Monday, 5 August 2013

ಮೈಸೂರು ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ.



ನಾಮಪತ್ರ ಸಲ್ಲಿಸಿದ ಧರ್ಮಸೇನಾ,
ಯಶಸ್ವಿನಿ ಸೋಮಶೇಖರ, ಅಯೂಬ್ ಖಾನ್
ಮೈಸೂರು, ಆ.5-ಕಾಂಗ್ರೆಸ್ ಪಕ್ಷದ ಆರ್. ಧರ್ಮಸೇನಾ, ಬಿಜೆಪಿಯ ಯಶಸ್ವಿನಿ ಸೋಮಶೇಖರ್, ಪಕ್ಷೇತರ ಅಯೂಬ್ ಖಾನ್ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಗಳಾಗಿ ಸೋಮವಾರ ನಾಮಪತ್ರ ಸಲ್ಲಿಸಿದರು.
ಸಯ್ಯಾಜಿರಾವ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಿಂದ ಬೆಂಬಲಿಗರು, ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ ಧರ್ಮಸೇನಾ ಚುನಾವಣಾಧಿಕಾರಿ ನಾಗಾ ನಾಯಕ ಅವರಿಗೆ ನಾಮಪತ್ರ ಸಲ್ಲಿಸಿದರು.
ಮಾಜಿ ಶಾಸಕ ಸತ್ಯನಾರಾಯಣ, ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್. ಮೂರ್ತಿ, ಮಾಜಿ ಮೇಯರ್ ಅನಂತು, ನಗರಪಾಲಿಕೆ ಮಾಜಿ ಸದಸ್ಯ ಶಿವಣ್ಣ, ನಗರ ಕಾಂಗ್ರೆಸ್ ಅಧ್ಯಕ್ಷ ಸಿ. ದಾಸೇಗೌಡ ಈ ಸಂದರ್ಭದಲ್ಲಿ ಹಾಜರಿದ್ದರು.
ಚಾಮುಂಡಿಬೆಟ್ಟದಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಯಶಸ್ವಿನಿ ಸೋಮಶೇಖರ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಿದರು. ಮಾಜಿ ಸಚಿವ ರಾಮದಾಸ್, ಶಾಸಕ ಸಿದ್ದರಾಜು, ತೋಂಟದಾರ್ಯ, ಮಾಜಿ ಶಾಸಕ ಎ.ಆರ್. ಕೃಷ್ಣಮೂರ್ತಿ, ನಗರ ಬಿಜೆಪಿ ಅಧ್ಯಕ್ಷ ಇ. ಮಾರುತಿ ರಾವ್ ಪವಾರ್, ಮಲ್ಲಪ್ಪಗೌಡ, ಗಿರೀಶ ಹಾಗೂ ಇತರರು ಈ ಸಂದರ್ಭದಲ್ಲಿ ಇದ್ದರು.
ಪಕ್ಷೇತರ ಅಭ್ಯರ್ಥಿ ಅಯೂಬ್ ಖಾನ್ ಅರಮನೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ತಮ್ಮ ಬೆಂಬಲಿಗರು, ಸಮಾಜ ರಕ್ಷಣ ವೇದಿಕೆಯ ಕಾರ್ಯಕರ್ತರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.




No comments:

Post a Comment