Tuesday 24 March 2015

ಮೈಸೂರು ಸುದ್ದಿಗಳು


ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ಜಿಲ್ಲಾ ನೇಕಾರರ ಸಮುದಾಯಗಳ ಒಕ್ಕೂಟದ ವತಿಯಿಂದ ಮಾರ್ಚ್ 25 ರಂದು ದೇವರ ದಾಸಿಮಯ್ಯ ಜಯಂತಿ ಅಂಗವಾಗಿ ಬೆಳಿಗ್ಗೆ 9 ಗಂಟೆಗೆ ಜೆ.ಕೆ.ಗ್ರೌಂಡ್ಸ್ ಮೈದಾನ ಆವರಣದಿಂದ ಮೆರವಣಿಗೆ ನಡೆಯಲಿದೆ ಹಾಗೂ ಬೆಳಿಗ್ಗೆ 11 ಗಂಟೆಗೆ  ಶ್ರೀ ರಂಗಚಾರ್ಲು ಪುರಭವನದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ.
ಮಾಧ್ಯಮ ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಕೋರಿದೆ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮೀಸಲಾತಿ ನೀತಿಯ ಹೊಸ ದೃಷ್ಟಿಕೋನ ನಿರ್ಧಾರವಾಗಲಿದೆ



ಮೈಸೂರ24- ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದಲ್ಲಿ ಹಮ್ಮಿಕೊಂಡಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ಕಾರ್ಯವು ಮೀಸಲಾತಿ ನೀತಿಯ ಹೊಸ ದೃಷ್ಟಿಕೋನ ನಿರ್ಧಾರವಾಗಲಿದೆ ಎಂದು ಮೈಸೂರು ವಿಶ್ವ ವಿದ್ಯಾನಿಲಯದ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಎನ್. ಉಷಾರಾಣಿ ಹೇಳಿದರು.
  ಇಂದು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕುರಿತು ಜಿಲ್ಲಾ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ  ಜಿಲ್ಲಾ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
 ಸರ್ಕಾರದ ಯೋಜನೆಗಳು ಸಮರ್ಪಕ ಹಾಗೂ ಯಶಸ್ವಿ ಅನುಷ್ಠಾನಕ್ಕೆ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಅಗತ್ಯ. ಜಾತಿ ಎಂಬುವುದು ಬಹಳ ಸೂಕ್ಷ್ಮದ ವಿಷಯ. ಬಹಳಷ್ಟು ಜಾತಿಗಳು ಹಾಗೂ ಉಪ ಜಾತಿಗಳು ಅಳಿವಿನಂಚಿನಲಿವೆ. ಸಮೀಕ್ಷೆಯಿಂದ ರಾಜ್ಯದಲ್ಲಿ ಎಷ್ಟು ಜಾತಿಗಳಿವೆ ಎಂಬುದು ಗೊತ್ತಾಗುವುದರ ಜೊತೆಯಲ್ಲಿ ಅಂಕಿ ಅಂಶಗಳು ಲಭ್ಯವಾಗುತ್ತವೆ. ಭಾರತೀಯರು ದಾಖಲೀಕರಣ ಎಷ್ಟು ಮಹತ್ವದ್ದು ಎಂಬುದನ್ನು ಅರಿಯಬೇಕು. ಕೊಡವ ಭಾಷೆ ಹೇಗೆ ಸೃಜಿಸಿತು ಎಂಬುದಕ್ಕೆ ನಮ್ಮಲ್ಲಿ ದಾಖಲೆಗಳಿಲ್ಲ. ಆದರೆ, ಈ ಮಾಹಿತಿಯನ್ನು ಲಂಡನ್‍ನಲ್ಲಿ ಸಂರಕ್ಷಿಸಿಡಲಾಗಿದೆ ಎಂದು ತಿಳಿಸಿದರು.
 ಪ್ರತಿ 5 ವರ್ಷಕೊಮ್ಮೆ ನಿರಂತರವಾಗಿ ಸಾಮಾಜಿಕ ಹಾಗೂ ಶೈಕ್ಷೆಣಿಕ ಸಮೀಕ್ಷೆ ನಡೆದರೆ ಸಮಾಜ ಸುಧಾರಿಸಲಿದೆ. ಸಮೀಕ್ಷೆ ಕುರಿತು ಕೆಲವು ಸಮುದಾಯದವರಿಗೆ ಅಸಮಾಧಾನವಿದ್ದರೂ ಇತರೆ ಸಮುದಾಯಗಳಿಗೆ ಸಾಮಾಜಿಕ ನ್ಯಾಯಕ್ಕಾಗಿ ಅನುಕೂಲವಾಗಲಿದೆ. ಸರ್ಕಾರದ ಸವಲತ್ತು ಹಂಚಿಕೆಯಲ್ಲಿನ ದುರುಪಯೋಗಕ್ಕೆ ತಡೆ ಬೀಳಲಿದೆ ಎಂದು ಅಭಿಪ್ರಾಯ ಪಟ್ಟರು.
  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ದೀಪಕ್ ಅವರು ಭಾರತದಲ್ಲಿ ಜಾತಿ ಎಂಬ ಮೂಲಭೂತ ಆಧಾರವಿಲ್ಲದೆ ಯಾವುದೇ ಕೆಲಸ ನಡೆಯುವುದಿಲ್ಲ. ಪ್ರತಿಯೊಬ್ಬರು ತಮ್ಮ ಜಾತಿಯನ್ನು  ನಿರ್ಭಯದಿಂದ ಹೇಳಿಕೊಳ್ಳುವ ಮೂಲಕ ಸಾಂಸ್ಕøತಿಕ ನೆಲೆ ಉಳಿಯುವಂತೆ ಮಾಡಬೇಕು. ಸಂಘ ಸಂಸ್ಥೆಗಳ ಮೇಲೆ ಬಹಳಷ್ಟು ಜವಾಬ್ದಾರಿಗಳಿದೆ. ಸಮೀಕ್ಷೆಯ ಮಹತ್ವ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯೋಜಿಸುವ ಮೂಲಕ ಜನರನ್ನು ಜಾಗೃತಗೊಳಿಸಬೇಕು ಎಂದು ಹೇಳಿದರು.
 ಅಂದೇ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಭಾತರ ದೇಶವನ್ನು ಜಾತಿ ಸಮಾನತೆ ರಾಷ್ಟ್ರದ ಕನಸು ಕಂಡಿದ್ರು. ಆದರೇ ಜಾತಿ ನೋಡಿ ಮನೆ ಬಾಡಿಗೆ ನೀಡುವ ಸಂಪ್ರದಾಯ ಮೈಸೂರು ನಗರದಲ್ಲಿ ಇಂದಿಗೂ ಜೀವಂತವಿದೆ. ಮನೆ ಬಾಡಿಗೆಗಾಗಿ ತಮ್ಮ ಜಾತಿಯನ್ನೇ ಅನೇಕರು ಮರೆಮಾಚುವ ವಾತಾವರಣ ಸೃಷ್ಟಿಯಾಗಿದೆ. ಯಾರೂ ಸಹ ತಮ್ಮ ಜಾತಿ ಕುರಿತು ಕೀಳರಿಮೆ ಸೃಷ್ಟಿಸಿಕೊಳ್ಳಬಾರದು ಎಂದು ಹೇಳಿದರು.
  ವಿಜಯ ಕರ್ನಾಟಕ ಪತ್ರಿಕೆಯ ಮುಖ್ಯ ಉಪ ಸಂಪಾದರಾದ ಚೀ.ಜ.ರಾಜೀವ್ ಮಾತನಾಡಿ ಕೆಲವು ಜಾತಿಗಳಿಗೆ ಮೀಸಲಾತಿ ಇದೆ ಎಂಬುದೇ ಗೊತ್ತಿಲ್ಲ. ಅಂತವರಿಗೆ ತಿಳಿ ಹೇಳಲು ಈ ಸಮೀಕ್ಷೆ ಮಾರ್ಗದರ್ಶನವಾಗಲಿದೆ. ನಮ್ಮಲ್ಲಿ ಎಷ್ಟು ಜಾತಿಗಳಿವೆ, ಅಳಿವಿನಂಚಿನಲ್ಲಿರುವ ಜಾತಿಗಳ ಅಂಕಿ ಸಂಖ್ಯೆಗಳೆಷ್ಟು ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.
   

ಡಾ.ಬಾಬು ಜಗಜೀವನರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಜನ್ಮದಿನಾಚರಣೆ ಸಿದ್ಧತೆಗೆ ಜಿಲ್ಲಾಧಿಕಾರಿ ಸಿ.ಶಿಖಾ ಸೂಚನೆ.

ಮೈಸೂರು,ಮಾ.24.ಪ್ರತಿ ವರ್ಷದಂತೆ ಈ ವರ್ಷವೂ ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೈಸೂರು ಮಹಾನಗರ ಪಾಲಿಕೆ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸಮಾಜಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ರಾಷ್ಟ್ರನಾಯಕ ಡಾ.ಬಾಬು ಜಗಜೀವನರಾಂ ಜಯಂತಿಯನ್ನು ಏಪ್ರಿಲ್ 5 ರಂದು ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮಾದಿನಾಚರಣೆಯನ್ನು ಏಪ್ರಿಲ್ 14 ರಂದು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಶಿಖಾ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಏಪ್ರಿಲ್ 5 ರಂದು ಬೆಳಿಗ್ಗೆ 9 ಗಂಟೆಗೆ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿರುವ ಡಾ. ಬಾಬು ಜಗಜೀವನ ರಾಂ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮೆರವಣಿಗೆ ಚಾಲನೆ ನೀಡಲಾಗುವುದು. ಏಪ್ರಿಲ್ 14 ರಂದು  ಬೆಳಿಗ್ಗೆ 9 ಗಂಟೆಗೆ  ಪುರಭವನದ ಆವರಣದಲ್ಲಿರುವ ಡಾ: ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ನಂತರ ವಿವಿಧ ಕಲಾತಂಡಗಳ ಮೆರವಣಿಗೆಗೆ ಚಾಲನೆ ನೀಡಲಾಗುವುದು.
ಡಾ. ಬಾಬು ಜಗಜೀವನರಾಂ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಜಯಂತ್ಯೋತ್ಸವದ ವೇದಿಕೆ ಕಾರ್ಯಕ್ರಮಗಳು ಕಲಾಮಂದಿರದಲ್ಲಿ ಬೆಳಿಗ್ಗೆ 11 ಗಂಟೆಗೆ ಆರಂಭಗೊಳ್ಳಲಿದ್ದು, ಕಾರ್ಯಕ್ರಮವು ಅತ್ಯಂತ ಮಹತ್ವದಾಗಿರುವುದರಿಂದ ಎಲ್ಲ ಇಲಾಖೆಗಳ ಮುಖ್ಯಸ್ಥರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಮಾರಂಭದ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ತಿಳಿಸಿದರು.
ಡಾ. ಬಾಬು ಜಗಜೀವನರಾಂ ಜಯಂತ್ಯೋತ್ಸವದಲ್ಲಿ ಭಾಗವಹಿಸುವ ಗಣ್ಯರಿಗೆ ಡಾ. ಬಾಬು ಜಗಜೀವನರಾಂ ಕುರಿತು ಮುದ್ರಿಸಿರುವ ಪುಸ್ತಕ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಗಣ್ಯರಿಗೆ ಡಾ. ಬಿ.ಆರ್ ಅಂಬೇಡ್ಕರ್ ಕುರಿತು ಪ್ರಕಟಿಸಿರುವ ಪುಸ್ತಕಗಳನ್ನು ನೀಡಿ ಸ್ವಾಗತಿಸಬೇಕು ಎಂದು ಹೇಳಿದರು.
ಮೈಸೂರು ಮಹಾನಗರ ಪಾಲಿಕೆಯಿಂದ ಡಾ. ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗಳ ಸ್ವಚ್ಛತೆ ಹಾಗೂ ಪಾಲಿಷ್ ಮಾಡುವುದು. ವಿದ್ಯುತ್ ದೀಪ ಹಾಗೂ ಹೂವಿನ ಅಲಂಕಾರ, ರೈಲ್ವೆ ನಿಲ್ದಾಣದ ವೃತ್ತದ ಬಳಿ ಶಾಮಿಯಾನ, ಆಸನ, ಹೂವಿನಹಾರ, ದೀಪ ಮತ್ತು ಪೂಜಾ ಸಾಮಗ್ರಿ ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸೂಚಿಸಿದರು.
ಪುತ್ಥಳಿಯ ಬಳಿ ಬ್ಯಾಂಡ್ ಸೆಟ್, ಸಮಾರಂಭ ಸ್ಥಳದಲ್ಲಿ ತಂಪು ಪಾನೀಯ,  ಉಚಿತ ಸಹಿ ತಿಂಡಿ/ಲಡ್ಡು ವ್ಯವಸ್ಥೆ, ಸಮಾರಂಭ ಹೂ ಕುಂಡಗಳಲ್ಲಿ ಅಲಂಕರಿಸುವ ವ್ಯವಸ್ಥೆ ಹಾಗೂ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
     ಮುಡಾ ಆಯುಕ್ತ ಪಾಲಯ್ಯ, ಜಿಲ್ಲಾ ಪಂಚಾಯತ್ ಪಿ.ಎ.ಗೋಪಾಲ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪ್ರಕಾಶ್, ಹಿಂದುಳಿದ ವರ್ಗಗಳ ಇಲಾಖೆ ಜಿಲ್ಲಾ ಅಧಿಕಾರಿ ಸೋಮಶೇಖರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲ ಮಠಪತಿ, ಮೈಸೂರು ಜಿಲ್ಲಾ ಯೋಜನಾ ಸಮಿತಿ ಸದಸ್ಯ ಪದ್ಮನಾಭ್, ತಾಲ್ಲೂಕು ಪಂಚಾಯತ್ ಅಧ್ಯಕ್ಷ ಜಿ. ಕುಮಾರ್, ಮುಖಂಡರುಗಳಾದ ವಾಸು, ಲಿಂಗರಾಜು ಮಲ್ಲಾಡಿ, ಸೋಮಯ್ಯ ಮಲಿಯೂರು ಹಾಗೂ ಇತರರು ಸಭೆಯಲ್ಲಿ ಭಾಗವಹಿಸಿದರು.
(ಛಾಯಾಚಿತ್ರ ಲಗತ್ತಿಸಿದೆ).

ಮಾರ್ಚ್ 26 ರಂದು ಸಿನಿಮಾ ಸಮಯದಲ್ಲಿ ದಿ ಅದರ್ ಸನ್ ಚಿತ್ರ ಪ್ರದರ್ಶನ
       ಮೈಸೂರು,ಮಾ.24. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಚಲನಚಿತ್ರ ಅಕಾಡೆಮಿ, ಮೈಸೂರು ಫಿಲ್ಮ್ ಸೊಸೈಟಿ, ಅಲಿಯನ್ಸ್ ಫ್ರೆಂಚೈಸ್ ಸಹಯೋಗದಲ್ಲಿ ಆಯೋಜಿಸಲಾಗುವ ಸಿನಿಮಾ ಸಮಯದಲ್ಲಿ ಮಾರ್ಚ್ 26 ರಂದು ಸಂಜೆ 6 ಗಂಟೆಗೆ ಕಲಾಮಂದಿರದಲ್ಲಿ ಲೊರೆನ್ ಲೆವಿ  ನಿರ್ದೇಶನದ ದಿ ಅದರ್ ಸನ್ ಚಲನಚಿತ್ರ ಪ್ರದರ್ಶಿಸಲಾಗುವುದು. ಯುದ್ದದ ದಾಳಿಯ ವೇಳೆ ಆಸ್ಪತ್ರೆಯಲ್ಲಿ ಅದಲು-ಬದಲಾಗುವ ಮಕ್ಕಳು ವಿಭಿನ್ನ ಪರಿಸರದ ಕುಟುಂಬಗಳಲ್ಲಿ ಬೆಳೆಯುತ್ತವೆ. ಜ್ಯೂಯಿಷ್ ಕುಟುಂಬ ಹಾಗೂ ಪ್ಯಾಲೆಸ್ತೀನಿನ ಮುಸ್ಲಿಂ ಕುಟುಂಬದ ಮಕ್ಕಳು ಅದಲು ಬದಲಾಗಿರುತ್ತವೆ ಸತ್ಯ ತಿಳಿದುಬಂದಾಗ ಎರಡೂ ಕುಟುಂಬಗಳು ಅದನ್ನು ಸ್ವೀಕರಿಸುವ ಬಗ್ಗೆ ಹಾಗೂ ತಾಕಲಾಟಗಳನ್ನು ಚಿತ್ರ ನಿರೂಪಿಸಿತ್ತದೆ.
    ಇದಕ್ಕೂ ಮುನ್ನ ಸಂಜೆ 5-30 ಗಂಟೆಗೆ ಖ್ಯಾತ ನಟಿ ಬಿ. ಸರೋಜದೇವಿ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿರುವ ಸಾಕ್ಷ್ಯಚಿತ್ರ ಪ್ರದರ್ಶಿಸಲಾಗುವುದು. ಪ್ರವೇಶ ಉಚಿತವಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಕೋರಿದ್ದಾರೆ.

ಸನ್ಮಾನ ಸಮಾರಂಭ
ಮೈಸೂರು,ಮಾ.24.-ಮೈಸೂರು ವಿಶ್ವವಿದ್ಯಾನಿಲಯದ ಪ್ರಾಣಿಶಾಸ್ತ್ರ ಅಧ್ಯಯನ ವಿಭಾಗದ ವತಿಯಿಂದ ಸೇವೆಯಿಂದ ನಿವೃತ್ತಿಯಾದ ಪ್ರಯುಕ್ತ ಪ್ರೊ. ಪ್ರಕಾಶ್ ಆರ್. ನಾಯಕ್ ಅವರಿಗೆ ಸನ್ಮಾನ ಸಮಾರಂಭವನ್ನು ಮಾಚ್ ್ 27 ರಂದು ಸಂಜೆ 4 ಗಂಟೆಗೆ ಪ್ರಾಣಿ ಶಾಸ್ತ್ರ ಅಧ್ಯಯನ ವಿಭಾಗದ ಸೆಮಿನಾರ್ ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.
ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ| ಕೆ.ಎಸ್.ರಂಗಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
 
ಬೇಸಿಗೆ ಕಾಲ: ಮೈಸೂರು ಮಹಾನಗರ ಪಾಲಿಕೆಯಿಂದ ಮುನ್ನೆಚ್ಚರಿಕೆ ಕ್ರಮ
 ಮೈಸೂರು,ಮಾ.24.ಮಬೇಸಿಗೆಕಾಲದಲ್ಲಿ  ಕಾಲರ/ ಕರುಳುಬೇನೆಯಂತಹ ಸಾಂಕ್ರಾಮಿಕ ರೋಗಗಳು ಹರಡದಂತೆ ಮೈಸೂರು ಮಹಾನಗರ ಪಾಲಿಕೆಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಡಾ| ಸಿ.ಜಿ. ಬೆಟಸೂರ್ ಮಠ್ ಅವರು ತಿಳಿಸಿದ್ದಾರೆ
 ಹೋಟಲ್, ಕ್ಯಾಂಟಿನ್, ಫಾಸ್ಟ್ ಪುಡ್ ಹುದ್ದಿಮೆದಾರರು ಗ್ರಾಹಕರಿಗೆ ಬಿಸಿಯಾದ ನೀರು, ಶುಚಿಯಾದ ಆಹಾರವನ್ನು ಸರಬರಾಜು ಮಾಡಬೇಕು. ತಟ್ಟೆ ಮತ್ತು ಲೋಟ್‍ಗಳನ್ನು ಸೋಪಿನ ನೀರು ಮತ್ತು ಬಿಸಿ ನೀರಿನಲ್ಲಿ ತೊಳೆಯಬೇಕು. ನೆಲ ಮತ್ತು ಟೇಬಲ್‍ಗಳನ್ನು ಕ್ರಿಮಿನಾಶಕ ಉಪಯೋಗಿ ಶುಚಿಗೊಳಿಸಬೇಕು. ಅಡಿಗೆ ಮನೆ ಹಾಗೂ ಹೋಟಲ್‍ನ ಸುತ್ತಮುತ್ತ ಆವರಣವನ್ನು ಶುಚಿಯಾಗಿರಿಸಬೇಕು. ಆಹಾರ ಪಾದಾರ್ಥ ಉತ್ತಮ ಗುಣಮಟ್ಟದಾಗಿರಬೇಕು. ಸಪ್ಲೆಯರ್ ಆರೋಗ್ಯವಂತರಾಗಿರಬೇಕು.
ಶೌಚಾಲಯ ವ್ಯವಸ್ಥೆ ಉತ್ತಮವಾಗಿರಬೇಕು. ಸಿದ್ದಪಡಿಸಿದ ತಿಂಡಿ ಪದಾರ್ಥಗಳನ್ನು ಕಡ್ಡಾಯವಾಗಿ ಗ್ಲಾಸ್ ಕೇಸ್‍ನಲ್ಲಿ ಇಡಬೇಕು. ಪುಟ್‍ಪಾತ್‍ನಲ್ಲಿ  ತಿಂಡಿ ಪದಾರ್ಥ ಮಾರಾಟ ಮಾಡುವವರು ಕೊಯ್ದು ಹಣ್ಣು ಹಂಪಲುಗಳನ್ನು ಸೊಳ್ಳೆ, ನೊಣ ಬೀಳದಂತೆ ಗಾಜಿನ ಪಟ್ಟಿಗೆಯಲ್ಲಿಟ್ಟು ಮಾರಾಟ ಮಾಡಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  
ಅರ್ಜಿ ಆಹ್ವಾನ
ಮೈಸೂರು,ಮಾ.24.ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ(ಶೇ. 24.10), ಇತರೆ ಹಿಂದುಳಿದ ವರ್ಗ(ಶೇ. 7.25) ಮತ್ತು ವಿಕಲಚೇತನರಿಗಾಗಿ(ಶೇ. 3) 2012-13, 2013-14 ರ ಮೊತ್ತ ಮತ್ತು 2014-15ನೇ ಸಾಲಿನ ಅನುದಾನದಲ್ಲಿ ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಇತರೆ  ಹಿಂದುಳಿದ ವರ್ಗ ಮತ್ತು ವಿಕಲಚೇತನರಿಂದ ಅರ್ಜಿ ಆಹ್ವಾನಿಸಿದೆ.
ನಿವೇಶನ ಖರೀದಿ, ಮನೆ ನಿರ್ಮಾಣ, ಸಣ್ಣ ಉದ್ದಿಮೆ, ವೈದ್ಯಕೀಯ ಚಿಕಿತ್ಸೆ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ, ಅಡುಗೆ ಅನಿಲ ಸಂಪರ್ಕ ಪಡೆಯಲು ಸಹಾಯಧನ, ವಿಕಲಚೇತನರಿಗೆ ನಾಲ್ಕು ಚಕ್ರದ ವಾಹನ ಸೇರಿದಂತೆ ಇನ್ನಿತರ ಯೋಜನೆಗಳನ್ನು ಹಮ್ಮಿಕೊಂಡಿದ್ದು ಆಸಕ್ತರು ಏಪ್ರಿಲ್ 22 ರೊಳಗಾಗಿ ನಗರಪಾಲಿಕೆಯ ವಲಯ ಕಚೇರಿಗಳಿಗೆ ಅರ್ಜಿ ಸಲ್ಲಿಸಬೇಕಿರುತ್ತದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 0821-2418807ನ್ನು ಸಂಪರ್ಕಿಸುವುದು.

      ಮಾ. 25 ರಂದು ದೇವರ ದಾಸಿಮಯ್ಯ ಜಯಂತಿ
ಮೈಸೂರು,ಮಾ.24.-ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ಜಿಲ್ಲಾ ನೇಕಾರರ ಸಮುದಾಯಗಳ ಒಕ್ಕೂಟದ ವತಿಯಿಂದ ಮಾರ್ಚ್ 25 ರಂದು ದೇವರ ದಾಸಿಮಯ್ಯ ಜಯಂತಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9 ಗಂಟೆಗೆ ಜೆ.ಕೆ.ಗ್ರೌಂಡ್ಸ್ ಮೈದಾನ ಆವರಣದಿಂದ ಮೆರವಣಿಗೆ ನಡೆಯಲಿದ್ದು, ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಮೆರವಣಿಗೆ ಜೆ.ಕೆ.ಗ್ರೌಂಡ್ಸ್ ಮೈದಾನ ಆವರಣದಿಂದ ಹೊರಟು ಆಯುರ್ವೇದ ವೃತ್ತ, ಇರ್ವಿನ್ ರಸ್ತೆ, ಜನತಾ ಬಜಾರ್ ವೃತ್ತ ತಲುಪಿ ಅಶೋಕ ರಸ್ತೆ ಮೂಲಕ ಶ್ರೀರಂಗಾಚಾರ್ಲು ಪುರಭವನ ತಲುಪುವುದು. ಬೆಳಿಗ್ಗೆ 10-15 ಗಂಟೆಗೆ ಶ್ರೀರಂಗಾಚಾರ್ಲು ಪುರಭವನದಲ್ಲಿ ಮೈಸೂರಿನ ಉದಯ ಕಿರಣ ಹಾಗೂ ತಂಡದಿಂದ ವಚನ ಸಂಗೀತ ಕಾರ್ಯಕ್ರಮ ನಡೆಯಲಿದೆ.
     ಶ್ರೀರಂಗಾಚಾರ್ಲು ಪುರಭವನದಲ್ಲಿ ಬೆಳಿಗ್ಗೆ 11 ಗಂಟೆಗೆ  ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸಪ್ರಸಾದ್ ಅವರು ದೇವರ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪುಷ್ರ್ಪಾಚನೆ ಮಾಡಿ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ವಾಸು ಅವರು ಅಧ್ಯಕ್ಷತೆ ವಹಿಸುವರು. ಮೈಸೂರಿನ ಸಾಹಿತಿ ಜಯಪ್ಪ ಹೊನ್ನಾಳಿ ಅವರು ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ.
     ಲೋಕೋಪಯೋಗಿ ಸಚಿವ ಡಾ|| ಹೆಚ್.ಸಿ. ಮಹದೇವಪ್ಪ, ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಆರ್. ಲಿಂಗಪ್ಪ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಡಾ|| ಬಿ. ಪುಷ್ಪಾ ಅಮರನಾಥ್, ಲೋಕಸಭಾ ಸದಸ್ಯರುಗಳಾದ ಪ್ರತಾಪಸಿಂಹ, ಆರ್. ಧ್ರುವನಾರಾಯಣ್, ಸಿ.ಎಸ್. ಪುಟ್ಟರಾಜು, ವಿಧಾನಸಭಾ ಸದಸ್ಯ ತನ್ವೀರ್ ಸೇಠ್, ಎಂ.ಕೆ.ಸೋಮಶೇಖರ್, ಜಿ.ಟಿ. ದೇವೇಗೌಡ, ಕೆ.ವೆಂಕಟೇಶ್, ಸಾ.ರಾ.ಮಹೇಶ್, ಹೆಚ್.ಪಿ. ಮಂಜುನಾಥ್, ಎಸ್. ಚಿಕ್ಕಮಾಧು, ವಿಧಾನ ಪರಿಷತ್ ಸದಸ್ಯ ಸಿ.ಹೆಚ್. ವಿಜಯಶಂಕರ್, ಗೋ. ಮಧುಸೂಧನ್, ಮರಿತಿಬ್ಬೇಗೌಡ, ಎಸ್. ನಾಗರಾಜು, ಆರ್. ಧರ್ಮಸೇನ, ಕಾವೇರಿ ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸಿ. ದಾಸೇಗೌಡ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಆರ್.ಮೋಹನ್ ಕುಮಾರ್, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆರ್. ಮೂರ್ತಿ, ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ ಅನಂತು, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷೆ ರೀಹಾನಬಾನು, ಮೈಸೂರು ಮಹಾನಗರ ಪಾಲಿಕೆಯ ಉಪ ಮಹಾಪೌರರಾದ ಎಂ. ಮಹದೇವಮ್ಮ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಎಲ್. ಮಾದಪ್ಪ, ತಾಲ್ಲೂಕು ಪಂಚಾಯತ್ ಅಧ್ಯಕ್ಷ ಜಿ. ಕುಮಾರ್, ಉಪಾಧ್ಯಕ್ಷೆ ಲೋಕಾಮಣಿ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
    ಈ ಜಯಂತಿಯಲ್ಲಿ ಮೈಸೂರು ನಗರದ ಎಲ್ಲಾ ರಾಜ್ಯ ಸರ್ಕಾರಿ ಇಲಾಖೆ, ಮಂಡಳಿ, ನಿಗಮ, ಸ್ವಯತ್ತ ಸಂಸ್ಥೆಗಳ ಅಧಿಕಾರಿಗಳು/ ನೌಕರರು, ಸಂಘಸಂಸ್ಥೆಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಸಿ.ಶಿಖಾ ಅವರು ಕೋರಿದ್ದಾರೆ.
     
ಸಾಮಾನ್ಯ ಸಭೆ ಮುಂದೂಡಿಕೆ
ಮೈಸೂರು,ಮಾ.24.-ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಮಾರ್ಚ್ 25 ರಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಸಾಮಾನ್ಯ ಸಭೆಯನ್ನು ದೇವರ ದಾಸಿಮಯ್ಯ ಜಯಂತಿ ಪ್ರಯುಕ್ತ ಏಪ್ರಿಲ್ 7 ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂಜಿನಿಯರಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆ
  ಮೈಸೂರು,ಮಾ.24. ಕೇಂದ್ರ ಲೋಕಸೇವಾ ಆಯೋಗವು ಇಂಜಿನಿಯರಿಂಗ್ ಹುದ್ದೆಗಳ ನೇಮಕಾತಿಗೆ ಸಿವಿಲ್ ಇಂಜಿನಿಯರಿಂಗ್, ಮೆಕ್ಯಾನೀಕಲ್ ಇಂಜಿನಿಯರಿಂಗ್ ಎಲೆಕ್ಷ್ರೀಕಲ್ ಇಂಜಿನಿಯರಿಂಗ್, ಎಲೆಕ್ಷ್ರಾನೀಕ್ ಕಮ್ಯೂನಿಕೇಷನ್ ಇಂಜಿನಿಯರಿಂಗ್ ನಲ್ಲಿ ಪದವಿ ಪಡೆದ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
    ಅರ್ಜಿ ಸಲ್ಲಿಸಲು ವಯೋಮಿತಿ 01-01-2015 ಕ್ಕೆ 30 ವರ್ಷದೊಳಗಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 5 ವರ್ಷ ಹಾಗೂ ಓ.ಬಿ.ಸಿ ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ ಇರುತ್ತದೆ. ಅರ್ಜಿ ಶುಲ್ಕ 200/- ಮಹಿಳಾ ಅಭ್ಯರ್ಥಿ, ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ/ ಅಂಗವಿಕಲರಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ಇರುತ್ತದೆ.  ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-04-2015 ಯಾಗಿದ್ದು, ಹೆಚ್ಚಿನ ಮಾಹಿತಿಗೆ  ತಿತಿತಿ.uಠಿsಛಿ.gov.iಟಿ. ಕೇಂದ್ರ ಲೋಕಸೇವ ಆಯೋಗದ ದೂರವಾಣಿ ಸಂಖ್ಯೆ 011-23385271/011-23381125/011- 23098543      ಅಥವಾ ಸಿ.ವಿಶ್ವನಾಥ ಭರಣಿ ಸಹಾಯಕ ನಿರ್ದೇಶಕರು, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮೈಸೂರು ದೂರವಾಣಿ ಸಂಖ್ಯೆ 0821-2489972 ರವರನ್ನು ಕಚೇರಿಯ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.


ವಿದ್ಯುತ್ ಹರಿಸುವಿಕೆ: ಎಚ್ಚರ ವಹಿಸಿ
    ಮೈಸೂರು,ಮಾ.24. ಮೈಸೂರು ತಾಲ್ಲೂಕು ದೂರ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ 1 ಘಿ 8 ಎಂ.ವಿ.ಎ, 66/11ಕೆ.ವಿ. ವಿದ್ಯುತ್ ಉಪ ಕೇಂದ್ರಕ್ಕೆ  ನೂತನವಾಗಿ ನಿರ್ಮಿಸಿರುವ  66ಕೆ.ವಿ. ಮಾರ್ಗದಲ್ಲಿ   ದಿನಾಂಕ. 27.03.2015 ರಂದು ವಿದ್ಯುತ್ ಹರಿಸಲಾಗುವುದು.
         ಈ ಮಾರ್ಗವು  ಕಡಕೊಳ-ಸಂತೆಸರಗೂರು ಮಾರ್ಗದಿಂದ ಹಾದು ಹೋಗುತ್ತವೆ. ಸಾರ್ವಜನಿಕರು ವಿದ್ಯುತ್ ಗೋಪುರಗಳಿಗೆ ದನಕರುಗಳನ್ನು ಕಟ್ಟುವುದಾಗಲಿ, ಹತ್ತುವುದಾಗಲಿ ಲೋಹದ ಪಟ್ಟಿಯನ್ನು ತೆಗೆಯುವುದಾಗಲಿ, ತಂತಿ ಮುಟ್ಟುವುದಾಗಲಿ, ಗೋಪುರಗಳ ಕೆಳಗಡೆ ಮರಗಿಡಗಳನ್ನು ನೆಡುವುದಾಗಲಿ, ಗೋಪುರಗಳಿಗೆ ಬಳ್ಳಿ ಮತ್ತು ಹಗ್ಗ ಮುಂತಾದುವುಗಳನ್ನು ಎಳೆಯುವುದಾಗಲಿ, ಗಾಳಿಪಟವನ್ನು ಗೋಪುರದ ಹತ್ತಿರ ಹಾರಿಸುವುದಾಗಲಿ ಮಾಡುವುದು ತುಂಬಾ ಅಪಾಯಕಾರಿಯಾಗಿದ್ದು ಪ್ರಾಣ ಹಾನಿ ಸಹ ಉಂಟಾಗಬಹುದು.
  ಈ ಸೂಚನೆಯನ್ನು ಉಲ್ಲಂಘಿಸಿದ ಪಕ್ಷದಲ್ಲಿ ಉಂಟಾಗುವ ಯಾವುದೇ ತರಹದ ಅಪಘಾತ ಅಥವಾ ಪ್ರಾಣ ಹಾನಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಜವಾಬ್ದಾರರಲ್ಲ ಎಂದು ಬೃಹತ್ ಕಾಮಗಾರಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೇರ ಫೋನ್-ಇನ್- ಕಾರ್ಯಕ್ರಮ
ಮೈಸೂರು,ಮಾ.24.ಮೈಸೂರು ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ  ಸಮಸ್ಯೆಗಳಿಗೆ ಸಂಬಂಧಿಸಿದಂತೆ ದಿನಾಂಕ: 27.03.2015  ರಂದು ಶುಕ್ರವಾರ  ಬೆಳಿಗ್ಗೆ 10-00 ಗಂಟೆಯಿಂದ 11.00 ಗಂಟೆಯವರೆವಿಗೆ ತಾಲ್ಲೂಕು ಪಂಚಾಯಿತಿ ಕಛೇರಿಯಲ್ಲಿ ಮೈಸೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು  ನೇರ ಫೋನ್-ಇನ್- ಕಾರ್ಯಕ್ರಮ ನಡೆಸಲಿದ್ದಾರೆ.
     ಸಾರ್ವಜಿಕರು ದೂರವಾಣಿ ಸಂಖ್ಯೆ: 0821-2414433 ಗೆ ಕರೆ ಮಾಡಿ ತಮ್ಮ ಕುಂದುಕೊರತೆಗಳ ಬಗ್ಗೆ ಚರ್ಚಿಸಬಹುದಾಗಿರುತ್ತದೆ.

No comments:

Post a Comment