಗೆ ಕಲಾಮಂದಿರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
   ಕಂದಾಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಶ್ರೀನಿವಾಸಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿಧಾನಸಭಾ ಸದಸ್ಯರಾದ ವಾಸು ಅವರು ಅಧ್ಯಕ್ಷತೆ ವಹಿಸುವರು.
   ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಮತ್ತು ಸಾರ್ವಜನಿಕ ಆಡಳಿತ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ|| ಕೃಷ್ಣ ಆರ್. ಹೊಂಬಳ್ ಅವರು ಮುಖ್ಯ ಭಾಷಣಕಾರಾಗಿ ಭಾಗವಹಿಸುವರು. 
    ಲೋಕೋಪಯೋಗಿ ಸಚಿವರಾದ ಡಾ.ಹೆಚ್.ಸಿ. ಮಹದೇವಪ,್ಪ ಮಹಾನಗರಪಾಲಿಕೆಯ ಮಹಾಪೌರರಾದ ಎನ್.ಎಂ. ರಾಜೇಶ್ವರಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಡಾ| ಬಿ.ಪುಷ್ಪ ಅರಮನಾಥ್, ಲೋಕಸಬಾ ಸದಸ್ಯರಾದ ಪ್ರತಾಪ ಸಿಂಹ, ಆರ್. ಧ್ರುವನಾರಾಯಣ್, ಸಿ.ಎಸ್.ಪುಟ್ಟರಾಜು, ವಿಧಾನಸಭಾ ಸದಸ್ಯರಾದ ತನ್ವೀರ್ ಸೇಠ್, ಎಂ.ಕೆ. ಸೋಮಶೇಖರ್, ಜಿ.ಟಿ.ದೇವೇಗೌಡರು, ಚಿಕ್ಕಮಾದು, ಸಾ.ರಾ. ಮಹೇಶ್, ಹೆಚ್.ಪಿ. ಮಂಜುನಾಥ್, ಕೆ.ವೆಂಕಟೇಶ್, ವಿಧಾನಪರಿಷತ್ ಸದಸ್ಯರಾದ ಸಿ.ಹೆಚ್.ವಿಜಯಶಂಕರ್, ಗೋ.ಮಧುಸೂದನ್, ಮರಿತಿಬ್ಬೇಗೌಡ, ಎಸ್.ನಾಗರಾಜು, ಆರ್. ಧರ್ಮಸೇನ, ಮಹಾನಗರಪಾಲಿಕೆಯ ಉಪ ಮಹಾಪೌರರಾದ ವಿ.ಶೈಲೇಂದ್ರ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಲ್. ಮಾದಪ್ಪ, ತಾಲ್ಲೂಕು ಪಂಚಾಯತ್ ಅಧ್ಯಕ್ಷ ಜಿ. ಕುಮಾರ್, ಉಪಾಧ್ಯಕ್ಷ ಎ ಲೋಕಮಣಿ ಅವರು ಸಮಾರಂಭದ ಅತಿಥಿಗಳಾಗಿ ಪಾಲ್ಗೊಳ್ಳುವರು.
     ಅಂದು ಬೆಳಿಗ್ಗೆ 10-15 ಗಂಟೆಗೆ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರದ ಅಡ್ಡಪಲ್ಲಕ್ಕಿ ಮೆರವಣಿಗೆ ನಡೆಯಲಿದೆ. ಮಹಾನಗರಪಾಲಿಕೆಯ ಮಹಾಪೌರರಾದ ಎನ್.ಎಂ. ರಾಜೇಶ್ವರಿ ಅವರು ಮೆರವಣಿಗೆ ಉದ್ಘಾಟಿಸಿ ನಂದಿ ಧ್ವಜ ಪೂಜೆ ನೆರವೇರಿಸುವರು. ಹಾಗೂ ಬೆಳಗ್ಗೆ 10 ಗಂಟೆಗೆ ಮೈಸೂರು ರಂಗಸ್ವಾಮಿ ತಂಡದವರಿಂದ ಮಹರ್ಷಿ ವಾಲ್ಮೀಕಿ ಗಾಯನ ಸಂಗೀತವನ್ನು ಕಲಾಮಂದಿರದಲ್ಲಿ ಆಯೋಜಿಸಲಾಗಿದೆ.
ಗ್ರಂಥಾಲಯ ಮೇಲ್ವಿಚಾರಕರÀ ಹುದ್ದೆಗೆ ಅರ್ಜಿ ಆಹ್ವಾನ
     ಮೈಸೂರು,ಅ.7.ಜಿಲ್ಲಾ ಕೇಂದ್ರ ಗ್ರಂಥಾಲಯ ವತಿಯಿಂದ ಕೆ.ಆರ್.ನಗರ ತಾಲ್ಲೂಕಿನ ಮುಂಜನಹಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಖಾಲಿರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಗೌರವ ಸಂಭಾವನೆಯ ಮೇಲೆ ಅಭ್ಯರ್ಥಿಯನ್ನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ.
    ಆಸಕ್ತರು ಅರ್ಜಿ ನಮೂನೆಯನ್ನು ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಥವಾ ಸಂಬಂಧಿಸಿದ ತಾಲ್ಲೂಕಿನ ಶಾಖೆ ಗ್ರಂಥಾಲಯ/ಜಿಲ್ಲಾ ಕೇಂದ್ರ ಗ್ರಂಥಾಲಯ ಮೈಸೂರು ಇಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಅಕ್ಟೋಬರ್ 25 ರೊಳಗಾಗಿ ಸಂಬಂಧಿಸಿದ ಗ್ರಾಮ ಪಂಚಾಯಿತಿ ಕಚೇರಿ ಮುಖಾಂತರ ಸಲ್ಲಿಸುವುದು. ಆಯ್ಕೆಯಾದ ಮೇಲ್ವಿಚಾರಕರಿಗೆ ಮಾಸಿಕ ರೂ. 5,500 ಗೌರವ ಸಂಭಾವನೆ ನೀಡಲಾಗುವುದು.
     ಮುಂದುವರೆಕೆ ಕಲಿಕಾ ಕೇಂದ್ರಗಳಲ್ಲಿ ಪ್ರೇರಕ, ಸಹಾ ಪ್ರೇರಕರಾಗಿ ಕಾರ್ಯನಿರ್ವಹಿಸಿರುವವರಿಗೆ ಮತ್ತು ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದವರಿಗೆ ಆದ್ಯತೆ ನೀಡಲಾಗುವುದು.  ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೇಂದ್ರ ಗ್ರಂಥಾಲಯ ಮೈಸೂರು. ದೂರವಾಣಿ ಸಂಖ್ಯೆ 0821-2425875ನ್ನು ಸಂಪರ್ಕಿಸಬಹುದಾಗಿದೆ.            



ಕೋಳಿ ಸಾಕಾಣಿಕೆ ತರಬೇತಿ
      ಮೈಸೂರು,ಅ.7.ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳಿ ನಿಯಮಿತ ಮೈಸೂರು ಇವರು ಮೈಸೂರು, ಮಂಡ್ಯ, ಚಾಮರಾಜನಗರ, ದಕ್ಷಿಣ ಕನ್ನಡ, ಹಾಸನ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳ ನಿರುದ್ಯೋಗ ಯುವಕ, ಯುವತಿ ಹಾಗೂ ಸಣ್ಣ ರೈತರಿಗೆ ಕೋಳಿ ಸಾಕಾಣಿಕೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ. 
     ತರಬೇತಿಯು 5 ದಿನಗಳ ಅವಧಿಯದಾಗಿದ್ದು, ಪ್ರತಿ ಫಲಾನುಭವಿಗೆ ಒಟ್ಟು 5 ದಿನಗಳಿಗೆ ರೂ.750/- ನಂತೆ ಸಂಭಾವನೆ ಹಾಗೂ ಪ್ರಮಾಣ ಪತ್ರ ನೀಡಲಾಗುವುದು. ತರಬೇತಿಯು ಅಕ್ಟೋಬರ್ 13 ರಿಂದ 17 ರವರೆಗೆ ನಡೆಯಲಿದೆ.
      ಹೆಚ್ಚಿನ ಮಾಹಿತಿಗೆ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳಿಯ ಸಹಾಯಕ ನಿರ್ದೇಶಕರ ಕಚೇರಿ, ಮೈಸೂರು ಇವರನ್ನು ಸಂಪರ್ಕಿಸಬಹುದು.
ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ
     ಮೈಸೂರು,ಅ.7.ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಮೈಸೂರು  ತಾಲ್ಲೂಕಿನ ಬೀರಿಹುಂಡಿ, ಬೋಗಾದಿ, ಹೊಸಹುಂಡಿ, ಉದ್ಬೂರು, ಗುಂಗ್ರಾಲಛತ್ರ, ಹಂಚ್ಯ ಹಾಗೂ ಬೆಳವಾಡಿ ಗ್ರಾಮಪಂಚಾಯಿತಿಗಳಲ್ಲಿ ಗೌರವಧನ ಆಧಾರದ ಮೇಲೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಆಯ್ಕೆ ಮಾಡಿಕೊಳ್ಳಲು ಆರೋಗ್ಯವಂತ ವಿಕಲಚೇತನರಿಂದ ಅರ್ಜಿ ಆಹ್ವಾನಿಸಿದೆ.
    ಅರ್ಜಿ ಸಲ್ಲಿಸುವವರು  18 ರಿಂದ 45 ವರ್ಷ ವಯೋಮಿತಿಯೊಳಗಿರಬೇಕು. ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರಬೇಕು. ನಿಗಧಿತ ಅರ್ಜಿ ನಮೂನೆಯನ್ನು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು, ತಾಲ್ಲೂಕು ಪಂಚಾಯಿತಿ, ಮಿನಿ ವಿಧಾನಸೌಧ, ಮೈಸೂರು ಇಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 10 ರೊಳಗಾಗಿ ಸಲ್ಲಿಸುವುದು.
    ಹೆಚ್ಚಿನ ಮಾಹಿತಿಗೆ ಆರ್.ಎಂ.ಸ್ವಾಮಿ  ಮೊಬೈಲ್ ಸಂಖ್ಯೆ 9591136015ನ್ನು ಸಂಪರ್ಕಿಸಬಹುದು.
ಕೋಮಲ ಡಿ.ಆರ್. ಅವರಿಗೆ ಪಿಎಚ್.ಡಿ. ಪದವಿ
    ಮೈಸೂರು,ಅ.7.ಮೈಸೂರು ವಿಶ್ವವಿದ್ಯಾಲಯವು ಕೋಮಲ ಡಿ.ಆರ್. ಅವರಿಗೆ ಪಿಎಚ್.ಡಿ. ಪದವಿ ಪ್ರಕಟಿಸಿದೆ. ಡಾ. ಎನ್. ಶಾಂತ ನಾಯಕ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ  “ಂ ಅomಠಿಚಿಡಿಚಿಣive Sಣuಜಥಿ oಜಿ ಣhe ಓoveಟs oಜಿ ಒuಟಞ ಖಚಿರಿ ಂಟಿಚಿಟಿಜ ಚಿಟಿಜ ಅhಚಿಜuಡಿಚಿಟಿgಚಿ: ಂ Soಛಿiಚಿಟ Peಡಿಠಿeಛಿಣive” ಕುರಿತು ಸಾದರಪಡಿಸಿದ ಇಂಗ್ಲೀಷ್ ವಿಷಯದ ಮಹಾಪ್ರಬಂಧವನ್ನು ಪಿಎಚ್.ಡಿ. ಪದವಿಗಾಗಿ ಅಂಗೀಕರಿಸಿದೆ. ಕೋಮಲ ಡಿ.ಆರ್. ಅವರು ಸದರಿ ಪಿಎಚ್.ಡಿ. ಪದವಿಯನ್ನು ಮುಂದೆ ನಡೆಯುವ ವಾರ್ಷಿಕ ಘಟಿಕೋತ್ಸವದಲ್ಲಿ ಪಡೆಯಬಹುದಾಗಿದೆ ಎಂದು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರು ತಿಳಿಸಿದ್ದಾರೆ.
ಅಕ್ಟೋಬರ್ ಮಾಹೆ ಪಡಿತರ ಬಿಡುಗಡೆ
     ಮೈಸೂರು,ಅ.7.ಮೈಸೂರು ಜಿಲ್ಲೆಯ ಪಡಿತರ ಚೀಟಿದಾರರಿಗೆ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಟೋಬರ್ 2014ರ ಮಾಹೆಗೆ ಅಂತ್ಯೋದಯ ಕಾರ್ಡುದಾರರಿಗೆ 29 ಕೆ.ಜಿ. ಅಕ್ಕಿ,(ರೂ. 1=00 ಪ್ರತಿ ಕೆ.ಜಿ.ಗೆ) 6 ಕೆ.ಜಿ. ಗೋಧಿ (ರೂ. 1=00 ಪ್ರತಿ ಕೆ.ಜಿ.ಗೆ) ಬಿಪಿಎಲ್ ಏಕಸದಸ್ಯ ಪಡಿತರ ಕಾರ್ಡುದಾರರಿಗೆ 8 ಕೆ.ಜಿ. ಅಕ್ಕಿ, 2 ಕೆ.ಜಿ. ಗೋಧಿ, ದ್ವಿ ಸದಸ್ಯ 16 ಕೆ.ಜಿ. ಅಕ್ಕಿ, 4 ಕೆ.ಜಿ. ಗೋಧಿ, ತ್ರಿ ಸದಸ್ಯ ಮತ್ತು ಅದಕ್ಕಿಂತ ಹೆಚ್ಚಿನ ಸದಸ್ಯರಿಗೆ 24 ಕೆ.ಜಿ. ಅಕ್ಕಿ,( ಪ್ರತಿ ಕೆ.ಜಿ.ಗೆ ರೂ. 1-00), 6 ಕೆ.ಜಿ. ಗೋಧಿ ಬಿಡುಗಡೆ ಮಾಡಲಾಗಿದೆ.
    ಪಡಿತರ ಚೀಟಿದಾರರಿಗೆ ರೂ. 13.50 ದರದಲ್ಲಿ 1 ಕೆ.ಜಿ. ಸಕ್ಕರೆ ನೀಡಲಾಗುವುದು. ಅಕ್ಟೋಬರ್ 2014ರ ಮಾಹೆಯಲ್ಲಿ ಎಪಿಎಲ್ ಪಡಿತರ ಚೀಟಿದಾರರಿಗೆ ಹಂಚಿಕೆ ಬಿಡುಗಡೆ ಮಾಡಿರುವುದಿಲ್ಲ.
      ಜಿಲ್ಲೆಯಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದಂತೆ ಯಾವುದೇ ದೂರುಗಳಿದ್ದಲ್ಲಿ ಕಾರ್ಡುದಾರರು ಸಂಬಂಧಿಸಿದ ಗ್ರಾಮ ಪಂಚಾಯಿತಿ/ತಾಲ್ಲೂಕು ಮಟ್ಟದ ಅಧಿಕಾರಿಗಳು ಅಥವಾ ತಹಶೀಲ್ದಾರ್ ಅವರನ್ನು ಸಂಪರ್ಕಿಸಬಹುದು ಅಥವಾ ಡಾ.ಕೆ. ರಾಮೇಶ್ವರಪ್ಪ, ಹಿರಿಯ ಉಪನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಮೈಸೂರು ದೂರವಾಣಿ ಸಂಖ್ಯೆ 0821-2422107 ಅಥವಾ ಬೆಂಗಳೂರಿನ ಶುಲ್ಕ ರಹಿತ ಸಹಾಯವಾಣಿ 1800-425-9339ಗೆ ದೂರು ಸಲ್ಲಿಸಬಹುದೆಂದು ತಿಳಿಸಿದ್ದಾರೆ.




ಶುಲ್ಕ ವಿನಾಯಿತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    ಮೈಸೂರು,ಅ.7.ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಸೌಲಭ್ಯಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
    ರಾಜ್ಯದ ಶಾಸನಬದ್ಧ ವಿಶ್ವವಿದ್ಯಾಲಯಗಳ ಅಧೀನಕ್ಕೆ ಒಳಪಡುವ ಸರ್ಕಾರಿ ಸ್ಥಳೀಯ, ಅನುದಾನಿತ, ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಸಂಸ್ಥೆಗಳಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. 
     ಪ್ರವರ್ಗ-1ಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ರೂ. 2.50ಲಕ್ಷ, ಪ್ರವರ್ಗ 2ಎ,3ಎ,3ಬಿ ಮತ್ತು ಕೇಂದ್ರ ಸರ್ಕಾರದ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ಜನಾಂಗದ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನ ರೂ 1 ಲಕ್ಷ ದೊಳಗಿರಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನವಾಗಿದೆÀ.
    ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ(0821-2342917), ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಹಾಗೂ ಇಲಾಖೆಯ ವೆಬ್ ಸೈಟ್ ಞಚಿಡಿeಠಿಚಿss.ಛಿgg.gov.iಟಿ ಹಾಗೂ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ  ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಆರ್ಥಿಕ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    ಮೈಸೂರು,ಅ.7.ಬಿ.ಎಸ್ಸಿ ನರ್ಸಿಂಗ್ ಮತ್ತು ಡಿ.ಜಿ.ಎನ್.ಎಂ ಕೋರ್ಸುಗಳಿಗೆ ಸಂಬಂಧಿಸಿದಂತೆ ಇಂಡಿಯನ್ ನರ್ಸಿಂಗ್ ಕೌನ್ಸಿಲ್ ವತಿಯಿಂದ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಆರ್ಥಿಕ ಸೌಲಭ್ಯ ಒದಗಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
    ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,3ಎ ಹಾಗೂ 3ಬಿ ಸೇರಿದವರಾಗಿರಬೇಕು. ವಿದ್ಯಾರ್ಥಿಗಳ ವಯೋಮಿತಿ 17 ರಿಂದ 35 ವರ್ಷದೊಳಗಿರಬೇಕು. ವಿದ್ಯಾರ್ಥಿಯನ್ನು ಒಳಗೊಂಡಂತೆ ಅವರ ತಂದೆ,ತಾಯಿ, ಫೋಷಕರ ವಾರ್ಷಿಕ ಆದಾಯ ಪ್ರವರ್ಗ-1ಕ್ಕೆ ರೂ. 2.50ಲಕ್ಷ, ಪ್ರವರ್ಗಗಳಾದ 2ಎ,3ಎ ಹಾಗೂ 3ಬಿಗಳಿಗೆ ರೂ. 1 ಲಕ್ಷ ಮೀರಿರಬಾರದು. ಅಕ್ಟೋಬರ್ 30ರೊಳಗೆ ವಿದ್ಯಾರ್ಥಿಗಳು ಶಾಲೆಯ ಪ್ರಾಶುಪಾಲರಿಗೆ ಅರ್ಜಿ ಸಲ್ಲಿಸಬೇಕು. 
   ಹೆಚ್ಚಿನ ಮಾಹಿತಿಯನ್ನು  
ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ  ವೆಬ್‍ಸೈಟ್ ದೂರವಾಣಿ ಸಂಖ್ಯೆ 0821-2342917ನ್ನು ಸಂಪರ್ಕಿಸಬಹುದು.
ಪ್ಯಾರಾ ಮೆಡಿಕಲ್ ಕೋರ್ಸ್: ಆರ್ಥಿಕ ಸೌಲಭ್ಯಕ್ಕೆ ಅರ್ಜಿ ಆಹ್ವಾನ
     ಮೈಸೂರು,ಅ.7. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್‍ಗಳಿಗೆ ಪ್ರವೇಶ ಪಡೆದಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಆರ್ಥಿಕ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಿದೆ.
    ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಸೇರಿದ್ದು, ಎಸ್.ಎಸ್.ಎಲ್.ಸಿ ಅಥವಾ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ (ಪಿ.ಸಿ.ಎಂ.ಬಿ) ತರಗತಿಯಲ್ಲಿ ಕನಿಷ್ಠ ಶೇ. 45 ಅಂಕಗಳಿಸಿರಬೇಕು.  ಅಕ್ಟೋಬರ್ 30ರೊಳಗೆ ವಿದ್ಯಾರ್ಥಿಗಳು ಶಾಲೆಯ ಪ್ರಾಂಶುಪಾಲರಿಗೆ ಅರ್ಜಿ ಸಲ್ಲಿಸಬೇಕು. 
    ಹೆಚ್ಚಿನ ಮಾಹಿತಿಯನ್ನು  ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ  ವೆಬ್‍ಸೈಟ್ ಹಾಗೂ ದೂರವಾಣಿ ಸಂಖ್ಯೆ 0821-2342917ನ್ನು ಸಂಪರ್ಕಿಸಬಹುದು.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿ
   ಮೈಸೂರು,ಅ.7.ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 6 ತಿಂಗಳ ಕಾಲಾವಧಿಯ ಗಾರ್ಮೆಂಟ್ ಮಾನ್ಯುಫಾಶ್ಚರ್ ಟೆಕ್ನಾಲಜಿ ಹಾಗೂ ಇಂಡಸ್ಟ್ರೀ ಪ್ಯಾಟ್ರನ್ ಮೇಕಿಂಗ್ ತರಬೇತಿ ನೀಡಲು ಅರ್ಜಿ ಕರೆಯಲಾಗಿದೆ. ಬೆಂಗಳೂರಿನ ನ್ಯಾಷಿನಲ್ ಇನ್ಸಿಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜಿ ಸಂಸ್ಥೆಯ ಮೂಲಕ ತರಬೇತಿ ನೀಡಲಾಗುವುದು.
     ಅರ್ಜಿದಾರರು ಪಿ.ಯು.ಸಿ ಪಾಸ್‍ಸಾಗಿರಬೇಕು. ಅಕ್ಟೋಬರ್ 15ರೊಳಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಯ ಕಚೇರಿಗೆ ಸಲ್ಲಿಸಬೇಕು.
    ಹೆಚ್ಚಿನ ಮಾಹಿತಿಗಾಗಿ  ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ  ವೆಬ್‍ಸೈಟ್ ದೂರವಾಣಿ ಸಂಖ್ಯೆ 0821-2342917ನ್ನು ಸಂರ್ಪಕಿಸಬಹುದು.

No comments:

Post a Comment