Sunday 29 March 2015

ಎಸ್ ಎಸ್ ಎಲ್ ಸಿ =ಪರೀಕ್ಷಾ ಕೇಂದ್ರಗಳ ಸುತ್ತ ನಿಶೇದಾಜ್ಝೆ.

ವಿಷಯ:- ಮೈಸೂರು ನಗರದಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ
                     ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳ ಬಳಿ ಕಲಂ 144 ಸಿ.ಆರ್.ಪಿ.ಸಿ.
                     ರೀತ್ಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
 ಮೈಸೂರು ನಗರದಲ್ಲಿ ದಿನಾಂಕ:30/03/2015 ರಿಂದ 13/04/2015 ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ನಡೆಯಲಿದ್ದು, ಈ ಪರೀಕ್ಷೆಗಳು ನಡೆಯುವ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಮೈಸೂರು ನಗರದ 54 ಪರೀಕ್ಷಾ ಕೇಂದ್ರಗಳ ಬಳಿ 200 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ ನಿಷೇದಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆಯನ್ನು ಜಾರಿ ಮಾಡಬೇಕೆಂದು ಉಪ ನಿರ್ದೇಶಕರು(ಆಡಳಿತ), ಸಾರ್ವಜಿಕ ಶಿಕ್ಷಣ ಇಲಾಖೆ ಹಾಗೂ ಉಪ ಪೊಲೀಸ್ ಆಯುಕ್ತರು, ಕಾನೂನು ಮತ್ತು ಸುವ್ಯವಸ್ಥೆ ರವರು ಉಲ್ಲೇಖಿತ ಪತ್ರಗಳಲ್ಲಿ ಕೋರಿರುತ್ತಾರೆ.
  ಉಲ್ಲೇಖಿತ ಪತ್ರಗಳನ್ನು ಪರಿಶೀಲಿಸಲಾಯಿತು, ಪರೀಕ್ಷಾ ಕೇಂದ್ರಗಳಲ್ಲಿ ಕಾನೂನುಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತವಾತಾವರಣದಲ್ಲಿ ನಡೆಸಲು ಕಲಂ 144 ಸಿ.ಆರ್.ಪಿ.ಸಿ. ರೀತ್ಯಾ ಮೈಸೂರು ನಗರದ 54 ಪರೀಕ್ಷಾ ಕೇಂದ್ರಗಳ ಬಳಿ 200 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ ನಿಷೇದಾಜ್ಞೆ ಅವಶ್ಯವೆಂದು ಮನಗಂಡು ಪರೀಕ್ಷಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಈ ಕೆಳಕಂಡಂತೆ ಆದೇಶ ಹೊರಡಿಸಲಾಗಿದೆ.

ಡಾ||ಎಂ.ಎ.ಸಲೀಂ ಪೊಲೀಸ್ ಕಮೀಷನರ್, ಮೈಸೂರು ನಗರ ಆದ ನಾನು ಕಲಂ 144 ಸಿ.ಆರ್.ಪಿ.ಸಿ. ರೀತ್ಯಾ ನನಗೆ ದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ದಿನಾಂಕ:30/03/2015 ರಿಂದ 13/04/2015 ರವರೆಗೆ ಬೆಳಿಗ್ಗೆ 6-00 ಗಂಟೆಯಿಂದ ಸಂಜೆ 6-00 ಗಂಟೆಯವರೆಗೆ ಮೈಸೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿರುವ ನಗರದ 54 ಪರೀಕ್ಷಾ ಕೇಂದ್ರಗಳ ಬಳಿ 200 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ ನಿಷೇಧಿತ ಪ್ರದೇಶವೆಂದು ಘೋಷಿಸಿರುತ್ತೇನೆ ಹಾಗೂ ಪರೀಕ್ಷಾ ಕೇಂದ್ರಗಳ ಬಳಿಯಿರುವ ಜೆರಾಕ್ಸ್ ಹಾಗೂ ಲೇಖನ ಸಾಮಗ್ರಿ ಅಂಗಡಿಗಳನ್ನು ಸಹ ಮುಚ್ಚಲು ಆದೇಶಿಸಿರುತ್ತೇನೆ. ಈ ಪ್ರದೇಶಗಳಲ್ಲಿ ಪರೀಕ್ಷಾರ್ಥಿಗಳು ಮತ್ತು ಪರೀಕ್ಷಾ ಸಿಬ್ಬಂದಿಗಳನ್ನು ಹೊರತುಪಡಿಸಿ ಅನಧಿಕೃತ ವ್ಯಕ್ತಿಗಳು ಸಂಚರಿಸಬಾರದು ಮತ್ತು ಯಾರೂ ಆಕ್ಷೇಪಾರ್ಹ ವಸ್ತುಗಳನ್ನು ಒಯ್ಯಬಾರದು.


No comments:

Post a Comment