Friday, 12 December 2025

ಚಾಮರಾಜನಗರ-ರಾಜ್ಯಮಟ್ಟದ ನೆಟ್ ಬಾಲ್ ಪಂದ್ಯಾವಳಿಗೆ ಜಿಲ್ಲಾಧಿಕಾರಿ ಶಿಲ್ಪ ನಾಗ್ ರವರಿಂದ ವಿದ್ಯುಕ್ತ ಚಾಲನೆ

 ರಾಜ್ಯಮಟ್ಟದ ನೆಟ್ ಬಾಲ್ ಪಂದ್ಯಾವಳಿಗೆ ಜಿಲ್ಲಾಧಿಕಾರಿ ಶಿಲ್ಪ ನಾಗ್ ರವರಿಂದ ವಿದ್ಯುಕ್ತ ಚಾಲನೆ


ಚಾಮರಾಜ ನಗರ, ಡಿಸೆಂಬರ್ 12 (ಸಂಜೆ ಮಿತ್ರ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ನೆಟ್ ಬಾಲ್ ಅಸೊಸಿಯೇಷನ್ ಇವರ ಸಂಯುಕ್ತಾಶ್ರಯದಲ್ಲಿ 14 ಮತ್ತು 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ರಾಜ್ಯಮಟ್ಟದ ಮೂರು ದಿನಗಳ ನೆಟ್ ಬಾಲ್ ಪಂದ್ಯಾವಳಿಗೆ ಇಂದು ನಗರದಲ್ಲಿ ಚಾಲನೆ ದೊರೆಯಿತು.


ನಗರದ ಡಾ. ಬಿ.ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದಿನಿಂದ ಡಿಸೆಂಬರ್ 14ರವರೆಗೆ ನಡೆಯಲಿರುವ ನೆಟ್ ಬಾಲ್ ಪಂದ್ಯಾವಳಿಗೆ ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ ಅವರು ಚೆಂಡು ಎಸೆಯುವ ಮೂಲಕ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸಮಾರಂಭ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ನೆಟ್ ಬಾಲ್ ಅಂತರಾಷ್ಟ್ರೀಯ ಮಟ್ಟದ ಕ್ರೀಡೆಯಾಗಿದ್ದು, ಇದನ್ನು ಆಡುವುದೇ ಒಂದು ರೋಮಾಂಚನಕಾರಿ. 128 ವರ್ಷಗಳ ಹಿಂದೆ ಇಂಗ್ಲೇಡ್ ನಲ್ಲಿ ಆರಂಭವಾಯಿತು. ನೆಟ್ ಬಾಲ್ ಅಸೋಸಿಯೇಷನ್ ನಲ್ಲಿ 2 ಕೋಟಿ ಸದಸ್ಯರು ಇದ್ದಾರೆ ಎಂಬುದು ಗಮನಾರ್ಹ ಎಂದರು.

ಜಿಲ್ಲಾ ಕೇಂದ್ರದಲ್ಲಿ ಆಯೋಜನೆಯಾಗಿರುವ ನೆಟ್ ಬಾಲ್ ಪಂದ್ಯಾವಳಿಯಲ್ಲಿ ರಾಜ್ಯದ 25 ಜಿಲ್ಲೆಗಳಿಂದ 1200 ಕ್ರೀಡಾಪಟುಗಳು ಭಾಗವಹಿಸಿದ್ದಾರೆ. ಕ್ರೀಡಾ ಮನೋಭಾವದಿಂದ ಪಾಲ್ಗೊಂಡು ಉತ್ತಮ ಪ್ರದರ್ಶನ ನೀಡುವ ಮೂಲಕ ಕೀರ್ತಿ ತರಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹಾರೈಸಿದರು.

ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ ಅವರು ಮಾತನಾಡಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ರಾಜ್ಯಮಟ್ಟದ ನೆಟ್ ಬಾಲ್ ಪಂದ್ಯಾವಳಿ ಆಯೋಜನೆ ಮಾಡಿರುವುದು ಹೆಮ್ಮೆಯ ಸಂಗತಿ. ಆತಿಥ್ಯ ವಹಿಸಿರುವ ನಮ್ಮ ಜಿಲ್ಲೆಯಲ್ಲಿ ಕ್ರೀಡಾ ಸ್ಪರ್ಧಿಗಳಿಗೆ ಯಾವುದೇ ಕೊರತೆಯಾಗದಂತೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕಿದೆ. ಕ್ರೀಡೆಯಲ್ಲಿ ಭಾಗವಹಿಸಿರುವ ಮಕ್ಕಳು ಸ್ಪರ್ಧಾ ಮನೋಭಾವದಿಂದ ಭಾಗವಹಿಸಬೇಕು ಎಂದರು.

ಜಿಲ್ಲಾ ನೆಟ್ ಬಾಲ್ ಅಸೋಸಿಯೇಷನ್ ಅಧ್ಯಕ್ಷರಾದ ಶ್ರೀನಿವಾಸ್ ಪ್ರಸಾದ್ ಅವರು ಮಾತನಾಡಿ ಯಾವುದೇ ಕ್ರೀಡಾಕೂಟ ನಡೆಯಬೇಕಾದರೆ ಎಲ್ಲರ ಸಹಕಾರ ಅಗತ್ಯ. ವಿವಿಧ ಮಟ್ಟದಲ್ಲಿ ನಡೆಯುವ ಕ್ರೀಡಾಕೂಟಗಳಿಗೆ ಹೆಚ್ಚಿನ ಅನುದಾನ ಅಗತ್ಯವಿದೆ. ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕಿದೆ ಎಂದರು.

ಜಿಲ್ಲಾ ಪಂಚಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಎಸ್. ಚಂದ್ರಪಾಟೀಲ್, ಡಯಟ್ ಪ್ರಾಂಶುಪಾಲರಾದ ಕಾಶಿನಾಥ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಆರ್. ಶಂಕರ್, ಜಿಲ್ಲಾ ನೆಟ್ ಬಾಲ್ ಅಸೋಸಿಯೇಷನ್ ನ ಗೌರವ ಅಧದ್ಯಕ್ಷರದ ನರ್ಗೀಸ್ ಬಾನು, ಜಿಲ್ಲ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿಶ್ವನಾಥ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ. ಸುರೇಶ್, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ರಾಜ್ಯ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ,

 ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಅಂಗವಾಗಿ ಬೆಳಗಾವಿಯ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿದ್ದ, "ರಾಜ್ಯ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ, ಮಹಿಳಾ ಸ್ವ ಸಹಾಯ ಗುಂಪುಗಳ ಉತ್ಪನ್ನಗಳ ಮಾರಾಟ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ ಪಾಟೀಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ತಮಿಳು ಕಾಲೋನಿ ನಿವಾಸಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮಕೈಗೊಳ್ಳಿ:ಡಾ. ಕುಮಾರ

 ತಮಿಳು ಕಾಲೋನಿ ನಿವಾಸಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮಕೈಗೊಳ್ಳಿ:ಡಾ. ಕುಮಾರ




ತಮಿಳು ಕಾಲೋನಿಯಲ್ಲಿ ಮೂಲಭೂತ ಸೌಕರ್ಯಗಳ ಸಂಬಂಧಿಸದಂತೆ ನಗರಸಭೆ ವತಿಯಿಂದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕೂಡಲೇ ಕ್ರಮಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ಅಧಿಕಾರಿಗಳಿಗೆ ಹೇಳಿದರು.
ಅವರು ಇಂದು ನ್ಯೂ ತಮಿಳು ಕಾಲೋನಿಗೆ ಮೂಲಭೂತ ಸೌಲಭ್ಯ ಒದಗಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಮೂಲಭೂತ ವ್ಯವಸ್ಥೆಗಳಲ್ಲಿ ಪ್ರಮುಖವಾಗಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಬೀದಿ ದೀಪದ ವ್ಯವಸ್ಥೆಯನ್ನು ಶೀಘ್ರದಲ್ಲೇ ಕಲ್ಪಿಸಬೇಕು ಹಾಗೂ ನಂತರ ಹಂತ ಹಂತವಾಗಿ ರಸ್ತೆ ಕಾಮಗಾರಿ, ಚರಂಡಿ ವ್ಯವಸ್ಥೆಗಳನ್ನು ಪೂರ್ಣಗೊಳಿಸಿ ಎಂದು ಹೇಳಿದರು.
ಎಸ್ ಸಿ ಪಿ ಯೋಜನೆಯಡಿಯಲ್ಲಿ ಪ್ರೌಢ ಶಾಲಾ, ಪಿಯುಸಿ ಹಾಗೂ ಪದವಿ ವ್ಯಾಸಂಗ ಮಾಡುತ್ತಿರುವ ತಮಿಳು ಕಾಲೋನಿ ಮಕ್ಕಳಿಗೆ ಉಚಿತವಾಗಿ ಕಂಪ್ಯೂಟರ್ ತರಬೇತಿ ಒದಗಿಸಲು ಕ್ರಮ ಕೈಗೊಳ್ಳಿ ಅಧಿಕಾರಿಗಳಿಗೆ ತಿಳಿಸಿದರು.
ತಮಿಳು ಕಾಲೋನಿ ನಿವಾಸಿಗಳ ಇ -ಖಾತಾ ಮಾಡಿಸುವ ಪ್ರಕ್ರಿಯೆ ಪೂರ್ಣಗೊಂಡಿಲ್ಲ ಬಾಕಿಯಿರುವ ಇ -ಖಾತೆಗಳನ್ನು ಮೆನೆ-ಮನೆ ಹೋಗಿ ಶೀಘ್ರದಲ್ಲೆ ಪೂರ್ಣಗೊಳಿಸಬೇಕು ಹಾಗೂ ನಿವೇಶನ ರಹಿತರಿಗೆ ವಸತಿ ಒದಗಿಸಲು ಸ್ಥಳ ಪರಿಶೀಲಿಸಿ ಎಂದು ಹೇಳಿದರು.
ಕಾಳಪ್ಪ ಬಡಾವಣೆಯ ಹಕ್ಕುಪತ್ರ ಸಮಸ್ಯೆಯನ್ನು ಶೀಘ್ರದಲ್ಲೇ ಬಗೆಹರಿಸಿ ಹಾಗೂ ಮದ್ದೂರು ತಮಿಳು ಕಾಲೋನಿಯ ನಿವೇಶನ ಹಂಚಿಕೆಯ ಸಮಸ್ಯೆ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಿ ಎಂದರು.
ಸಭೆಯಲ್ಲಿ ತಹಸೀಲ್ದಾರ್ ವಿಶ್ವನಾಥ್, ಉಪವಿಭಾಗ ಅಧಿಕಾರಿ ಶಿವಮೂರ್ತಿ ಹಾಗೂ ನಗರಾಭಿವೃದ್ಧಿ ಕೋಶ ಜಂಟಿ ನಿರ್ದೇಶಕರಾದ ನರಸಿಂಹ ಮೂರ್ತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Thursday, 11 December 2025

T shirt lanch

 


ಗಾಂಧಿ ಕುರಿತು ವಿಚಾರ ಸಂಕಿರಣ

        ಗಾಂಧಿ ಹಾಗೂ ಅಂಬೇಡ್ಕರ್ ಅವರ ಆದರ್ಶಗಳನ್ನು ಪಾಲಿಸಿ:ಪ್ರೊ.ಜಯಪ್ರಕಾಶಗೌಡ*

ಮಹಾತ್ಮ ಗಾಂಧೀಜಿಯವರು ದೇಶದ ಸ್ವತಂತ್ರಕ್ಕಾಗಿ ಹೋರಾಡಿದರೆ ಡಾ. ಬಿ. ಆರ್ ಅಂಬೇಡ್ಕರ್ ಅವರು ದೇಶದ ಸಮಾನತೆಗಾಗಿ ಹೋರಾಡಿದ್ದಾರೆ. ಅವರ ಚಿಂತನೆ ನಿಲುವು, ಆದರ್ಶವನ್ನು ಇಂದಿನ ಯುವ ಪೀಳಿಗೆಗಳು ಪಾಲಿಸಬೇಕು ಎಂದು ಕರ್ನಾಟಕ ಸಂಘದ ಅಧ್ಯಕ್ಷರಾದ ಪ್ರೊ.ಜಯಪ್ರಕಾಶಗೌಡ ಅವರು ಹೇಳಿದರು.

ಅವರು ಇಂದು ಮಂಡ್ಯ ವಿಶ್ವವಿದ್ಯಾಲಯ, ಮಂಡ್ಯ ಗಾಂಧಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ, ಗಣಕ ವಿಜ್ಞಾನ ವಿಭಾಗದ ವತಿಯಿಂದ ಮಂಡ್ಯ ವಿಶ್ವವಿದ್ಯಾಲಯದ ಆಡಳಿತ ಭವನದಲ್ಲಿ ಆಯೋಜಿಸಲಾಗಿದ್ದ ಗಾಂಧಿ ವಿಚಾರಧಾರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಗಾಂಧೀಜಿಯವರ ಆಶಯದಂತೆ ಇಂದು ಹೆಣ್ಣು ಮಕ್ಕಳು ಸ್ವತಂತ್ರ ಮತ್ತು ಸಮಾನತೆಯಿಂದ ಬದುಕುತ್ತಿದ್ದಾರೆ. ಗಂಡು ಮಕ್ಕಳನ್ನು ಮೀರಿ ಎಲ್ಲಾ ಕ್ಷೇತ್ರದಲ್ಲೂ ಮುಂದುವರೆಯುತ್ತಿದ್ದಾರೆ. ಪ್ರಸ್ತುತ ಮಹಿಳೆಯರು ಪ್ರವೇಶ ಮಾಡದೇಯಿರುವ ಕ್ಷೇತ್ರವಿಲ್ಲ, ಭಾರತದ ಯಶಸ್ಸಿಗೆ ಹಾಗೂ ಬದಲಾವಣೆಗಳಿಗೆ ಹೆಣ್ಣುಮಕ್ಕಳ ಸಮಾನತೆ ಕಾರಣವಾಗಿದೆ ಎಂದರೆ ತಪ್ಪಾಗುವುದಿಲ್ಲ ಎಂದರು.

ಗಾಂಧಿಯವರು ತಿಳಿಸದ ವಿಷಯವಿಲ್ಲ ಸ್ವಚ್ಛತೆ, ಶ್ರಮ, ಕೃಷಿ, ಆಹಾರ, ಆರೋಗ್ಯ ಹಾಗೂ ಜೀವನ ಮೌಲ್ಯಗಳ ಬಗ್ಗೆ ಅವರು ಮಾತನಾಡಿದ್ದಾರೆ. ಗಾಂಧೀಜಿಯವರು ಸರಳತೆಯ ಜೀವನಕ್ಕೆ ಪ್ರಮುಖವಾದ ಉದಾಹರಣೆಯಾಗಿದ್ದಾರೆ. ಸರಳತೆಯೇ ಜಗತ್ತಿನ ಸಾರ ಎಂದ ಅವರು ಶಸಸ್ತ್ರ ಹಿಡಿಯದೆ, ರಕ್ತ ಪಾತವಿಲ್ಲಿದೆ, ದೇಶಕ್ಕೆ ಸ್ವತಂತ್ರ ತಂದು ಕೊಟ್ಟಿದ್ದಾರೆ. ವಿಶ್ವದಲ್ಲಿಯೇ ಶಾಂತಿ, ಸೌಹಾರ್ದತೆಯಿಂದ ದೇಶಕ್ಕೆ ಸ್ವತಂತ್ರ ತಂದ ನಿದರ್ಶನ ಗಾಂಧಿಯವರದ್ದು ಮಾತ್ರ ಎಂದು ಬಣ್ಣಿಸಿದರು.
ಶಿಕ್ಷಣವೆಂಬುದು ಕೇವಲ ಉದ್ಯೋಗಕ್ಕಾಗಿ ಸೀಮಿತವಾಗಿರುವುದಲ್ಲ ಶಿಕ್ಷಣದಿಂದ ಅರಿವು, ಜ್ಞಾನ, ಜೀವನದ ಮೌಲ್ಯ ಎಲ್ಲವೂ ತಿಳಿಯಲು ಸಾಧ್ಯ. ವಿದ್ಯಾರ್ಥಿಗಳಾದ ನೀವು ಪ್ರಶ್ನಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು, ಪ್ರಶ್ನಿಸುವುದರ ಜತೆಗೆ ಕೇಳಿಸಿಕೊಳ್ಳುವ ಆಸಕ್ತಿಯನ್ನು ಸಹ ಮೈಗೂಡಿಸಿಕೊಳ್ಳಬೇಕು. ವಿಷಯಗಳನ್ನು ಸಂಪೂರ್ಣವಾಗಿ ಕೇಳಿಸಿಕೊಂಡಾಗ ಮಾತ್ರ ವಿಷಯದ ಆಳವಾಗಿ ಮಾಹಿತಿ ಅರ್ಥೈಸಿಕೊಳ್ಳಲು ಸಾಧ್ಯ ಎಂದು ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು.
ಮಂಡ್ಯ ವಿಶ್ವವಿದ್ಯಾಲಯ ಕುಲಪತಿಗಳಾದ ಪ್ರೊ.ಕೆ.ಶಿವಚಿತ್ತಪ್ಪ ಅವರು ಮಾತನಾಡಿ ಗಾಂಧೀಜಿಯವರು ಅಂದಿಗೂ ಇಂದಿಗೂ ಎಂದೆದಿಗೂ ಎಲ್ಲರಿಗೂ ಅನ್ವಯವಾಗುವಂತವರು ಆಗಾಗಿ ಗಾಂಧಿಯವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು. ಆರ್ಥಿಕತೆಯ ಚಿಂತಕನಾಗಿ ದೇಶದಲ್ಲಿ ಬಡತನ ನಿವಾರಣೆಯಾಗಬೇಕು ಹಾಗೂ ದೇಶ ಸುಸ್ತಿರತೆ ಕಾಣಬೇಕು ಎಂಬುದು ಅವರ ಆಶಯವಾಗಿತ್ತು ಎಂದರು.
ಮಹಿಳೆಯರು ಭೌತಿಕ, ಆರ್ಥಿಕ, ರಾಜಕೀಯ ಹಾಗೂ ಸಮಾಜಿಕವಾಗಿ ಸಬಲೀಕರ ಹೊಂದಬೇಕು ಎಂದು ಗಾಂಧಿಯವರು ಮೊದಲಿಗೆ ಹೇಳಿದ್ದರು. ಈ ನಿಟ್ಟಿನಲ್ಲಿ ಮಹಿಳೆಯರು ಪುರುಷರಿಗಿಂತಲೂ ಹೆಚ್ಚಾಗಿ ಆರ್ಥಿಕ, ರಾಜಕೀಯ ಹಾಗೂ ಸಮಾಜಿಕವಾಗಿ ಅಲ್ಲದೆ ತಂತ್ರಜ್ಞಾನದಲ್ಲೂ ಸಾಧನೆ ಮಾಡುತ್ತಿರುವುದು ದೇಶದ ಹೆಮ್ಮೆಯ ಸಂಗತಿ ಎಂದರು.
ಕಾರ್ಯಕ್ರಮದಲ್ಲಿ ಗಾಂಧೀಜಿ ಚಿಂತನೆಗಳ ಪ್ರಸ್ತುತತೆ ಕುರಿತು ಬೆಂಗಳೂರು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ನಿರ್ದೇಶಕರಾದ ಜಿ.ಬಿ.ಶಿವರಾಜು ಹಾಗೂ ರಾಜ್ಯ ಸಂಪನ್ಮೂಲ ಕೇಂದ್ರ ನಿವೃತ್ತ ನಿರ್ದೇಶಕರಾದ ಎಸ್.ತುಕಾರಾಂ ಅವರು ಉಪನ್ಯಾಸ ಮಾಡಿದರು.
ಇದೇ ಸಂದರ್ಭದಲ್ಲಿ ಗಾಂಧಿ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ಸಂಯೋಜಕರಾದ ಡಾ. ಸುಮಾರಾಣಿ ಶಂಭು, ಉಪ ಕುಲ ಸಚಿವರಾದ ಡಾ. ಎಂ. ವೈ ಶಿವರಾಮು, ಮೌಲ್ಯಮಾಪನ ಕುಲಸಚಿವರಾದ ಜಿ. ವಿ ವೆಂಕಟರಮಣ, ಗಣಕ ವಿಜ್ಞಾನ ವಿಭಾಗ ಮುಖ್ಯಸ್ಥರಾದ ಜಿ. ವಿ ಪ್ರೇಮ್ ಸಿಂಗ್ ಹಾಜರಿದ್ದರು.