Thursday 4 February 2016

ಮುಖ್ಯಮಂತ್ರಿಗಳ ಕಾರ್ಯಕ್ರಮ
   
   ಮೈಸೂರು,ಫೆ.4-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 5, 6 ಹಾಗೂ 7 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
       ಫೆಬ್ರವರಿ 5 ರಂದು  ಬೆಳಿಗ್ಗೆ 10-50ಕ್ಕೆ ಸುತ್ತೂರಿನ ಜೆ.ಎಸ್.ಎಸ್. ಹೆಲಿಪ್ಯಾಡ್‍ಗೆ ಆಗಮಿಸುವರು. ಬೆಳಿಗ್ಗೆ 11  ಗಂಟೆಗೆ ನಂಜನಗೂಡು ತಾಲ್ಲೂಕಿನ ಸುತ್ತೂರು ಶ್ರೀಕ್ಷೇತ್ರದಲ್ಲಿ ಶ್ರೀ ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವ ಅಂಗವಾಗಿ ಜಾತ್ರಾ ಮಹೋತ್ಸವ ಅಂಗವಾಗಿ ಆಯೋಜಿಸಿರುವ ಕೃಷಿ ಮೇಳ, ವಸ್ತು ಪ್ರದರ್ಶನ ಹಾಗೂ ಸಾಂಸ್ಕøತಿಕ ಮೇಳ ಉದ್ಘಾಟನೆ ಹಾಗೂ ಶ್ರೀ ಕಪಿಲ ನಂಜುಂಡ ದೇಶಿಕೇಂದ್ರ ಗುರುಕುಲ ಸಾಧಕರ ಸದನ ಹಾಗೂ ಕೇಂದ್ರ ಉಗ್ರಾಣದ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಮೈಸೂರು ನಗರದ ಶ್ರೀರಾಂಪುರದಲ್ಲಿ ಗೌತಮ (ಧನ್ವಂತ್ರಿ) ಸಹಕಾರಿ ಆಸ್ಪತ್ರೆ ಹಾಗೂ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 4 ಗಂಟೆಗೆ ಜಗನ್ಮೋಹನ ಪ್ಯಾಲೇಸ್ ಸಮೀಪ ಎಂ.ಕೆ.ಎಸ್. ಹೋಟೆಲ್ ಪ್ರೈ ಲಿಮಿಟೆಡ್ ಆಯೋಜಿಸಿರುವ ನೂತನವಾಗಿ ನಿರ್ಮಿಸಿರುವ ಅಂಬಾರಿ ಸೂಟ್ಸ್‍ನ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವರು. ಸಂಜೆ 5-30ಕ್ಕೆ ಮೈಸೂರು ಅರಮನೆ ಆವರಣದಲ್ಲಿ ಹಮ್ಮಿಕೊಂಡಿರುವ 8ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ ಪ್ರದಾನ ಮತ್ತು ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು. ರಾತ್ರಿ 8-30ಕ್ಕೆ 8ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ ಪ್ರದಾನ ಮತ್ತು ಸಮಾರೋಪ ಸಮಾರಂಭದಲ್ಲಿ ಗಣ್ಯರ ಗೌರವಾರ್ಥ ಏರ್ಪಡಿಸಿರುವ ಭೋಜನ ಕೂಟದಲ್ಲಿ ಭಾಗವಹಿಸುವರು. ರಾತ್ರಿ 9-30 ಗಂಟೆಗೆ ಮೈಸೂರಿನಿಂದ ತೆರಳುವರು.
        ಫೆಬ್ರವರಿ 6 ರಂದು  ಬೆಳಿಗ್ಗೆ 10 ಗಂಟೆಗೆ ಮೈಸೂರಿಗೆ ಆಗಮಿಸುವ ಮುಖ್ಯಮಂತ್ರಿಗಳು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಸ್ತವ್ಯ ಹೂಡಲಿದ್ದಾರೆ. ಫೆಬ್ರವರಿ 7 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ತೆರಳುವರು.

ಫೆಬ್ರವರಿ 5 ರಂದು 8ನೇ ಬೆಂಗಳೂರು ಅಂತರ ರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ ಪ್ರದಾನ ಸಮಾರೋಪ
    ಮೈಸೂರು,ಫೆ.4.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ 8ನೇ ಬೆಂಗಳೂರು ಅಂತರ ರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ ಪ್ರದಾನ ಹಾಗೂ ಸಮಾರೋಪ ಸಮಾರಂಭವನ್ನು ಫೆಬ್ರವರಿ 5 ರಂದು ಸಂಜೆ 5-30ಕ್ಕೆ ಮೈಸೂರು ಅರಮನೆ ಮುಂಭಾಗದ ಆವರಣದಲ್ಲಿ ನಡೆಯಲಿದೆ.
     ಮುಖಮಂತ್ರಿ ಸಿದ್ಧರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡುವರು. ಮೂಲಸೌಲಭ್ಯ ಅಭಿವೃದ್ಧಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಹಾಗೂ ಹಜ್ ಸಚಿವರಾದ ಆರ್. ರೋಷನ್ ಬೇಗ್ ಅವರು ಆಶಯ ಭಾಷಣ ಮಾಡುವರು. ಶಾಸಕ ಎಂ.ಕೆ. ಸೋಮಶೇಖರ್ ಅವರು ಅಧ್ಯಕ್ಷತೆ ವಹಿಸುವರು.
ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್, ಸಹಕಾರ ಹಾಗೂ ಸಕ್ಕರೆ ಸಚಿವ ಹೆಚ್.ಎಸ್. ಮಹದೇವ ಪ್ರಸಾದ್, ಲೋಕೋಪಯೋಗಿ ಸಚಿವ ಡಾ|| ಹೆಚ್.ಸಿ. ಮಹದೇವಪ್ಪ, ವಸತಿ ಸಚಿವ ಡಾ. ಎಂ. ಹೆಚ್. ಅಂಬರೀಷ್, ಕನ್ನಡ ಮತ್ತು ಸಂಸ್ಕøತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಉಮಾಶ್ರೀ, ವಿಧಾನಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಮೈಸೂರು ಮಹಾನಗರ ಪಾಲಿಕೆ ಮಹಾಪೌರ ಬಿ.ಎಲ್. ಭೈರಪ್ಪ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು, ಶ್ರೀ ಕಂಠೀರವ ಸ್ಟುಡಿಯೋಸ್ ಲಿ.ನ ಅಧ್ಯಕ್ಷೆ ವಿಜಯಲಕ್ಷ್ಮಿ ಅರಸ್, ಲೋಕಸಭಾ ಸದಸ್ಯ ಪ್ರತಾಪ್ ಸಿಂಹ, ಆರ್. ಧ್ರುವನಾರಾಯಣ್, ಸಿ.ಎಸ್. ಪುಟ್ಟರಾಜು, ವಿಧಾನ ಸಭಾ ಸದಸ್ಯ ತನ್ವೀರ್ ಸೇಠ್, ಜಿ.ಟಿ.ದೇವೇಗೌಡ, ವಾಸು, ಹೆಚ್.ಪಿ. ಮಂಜುನಾಥ್, ಕೆ.ವಂಕಟೇಶ್, ಸಾ.ರಾ. ಮಹೇಶ್, ಎಸ್. ಚಿಕ್ಕಮಾದು, ವಿಧಾನ ಪರಿಷತ್ ಸದಸ್ಯ ಸಿ.ಹೆಚ್. ವಿಜಯಶಂಕರ್, ಎಸ್. ನಾಗರಾಜ್, ಗೋ. ಮಧುಸೂದನ್, ಆರ್. ಧರ್ಮಸೇನ್, ಕಾವೇರಿ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷ ಸಿ. ದಾಸೇಗೌಡ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಆರ್. ಮೋಹನ್ ಕುಮಾರ್, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ  ಆರ್. ಮೂರ್ತಿ, ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ ಅನಂತು, ಕರ್ನಾಟಕ ಮೃಗಾಲಯ ಪ್ರಾಧಿಕಾರ ಅಧ್ಯಕ್ಷೆ ರೀಹಾನಾಬಾನು, ಮೈಸೂರು ಮಹಾನಗರ ಪಾಲಿಕೆ ಉಪ ಮಹಾ ಪೌರರಾದ ವನಿತಾ ಪ್ರಸನ್ನ ಹಾಗೂ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಾಂಸ್ಕøತಿ ಕಾರ್ಯಕ್ರಮ: ಉದ್ಘಾಟನೆಯ ನಂತರ ಸಂಜೆ 7.15 ರಿಂದಗುರುಕಿರಣ್ ಮತ್ತು ಚೈತ್ರಾ ಅವರಿಂದ ‘ರಸಸಂಜೆ’ ಕನ್ನಡದ ಜನಪ್ರಿಯ ಗೀತೆಗಳ ಗಾಯನ ಹಾಗೂ ಕೆಲವು ಗೀತೆಗಳಿಗೆ ನೃತ್ಯ, ತಬಲಾ ನಾಣಿ ಮತ್ತು ವೃಂದದವರಿಂದ ‘ಹಾಸ್ಯ ಪ್ರಹಸನ’,  ಬೆಲ್ಜಿಯಂ ದೇಶದ ನೃತ್ಯ ತಂಡವದರಿಂದ ರಂಜನೆ, ರಮೇಶ್ ಅರವಿಂದ್ ಅವರಿಂದ ಸಿನಿಮೋತ್ಸವದ ಬಗ್ಗೆ ಮಾತು, ಖ್ಯಾತ ಸಿನಿಮಾ ನೃತ್ಯ ನಿರ್ದೇಶಕ ‘ಕಲೈ ಮಾಸ್ಟರ್’ ಮತ್ತು ‘ರಾಮು ಮಾಸ್ಟರ್’  ಅವರ ತಂಡದಿಂದ ಜನಪ್ರಿಯ ಗೀತೆಗಳಿಗೆ ನೃತ್ಯ ಪ್ರದರ್ಶನ
ಪ್ರವೇಶ ದ್ವಾರ,  ಪಾರ್ಕಿಂಗ್ ವ್ಯವಸ್ಥೆ
     ಮೈಸೂರು,ಫೆ.04.ಮೈಸೂರು ಅರಮನೆಯ ಆವರಣದಲ್ಲಿ ಫೆಬ್ರವರಿ 5 ರಂದು ಸಂಜೆ 5-30 ಗಂಟೆಗೆ ನಡೆಯಲಿರುವ 8ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ ಪ್ರದಾನ ಮತ್ತು ಸಮಾರೋಪ ಸಮಾರಂಭಕ್ಕೆ ಪ್ರತ್ಯೇಕ ಪ್ರವೇಶ ಮತ್ತು ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.
     ಸಮಾರಂಭಕ್ಕೆ ಆಗಮಿಸುವ ಗಣ್ಯರು, ಮಾಧ್ಯಮದವರು ಹಾಗೂ ಚಿತ್ರೋದ್ಯಮದವರಿಗೆ ಅರಮನೆಯ ಕರಿಕಲ್ಲು ತೊಟ್ಟಿ ಗೇಟ್‍ನಿಂದ ಪ್ರವೇಶ ಕಲ್ಪಿಸಲಾಗಿದೆ. ಆಹ್ವಾನಿತರು ಮತ್ತು ಸಾರ್ವಜನಿಕರಿಗೆ ಜಯಮಾರ್ತಾಂಡ ಗೇಟ್‍ನಿಂದ ಪ್ರವೇಶ ಕಲ್ಪಿಸಲಾಗಿದೆ.
    ಸಮಾರಂಭಕ್ಕೆ ಆಗಮಿಸುವ ಗಣ್ಯರು, ಮಾಧ್ಯಮದವರು ಹಾಗೂ ಚಿತ್ರೋದ್ಯಮದವರಿಗೆ ಅರಮನೆಯ ಕರಿಕಲ್ಲು ತೊಟ್ಟಿ ಗೇಟ್‍ನ ಹೊರಭಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ. ಆಹ್ವಾನಿತರು ಮತ್ತು ಸಾರ್ವಜನಿಕರಿಗೆ ದೊಡ್ಡ ಕೆರೆ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ  ಮಾಡಲಾಗಿದೆ.
    ವಾಹನಗಳನ್ನು ನಿಗಧಿತ ಸ್ಥಳಗಳಲ್ಲಿಯೇ ಪಾರ್ಕಿಂಗ್ ಮಾಡಬೇಕು. ಕಾರ್ಯಕ್ರಮಕ್ಕೆ ಆಗಮಿಸುವವರು ಮುಂಚಿತವಾಗಿ ಆಗಮಿಸಿ ನಿಗಧಿತ ಸ್ಥಳಗಳಲ್ಲಿ ಕುಳಿತುಕೊಳ್ಳುವುದು. ಆಹ್ವಾನ ಪತ್ರಿಕೆ/ಪಾಸ್‍ಗಳನ್ನು ಹೊಂದಿರುವವರು ಕಡ್ಡಾಯವಾಗಿ ತಮ್ಮ ಬಳಿ ಇಟ್ಟುಕೊಳ್ಳಬೇಕು.  ಪರಿಶೀಲನೆ ಸಮಯದಲ್ಲಿ ಹಾಜರುಪಡಿಸುವುದು.  ಕಾರ್ಯಕ್ರಮಕ್ಕೆ ಯಾವುದೇ ರೀತಿಯ ಆಯುಧ, ಗಾಜಿನ ಬಾಟಲಿಗಳನ್ನು ತರುವುದನ್ನು ನಿಷೇಧಿಸಿದೆ. ಭದ್ರತೆ ದೃಷ್ಟಿಯಿಂದ ಪೊಲೀಸ್ ಇಲಾಖೆ ನಡೆಸುವ ತಪಾಸಣೆಗೆ ಸಹಕರಿಸುವಂತೆ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರವಾಸ ಕಾರ್ಯಕ್ರಮ
     ಮೈಸೂರು,ಫೆ.04.ಕನ್ನಡ ಮತ್ತು ಸಂಸ್ಕøತಿ ಮತ್ತು ವಾರ್ತಾ ಇಲಾಖೆಯ ಕಾರ್ಯದರ್ಶಿ ಡಾ. ಎನ್.ಎಸ್. ಚನ್ನಪ್ಪಗೌಡ ಅವರು ಫೆಬ್ರವರಿ 5 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
     ಫೆಬ್ರವರಿ 5 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿಗೆ ಆಗಮಿಸಿ 8ನೇ ಬೆಂಗಳೂರು ಅಂತರ ರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ ಪ್ರದಾನ ಹಾಗೂ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ನಂತರ ರಾತ್ರಿ 8 ಗಂಟೆಗೆ ಮೈಸೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.
















No comments:

Post a Comment