Monday 16 March 2015

ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ
ಮೈಸೂರು; ಭೂ ಕಬಳಿಕೆ ಕಾನೂನು ಜಾರಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರವು ರೈತರ ಭೂಮಿಯನ್ನು ಬಂಡವಾಳ ಶಾಹಿಗಳಿಗೆ ಅನುಕೂಲ ಮಾಡಿಕೊಡಲು ಹೊರಟಿದೆ ಎಂದು ಆರೋಪಿಸಿ ನಗರದಲ್ಲಿ ಸೋಮವಾರ ಸಂಯುಕ್ತ ಜನತಾದಳದ ಕಾರ್ಯಕರ್ತರು ಹಾಗೂ ಮುಖಂಡರು ಮೌನ ಪ್ರತಿಭಟನಾ ಮೆರವಣಿಗೆ ನಡೆಸಿದರು.
ರಾಮಸ್ವಾಮಿ ವೃತ್ತದಿಂದ ಆರಂಭವಾದ ಮೆರವಣಿಗೆ ಜೆಎಲ್ ಬಿ ರಸ್ತೆ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಕೆಲ ಕಾಲ ಧರಣಿ ಘೊಷಣೆಗಳನ್ನು ಕೂಗಿದ ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಡಾ.ಎಂ,ಪಿ.ನಾಡಗೌಡ, ಈ ಕಾಯ್ದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ, ಆದರೆ ರಾಜ್ಯಸಭೆ ನಿರ್ಣಯಕ್ಕೆ ಬಹುಮತ ಸಿಗದಿದ್ದರೆ ಸುಗ್ರಿವಾಜ್ಞೆ ಮೂಲಕ ಜಾರಿಗೊಳಿಸಲು ಹೊರಟಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತೀರ್ಮಾನ ಖಂಡನೀಯ. ಮಿತ್ರ ಪಕ್ಷಗಳಿಂದಲೂ ಈ ಕಾಯ್ದೆಗೆ ವಿರೋಧವಿದ್ದರೂ ಜಾರಿಗೆ ಮಾಡಲು ಹೊರಟಿರುವ ಕೇಂದ್ರ ಸರ್ಕಾರ ಬಂಡವಾಳ ಶಾಹಿಗಳ ಋಣಭಾರ ತೀರಿಸಲು ಮುಂದಾಗಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಪಕ್ಷದ ಹಿರಿಯ ಉಪಾಧ್ಯಕ್ಷ ದೊಡ್ಡಣ್ಣಯ್ಯ, ಪ್ರಧಾನ ಕಾರ್ಯದರ್ಶಿ ಜಿ.ಕೆ.ಸಿ ರೆಡ್ಡಿ, ಕೆ.ಎಸ್.ಸತ್ಯನಾರಾಯಣ್, ಕೆ.ಸಿ.ಶಿವಾನಂದ್ ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

No comments:

Post a Comment