Sunday 10 April 2016

ಭೇರ್ಯ,ಏ,10- ಗಂಧನಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದಿಂದ 1.25 ಕೋಟಿ ಹಣ ಬಿಡುಗಡೆ ಮಾಡಿದ್ದು ಅತಿಶೀಘ್ರದಲ್ಲಿ ಶಂಕುಸ್ಥಾಪನೆ ಮಾಡಲಾಗುವುದು ಎಂದು ತಾ.ಪಂ.ಮಾಜಿಸದಸ್ಯ ಗಾಂಧಿಶಿವಣ್ಣ ಮತ್ತು ಡೈರಿಮಹದೇವ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅವರು  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ 1.25 ಕೋಟಿ ಹಣ ವೆಚ್ಚದ ಕಾಮಗಾರಿಗೆ ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಗುತ್ತಿಗೆದಾರ ದಿನೇಶ್‍ಕಾರ್ಲೆ ಎಂಬುವರಿಗೆ ಟೆಂಡರ್ ನಿಗದಿಯಾಗಿದೆ ಎಂದ ಅವರು ದಿ|| ಮಂಚನಹಳ್ಳಿ ಮಹದೇವ್ ಮತ್ತು ದಿ|| ಜಿ.ಕೆ.ಕೃಷ್ಣ ಅವರ ಬಹುದಿನಗಳ ಕನಸ್ಸು ಇಂದು ನನಸ್ಸಾಗುತ್ತಿದೆ ಎಂದು ತಿಳಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ 1.25 ಕೋಟಿ ಹಣ ಬಿಡುಗಡೆ ಮಾಡಲು ಸಹಕರಿಸಿದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ, ಆರೋಗ್ಯ ಸಚಿವ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್, ಮಾಜಿ ಸಂಸದ ಅಡಗೂರು ವಿಶ್ವನಾಥ್, ತಾಲ್ಲೂಕಿನ ಮಾನ್ಯ ಶಾಸಕರಾದ ಸಾ.ರಾ.ಮಹೇಶ್, ಕಾಂಗ್ರೆಸ್ ಹಿರಿಯ ಮುಖಂಡ ದೊಡ್ಡಸ್ವಾಮೀಗೌಡ ಇವರುಗಳಿಗೆ ಗಂಧನಹಳ್ಳಿ ಗ್ರಾಮಸ್ಥರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ ಎಂದು ತಿಳಿಸಿದರು.

No comments:

Post a Comment