Wednesday 23 September 2015

.25 ಬಕ್ರೀದ್ ರಜೆ
     ಮೈಸೂರು,ಸೆ.23.ಬಕ್ರೀದ್ ಹಬ್ಬಕ್ಕೆ ಸೆಪ್ಟೆಂಬರ್ 24 ರ ಬದಲು ಸೆಪ್ಟೆಂಬರ್ 25 ರಂದು ರಾಜ್ಯ ಸರಕಾರ ರಜೆ ಘೋಷಿಸಿದೆ.
ಪ್ರವಾಸ ಕಾರ್ಯಕ್ರಮ
    ಮೈಸೂರು,ಸೆ.23.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವೆ  ಉಮಾಶ್ರೀ ಅವರು ಸೆಪ್ಟೆಂಬರ್ 30 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
    ಅಂದು ಬೆಳಿಗ್ಗೆ 10-30ಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮತ್ತು ಕರ್ನಾಟಕ ರಾಜ್ಯ ಪತ್ರಗಾರ ಇಲಾಖೆ ಸಂಯುಕ್ತವಾಗಿ ಆಯೋಜಿಸಿರುವ ಕಾರ್ಯಾಗಾರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಧ್ಯಾಹ್ನ 1 ಗಂಟೆಗೆ ಮೈಸೂರು ದಸರಾ ಮಹೋತ್ಸವ ಸಾಂಸ್ಕøತಿಕ ಉತ್ಸವದ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 4 ಗಂಟೆಗೆ ಮೈಸೂರಿನಿಂದ ನಿರ್ಗಮಿಸಲಿದ್ದಾರೆ.
ಸೆಪ್ಟೆಂಬರ್ 27 ರಂದು ಟಿ.ಇ.ಟಿ ಅರ್ಹತಾ ಪರೀಕ್ಷೆ
       ಮೈಸೂರು,ಸೆ.23-ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಶಿಕ್ಷಕರ ಟಿ.ಇ.ಟಿ ಅರ್ಹತಾ ಪರೀಕ್ಷೆಯನ್ನು  ಸೆಪ್ಟೆಂಬರ್ 27 ರಂದು ಜಿಲ್ಲೆಯ 32 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
    ಸೆಪ್ಟೆಂಬರ್ 27 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಪತ್ರಿಕೆ-1 ರಲ್ಲಿ 7,824 ಹಾಗೂ ಮಧ್ಯಾಹ್ನ 1-30 ಗಂಟೆಯಿಂದ ಸಂಜೆ 4-30 ಗಂಟೆಯವರೆಗೆ ಪತ್ರಿಕೆ-2 ರಲ್ಲಿ 11,049 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಸಂಬಂಧ 32 ಮುಖ್ಯ ಪರೀಕ್ಷಾ ಅಧೀಕ್ಷಕರು, 32 ಸ್ಥಾನೀಕ ಜಾಗೃತಿ ದಳ ಹಾಗೂ 7 ಮಾರ್ಗಾಧಿಕಾರಿಗಳನ್ನು ನಿಯೋಜಿಸಲಾಗಿದೆ.
     ಪರೀಕ್ಷಾರ್ಥಿಗಳು ಪರೀಕ್ಷೆ ಪ್ರಾರಂಭವಾಗುವ ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಾಗುವುದು. ಪರೀಕ್ಷೆಯಲ್ಲಿ ನೀಲಿ  ಅಥವಾ ಕಪ್ಪು ಶಾಹಿ ಬಾಲ್ ಪೆನ್ನನ್ನು ಬಳಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
       
ಪ್ಯಾರಾ ಮೆಡಿಕಲ್ ಕೋರ್ಸ್ ಅರ್ಜಿ ಆಹ್ವಾನ
ಮೈಸೂರು,ಸೆ.23-ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2015-16ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ವಿವಿಧ ಅರೆ ವೈದ್ಯಕೀಯ (ಪ್ಯಾರಾ ಮೆಡಿಕಲ್ ಕೋರ್ಸ್‍ಗಳಿಗೆ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
     ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 25 ರಂದು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ hಣಣಠಿ://sತಿ.ಞಚಿಡಿ.ಟಿiಛಿ.iಟಿ  ನಲ್ಲಿ  ಅಥವಾ ದೂರವಾಣಿ ಸಂಖ್ಯೆ 0821-2344661ನ್ನು  ಸಂಪರ್ಕಿಸಬಹುದು.
ಶಿಕ್ಷಣ ಅದಾಲತ್ : ದಿನಾಂಕ ಬದಲಾವಣೆ
     ಮೈಸೂರು,ಸೆ.23.2015-16ನೇ ಸಾಲಿನ ಮೈಸೂರು ಜಿಲ್ಲಾ ಮಟ್ಟದ ಶಿಕ್ಷಣ ಅದಾಲತ್ ಕಾರ್ಯಕ್ರಮ ದಿನಾಂಕ:26/09/2015ರ ಬದಲಾಗಿ 13/01/2016ರಂದು ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಅರ್ಜಿಯಲ್ಲಿ ನ್ಯೂನತೆಗಳಿದ್ದಲ್ಲಿ ತಿದ್ದುಪಡಿಗೆ ಅವಕಾಶ
     ಮೈಸೂರು,ಸೆ.23.2015-16ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುವ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ವಿನಾಯಿತಿ”, ವಿದ್ಯಾಸಿರಿ – “ಊಟ ಮತ್ತು ವಸತಿ ಸಹಾಯ ಯೋಜನೆ” ಮತ್ತು ಪೂರ್ಣಾವಧಿ ಪಿ.ಹೆಚ್.ಡಿ. ಅಧ್ಯಯನದಲ್ಲಿ ತೊಡಗಿರುವ ವಿದ್ಯಾರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಯಲ್ಲಿ ನೂನ್ಯತೆಗಳಿದ್ದಲ್ಲಿ ಸೆಪ್ಟೆಂಬರ್ 30 ರೊಳಗಾಗಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ  ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.
     ವಿದ್ಯಾರ್ಥಿಗಳು ಬ್ಯಾಂಕ್ ಖಾತೆಯ ವಿವರ, ಕಾಲೇಜು, ಕೋರ್ಸು ಮತ್ತು ಕೋರ್ಸಿನ ವರ್ಷ, ಹಿಂದಿನ ಸಾಲಿನ ಅಂಕಪಟ್ಟಿ ಅಪ್‍ಲೋಡ್ ಮಾಡುವುದು, ದೂರದ ವಿವರ, ಪ್ರವೇಶ ಸಂಖ್ಯೆ ಮತ್ತು ದಿನಾಂಕ ಹಾಗೂ ಅಗತ್ಯ ದಾಖಲೆಗಳನ್ನು ಅಪ್‍ಲೋಡ್ ಮಾಡುವ ಅವಕಾಶವನ್ನು ಸಹ ಕಲ್ಪಿಸಲಾಗಿದೆ.
     ಹೆಚ್ಚಿನ ಮಾಹಿತಿಗೆ  ಸಂಬಂಧಪಟ್ಟ ಕಾಲೇಜು/ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು/ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಿ ತಿದ್ದುಪಡಿ ಮಾಡಿಕೊಳ್ಳುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ. 25 ರಂದು ಶುಭ ಹಾರೈಕೆ
    ಮೈಸೂರು,ಸೆ.23.ಕರ್ನಾಟಕ ರಾಜ್ಯ  ಮುಕ್ತ ವಿಶ್ವವಿದ್ಯಾಲಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಎಫ್‍ಡಿಎ/ಎಸ್‍ಡಿಎ ಹುದ್ದೆಗಳ ನೇಮಕಾತಿ ಪರೀಕ್ಷಾ ತರಬೇತಿ ಶಿಬಿರದ  ಶುಭ ಹಾರೈಕೆ ಹಾಗೂ  ಅಧ್ಯಯನ ಪುಸ್ತಕ ಬಿಡುಗಡೆ ಸೆಪ್ಟೆಂಬರ್ 25 ರಂದು ಬೆಳಿಗ್ಗೆ 11 ಗಂಟೆಗೆ ಕಾವೇರಿ ಸಭಾಂಗಣದಲ್ಲಿ ನಡೆಯಲಿದೆ.
    ಪ್ರೊಬೆಷನರಿ ಅಧಿಕಾರಿ ಸಿ.ಟಿ. ಶಿಲ್ವನಾಗ್ ಅವರು ಅಧ್ಯಯನ ಪುಸ್ತಕ ಬಿಡುಗಡೆ ಮಾಡುವರು. ಸಂಸ್ಕøತ ವಿಶ್ವವಿದ್ಯಾನಿಲಯ ಕುಲಪತಿ ಪ್ರೊ| ಪದ್ಮಾಶೇಖರ್ ಅವರು ಶುಭಹಾರೈಸಲಿದ್ದು, ಕುಲಪತಿಗಳಾದ           ಪ್ರೊ, ಎಂ.ಜಿ.ಕೃಷ್ಣನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಸೆಪ್ಟೆಂಬರ್ 25 ರಂದು ಮತ್ಸ್ಯ ಭವನ ಕಟ್ಟಡ ಉದ್ಘಾಟನೆ
 ಮೈಸೂರು,ಸೆ.23.(ಕ.ವಾ.)-ಕರ್ನಾಟಕ ರಾಜ್ಯ ಸಹಕಾರಿ ಮೀನುಗಾರಿಕೆ ಮಹಾಮಂಡಳಿ ವತಿಯಿಂದ ಶೀತಲ ಸರಪಳಿ ಯೋಜನೆಯಡಿ ಮೈಸೂರಿನಲ್ಲಿ ನಿರ್ಮಿಸಲಾದ ಮತ್ಸ್ಯ ಭವನ ಕಟ್ಟಡದ ಲೋಕಾರ್ಪಣೆ ಹಾಗೂ ಮಹಾಮಂಡಳಿಯ 25ನೇ ವರ್ಷದ ಬೆಳ್ಳಿ ಹಬ್ಬ ಆಚರಣೆ ಸೆಪ್ಟೆಂಬರ್ 25 ರಂದು ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ರಾಜ್ಯ ಸಹಕಾರಿ ಮೀನುಗಾರಿಕೆ ಮಹಾಮಂಡಳಿ ಆವರಣದಲ್ಲಿ ನಡೆಯಲಿದೆ.
     ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರು ಮತ್ಸ್ಯ ಭವನ  ಉದ್ಘಾಟಿಸುವರು. ಮೀನುಗಾರಿಕೆ ಮತ್ತು ಯುವಜನ ಖಾತೆ  ಸಚಿವ  ಅಭಯಚಂದ್ರ ಜೈನ್ ಅವರು ಬೆಳ್ಳಿ ಹಬ್ಬದ ಆಚರಣೆಗೆ ಚಾಲನೆ ನೀಡುವರು. ಸಹಕಾರ ಮತ್ತು ಸಕ್ಕರೆ ಸಚಿವ ಹೆಚ್.ಎಸ್. ಮಹದೇವ ಪ್ರಸಾದ್ ಅವರು ರಾಜ್ಯ ಉತ್ತಮ ಮೀ.ಸ.ಸ. ಪ್ರಶಸ್ತಿ ವಿತರಣೆ ಮಾಡುವರು. ಕರ್ನಾಟಕ ರಾಜ್ಯ ಸಹಕಾರಿ ಮೀನುಗಾರಿಕೆ ಮಹಾಮಂಡಳಿ ಅಧ್ಯಕ್ಷ ಎಸ್. ಮಾದೇಗೌಡ ಅವರು ಅಧ್ಯಕ್ಷತೆ ವಹಿಸುವರು.
     ಲೋಕಸಭಾ ಸದಸ್ಯರಾದ ಪ್ರತಾಪ ಸಿಂಹ, ವಿಧಾನಸಭಾ ಸದಸ್ಯರಾದ ಎಂ.ಕೆ. ಸೋಮಶೇಖರ್, ನವದೆಹಲಿಯ ಡೈರೆಕ್ಟರ್ ಜನರಲ್ ಸೆಕ್ರೆಟರಿ  ಡಾ| ಎಸ್. ಅಯ್ಯಪ್ಪನ್, ಹೈದರಾಬಾದ್ ಎನ್.ಎಫ್.ಡಿ.ಬಿ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಸ್. ಕುಮಾರ್, ಮೀನುಗಾರಿಕೆ ಇಲಾಖೆ ಜಂಟಿ ಕಾರ್ಯದರ್ಶಿ ಆದಿತ್ಯ ಕುಮಾರ್ ಜೋಷಿ, ಮೀನುಗಾರಿಕೆ ಮತ್ತು ಪಶುಸಂಗೋಪನ ಇಲಾಖೆ ಪ್ರಧಾನ ಕಾರ್ಯದರ್ಶಿ ಚನ್ನಪ್ಪಗೌಡ, ಸಹಕಾರ ಸಂಘಗಳ ನಿಬಂಧಕ ಎಂ.ಕೆ. ಅಯ್ಯಪ್ಪ ಹಾಗೂ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
 ಸರಳ ಸಾಮೂಹಿಕ ವಿವಾಹದ ದಿನಾಂಕ ಬದಲಾವಣೆ
     ಮೈಸೂರು ಜಿಲ್ಲಾಡಳಿತ ವತಿಯಿಂದ ಆಯೋಜಿಸುತ್ತಿರುವ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ “ಶುಭಾರಂಭ” ವನ್ನು ಅನಿವಾರ್ಯ ಕಾರಣಗಳಿಂದ ದಿನಾಂಕ 29/11/2015ರ ಬದಲಿಗೆ ದಿನಾಂಕ 08/11/2015 ರಂದು ಆಯೋಜಿಸಲಾಗುತ್ತದೆ.
      ವಿಶೇಷ ವಿವಾಹ ಕಾಯ್ದೆಯಡಿ ವಿವಾಹವಾಗಲು ಬಯಸುವವರು ದಿನಾಂಕ 05/10/2015ರೊಳಗೆ ನಿಗಧಿತ ಅರ್ಜಿಯನ್ನು ಆಯಾ ತಾಲ್ಲೂಕಿನ ತಹಶೀಲ್ದಾರ್ ರವರಿಗೆ ಸಲ್ಲಿಸುವುದು. ಉಳಿದವರು ದಿನಾಂಕ 25/10/2015 ರೊಳಗೆ ನಿಗಧಿತ ಅರ್ಜಿಯನ್ನು ಭರ್ತಿಮಾಡಿ ಆಯಾ ತಾಲ್ಲೂಕಿನ ತಹಶೀಲ್ದಾರ್ ರವರಿಗೆ ಸಲ್ಲಿಸುವುದು ಹಾಗೂ ಸಾಮೂಹಿಕ ವಿವಾಹದಲ್ಲಿ ಭಾಗವಹಿಸುವವರಲ್ಲಿ ವಧು ಅಥವಾ ವರ ಕಡ್ಡಾಯವಾಗಿ ಮೈಸೂರು ಜಿಲ್ಲೆಯವರಾಗಿರಬೇಕಿರುತ್ತದೆ ಎಂದು ಜಿಲ್ಲಾಧಿಕಾರಿ ಸಿ.ಶಿಖಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



No comments:

Post a Comment