Thursday 10 December 2015

 ವೀಕ್ಷಕರ ನೇಮಕ
  ಮೈಸೂರು,ಡಿ.10-ಕರ್ನಾಟಕ ವಿಧಾನ ಪರಿಷತ್ತಿಗೆ ಮೈಸೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯುತ್ತಿರುವ ಚುನಾವಣೆ 2015 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗ .ಐಯ್ಯಪ್ಪ ಎಂ.ಕೆ, ಆಯುಕ್ತರು, ಸಹಕಾರ ಸಂಘಗಳ ನಿಬಂಧಕರು, ಸಹಕಾರ ಇಲಾಖೆ, ಬೆಂಗಳೂರು ಇವರನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಸದರಿ ಚುನಾವಣೆಗೆ ಸಂಬಂಧಿಸಿದ ವಿಷಯಗಳಿಗೆ ಅಭ್ಯರ್ಥಿಗಳು / ಮತದಾರರು / ಸಾರ್ವಜನಿಕರು ಚುನಾವಣಾ ವೀಕ್ಷಕರನ್ನು ಮೊಬೈಲ್ ಸಂಖ್ಯೆಗೆ 9449270557 ಕರೆ ಮಾಡಿ ಸಂಪರ್ಕಿಸಬಹುದಾಗಿದೆ
    ಚುನಾವಣಾ ವೀಕ್ಷಕರ ಸಮನ್ವಯಾಧಿಕಾರಿಯಾಗಿ ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ  ಪ್ರಸಾದ್ ಮೂರ್ತಿ ಮೊಬೈಲ್ ಸಂಖ್ಯೆ 9480326752 ಗೆ ಕರೆ ಮಾಡಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಶಿಖಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  
ಬಡತನ ಮಾನವ ಹಕ್ಕುಗಳಿಗೆ ದೂಡ್ಡ ಸವಾಲು: ಕೆ.ಎಸ್.ಮುದಗಲ್
   
 ಮೈಸೂರು,ಡಿ.10-ಬಡತನ ಮತ್ತು ಅನಕ್ಷರತೆ ಮಾನವ ಹಕ್ಕುಗಳಿಗೆ ದೂಡ್ಡ ಸವಾಲುಗಳಾಗಿ ಹೊರಹೊಮ್ಮಿದೆ ಎಂದು ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ನ್ಯಾಯಾಧೀಶರಾದ ಕೆ.ಎಸ್. ಮುದಗಲ್ ಹೇಳಿದರು.
    ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
     ಮಾನವನ ಹಕ್ಕುಗಳು ಬಹಳ ವರ್ಷಗಳಿಂದಲ್ಲೇ ಉಲ್ಲಂಘನೆಯಾಗುತ್ತಿವೆÉ. ಸಮಾಜದಲ್ಲಿ ಎಲ್ಲರಿಗೂ ಸಮಾನ ಬದುಕು ಬಾಳಲು ಅವಕಾಶವಿದೆ. ಆದರೆ ಬಡತನ ಮತ್ತು ಅನಕ್ಷರತೆ ಸಮಾನ ಬಾಳಿಗೆ ಅಡ್ಡಿಯಾಗಿದೆ. ಸಮಾಜದಲ್ಲಿ ಪ್ರತಿಯೊಬ್ಬರು ಆರ್ಥಿಕವಾಗಿ ಅಭಿವೃದ್ಧಿ ಹೊಂದುವುದರ ಜೊತೆಯಲ್ಲಿ ಜತೆಗೆ ಅಕ್ಷರಸ್ತರಾದರೆ ಮಾನವ ಹಕ್ಕುಗಳ ಪರಿಕಲ್ಪನೆಗೆ ನಿಜವಾದ ಅರ್ಥ ಸಿಕ್ಕಂತೆ ಎಂದು ಹೇಳಿದರು.
    ಸಮಾಜದಲ್ಲಿ ಮನುಷ್ಯ ಘನತೆಯಿಂದ ಬದುಕು ಸಾಗಿಸಲು ಬೇಕಿರುವ ಮೂಲಭೂತ ಅವಶ್ಯಕತೆಗಳನ್ನು ಪಡೆಯುವುದು ಆತನ ಹಕ್ಕು.  ಯಾವುದೇ ಕಾರಣದಿಂದ ಇದಕ್ಕೆ ತೊಡಕಾದಲ್ಲಿ, ಅದು ಮಾನವ ಹಕ್ಕುಗಳ ಉಲ್ಲಂಘನೆಯಾದಂತೆ ಆಗುತ್ತದೆ.  ಮಾನವ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಮಾನವ ಹಕ್ಕುಗಳ ಆಯೋಗಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು
    ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾದಲ್ಲಿ ದೇಶದ ಅಭಿವೃದ್ಧಿಗೆ ಮಾರಕವಾಗುವುದಲ್ಲದೆ, ಜಾಗತಿಕ ಮಟ್ಟದಲ್ಲಿ ದೇಶಕ್ಕೆ ಹಿನ್ನಡೆಯಾಗುವ ಸಾಧ್ಯತೆಗಳು ಹೆಚ್ಚು. ವಿಶ್ವದಲ್ಲಿ ಮಾನವ ಹಕ್ಕುಗಳಿಗೆ ಹೆಚ್ಚಿನ ಒತ್ತು ನೀಡುತ್ತ ಬಂದಿರುವ ದೇಶಗಳಲ್ಲಿ ಭಾರತ ಮುಂಚುಣಿಯಲ್ಲಿದೆ ಎಂದರು.
    ಮೈಸೂರಿನ ವಿಶ್ವವಿದ್ಯಾನಿಲಯದ ನಿವೃತ್ತ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ. ಎಂ. ಉಮಾಪತಿ ಅವರು ಮಾತನಾಡಿ 1948 ರಲ್ಲಿ ವಿಶ್ವಸಂಸ್ಥೆ ಮಾನವ ಹಕ್ಕುಗಳ ರಕ್ಷಣೆಗಾಗಿ ತೀವ್ರ ಸ್ಪಂದನೆ ನೀಡಿದ ಪರಿಣಾಮವಾಗಿ, ಆಗಿನಿಂದಲೂ ಮಾನವ ಹಕ್ಕುಗಳ ರಕ್ಷಣಾ ದಿನವನ್ನು ಆಚರಿಸಲಾಗುತ್ತಿದೆ. ಮಗುವಿನ ಹುಟ್ಟಿನಿಂದ ಮೊದಲುಗೊಳ್ಳುವ ಹಕ್ಕುಗಳು, ಮರಣ ಕಾಲದವರೆಗೆ ಜೀವನದುದ್ದಕ್ಕೂ ಆತನಿಗೆ ಹಕ್ಕುಗಳನ್ನು ನಮ್ಮ ಸಂವಿಧಾನ ದಯಪಾಲಿಸಿದೆ ಎಂದು ಹೇಳಿದರು.
     ದೇಶದಲ್ಲಷ್ಟೇ ಅಲ್ಲ ಜಾಗತಿಕ ಮಟ್ಟದಲ್ಲಿಯೂ ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ನಗರೀಕರಣ, ಕೈಗಾರಿಕರಣದ ಜೊತೆ ಜೊತೆಗೆ ನಾಗರಿಕತೆಯ ಅಭಿವೃದ್ಧಿಯತ್ತ ಹಾಗೂ ಅವರ ಹಕ್ಕುಗಳ ರಕ್ಷಣೆಯತ್ತಲೂ ಹೆಚ್ಚಿನ ಗಮನ ನೀಡುವ ಅಗತ್ಯವಿದೆ.  ಪ್ರತಿಯೊಬ್ಬ ಸಾಮಾನ್ಯ ವ್ಯಕ್ತಿಯೂ ಮಾನವ ಹಕ್ಕುಗಳ ಬಗ್ಗೆ ಅರಿವು ಹೊಂದಬೇಕು ಎಂದರು.
     ಸಮಾಜದಲ್ಲಿ ಮನುಷ್ಯ ಘನತೆಯಿಂದ ಬದುಕು ಸಾಗಿಸಲು ಬೇಕಿರುವ ಮೂಲಭೂತ ಅವಶ್ಯಕತೆಗಳನ್ನು ಪಡೆಯುವುದು ಆತನ ಹಕ್ಕು. ಯಾವುದೇ ಕಾರಣದಿಂದ ಇದಕ್ಕೆ ತೊಡಕಾದಲ್ಲಿ, ಅದು ಮಾನವ ಹಕ್ಕುಗಳ ಉಲ್ಲಂಘನೆಯಾದಂತೆ ಆಗುತ್ತದೆ.  ಮಾನವ ಹಕ್ಕುಗಳ ಬಗ್ಗೆ ಕೇವಲ ದಿನಾಚರಣೆಯಂದು ಚರ್ಚಿಸದೆ,  ವರ್ಷದುದ್ದಕ್ಕೂ ಇದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವಂತಾಗಬೇಕು ಎಂದು ಹೇಳಿದರು.
     ಇದೇ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ದಿನೇಶ್ ಹೆಗಡೆ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಮಾನವ ಹಕ್ಕುಗಳ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.
     ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ.ಎ.ಗೋಪಾಲ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ವೆಂಕಟೇಶ್, ಮೈಸೂರು ಉಪ ವಿಭಾಗಾಧಿಕಾರಿ ಆನಂದ್, ತಹಶೀಲ್ದಾರ್ ನವೀನ್ ಜೋಸೆಫ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.


ಡಿ. 11 ರಂದು ಹೊಸ ಬೆಳಕು ಯೋಜನೆಗೆ ಚಾಲನೆ
    ಮೈಸೂರು,ಡಿ.10.ಇಂಧನ ಇಲಾಖೆ ವತಿಯಿಂದ ಹೊಸ ಬೆಳಕು ಯೋಜನೆ ಎಲ್‍ಇಡಿ ಜನಜಾಗೃತಿ ಅಭಿಯಾನ ಡಿಸೆಂಬರ್ 11 ರಂದು ಮಧ್ಯಾಹ್ನ 12 ಗಂಟೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ನಡೆಯಲಿದೆ.
    ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಡೆಲ್ಪ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ವಾಸು ಅವರು ಅಧ್ಯಕ್ಷತೆ ವಹಿಸುವರು. ಯೋಜನೆಯ ರಾಯಭಾರಿ ಚಲನಚಿತ್ರ ನಟ ಪುನೀತ್ ರಾಜ್‍ಕುಮಾರ್ ಹಾಗೂ ಚಲನಚಿತ್ರ ನಟಿ ಕು| ರಮ್ಯ ಅವರು ಭಾಗವಹಿಸಲಿದ್ದಾರೆ.
    ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್, ಇಂಧನ ಸಚಿವ ಡಿ.ಕೆ. ಶಿವಕುಮಾರ್, ಲೋಕೋಪಯೋಗಿ ಸಚಿವ ಡಾ|| ಹೆಚ್.ಸಿ. ಮಹದೇವಪ್ಪ, ಸಹಕಾರ ಹಾಗೂ ಸಕ್ಕರೆ ಸಚಿವ ಹೆಚ್.ಎಸ್. ಮಹದೇವ ಪ್ರಸಾದ್, ಕರ್ನಾಟಕ ವಸತಿ ಸಚಿವ ಡಾ| ಎಂ.ಹೆಚ್. ಅಂಬರೀಶ್, ರೇಷ್ಮೆ ಮತ್ತು ಪಶು ಸಂಗೋಪನಾ ಸಚಿವ ಎ. ಮಂಜು, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (ಕ್ರೇಡಲ್) ಅಧ್ಯಕ್ಷ ಶಶಿಕುಮಾರ್, ಇಂಧನ ಸಚಿವಾಲಯ ಹೆಚ್ಚುವರಿ ಕಾರ್ಯದರ್ಶಿ ಬಿ.ಪಿ. ಪಾಂಡೆ, ಇ.ಇ.ಎಸ್.ಎಲ್ ವ್ಯವಸ್ಥಾಪಕ ನಿರ್ದೇಶಕ ಸೌರಭ್ ಕುಮಾರ್, ಲೋಕಸಭಾ ಸದಸ್ಯ ಪ್ರತಾಪ್ ಸಿಂಹ, ಆರ್. ಧ್ರುವನಾರಾಯಣ್, ಸಿ.ಎಸ್. ಪುಟ್ಟರಾಜು, ವಿಧಾನ ಸಭಾ ಸದಸ್ಯ ತನ್ವೀರ್ ಸೇಠ್, ಜಿ.ಟಿ.ದೇವೇಗೌಡ, ಎಂ.ಕೆ.ಸೋಮಶೇಖರ್, ಹೆಚ್.ಪಿ. ಮಂಜುನಾಥ್, ಕೆ.ವಂಕಟೇಶ್, ಸಾ.ರಾ. ಮಹೇಶ್, ಚಿಕ್ಕಮಾದು ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಹೆಚ್. ವಿಜಯಶಂಕರ್ ಅವರು ಭಾಗವಹಿಸುವರು.
      ಮಹಿಳೆಯರಿಗೆ ತಾಂತ್ರಿಕ ತರಬೇತಿ
   ಮೈಸೂರು,ಡಿ.10.-ಭಾರತ ಸರ್ಕಾರದ ಪಂ. ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ (ಆಆU-ಉಏಙ) ಯಡಿ ಹಾಗೂ ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಾಯೋಜಕತ್ವದಲ್ಲಿ ಗ್ರಾಮೀಣ ಪ್ರದೇಶದ ಎಸ್.ಎಸ್.ಎಲ್.ಸಿ  ಉತ್ತೀರ್ಣ/ಅನುತ್ತೀರ್ಣರಾದ ನಿರುದ್ಯೋಗಿ ಮಹಿಳಾ ಅಭ್ಯರ್ಥಿಗಳಿಗೆ 6 ತಿಂಗಳ ಕಾಲವಾದಿಯ ಸಿ.ಎನ್.ಸಿ. ಮೆಷಿನ್ ಆಪರೇಟರ್, 12 ತಿಂಗಳ ಕಾಲವಾದಿಯ ಟೂಲ್ ರೂಮ್ ಮೆಷಿನಿಸ್ಟ್  ತಾಂತ್ರಿಕ ತರಬೇತಿಯನ್ನು  ಊಟ, ವಸತಿ ಹಾಗೂ ಶಿಷ್ಯವೇತನದೊಂದಿಗೆ ಉಚಿತವಾಗಿ ನೀಡಲಾಗುವುದು.
     18 ವರ್ಷ ತುಂಬಿದ ನಿರುದ್ಯೋಗಿ ಗ್ರಾಮೀಣ ಪ್ರದೇಶದ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ 93-94, ಬೆಳಗೊಳ ಕೈಗಾರಿಕಾ ಪ್ರದೇಶ, ಕೆ.ಆರ್.ಎಸ್. ರಸ್ತೆ, ಮೈಸೂರು-570016 ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ 9141629598 ಗೆ ಸಂಪರ್ಕಿಸುವುದು

ಡಿಸೆಂಬರ್ 25ರಿಂದ 27ರವರೆಗೆ ಕಾವ, ಜಾಣ, ರತ್ನ ಪರೀಕ್ಷೆ
     ಮೈಸೂರು,ಡಿ.10.ಕನ್ನಡ ಸಾಹಿತ್ಯ ಪರಿಷತ್ತಿನ  2015-16ನೇ ಸಾಲಿನ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳು 2015 ಡಿಸೆಂಬರ್ 25, 26 ಮತ್ತು 27 ರಂದು 3 ದಿನಗಳ ಕಾಲ ರಾಜ್ಯದ 17 ಕೇಂದ್ರಗಳಲ್ಲಿ ನಡೆಯಲಿದೆ.
     ಪರೀಕ್ಷ ಪ್ರವೇಶ ಪತ್ರÀಗಳನ್ನು ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಈಗಾಗಲೇ ಕಳುಹಿಸಿ ಕೊಡಲಾಗಿದೆ.  ದಿನಾಂಕ 15-12-2015ರ ನಂತರವೂ ಪ್ರವೇಶ ಪತ್ರ ತಲುಪದಿದ್ದಲ್ಲಿ  ಬಗ್ಗೆ ವಿದ್ಯಾರ್ಥಿಗಳು ಗೌರವ ಸಲಹೆಗಾರರು, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18 ದೂರವಾಣಿ 080-26623584ನ್ನು ಸಂಪರ್ಕಿಸುವುದು. ಪ್ರವೇಶ ಪತ್ರ ಮತ್ತು ಪರೀಕ್ಷಾ ಕೇಂದ್ರಗಳ ವಿಳಾಸವನ್ನು ಅಂತರ್ಜಾಲ ತಾಣ ತಿತಿತಿ.ಞಚಿsಚಿಠಿಚಿ.iಟಿ ಮೂಲಕ ಸಹ ಪಡೆಯಬಹುದಾಗಿದೆ.

ಭಾರತೀಯ ವಾಯುದಳದಲ್ಲಿ ಆಫೀಸರ್ಸ್ ಹುದ್ದೆಗೆ ಅರ್ಜಿ ಆಹ್ವಾನ
     ಮೈಸೂರು,ಡಿ.10.ಭಾರತೀಯ ವಾಯುದಳದ ಫ್ಲೆಯಿಂಗ್, ಟೆಕ್ನಿಕಲ್ ಹಾಗೂ ಗ್ರೌಂಡ್ ಡ್ಯೂಟಿ ವಿಭಾಗದಲ್ಲಿ ಖಾಲಿ ಇರುವ ಆಫೀಸರ್ಸ್ ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
    ಫ್ಲೈಯಿಂಗ್ ವಿಭಾಗಕ್ಕೆ ಅರ್ಜಿ ಸಲ್ಲಿಸುವವರ ವಯೋಮಿತಿ 20ರಿಂದ 24 ವರ್ಷದೊಳಗಿರಬೇಕು  ಪದವಿಯಲ್ಲಿ 60% ಅಂಕ ಪಡೆದಿರಬೇಕು. ಪಿಯುಸಿ ಹಂತದಲ್ಲಿ ಗಣಿತ ಮತ್ತು ಭೌತಶಾಸ್ತ್ರ ಅಭ್ಯಾಸ ಮಾಡಿರಬೇಕು ಅಥವಾ ಇಂಜಿನಿಯರ್ ಪದವಿಯಲ್ಲಿ 60% ಅಂಕ ಪಡೆದಿಬೇಕು. ಆಯ್ಕೆಯಾಗುವ ಅಭ್ಯರ್ಥಿಗೆ ರೂ 80,238/- ವೇತನ ಸಿಗಲಿದೆ.
     ಟೆಕ್ನಿಕಲ್ ವಿಭಾಗಕ್ಕೆ ಅರ್ಜಿ ಸಲ್ಲಿಸುವವರ ವಯೋಮಿತಿ 20ರಿಂದ 26 ವರ್ಷ ದೊಳಗಿರಬೇಕು, ಇಂಜಿನಿಯರಿಂಗ್ ಪದವಿಯಲ್ಲಿ 60% ಅಂಕ ಪಡೆದಿರಬೇಕು. ಆಯ್ಕೆಯಾಗುವ ಅಭ್ಯರ್ಥಿಗೆ ರೂ 69,238/- ವೇತನ ಸಿಗಲಿದೆ.
    ಗ್ರೌಂಡ್ ಡ್ಯೂಟಿ ವಿಭಾಗಕ್ಕೆ ಅರ್ಜಿ ಸಲ್ಲಿಸುವವರ ವಯೋಮಿತಿ 20ರಿಂದ 26 ವರ್ಷ ದೊಳಗಿರಬೇಕು. ಪದವಿಯಲ್ಲಿ 60% ಅಂಕ ಪಡೆದಿಬೇಕು ಅಥವಾ ಸ್ನಾತಕೋತ್ತರ ಪದವಿ  ಪಡೆದಿರಬೇಕು. ಆಯ್ಕೆಯಾಗುವ ಅಭ್ಯರ್ಥಿಗೆ ರೂ. 66,738/- ವೇತನ ಸಿಗಲಿದೆ.
     ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/12/2015 ಯಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ತಿತಿತಿ.ಛಿಚಿಡಿeeಡಿಚಿiಡಿಜಿoಡಿಛಿe.ಟಿiಛಿ.iಟಿ, ತಿತಿತಿ.emಠಿಟoಥಿmeಟಿಣಟಿeತಿs.gov.iಟಿ, ತಿತಿತಿ.ಡಿoರಿgಚಿಡಿsಚಿmಚಿಛಿhಚಿಡಿ.gov.iಟಿ ಅಥವಾ ಉಪಮುಖ್ಯಸ್ಥರು,  ವಿಶ್ವ ವಿದ್ಯಾನಿಲಯ ಉದ್ಯೋಗ ಮಾಹಿತಿ ಮತ್ತುಮಾರ್ಗದರ್ಶನ ಕೇಂದ್ರ, ಮಾನಸಗಂಗೋತ್ರಿ , ಮೈಸೂರು ಇವರನ್ನು ಸಂಪರ್ಕಿಸಬಹುದು.
ಡಿಸೆಂಬರ್ 17 ರಂದು ಸುಬ್ರಹ್ಮಣ್ಯೇಶ್ವರ ಸ್ವಾಮಿ ಜಾತ್ರೆ
     ಮೈಸೂರು,ಡಿ.10.ಮೈಸೂರು ತಾಲ್ಲೂಕು ಕಸಬಾ ಹೋಬಳಿಯ ಸಿದ್ದಲಿಂಗಪುರ ಗ್ರಾಮದಲ್ಲಿ ಶ್ರೀ ಸುಬ್ರಮಣ್ಯೇಶ್ವರ ಸ್ವಾಮಿ ಷಷ್ಠಿ ಜಾತ್ರೆಯು ಡಿಸೆಂಬರ್ 17 ರಂದು ನಡೆಯಲಿದೆ.
    ಈ ರಥೋತ್ಸವದಂದು ದೇವಸ್ಥಾನದ ಗರ್ಭಗುಡಿಯಲ್ಲಿ ನೂಕು ನುಗ್ಗಲು ಉಂಟಾಗುವುದರಿಂದ ಭಕ್ತಾದಿಗಳನ್ನು ನಿಯಂತ್ರಿಸಲು ಹಾಗೂ ವಿಶೇಷ ದರ್ಶನಕ್ಕೆ ಭಕ್ತಾದಿಗಳು ಶೀಘ್ರ ದರ್ಶನ ಪಡೆಯಲು ಭಕ್ತಾದಿಗಳ ಸುರಕ್ಷತೆಯ ದೃಷ್ಠಿಯಿಂದ ಪೊಲೀಸ್  ಬಂದೋಬಸ್ತ್ ಮಾಡಲಾಗಿದೆ ಹಾಗೂ ಕಂದಾಯ ಇಲಾಖಾ ನೌಕರರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
     ನೇಮಕಗೊಂಡಿರುವ ಕಂದಾಯ ಇಲಾಖಾ ಸಿಬ್ಬಂದಿ ವರ್ಗದವರು ಡಿಸೆಂಬರ್ 16ರ ಮಧ್ಯಾಹ್ನ 3 ಗಂಟೆಯಿಂದ ಡಿಸೆಂಬರ್ 17ರ ರಾತ್ರಿ 11 ಗಂಟೆಯವರೆಗೆ ದೇವಸ್ಥಾನದಲ್ಲಿ ಇಲಾಖಾ ನೌಕರರು ಹಾಗೂ ಪೊಲೀಸ್ ಸಿಬ್ಬಂದಿ ವರ್ಗದವರು ಹಾಜರಿದ್ದು, ಕರ್ತವ್ಯ ನಿರ್ವಹಿಸುತ್ತಾರೆ.
    ಡಿಸೆಂಬರ್ 17 ರಂದು ಉಚಿತವಾಗಿ  ಪ್ರಸಾದ ವಿನಿಯೋಗ ಮಾಡುವವರು ತಹಶೀಲ್ದಾರ್ ಕಚೇರಿ ಮೈಸೂರು ಇಲ್ಲಿ  ಹೆಸರು ನೋಂದಾಯಿಸಿಕೊಳ್ಳುವುದು. ಸಾರ್ವಜನಿಕರು ಭಕ್ತಾದಿಗಳು ಶ್ರೀ ಸುಬ್ರಮಣ್ಯೇಶ್ವರ ಸ್ವಾಮಿ ಅವರ ದರ್ಶನ ಪಡೆದು ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಎಂದು ಮೈಸೂರು ತಾಲ್ಲೂಕು ತಹಶೀಲ್ದಾರ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ವಿಧಾನ ಪರಿಷತ್ ಚುನಾವಣೆ- ಎಲ್ಲಾ ನಾಮಪತ್ರಗಳೂ ಕ್ರಮಬದ್ಧ
    ಮೈಸೂರು,ಡಿ.10.ಮೈಸೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತ ಚುನಾವಣೆಗೆ  ಸಲ್ಲಿಕೆಯಾಗಿದ್ದ ಎಲ್ಲಾ 14 ಮಂದಿಯ 27 ನಾಮಪತ್ರಗಳು ಕ್ರಮಬದ್ಧವಾಗಿದ್ದು ಪುರಸ್ಕಾರಗೊಂಡಿವೆ ಎಂದು ಜಿಲ್ಲಾಧಿಕಾರಿ ಹಾಗೂ ಮೈಸೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾಧಿಕಾರಿ ಸಿ.ಶಿಖಾ ಅವರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರವಾಸ ಕಾರ್ಯಕ್ರಮ
   ಮೈಸೂರು,ಡಿ.10.-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 11 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
    ಅವರು ಅಂದು ಬೆಳಿಗ್ಗೆ 11-30ಕ್ಕೆ ರಸ್ತೆ ಮೂಲಕ ಮೈಸೂರಿಗೆ ಆಗಮಿಸಿ ಮಧ್ಯಾಹ್ನ 12 ಗಂಟೆಗೆ ಇಂಧನ ಇಲಾಖೆಯಿಂದ ಆಯೋಜಿಸಿರುವ ಹೊಸಬೆಳಕು ಯೋಜನೆಯ ಎಲ್.ಇ.ಡಿ. ಜನಜಾಗೃತಿ ಅಭಿಯಾನ ಡೆಲ್ಪ್ ಯೋಜನೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಚಾಲನೆ ನೀಡಿದ ನಂತರ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

No comments:

Post a Comment