ಫಲಪುಷ್ಪ ಪ್ರದರ್ಶನ: ವೈವಿಧ್ಯತೆಗೆ ಸಲಹೆ
ಮೈಸೂರು,ಜು.31.ಇದೇ ಮೊದಲ ಬಾರಿಗೆ ದಸರಾ ಫಲಪುಷ್ಪ ಪ್ರದರ್ಶನವನ್ನು ಕುಪ್ಪಣ ಪಾರ್ಕ್‍ನಲ್ಲಿ ಆಯೋಜಿಸಲಾಗುತ್ತಿದ್ದು, ವೈವಿಧ್ಯಮಯ ಪ್ರದರ್ಶನಕ್ಕೆ ತೋಟಗಾರಿಕಾ ಇಲಾಖೆ ಸಿದ್ದತೆ ನಡೆಸಿದೆ.
ತೋಟಗಾರಿಕಾ ಇಲಾಖೆ ಹಾಗೂ ಜಿಲ್ಲಾ ತೋಟಗಾರಿಕಾ ಸಂಘದಿಂದ ಇಂದು ನಡೆದ ಸಭೆಯಲ್ಲಿ 50ಕ್ಕೂ ಹೆಚ್ಚು ಆಸಕ್ತರು ಭಾಗವಹಿಸಿದ್ದು, ತೋಟಗಾರಿಕಾ ಪ್ರದರ್ಶನದಲ್ಲಿಯೂ ಭಾಗವಹಿಸುವ ಆಸಕ್ತಿ ವ್ಯಕ್ತಪಡಿಸಿದರು.
ಪ್ರತಿ ವರ್ಷ ದಸರಾ ಸಂದರ್ಭದಲ್ಲಿ ತಾರಸಿ ಕೈತೋಟ, ಮನೆಯಂಗಳದ ಕೈತೋಟದಲ್ಲಿ ಫಲಪುಷ್ಪ ಪ್ರದರ್ಶನದ ಸ್ಪರ್ಧೆ ನಡೆಸಲಾಗುತ್ತಿದ್ದು, ತೀರ್ಪುಗಾರರು ಅವರ ಮನೆಗಳಿಗೇ ತೆರಳಿ ಪರಿಶೀಲಿಸುತ್ತಿದ್ದರು, ಬಹುಮಾನ ಘೋಷಣೆ ಮಾಡಲಾಗುತ್ತಿತ್ತು.
ಈ ವರ್ಷ ಕುಪ್ಪಣ ಪಾರ್ಕ್‍ನಲ್ಲಿಯೇ ಇಂತಹ ಸ್ಪರ್ಧೆ ಹಾಗೂ ಪ್ರದರ್ಶನ ನಡೆಸಲು ಯೋಜಿಸಿದ್ದು, ಈ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಹಲವರು ಕುಪ್ಪಣ ಪಾರ್ಕ್‍ನಲ್ಲಿ ನಡೆಯುವ ಪ್ರದರ್ಶನದಲ್ಲಿಯೂ ಭಾಗವಹಿಸುವ ಬಗ್ಗೆ ಆಸಕ್ತ ವ್ಯಕ್ತಪಡಿಸಿದರು.
ತೋಟಗಾರಿಕಾ ಇಲಾಖಾ ವತಿಯಿಂದ ಈಗಾಗಲೇ ಸಿದ್ಧತೆ ಆರಂಭಿಸಲಾಗಿದ್ದು 70 ಸಾವಿರ ಸಸಿಗಳನ್ನು ಬೆಳಸಲಾಗುತ್ತಿದೆ. 25 ವಿವಿಧ ಬಗೆಯ 50ಕ್ಕೂ ಹೆಚ್ಚು ವರ್ಣಗಳ ವೈವಿಧ್ಯಮಯ ಫಲಪುಷ್ಪ ತರಕಾರಿ ಗಿಡಗಳ ಪ್ರದರ್ಶನಕ್ಕೆ ಕುಪ್ಪಣ್ಣ ಪಾರ್ಕ್ ಅನ್ನು ಸಜ್ಜುಗೊಳಿಸಲಾಗುತ್ತಿದೆ ಎಂದು ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಸಿ.ಆರ್. ಕೃಷ್ಣಕುಮಾರ್ ತಿಳಿಸಿದರು.
ಜಿಲ್ಲಾ ತೋಟಗಾರಿಕಾ ಸಂಘದ ಉಪಾಧ್ಯಕ್ಷ ಡಾ|| ಪ್ರಭಾಮಂಡಲ್, ಖಜಾಂಚಿ ವಿಜಯಲಕ್ಷ್ಮಿ, ಜಂಟಿ ಕಾರ್ಯದರ್ಶಿ ಹನುಮಯ್ಯ ಸೇರಿದಂತೆ ಆಸಕ್ತರು ಸಭೆಯಲ್ಲಿ ಭಾಗವಹಿಸಿದ್ದರು.
ಪ್ರವಾಸ ಕಾರ್ಯಕ್ರಮ
ಮೈಸೂರು,ಜು.31.ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಸಿ.ಜೆ.ಹುನಗುಂದ ಅವರು ಆಗಸ್ಟ್ 2 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು 11 ಗಂಟೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ವತಿಯಿಂದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿರುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಆಗಸ್ಟ್ 3 ರಂದು ಬೆಳಿಗ್ಗೆ 9 ಗಂಟೆಗೆ ಮೈಸೂರಿನಿಂದ ಬೆಂಗಳೂರಿಗೆ ತೆರಳುವರು.
ದೌರ್ಜನ್ಯದ ವಿರುದ್ದ ಧ್ವನಿ

ಮೈಸೂರು,ಜು.31.ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟುವ ಬಗ್ಗೆ ಅರಿವು ಮೂಡಿಸಲು ಜಿಲ್ಲೆಯಾದ್ಯಂತ ಇಂದು ಗ್ರಾಮ ಪಂಚಾಯತ್ ಮಟ್ಟದಲ್ಲಿ ಜಾಥಾ ಹಾಗೂ ಸಭೆಗಳನ್ನು ಆಯೋಜಿಸಲಾಗಿತ್ತು.
ಜಿಲ್ಲಾ ಪಂಚಾಯತ್ ಮೈಸೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಮತ್ತಿತರ ಇಲಾಖೆಗಳ ಸಹಯೋಗದೊಡನೆ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶ್ರೀರಾಂಪುರ ಗ್ರಾಮ ಪಂಚಾಯಿತಿ ವತಿಯಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸಮಾರಂಭವನ್ನು ಅಶ್ವಿನಿ ಕಲ್ಯಾಣಮಂಟಪದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಡಾ|| ಪುಷ್ಪಾವತಿ ಅಮರನಾಥ್ ಉದ್ಘಾಟಿಸಿದರು.
ಮಹಿಳೆಯರು ಹಾಗೂ ಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು ಮಹಿಳೆಯರು ಮಕ್ಕಳು ಸ್ವಯಂ ರಕ್ಷಣಾ ವಿಧಾನಗಳನ್ನು ಅವಳಡಿಸಿಕೊಳ್ಳುವುದಲ್ಲದೆ ಇಂತಹ ಸಂದರ್ಭಗಳು ಸೃಷ್ಟಿಯಾಗದ ರೀತಿಯಲ್ಲಿ ಜಾಗ್ರತೆ ವಹಿಸಬೇಕು ಎಂದರು.
ಆಧುನಿಕ ಸಂಪರ್ಕ ಉಪಕರಣ ಅಗತ್ಯವಾಗಿವೆ. ಆದರೆ ಅವುಗಳೇ ನಮಗೆ ಮಾರಕವಾಗಬಾರದು ತಂತ್ರಜ್ಞಾನದ ಮಿತಬಳಕೆ ಹಾಗೂ ವಿವೇಚನಾಯುಕ್ತ ಬಳಕೆಯತ್ತ ಗಮನಹರಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ನ್ಯಾಯವಾದಿ ಸುಮನಾ, ಮಹಿಳೆಯರ ಮೇಲೆ ದೌರ್ಜನ್ಯ ಅನಾದಿಕಾಲದಿಂದಲೂ ನಡೆದುಕೊಂಡು ಬಂದಿದ್ದು, ಇಂದಿಗೂ ಮುಂದುವರಿಯುತ್ತಿರುವುದು ವಿಷಾಧನೀಯ ಎಂದರಲ್ಲದೆ ತಾಯಂದಿರು ಮಕ್ಕಳ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದರು.
ದೌರ್ಜನ್ಯದ ವಿರುದ್ಧ ಸಮಾಜದ ಎಲ್ಲ ವರ್ಗದವರೂ ಧ್ವನಿ ಎತ್ತಬೇಕು ಮಕ್ಕಳು ಹಾಗೂ ಮಹಿಳೆಯರು ಎಚ್ಚರಿಕೆ ವಹಿಸಬೇಕು. ಸಮಾಜದಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ.ಎ.ಗೋಪಾಲ್ ಅವರು ಮಾತನಾಡಿ ಜಿಲ್ಲೆಯಾದ್ಯಂತ ಇಂದು ಜಾಗೃತಿ ಕಾರ್ಯಕ್ರಮ ಆಯೋಜಿಸಿದ್ದು, ಸರ್ಕಾರದ ಪ್ರಯತ್ನದ ಜೊತೆ ಸಮಾಜವೂ ಕೈಜೋಡಿಸಿ ಮಹಿಳೆಯರು ಹಾಗೂ ಮಕ್ಕಳ ವಿರುದ್ಧದ ದೌರ್ಜನ್ಯ ತಡೆಗಟ್ಟಬೇಕು ಎಂದರು.
ಜಿಲ್ಲಾ ಪಂಚಾಯತ್ ಸದಸ್ಯ ಪಟೇಲ್ ಜವರೇಗೌಡ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಅರುಳ್‍ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಎನ್.ಆರ್. ವಿಜಯ್ ಮತ್ತಿತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಮಾರಂಭಕ್ಕೂ ಮುನ್ನ ವರ್ತುಲ ರಸ್ತೆಯಿಂದ ಅಶ್ವಿನಿ ಕಲ್ಯಾಣ ಮಂಟಪದವರೆಗೆ ಜಾಗೃತಿ ಜಾಥಾ ಆಯೋಜಿಸಲಾಗಿತ್ತು.

ಮೈಸೂರು,ಜು.31.ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಿದ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಜಿಲ್ಲೆಯಲ್ಲಿ ಆಗಸ್ಟ್ 20 ರಂದು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಾಲಯ್ಯ ಅವರು ತಿಳಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಭೆಯಲ್ಲಿ ಆಗಸ್ಟ್ 20 ರಂದು ಬೆಳಿಗ್ಗೆ 11 ಗಂಟೆಗೆ ರಾಣಿಬಹದ್ದೂರ್ ಸಭಾಂಗಣದಲ್ಲಿ ಜನ್ಮ ದಿನಾಚರಣೆ ಆಚರಿಸಲು ನಿರ್ಧಾರ ಕೈಗೊಳ್ಳಲಾಯಿತು.
ಜಿಲ್ಲೆಯಲ್ಲಿ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಕಾರ್ಯಕ್ರಮದಲ್ಲಿ ತಜ್ಞರಿಂದ ಉಪನ್ಯಾಸ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಬೇಕು. ಅಧಿಕಾರಿಗಳು ಈ ಕಾರ್ಯಕ್ರಮಕ್ಕೆ ಬೇಕಿರುವ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಸಮಾಜದ ಎಲ್ಲ ವರ್ಗದ ಜನರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜವರೇಗೌಡ ಕಾರ್ಯಕ್ರಮದ ರೂಪುರೇಷುಗಳ ಬಗ್ಗೆ ವಿವರಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ.ಎ.ಗೋಪಾಲ್, ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಆಗಸ್ಟ್ 2 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಮೈಸೂರು,ಜು.31.ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ವತಿಯಿಂದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಆಗಸ್ಟ್ 2 ರಂದು ಬೆಳಿಗ್ಗೆ 11 ಗಂಟೆಗೆ ಕಾವೇರಿ ಸಭಾಂಗಣದಲ್ಲಿ ನಡೆಯಲಿದೆ.
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ನ್ಯಾ|| ಚಂದ್ರಶೇಖರ್ ಗುರುಬಸಪ್ಪ ಹುನಗುಂದ್ ಅವರು ಶುಭ ಹಾರೈಕೆ ಹಾಗೂ ಪ್ರತಿಭಾ ಪುರಸ್ಕಾರ ನೀಡುವರು. ಕುಲಪತಿ ಪ್ರೊ. ಎಂ.ಜಿ. ಕೃಷ್ಣನ್ ಅವರು ಅಧ್ಯಕ್ಷತೆ ವಹಿಸುವರು.
ಆಗಸ್ಟ್ 3 ರಂದು ಅರಿವು -ನೆರವು ಕಾರ್ಯಕ್ರಮ
ಮೈಸೂರು,ಜು.31.ಬೆಂಗಳೂರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ವಕೀಲರ ಸಂಘದ ಇವರುಗಳ ಸಂಯುಕ್ತಾಶ್ರಯದಲ್ಲಿ ಮಕ್ಕಳ ಅಪೌಷ್ಠಿಕತೆ ತಡೆಗಟ್ಟುವುದು, ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವುದರ ಬಗ್ಗೆ ಅರಿವು-ನೆರವು ಕಾರ್ಯಕ್ರಮವನ್ನು ಆಗಸ್ಟ್ 3 ರಂದು ಬೆಳಿಗ್ಗೆ 10 ಗಂಟೆಗೆ ಸೆನೆಟ್ ಭವನದಲ್ಲಿ ಆಯೋಜಿಸಲಾಗಿದೆ.
ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ಎನ್.ಕೆ. ಪಾಟೀಲ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಎಸ್. ಮುದಗಲ್ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಶೋಕ್ ಜಿ. ನಿಜಗಣ್ಣನವರ್, ಜಿಲ್ಲಾಧಿಕಾರಿ ಎಸ್. ಪಾಲಯ್ಯ, ಜಿಲ್ಲಾ ಪೊಲೀಸ್ ಅಧೀಕ್ಷಕ ಅಭಿನವ್ ಖರೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ.ಎ.ಗೋಪಾಲ್, ಮೈಸೂರು ವಕೀಲರ ಸಂಘದ ಅಧ್ಯಕ್ಷ ಹೆಚ್.ವಿ.ಎಸ್. ಮೂರ್ತಿ, ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಸದಸ್ಯ ಸಿ.ಎಂ. ಜಗದೀಶ್ ಹಾಗೀ ಸಿ. ಅಪ್ಪಾಜಿಗೌಡ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಬೆಳಿಗ್ಗೆ 11 ರಿಂದ ಮಧ್ಯಾಹ್ನ 12-15 ಗಂಟೆಯವರೆಗೆ ಮಕ್ಕಳಲ್ಲಿ ಅಪೌಷ್ಠಿಕತೆ, ಕಾರಣ ಮತ್ತು ಪರಿಹಾರ ಹಾಗೂ ಮಕ್ಕಳ ಅಪೌಷ್ಠಿಕತೆ ನಿವಾರಣೆಯಲ್ಲಿ ವಿವಿಧ ಇಲಾಖೆಗಳ ಪಾತ್ರ ಕುರಿತು ಮೈಸೂರಿನ ಮಾನಸ ಗಂಗೋತ್ರಿಯ ಆಹಾರ ವಿಜ್ಞಾನ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಡಾ. ಜಿ ಸರಸ್ವಾತಿ ಅವರು ಉಪನ್ಯಾಸ ನೀಡುವರು.
ಮಧ್ಯಾಹ್ನ 12-30 ರಿಂದ ಮಕ್ಕಳು ಶಾಲೆ ಬಿಡಲು ಕಾರಣ ಮತ್ತು ಪರಿಹಾರ, ಇದನ್ನು ತಡೆಗಟ್ಟುವಲ್ಲಿ ವಿವಿಧ ಇಲಾಖೆಗಳ ಪಾತ್ರ ಕುರಿತು ಮೈಸೂರಿನ ಆರ್.ಐ.ಇ. ಪ್ರಾಧ್ಯಾಪಕ ಪ್ರೊ. ಸಿ.ಜಿ.ವೆಂಕಟೇಶ್‍ಮೂರ್ತಿ ಅವರು ಉಪನ್ಯಾಸ ನೀಡುವರು.
ಮಿಲಿಟರಿ ಕಾಲೇಜಿನಲ್ಲಿ 8ನೇ ತರಗತಿ ಪ್ರವೇಶಕ್ಕಾಗಿ ಪರೀಕ್ಷೆ
ಮೈಸೂರು,ಜು.31.(ಕ.ವಾ.)-ಜುಲೈ 2015ನೇ ಅಧಿವೇಶನಕ್ಕಾಗಿ ಉತ್ತರಕಾಂಡ ರಾಜ್ಯದ ಡೆಹರಾಡೂನ್, ಇಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕರಿಗೆ ಅರ್ಹತಾ ಪ್ರವೇಶ ಪರೀಕ್ಷೆ ಡಿಸೆಂಬರ್ 01 ಮತ್ತು 02, 2014 ರಂದು ಬೆಂಗಳೂರಿನಲ್ಲಿ ನಡೆಯಲಿದೆ.
7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ದಿನಾಂಕ 01-07-2015 ರಂತೆ 11ಳಿ ವರ್ಷದಿಂದ 13 ವರ್ಷದೊಳಗಿರುವ ( ದಿನಾಂಕ 02-07-2002 ರಿಂದ 01-01-2004 ರೊಳಗೆ ಜನಿಸಿರುವ) ಬಾಲಕರು ಮಾತ್ರ ಈ ಪರೀಕ್ಷೆಗೆ ಅರ್ಹರು.
ವಿವರಣ ಪತ್ರ ಹಾಗೂ ಹಳೇ ಪ್ರಶ್ನೆ ಪತ್ರಿಕೆಗಳನ್ನೊಳಗೊಂಡ ಅರ್ಜಿ ನಮೂನೆಯನ್ನು ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಭವನ, ನಂ.58, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು-560 025 ಇಲ್ಲಿಂದ ``ಖಿಊಇ ಅಔಒಒಂಓಆಂಓಖಿ ಖIಒಅ ಆಇಊಖಂಆUUಓ" Pಂಙಂಃಐಇ ಂಖಿ SಃI, ಖಿಇಐ ಃಊಂಗಿಂಓ, ಆಇಊಖಂಆUಓ (ಃಂಓಏ ಅಔಆಇ ಓಔ.01576) ಇವರ ಹೆಸರಿನಲ್ಲಿ ಸೆಳೆದ ರೂ. 400/-ಗಳಿಗೆ (ಸಾಮಾನ್ಯ ಅಭ್ಯರ್ಥಿಗಳಿಗೆ) & ರೂ. 355/- (ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ) ಪಡೆದ ಬ್ಯಾಂಕ್ ಡ್ರಾಫ್ಟ್ (ಬೆಂಗಳೂರು ಬ್ಯಾಂಕ್ ಶಾಖೆಯಲ್ಲಿ ಪಾವತಿಯಾಗುವಂತೆ) ಪಾವತಿಸಿ ಪಡೆಯಬಹುದಾಗಿದೆ. ರಿಜಿಸ್ಟರ್ಡ್ ಪಾರ್ಸಲ್ ಮೂಲಕ ಅರ್ಜಿ ನಮೂನೆಗಳನ್ನು ಪಡೆಯಲಿಚ್ಛಿಸುವವರು ಮೇಲೆ ತಿಳಿಸಿದ ಬ್ಯಾಂಕ್ ಡ್ರಾಫ್ಟ್‍ನೊಂದಿಗೆ 11 ಇಂಚು ಉದ್ದ ಮತ್ತು 9 ಇಂಚು ಅಗಲದ ಸೈಜಿನ ಸ್ವ-ವಿಳಾಸದ ಲಕೋಟೆಯ ಮೇಲೆ ರೂ. 40/- ಮೌಲ್ಯದ ಅಂಚೆ ಚೀಟಿಗಳನ್ನು ಅಂಟಿಸಿ ಕಳುಹಿಸತಕ್ಕದ್ದು.ಲಕೋಟೆಯ ಮೇಲೆ ಅಭ್ಯರ್ಥಿಯ ಪೂರ್ಣ ಅಂಚೆ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸತಕ್ಕದ್ದು.
ಭರ್ತಿ ಮಾಡಿದ ಅರ್ಜಿ ನಮೂನೆಯ ಎರಡು ಪ್ರತಿಗಳನ್ನು ಹಾಗೂ ಅದರ ಅಗತ್ಯ ಅಡಕಗಳನ್ನು ಲಗತ್ತಿಸಿ ದಿನಾಂಕ: 30 ಸೆಪ್ಟಂಬರ್ 2014ರೊಳಗೆ ಸಲ್ಲಿಸುವುದು.
ಹೆಚ್ಚಿನ ವಿವರಗಳಿಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು-560 025 (ದೂರವಾಣಿ ಸಂಖ್ಯೆ 080-25589459)ನ್ನು ಸಂಪರ್ಕಿಸಬಹುದು.
ಬ್ಯಾಂಕ್ ಖಾತೆ ಸಂಖ್ಯೆ ನೀಡಿ
ಮೈಸೂರು,ಜು.31. ಪಡಿತರ ಚೀಟಿದಾರರು ಸೀಮೆಎಣ್ಣೆ ನೇರ ನಗದು ಯೋಜನೆ ಲಾಭ ಪಡೆಯಲು ತಮ್ಮ ಬ್ಯಾಂಕ್ ಖಾತೆ ಸಂಖ್ಯೆಯನ್ನು ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗೆ ಸಲ್ಲಿಸುವುದು ತಪ್ಪಿದಲ್ಲಿ 2014 ಆಗಸ್ಟ್ ಮಾಹೆಯ ಸೀಮೆಎಣ್ಣೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಡಾ|| ಕೆ. ರಾಮೇಶ್ವರಪ್ಪ ಅವರು ತಿಳಿಸಿದ್ದಾರೆ.
ಮೈಸೂರು ನಗರದ ಮಂಡಿಮೊಹಲ್ಲಾ, ಲಷ್ಕರ್ ಮೊಹಲ್ಲಾ, ಎನ್.ಆರ್. ಮೊಹಲ್ಲಾ, ದೇವರಾಜ ಮೊಹಲ್ಲಾ ಹಾಗೂ ನಜರಬಾದ್ ಮೊಹಲ್ಲಾದ ಪಡಿತರ ಚೀಟಿದಾರರಿಗೆ ಸೀಮೆಎಣ್ಣೆ ನೇರ ನಗದು ಯೋಜನೆ ಅನುಷ್ಠಾನ ಮಾಡಲು ಬ್ಯಾಂಕ್ ಖಾತೆ ಸಂಖ್ಯೆಯನ್ನು ಮಾರ್ಚ್ 2014 ರೊಳಗಾಗಿ ನೀಡುವಂತೆ ತಿಳಿಸಲಾಗಿತ್ತು. 5 ತಿಂಗಳು ಕಳೆದರು ನ್ಯಾಯಬೆಲೆ ಅಂಗಡಿಗಳಲ್ಲಿ ಶೇ. 50 ರಷ್ಟು ಪಡಿತರ ಚೀಟಿದಾರರು ಬ್ಯಾಂಕ್ ಖಾತೆ ಸಂಖ್ಯೆಯನ್ನು ನೀಡಿರುವುದಿಲ್ಲ.
ಸೀಮೆಎಣ್ಣೆ ನೇರ ನಗದು ಯೋಜನೆ ಅನುಷ್ಠಾನಕ್ಕಾಗಿ ಪಡಿತರ ಚೀಟಿದಾರರಿಗೆ ಶೂನ್ಯ ಠೇವಣಿ ಖಾತೆಯನ್ನು ತೆರೆಯಲು ಅವಕಾಶ ಮಾಡಿಕೊಡುವಂತೆ ರಾಷ್ಟ್ರೀಕೃತ ಬ್ಯಾಂಕ್‍ಗಳಿಗೆ ಕೋರಲಾಗಿದೆ. ಪಡಿತರ ಚೀಟಿದಾರರು ಬ್ಯಾಂಕ್ ಖಾತೆ ತೆರೆದು ಬ್ಯಾಂಕ್ ಖಾತೆ ಸಂಖ್ಯೆಯನ್ನು ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಿಗೆ ನೀಡುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.