Thursday 2 July 2015

ಜುಲೈ 27 ರಂದು ಮೈಸೂರಿಗೆ ರಾಷ್ಟ್ರಪತಿ ಭೇಟಿ


ಜುಲೈ 27 ರಂದು ಮೈಸೂರಿಗೆ ರಾಷ್ಟ್ರಪತಿ ಭೇಟಿ
ಮೈಸೂರು, ಜುಲೈ 2 . ಭಾರತದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಜುಲೈ 27 ರಂದು ಮೈಸೂರು ವಿಶ್ವವಿದ್ಯಾನಿಲಯದ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಲು ಮೈಸೂರಿಗೆ ಆಗಮಿಸಲಿದ್ದು, ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕಾಗಿದೆ ಜಿಲ್ಲಾಧಿಕಾರಿ ಸಿ.ಶಿಖಾ ತಿಳಿಸಿದರು.
  ಇಂದು ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಭಾರತದ ರಾಷ್ಟ್ರಪತಿ ಮೈಸೂರಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಕರೆಯಲಾದ ಸಭೆಯ ಅಧ್ಯಕ್ಷತೆÉವಹಿಸಿ ಅವರು ಮಾಡನಾಡಿದರು.
 ಮೈಸೂರು ವಿಶ್ವವಿದ್ಯಾನಿಲಯವು ಸ್ಥಾಪನೆಯಾಗಿ ನೂರು ವರ್ಷ ತುಂಬುವ ಹಿನ್ನೆಲೆಯಲ್ಲಿ ವರ್ಷಪೂರ್ತಿ ಸಂಭ್ರಮಾಚರಣೆÉಯನ್ನು ಹಮ್ಮಿಕೊಳ್ಳಲು ವಿಶ್ವವಿದ್ಯಾನಿಲಯ ಕಾರ್ಯಕ್ರಮವನ್ನು ರೂಪಿಸಿದ್ದು, ಜುಲೈ 27 ರಂದು ರಾಷ್ಟ್ರಪತಿಯವರು ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರಾಷ್ಟ್ರಪತಿಯವರ ಶಿಷ್ಟಾಚಾರದಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಹೇಳಿದರು.
  ರಾಷ್ಟ್ರಪತಿಗಳಿಗೆ ಸೂಕ್ತ ಪೊಲೀಸ್ ಭದ್ರತೆಯನ್ನು ಒದಗಿಸುವ ಜೊತೆಯಲ್ಲಿ ಯಾವುದೇ ಅಸುರಕ್ಷತಾ ಘಟನೆಗಳಿಗೆ ಅವಕಾಶ ನೀಡಬಾರದು. ಪೊಲೀಸ್ ಆಯುಕ್ತರು ಭದ್ರತೆಗೆ ಸಂಬಂಧಪಟ್ಟ ಕಾರ್ಯದ ಉಸ್ತುವಾರಿ ವಹಿಸಲಿದ್ದಾರೆ. ರಾಷ್ಟ್ರಪತಿಗಳು ಸಂಚರಿಸುವ ರಸ್ತೆಯನ್ನು ಸಂಪೂರ್ಣವಾಗಿ ದೂರಸ್ತಿಗೊಳಿಸಬೇಕು. ಮೈಸೂರು ಮಹಾನಗರ ಪಾಲಿಕೆ, ಮುಡಾ ಹಾಗೂ ರಾಷ್ಟ್ರೀಯ ಹೆದ್ದಾರಿ 212ಕ್ಕೆ ಸಂಬಂಧಿಸಿದ ಅಧಿಕಾರಿಗಳು ಇದರ ಜವಾಬ್ದಾರಿ ಹೊರಬೇಕು. ರಾಷ್ಟ್ರಪತಿಗಳು ಸಂಚರಿಸುವ ವಾಹನ ಹಾಗೂ ಅವರನ್ನು ಹಿಂಬಾಲಿಸುವ ಭದ್ರತಾ ವಾಹನಗಳ ಸಂಪೂರ್ಣ ತಪಾಸಣೆಯನ್ನು ಪ್ರಾದೇಶಿಕ ಸಾರಿಗೆ ಇಲಾಖೆ ಕೈಗೊಂಡು ಫಿಟ್ನೆಸ್ ವರದಿಯನ್ನು ಶೀಘ್ರ ಜಿಲ್ಲಾಡಳಿತಕ್ಕೆ ನೀಡಬೇಕು ಎಂದು ಸೂಚಿಸಿದರು.
  ರಾಷ್ಟ್ರಪತಿಗಳ ಶಿಷ್ಟಾಚಾರದಂತೆ ವೈದ್ಯಕೀಯ ವ್ಯವಸ್ಥೆಯನ್ನು ಒದಗಿಸುವುದು ಆರೋಗ್ಯ ಇಲಾಖೆ ಜವಾಬ್ದಾರಿಯಾಗಿದೆ. ಸೂಕ್ತ ವ್ಯವಸ್ಥೆಯುಲ್ಲ ಆಂಬುಲೆನ್ಸ್, ತಜ್ಞ ವೈದ್ಯರು ಹಾಗೂ ಸಿಬ್ಬಂದಿಯನ್ನು ನಿಯೋಜಿಸಬೇಕು. ರಾಷ್ಟ್ರಪತಿಗಳಿಗೆ ನೀಡುವ ಆಹಾರದ ಸಂಪೂರ್ಣ ತಪಾಸಣೆಯಾಗಬೇಕು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆಯಾಗಬೇಕು ಹಾಗೂ  ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಮುನ್ನೆಚ್ಚರಿಕೆವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
  ರಾಷ್ಟ್ರಪತಿಗಳ ಮೈಸೂರಿನ ಭೇಟಿಯ ವೇಳೆ ಚೆಸ್ಕಾಂ ವತಿಯಿಂದ ನಿರಂತರ ವಿದ್ಯುತ್ ಸರಬರಾಜು ಹಾಗೂ ಭಾರತ ಸಂಚಾರ ನಿಗಮದಿಂದ ದೂರವಾಣೆ ವ್ಯವಸ್ಥೆಯಾಗಬೇಕು. ಅಗ್ನಿಶಾಮಕ ದಳದಿಂದ ಹೆಚ್ಚಿನ ಸಿಬ್ಬಂದಿಗಳನ್ನು ಒದಗಿಸಬೇಕು. ಕಾರ್ಯಕ್ರಮ ವ್ಯವಸ್ಥಿತವಾಗಿ ನಡೆಯಲು ಜವಾಬ್ದಾರಿವಹಿಸಲಾದ ಅಧಿಕಾರಿಗಳು ಸಮನ್ವಯ ಸಾಧಿಸಲು ಪೊಲೀಸ್ ಇಲಾಖೆ ಹ್ಯಾಂಡ್ಸೆಟ್ ವೈವಸ್ಥೆ ಕಲ್ಪಿಸಬೇಕು. ಒಟ್ಟಿನಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ನೀಡಲಾದ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
  ಮೈಸೂರು ವಿಶ್ವ ವಿದ್ಯಾನಿಲಯದ ಕುಲಪತಿ ರಂಗಪ್ಪ ಅವರು ಮಾತನಾಡಿ ಮೈಸೂರು ವಿಶ್ವವಿದ್ಯಾನಿಲಯದ ಶತಮಾನೋತ್ಸವ ಉದ್ಘಾಟನಾ ಕಾರ್ಯಕ್ರಮದ ಸಂಪೂರ್ಣ ಮಾಹಿತಿಯನ್ನು ರಾಷ್ಟ್ರಪತಿಗಳ ಆಪ್ತಾ ಶಾಖೆಗೆ ಕಳುಹಿಸಿಕೊಡಲಾಗಿದೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಜೂನ್ 27 ರಂದು ಮಧ್ಯಾಹ್ನ 3 ಗಂಟೆಗೆ ಶತಮಾನೋತ್ಸವ ಕಾರ್ಯಕಮವನ್ನು ಉದ್ಘಾಟಿಸಲಿದ್ದಾರೆ. ರಾಜ್ಯದ ರಾಜ್ಯಪಾಲರು ಸೇರಿದಂತೆ ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.
 ಮುಡಾ ಆಯುಕ್ತರಾದ ಪಾಲಯ್ಯ, ಪಾಲಿಕೆ ಆಯುಕ್ತರಾದ ಬೆಟ್ ಸೂರು ಮಠ್, ಅಪರ ಜಿಲ್ಲಾಧಿಕಾರಿ ಅರ್ಚನಾ, ಉಪ ಪೊಲೀಸ್ ಆಯುಕ್ತರಾದ ಶೇಖರ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು.
           
    

No comments:

Post a Comment