Monday 24 August 2015

ಮೈಸೂರು ಸುದ್ದಿಗಳು

ಬರ ಮತ್ತು ಪ್ರವಾಹ ಪರಿಸ್ಥಿತಿ ಕುರಿತು ಸಭೆ
      ಮೈಸೂರು,ಆ.24.ರಾಜ್ಯದಲ್ಲಿ ಬರ ಮತ್ತು ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸುವ ಬಗ್ಗೆ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಶ್ರೀನಿವಾಸ್ ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಸಚಿವ ಸಂಪುಟದ ಉಪ ಸಮಿತಿಯ ಮಂತ್ರಿಗಳ ಉಪಸ್ಥಿತಿಯಲ್ಲಿ ಮೈಸೂರು ವಿಭಾಗದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಸಂಬಂಧಪಟ್ಟ  ಇಲಾಖೆ ಅಧಿಕಾರಿಗಳ ಸಭೆಯನ್ನು ದಿನಾಂಕ 26ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರಿನ ಪ್ರಾದೇಶಿಕ ಆಯುಕ್ತರ ಸಭಾಂಗಣದಲ್ಲಿ ಕರೆಯಲಾಗಿದೆ.
     ಸಭೆಯಲ್ಲಿ ಮೈಸೂರು ವಿಭಾಗದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸಚಿವರುಗಳು ಹಾಗೂ ವಿಧಾನಸಭಾ ಮತ್ತು ವಿಧಾನ ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ ಸಭೆಯಲ್ಲಿ  ಪ್ರಸಕ್ತ ಸಾಲಿನ ಋತುಮಾನ ಪರಿಸ್ಥಿತಿ ಬಗ್ಗೆ ಹಾಗೂ ಕೃಷಿ ಚಟುವಟಿಕೆ, ಕುಡಿಯುವ ನೀರಿನ ವ್ಯವಸ್ಥೆ, ಮೇವು ಪರಿಸ್ಥಿತಿ, ವಿದ್ಯುದ್ಧೀಕರಣ ಇತ್ಯಾದಿಗಳ ಬಗ್ಗೆ ಚರ್ಚಿಸಲಾಗುವುದು ಎಂದು ಪ್ರಾದೇಶಿಕ ಆಯುಕ್ತರ ಕಚೇರಿ ಹೆಚ್ಚುವರಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 28 ರಂದು ನೇರ ಫೋನ್-ಇನ್- ಕಾರ್ಯಕ್ರಮ
       ಮೈಸೂರು,ಆ.24.(ಕ.ವಾ.)-ಮೈಸೂರು ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿನ  ಸಮಸ್ಯೆಗಳಿಗೆ ಸಂಬಂಧಿಸಿದಂತೆ ತಾಲ್ಲೂಕು ಪಂಚಾಯಿತಿ ಕಛೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಾರ್ವಜನಿಕ ಕುಂದುಕೊರತೆ ಅರ್ಜಿ ವಿಲೇವಾರಿ ಬಗ್ಗೆ ನೇರ ಫೋನ್-ಇನ್- ಕಾರ್ಯಕ್ರಮವನ್ನು ದಿನಾಂಕ: 28.08.2015  ರಂದು  ಬೆಳಿಗ್ಗೆ 10-00 ಗಂಟೆಯಿಂದ 11-00 ಗಂಟೆಯವರೆಗೆ ತಾಲ್ಲೂಕು ಪಂಚಾಯಿತಿ ಕಛೇರಿಯಲ್ಲಿ ನಡೆಸಲಿದ್ದಾರೆ. ಸಾರ್ವಜನಿಕರು ದೂರವಾಣಿ ಸಂಖ್ಯೆ: 0821-2414433 ಗೆ ಕರೆಮಾಡಿ ತಮ್ಮ ಕುಂದುಕೊರತೆಗಳ ಬಗ್ಗೆ ಚರ್ಚಿಸಬಹುದು ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 27 ರಂದು ಮುಂದುವರೆದ ಕೌನ್ಸಿಲ್ ಸಭೆ
       ಮೈಸೂರು,ಆ.24.(ಕ.ವಾ.)-ದಿನಾಂಕ 30-07-2015ರ ಮೈಸೂರು ಮಹಾನಗರಪಾಲಿಕೆ ಮುಂದುವರೆದ ಕೌನ್ಸಿಲ್ ಸಭೆ ಆಗಸ್ಟ್ 27 ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರು ಮಹಾನಗರ ಪಾಲಿಕೆ ನಾಲ್ವಡಿ ಕೃಷ್ಣರಾಜ ಸಭಾಂಗಣದಲ್ಲಿ ನಡೆಯಲಿದೆ ಎಂದು ಕೌನ್ಸಿಲ್ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಮೇಶ್ ಕುಮಾರ್ ಅವರಿಗೆ ಪಿಎಚ್.ಡಿ. ಪದವಿ
    ಮೈಸೂರು,ಆ.24.(ಕ.ವಾ.)- ಮೈಸೂರು ವಿಶ್ವವಿದ್ಯಾಲಯವು ರಮೇಶ್ ಕುಮಾರ್ ಅವರಿಗೆ ಪಿಎಚ್.ಡಿ. ಪದವಿ ಪ್ರಕಟಿಸಿದೆ. ಡಾ. ಪಾರ್ವತಮ್ಮ ಜಿ.ಹೆಚ್. ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ  “ಹಿರಿಯ ಪ್ರಾಥಮಿಕ ಶಾಲಾ ಬುಡಕಟ್ಟು ವಿದ್ಯಾರ್ಥಿಗಳ ಪರಿಸರ ಅಧ್ಯಯನ ಜ್ಞಾನ ಮತ್ತು ಸಂಬಂಧಿತ ಚಲಕಗಳು” ಕುರಿತು ಸಾದರಪಡಿಸಿದ ಶಿಕ್ಷಣ ವಿಷಯದ ಮಹಾಪ್ರಬಂಧವನ್ನು ಪಿಎಚ್.ಡಿ. ಪದವಿಗಾಗಿ ಅಂಗೀಕರಿಸಿದೆ. ರಮೇಶ್ ಕುಮಾರ್ ಅವರು ಸದರಿ ಪಿಎಚ್.ಡಿ. ಪದವಿಯನ್ನು ಮುಂದೆ ನಡೆಯುವ ವಾರ್ಷಿಕ ಘಟಿಕೋತ್ಸವದಲ್ಲಿ ಪಡೆಯಬಹುದಾಗಿದೆ ಎಂದು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರು ತಿಳಿಸಿದ್ದಾರೆ.




ಸರ್ವ ಸದಸ್ಯರ ಸಭೆ
     ಮೈಸೂರು,ಆ.24.ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಹಾಮಂಡಳಿ ವಾರ್ಷಿಕ ಸರ್ವಸದಸ್ಯರ ಸಭೆ ಆಗಸ್ಟ್ 29 ರಂದು ಬೆಳಿಗ್ಗೆ 11 ಗಂಟೆಗೆ ಆಡಳಿತಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಹಾಮಂಡಳದ ಕಚೇರಿಯ ಆವರಣದಲ್ಲಿ ನಡೆಯಲಿದೆ.
ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಹಾಮಂಡಳಿ ಪುನ:ಶ್ಚೇತನ ವಿಷಯದ ಬಗ್ಗೆ ಚರ್ಚಿಸಿ ಸೂಕ್ತ ನಿರ್ಣಯನವನ್ನು ತೆಗೆದುಕೊಳ್ಳುವ ಸಂಬಂಧ ಸಭೆ ಕರೆಯಲಾಗಿದೆ ಎಂದು ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಹಾಮಂಡಳಿಆಡಳಿತಾಧಿಕಾರಿಗಳ ವ್ಯವಸ್ಥಾಪಕ ನಿರ್ದೇಶಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 26 ರಂದು ಚಿಗುರು ಕಾರ್ಯಕ್ರಮ
    ಮೈಸೂರು,ಆ.24.ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಆಗಸ್ಟ್ 26 ರಂದು ಬೆಳಿಗ್ಗೆ          10-30 ಗಂಟೆಗೆ ಹೆಚ್.ಡಿ.ಕೋಟೆ ತಾಲ್ಲೂಕಿನ ಸವ್ವೆ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಚಿಗುರ ಕಾರ್ಯಕ್ರಮ ನಡೆಯಲಿದೆ.
     ಚಿಗುರು ಕಾರ್ಯಕ್ರಮದಲ್ಲಿ ಅಮೋಘ ಮತ್ತು ತಂಡದಿಂದ ಕೊಳಲು ವಾದನ, ಮಲ್ಲೇಶ್ ಎಸ್. ಮತ್ತು ತಂಡದಿಂದ ಸಮೂಹ ನೃತ್ಯ, ಶಿಶಿರ್ ಆರ್. ಆತ್ರೇಯೆಸ್ ಮತ್ತು ತಂಡದಿಂದ ಶಾಸ್ತ್ರೀಯ ಸಂಗೀತ, ವರಲಕ್ಷ್ಮಿ ಸಿ. ಮತ್ತು ತಂಡದಿಂದ ಜನಪದ ಗೀತೆ, ರಮ್ಯ ಮತ್ತು ತಂಡದಿಂದ ಶಾಸ್ತ್ರೀಯ ನೃತ್ಯ, ಜಿ. ರಾಜಶೇಖರ್ ಅವರಿಂದ ಏಕಪಾತ್ರಾಭಿಯ, ಪ್ರೇಕ್ಷಾ ಮತ್ತು ತಂಡದಿಂದ ಹಾಡುಗಾರಿಕೆ ಹಾಗೂ ಬಿ.ಆರ್. ಭರತ್ ಮತ್ತು ತಂಡದಿಂದ ನಾಟಕ ನಡೆಯಲಿದೆ.
     ಜಿಲ್ಲಾ ಪಂಚಾಯತ್ ಸದಸ್ಯ ಡಿ.ಎಂ. ಚಿಕ್ಕಣ್ಣೇಗೌಡ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿಧಾನಸಭಾ ಸದಸ್ಯ ಚಿಕ್ಕಮಾದು ಅವರು ಅಧ್ಯಕ್ಷತೆ ವಹಿಸುವರು.
     ಹೆಚ್.ಡಿ.ಕೋಟೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಎಸ್. ಬಾಲಚಂದ್ರ, ತಾಲ್ಲೂಕು ಪಂಚಾಯಿತಿ ಸದಸ್ಯೆ ಮಹೇಶ್ವರಿ ತಂಗವೇಲು, ಸವ್ವೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಟ್ಟಮ್ಮ, ಉಪಾಧ್ಯಕ್ಷ ಎಸ್.ಕೆ. ಕುಮಾರ್ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲಾ ಮಠಪತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
    ಮೈಸೂರು,ಆ.25.ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯ ಜಿ.ಕೆ.ವಿ.ಕೆ ನವೆಂಬರ್ ತಿಂಗಳಲ್ಲಿ ಕೃಷಿ ಮೇಳ ಆಯೋಜಿಸಲಿದೆ. ಈ ಸಂದರ್ಭದಲ್ಲಿ ಕೃಷಿ ಪ್ರಶಸ್ತಿ ನೀಡಲು  ಅರ್ಹರ ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಿದೆ.
    ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಹಾಗೂ ರೈತ ಮಹಿಳಾ ಪ್ರಶಸ್ತಿ, ತಾಲ್ಲೂಕು ಮಟ್ಟದ ಅತ್ಯುತ್ತಮ ಯುವ ರೈತ ಮತ್ತು ರೈತ ಮಹಿಳಾ ಪ್ರಶಸ್ತಿ ಕಾರ್ಪೋರೇಷನ್ ಬ್ಯಾಂಕ್ ಆಯೋಜಿತ ಕಾರ್ಪ್ ರೈತ ಪ್ರಶಸ್ತಿ, ಡಾ|| ಎಂ.ಹೆಚ್. ಮರೀಗೌಡ ರಾಜ್ಯಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ ಹಾಗೂ ಸಿ. ಭೈರೇಗೌಡ ರಾಜ್ಯ ಮಟ್ಟದ ಕೃಷಿ ಪ್ರಶಸ್ತಿ ನೀಡಲಾಗುವುದು.
     ಮೈಸೂರು ಜಿಲ್ಲೆಯ ಅರ್ಹ ರೈತರು ಅರ್ಜಿಯನ್ನು ವಿಸ್ತರಣಾ ಮುಖ್ಯಸ್ಥರು, ವಿಸ್ತರಣಾ ಶಿಕ್ಷಣ ಘಟಕ, ಸಾವಯವ ಕೃಷಿ ಸಂಶೋಧನಾ ಕೇಂದ್ರ, ನಾಗನಹಳ್ಳಿ ಮೈಸೂರು-3  ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿ,   ಅಥವಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರುಗಳು ಅಥವಾ ಜಿಲ್ಲಾ ಮತ್ತು ತಾಲ್ಲೂಕಿನ ಪಶುಸಂಗೋಪನೆ, ತೋಟಗಾರಿಕೆ, ಮೀನುಗಾರಿಕೆ, ರೇಷ್ಮೆ ಇಲಾಖೆಯಲ್ಲಿ ಅಥವಾ ವೆಬ್‍ಸೈಟ್ ತಿತಿತಿ.uಚಿsbಚಿಟಿgಚಿಟoಡಿe.eಜu.iಟಿ  ನಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 30 ರೊಳಗೆ ಸಲ್ಲಿಸಬೇಕು.    ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2591263ನ್ನು ಸಂಪರ್ಕಿಸಬಹುದು.
ದೂರು ಪ್ರಾಧಿಕಾರ ರಚನೆ
    ಮೈಸೂರು,ಆ.24.ಉಪ ಪೊಲೀಸ್ ಅಧೀಕ್ಷಕರು ಹಾಗೂ ಈ ರ್ಯಾಂಕ್‍ಗಿಂತ ಕಡಿಮೆ ದರ್ಜೆಯ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಂದ ಸಾರ್ವಜನಿಕರಿಗೆ ಕಿರುಕುಳ ಉಂಟಾದಲ್ಲಿ ಸಾರ್ವಜನಿಕರು ದೂರುಗಳನ್ನು ಆಯಾ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಮಂಗಳೂರು ಮತ್ತು ಮೈಸೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರಕ್ಕೆ ದೂರು ಸಲ್ಲಿಸಬಹುದಾಗಿದೆ ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಖಾಸಗಿ ಅಭ್ಯರ್ಥಿಗಳ ನೋಂದಣಿ
    ಮೈಸೂರು,ಆ.24. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 2016ರ ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಣಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ.
   ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 14 ಕೊನೆಯ ದಿನಾಂಕವಾಗಿದ್ದು, ಅರ್ಜಿ ಸಲ್ಲಿಸುವವರು ದಿನಾಂಕ 01-03-2016ಕ್ಕೆ 15 ವರ್ಷ ಪೂರ್ಣಗೊಂಡಿರಬೇಕು. ನೋಂದಣಿ ಶುಲ್ಕ ರೂ. 185/- ನ್ನು ನೆಫ್ಟ್ ಚಲನ್ ಮೂಲಕ ಕಾರ್ಪೋರೇಷನ್ ಬ್ಯಾಂಕ್‍ನಲ್ಲಿ ಪಾವತಿಸಬೇಕಿದ್ದು, ಅರ್ಜಿ ಹಾಗೂ ನೆಫ್ಟ್ ಚಲನ್‍ಗಳನ್ನು ಉಚಿತವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದಾಗಿದೆ.

No comments:

Post a Comment