ಜುಲೈ 28 ರಿಂದ ಅತಿಸಾರ ಭೇದಿ ತೀವ್ರತರ ನಿಯಂತ್ರಣ ಪಾಕ್ಷಿಕ ಆಚರಣೆ
ಮಂಡ್ಯ, ಜುಲೈ 28. “ಮಕ್ಕಳ ಅತಿಸಾರ ಭೇದಿಯಿಂದ ಶೂನ್ಯ ಸಾವು” ಎಂಬ ಧ್ಯೇಯದೊಂದಿಗೆ ಜುಲೈ 28 ರಿಂದ ಆಗಸ್ಟ್ 8 ನೇ ತಾರೀಖಿನವರೆಗೆ” ಅತಿಸಾರ ಭೇದಿ ತೀವ್ರತರ ನಿಯಂತ್ರಣ ಪಾಕ್ಷಿಕ” ಆಚರಣೆಯನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ||ಹೆಚ್.ಪಿ.ಮಂಚೇಗೌಡ ಅವರು ತಿಳಿಸಿದರು.
ಅವರು ಸೋಮವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನಡೆದ ಅತಿಸಾರ ಭೇದಿ ತೀವ್ರತರ ನಿಯಂತ್ರಣ ಪಾಕ್ಷಿಕ ಕೈಗೊಳ್ಳುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದರು.
5 ವರ್ಷದ ಒಳಗಿನ ಮಕ್ಕಳ ಒಟ್ಟು ಮರಣಗಳಲ್ಲಿ ಶೇ.11 ರಷ್ಟು ಸಾವುಗಳು ಅತಿಸಾರ ಭೇದಿಯಿಂದಾಗುತ್ತಿದ್ದು, ಮಕ್ಕಳ ಮರಣ ಪ್ರಮಾಣವನ್ನು ಕಡಿಮೆ ಮಾಡುವ ಉದ್ಧೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅತಿಸಾರ ಭೇದಿಯಾದಾಗ ಓ.ಆರ್.ಎಸ್. ಮತ್ತು ಜಿಂಕ್ ದ್ರಾವಣವನ್ನು ಹಾಗೂ ಸೂಕ್ತ ಆಹಾರ ಪದಾರ್ಥಗಳನ್ನು ನೀಡುವುದರಿಂದ ಭೇದಿಯಿಂದ ಉಂಟಾಗುವ ಸಾವುಗಳನ್ನು ತಪ್ಪಿಸಬಹುದು. ಶುದ್ಥ ಕುಡಿಯುವ ನೀರು, ಪರಿಸರ ಹಾಗೂ ವೈಯಕ್ತಿಕ ನೈರ್ಮಲ್ಯ, ಎದೆ ಹಾಲುಣಿಸುವುದು, ಸೂಕ್ತ ಆಹಾರ ಸೇವನೆ ಮತ್ತು ಊಟಕ್ಕೆ ಮುನ್ನ ಹಾಗೂ ಶೌಚಾಲಯ ಬಳಕೆ ನಂತರ ಕೈಗಳನ್ನು ಸ್ವಚ್ಛವಾಗಿ ತೊಳೆಯವುದರಿಂದ ಭೇದಿಯನ್ನು ತಡೆಗಟ್ಟಬಹುದು ಎಂದು ಅವರು ತಿಳಿಸಿದರು.
ಪಾಕ್ಷಿಕದ ಅಂಗವಾಗಿ ಮೊದಲ ಹಂತದಲ್ಲಿ ಜುಲೈ 28 ರಿಂದ ಆಗಸ್ಟ್ 8 ರವರೆಗೆ ಆಶಾ ಕಾರ್ಯಕರ್ತೆಯರು, ಐದು ವರ್ಷದೊಳಗಿನ ಮಕ್ಕಳಿರುವ ಪ್ರತಿ ಮನೆಗೂ ಭೇಟಿ ನೀಡಿ ಅತಿಸಾರ ಭೇದಿ ನಿಯಂತ್ರಣಕ್ಕೆ ಒಂದೊಂದು ಓ.ಆರ್.ಎಸ್. ಪೊಟ್ಟಣವನ್ನು ನೀಡಿ ಓ.ಆರ್.ಎಸ್. ದ್ರಾವಣ ತಯಾರಿಸಿ ಉಪಯೋಗಿಸುವ ವಿಧಾನವನ್ನು ತಿಳಿಸಿ ಕೊಡುವರು. ಹಾಗೂ ಅತಿಸಾರ ಭೇದಿಯಾದಾಗ ಆಶಾ ಕಾರ್ಯಕರ್ತೆಯರಿಂದ ಜಿಂಕ್ ಸಿರಪ್‍ನ್ನು ಪಡೆದು ಕೊಳ್ಳಲು ಮಾಹಿತಿ ನೀಡುವರು, ಮತ್ತು ವಯಸ್ಸಿಗನುಣವಾಗಿ ಎದೆ ಹಾಲುಣಿಸುವಿಕೆ ಮತ್ತು ಎಳೆ ಮಕ್ಕಳ ಆಹಾರ ಪದ್ಧತಿ ಬಗ್ಗೆ ಸಮಾಲೋಚನೆ ನಡೆಸುವರು.
ತಾಯಿ- ಮಗು ರಕ್ಷಣೆ / ತಾಯಿ ಕಾರ್ಡ್‍ನಲ್ಲಿ ಮಗು ಕೆಂಪು ಪಟ್ಟಿಯಲ್ಲಿದ್ದರೆ (ತೀವ್ರ ಅಪೌಷ್ಠಿಕತೆ) ಪೌಷ್ಠಿಕ ಪುನರ್‍ವಸತಿ ಕೇಂದ್ರಕ್ಕೆ ಕಳುಹಿಸುತ್ತಾರೆ. ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತು ಮಕ್ಕಳ ತಜ್ಞರ ಸಹಭಾಗಿತ್ವದಲ್ಲಿ ಅವರ ಕ್ಲಿನಿಕ್‍ಗಳಲ್ಲಿ ಸಹ ಓ.ಆರ್.ಎಸ್. ಮತ್ತು ಜಿಂಕ್ ಸಿರಪ್ ನೀಡಲು ವ್ಯವಸ್ಥೆ ಮಾಡಲಾಗಿದೆ. ಶಾಲಾ ಮಕ್ಕಳಿಗೆ ನೈರ್ಮಲ್ಯ ಹಾಗೂ ಸ್ವಚ್ಛವಾಗಿ ಕೈ ತೊಳೆಯುವಿಕೆಯ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.
ಎರಡನೇ ಹಂತದಲ್ಲಿ ಆಗಸ್ಟ್ 4 ರಿಂದ 8ನೇ ತಾರೀಖಿನವರೆಗೆ ಆಶಾ ಕಾರ್ಯಕರ್ತೆಯರು ಐದು ವರ್ಷದೊಳಗಿನ ಎಲ್ಲಾ ಮಕ್ಕಳ ಮನೆಗೆ ಭೇಟಿ ನೀಡಿ ಅಪೌಷ್ಠಿಕ ಮಕ್ಕಳನ್ನು ಗುರುತಿಸುವರು ಹಾಗೂ ಆಯ್ಧ ಆರೋಗ್ಯ ಸೇವಾ ಕೇಂದ್ರಗಳಲ್ಲಿ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಶಿಶು ಮತ್ತು ಎಳೆಯ ಮಕ್ಕಳ ಆಹಾರ ಪದ್ಧತಿಯ ಬಗ್ಗೆ ಸಮಾಲೋಚನೆ ಮಾಡುವರು, ಹಾಗೂ ಅಪೌಷ್ಠಿಕ ಮಕ್ಕಳಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು, ಮತ್ತು ಅವಶ್ಯವಿದ್ದವರಿಗೆ ಮೇಲ್ಮಟ್ಟದ ಸಂಸ್ಥೆಗಳಿಗೆ ನಿರ್ದೇಶಿಸಲಾಗುವುದು. ಆದ್ದರಿಂದ ಸಾರ್ವಜನಿಕರು ಕಾರ್ಯಕ್ರಮದ ಪ್ರಯೋಜನವನ್ನು ಪಡೆಯಲು ಮುಂದಾಗಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಉದಯ ಕುಮಾರ್, ಜಿಲ್ಲಾ ಕುಷ್ಠ ರೋಗ ನಿಯಂತ್ರಣಾಧಿಕಾರಿಗಳಾದ ಡಾ.ಎಂ.ನಾಗರಾಜು, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳಾದ ಡಾ.ಶಶಿಕಲಾ .ಆರ್ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.
ತಗ್ಗಹಳ್ಳಿ ಗ್ರಾಮದಲ್ಲಿ ಗ್ರಾಮ ಸಭೆ
ಯಲಿಯೂರು ಗ್ರಾಮ ಪಂಚಾಯಿತಿ ವತಿಯಿಂದ ಪ್ರಸಕ್ತ ಸಾಲಿನ ಒಂದೇ ಸುತ್ತಿನ ಗ್ರಾಮಸಭೆಯನ್ನು 2014ರ ಜುಲೈ 30ರಂದು ಸೋಮವಾರ ಬೆಳಗ್ಗೆ 11.00 ಗಂಟೆಗೆ ಯಲಿಯೂರು ಗ್ರಾಮದ ಪಂಚಾಯಿತಿ ಆವರಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಕೃಷ್ಣರಾಜಸಾಗರ ಜಲಾಶಯದ ವ್ಯಾಪ್ತಿಯ ಮೀನುಗಾರರಿಗೆ ಸೂಚನೆ
ಕೆ.ಆರ್.ಎಸ್ ಜಲಾಶಯದಲ್ಲಿ ಮೀನುಗಾರಿಕೆ ಕೈಗೊಳ್ಳಲು ಬೇಕಾದ ಗುರುತಿನ ಚೀಟಿ ಪಡೆಯಲು ಮೀನುಗಾರಿಕೆ ಕಚೇರಿಯಿಂದ ನಿಗÀಧಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಿದೆ.
ಅರ್ಜಿ ಪಡೆಯಲು ವಾಸ ಸ್ಥಳ ದೃಢೀಕರಿಸುವ ಚುನಾವಣೆ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಡಿತರ ಚೀಟಿ ಹಾಗೂ 2ಇತ್ತೀಚಿನ ಭಾವಚಿತ್ರ ಹಾಗೂ ಮೀನುಗಾರರು ಎಂದು ಗುರುತಿಸುವ ದೃಢೀಕೃತ ದಾಖಲಾತಿಗಳೊಂದಿಗೆ ಮೀನುಗಾರಿಕೆ ಕಚೇರಿಗೆ ನೀಡಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಕಚೇರಿಗೆ ನೀಡಿ ಗುರುತಿನ ಚೀಟಿಯನ್ನು ಪಡೆದುಕೊಳ್ಳಲು ಕೆ.ಆರ್.ಸಾಗರದ ಮೀನುಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸದಾಗಿ ವರ್ತಕರ ಲೈಸೆನ್ಸ್ ಪಡೆದುಕೊಳ್ಳಲು ಸೂಚನೆ
ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ಅಧಿನಿಯಮ 1966 ರ ಕಲಂ 72ಕ್ಕೆ ತಿದ್ದುಪಡಿ ಹಾಗೂ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನಿಯಾಮಾವಳಿ 1968 ರ ನಿಯಮ 76-ಎ ಗೆ ಸರ್ಕಾರವು ತಿದ್ದುಪಡಿ ಮಾಡಿದ್ದು, ವರ್ತಕರ ಲೈಸೆನ್ಸ್ ಪಡೆಯುವ ಬಗ್ಗೆ ಹೊಸದಾಗಿ ತಿದ್ದುಪಡಿಯಾಗಿರುವಂತೆ ಇನ್ನು ಮುಂದೆ ಯಾವುದೇ ಒಂದು ಸಮಿತಿಯಿಂದ ಒಬ್ಬ ವ್ಯಕ್ತಿ ಅಥವಾ ಒಂದು ಸಂಸ್ಥೆ ವರ್ತಕರ ಲೈಸೆನ್ಸ್ ಪಡೆದುಕೊಂಡು ರಾಜ್ಯದ ಯಾವುದೇ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ವರ್ತಕರಾಗಿ ವ್ಯವಹರಿಸಲು ಅವಕಾಶವಿರುತ್ತದೆ.
ಈ ಹಿನ್ನೆಲೆಯಲ್ಲಿ ಮದ್ದೂರು ಕೃಷಿ ಉತ್ಪನ್ನ ಮಾರುಕಟ್ಟೆ ವ್ಯಾಪ್ತಿಯಲ್ಲಿ ವ್ಯವಹರಿಸಲು ಲೈಸೆನ್ಸ್ ಪಡೆದಿರುವ ವರ್ತಕರು ಇನ್ನು ಮುಂದೆ ಹೊಸದಾಗಿ ವರ್ತಕರ ಲೈಸೆನ್ಸ್‍ನ್ನು ಆಗಸ್ಟ್ 16 ರೊಳಗೆ ಪಡೆದುಕೊಳ್ಳಲು ನಮೂನೆ 37-ಎ ಅರ್ಜಿ ಮೂಲಕ ಇತರೆ ದಾಖಲಾತಿಗಳೊಂದಿಗೆ ಉಪ ನಿರ್ದೇಶಕರು, ಕೃಷಿ ಮಾರಾಟ ಇಲಾಖೆ, ಮಂಡ್ಯ ಜಿಲ್ಲೆ, ಮಂಡ್ಯ ಇವರಿಂದ ವರ್ತಕರ ಲೈಸೆನ್ಸ್ ನಿಗಧತ ಅವಧಿಯೊಳಗೆ ಪಡೆಯಬೇಕೆಂದು ತಿಳಿಸಿದೆ. ಈಗಾಗಲೇ ಸಮಿತಿಗೆ ಪಾವತಿಸಿರುವ ವರ್ತಕರ ಲೈಸೆನ್ಸ್ ಶುಲ್ಕದಲ್ಲಿ ಉಳಿದ ಅವಧಿಯ ಲೈಸೆನ್ಸ್ ಶುಲ್ಕವನ್ನು ಹಿಂದಿರುಗಿಸಲಾಗುವು ಎಂದು ಮದ್ದೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಸವಿತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರವೇಶಕ್ಕಾಗಿ ಅರ್ಜಿ ಸ್ವೀಕರಿಸುವ ದಿನಾಂಕ ವಿಸ್ತರಣೆ
ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಗಸ್ಟ್-2014ನೇ ಶೈಕ್ಷಣಿಕ ಸಾಲಿಗೆ ಐ.ಎಂ.ಸಿ. ಕೋಟಾದಡಿ ಟೂಲ್ ಅಂಡ್ ಡೈ ಮೇಕರ್, ಜೋಡಣೆಗಾರ, ವಿದ್ಯುನ್ಮಾನ ದುರಸ್ತಿಗಾರ, ಎಂ.ಅರ್.ಸಿ. 2 ವರ್ಷದ ವೃತ್ತಿಗಳು ಹಾಗೂ 1 ವರ್ಷದ ಕೋಪಾ ವೃತ್ತಿ ಪ್ರವೇಶಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದೂವರೆವಿಗೂ ಅರ್ಜಿ ಸಲ್ಲಿಸದಿರುವ ಎಸ್.ಎಸ್.ಎಲ್.ಸಿ. ತೇರ್ಗಡೆಯಾದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಶುಲ್ಕ ರೂ.50/- ಅನ್ನು ಪಾವತಿಸುವುದು. ಅರ್ಜಿಯನ್ನು ಸಲ್ಲಿಸಲು ಜುಲೈ 31 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು (ದೂರವಾಣಿ ಸಂಖ್ಯೆ 08232-232520) ಸಂಪರ್ಕಿಸಲು ಕೋರಿದೆ.
ಅಂತರ್ಜಾಲ ಮುಖಾಂತರ ವಿದ್ಯಾರ್ಥಿ ವೇತನ ಮಂಜೂರು
ಮಂಡ್ಯ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ/ ವರ್ಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ 2014-15ನೇ ಸಾಲಿನಿಂದ ಜಾರಿಗೆ ಬರುವಂತೆ 1 ರಿಂದ 10ನೇ ತರಗತಿಯ ಪರಿಶಿಷ್ಟ ಜಾತಿ/ ವರ್ಗದ ವಿದ್ಯಾರ್ಥಿಗಳು ಅಂತರ್ಜಾಲದ ಮುಖಾಂತರ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಲಾಗುವುದು.
ಅರ್ಜಿಗಳನ್ನು ಇಲಾಖಾ ವೆಬ್ ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ವಿಳಾಸದಲ್ಲಿ ಸಲ್ಲಿಸಬೇಕು. 2ನೇ ತರಗತಿಯಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಇದೂವರೆವಿಗೂ ಆನ್‍ಲೈನ್ ನೋಂದಣಿ ಮಾಡದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನದ ನೊಂದಣಿ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿ ಮುಖ್ಯೋಪಾದ್ಯಾಯರ ಮುಖಾಂತರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಗೆ ನಿಗದಿತ ದಿನಾಂಕದೊಳಗೆ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸುವಾಗ ತಾಂತ್ರಿಕ ತೊಂದರೆಯಾದಲ್ಲಿ ಇಲಾಖೆಯ ಟೂಲ್ ಫ್ರೀ ದೂರವಾಣಿ ಸಂಖ್ಯೆ 180042521111 ಗೆ ಕರೆ ಮಾಡುವುದು. ಅರ್ಜಿಯನ್ನು ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿರುತ್ತದೆ.
ವಿದ್ಯಾರ್ಥಿಗಳು ತಮ್ಮ ಹೆಸರಿನಲ್ಲಿ ಕಡ್ಡಾಯವಾಗಿ ರಾಷ್ಟ್ರೀಕೃತ ಅಥವಾ ಷೆಡ್ಯೂಲ್ ಬ್ಯಾಂಕಿನಲ್ಲಿ ಖಾತೆ ತೆರೆದು ಕಡ್ಡಾಯವಾಗಿ ಬ್ಯಾಂಕಿನ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿಯನ್ನು ಲಗತ್ತಿಸಬೇಕು. ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡುವುದರಿಂದ ಕಡ್ಡಾಯವಾಗಿ ವಿದ್ಯಾರ್ಥಿ/ವಿದ್ಯಾರ್ಥಿನಿಯ ಹೆಸರಿನಲ್ಲಿ ಖಾತೆ ಹೊಂದಿರಬೇಕು.
ಪೋಷಕರ ವಾರ್ಷಿಕ ಆದಾಯ ಮಿತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಮಂಡ್ಯ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳು (ದೂರವಾಣಿ ಸಂಖ್ಯೆ 08232-223471) ಮೊದಲನೇ ಅಡ್ಡ ರಸ್ತೆ, ಬಂದೀಗೌಡ ಬಡಾವಣೆ, ಮಂಡ್ಯ ಇಲ್ಲಿ ಸಂಪರ್ಕಿಸುವುದು.
ಕಂಬೈನ್ಡ್ ಹೈಯರ್ ಸೆಕೆಂಡರಿ (10+2)ಲೆವೆಲ್ ಎಕ್ಸಾಮಿನೇಷನ್-2014.
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಂದೇ ರೀತಿಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ಲೊವರ್ ಡಿವಿಜನ್ ಕ್ಲಕ್ರ್ಸ್ ಹಾಗೂ ಡಾಟ ಎಂಟ್ರಿ ಆಪರೇಟರ್ಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ದಿನಾಂಕ 01-08-2014ಕ್ಕೆ 10+2 (ಪಿಯುಸಿ)ಪಾಸಾಗಿರುವ ಅಥವಾ ಹೆಚ್ಚಿನ ವಿದ್ಯಾರ್ಹತೆ ಹೊಂದಿರಬೇಕು. ದಿನಾಂಕ 01-08-2014 ಕ್ಕೆ 18 ರಿಂದ 27 ವರ್ಷದೊಳಗಿರಬೇಕು.ಗರಿಷ್ಟ ವಯೋಮಿತಿಯಲ್ಲಿ ಪರಿಶಿಷ್ಟಜಾತಿ & ಪಂಗಡ/ ಓಬಿಸಿ(ಕೇಂದ್ರ)ಇವರಿಗೆ ಕ್ರಮವಾಗಿ 5 & 3 ವರ್ಷಗಳ ರಿಯಾಯಿತಿ ಇರುತ್ತದೆ. ಅರ್ಜಿಯನ್ನು ತಿತಿತಿ.ssಛಿ oಟಿಟiಟಿe.ಟಿiಛಿ.iಟಿ ಅಥವಾ ತಿತಿತಿ.ssಛಿoಟಿಟiಟಿe2.gov.iಟಿ ಈ ವೆಬ್ ಸೈಟ್‍ಗಳ ಮೂಲಕ ಅನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ hಣಣಠಿ://ssಛಿ.ಟಿiಛಿ.iಟಿ ವೆಬ್‍ಸೈಟ್‍ನಲ್ಲಿರುವ ಅರ್ಜಿನಮೂನೆಯ ಪ್ರಿಂಟ್ ತೆಗೆದುಕೊಂಡು ಭರ್ತಿಮಾಡಿ ಅಂಚೆಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 19 ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗೆ & ಅರ್ಜಿ ನಮೂನೆಗಾಗಿ ಉಪಮುಖ್ಯಸ್ಥರು, ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ ಗ್ರಂಥಾಲಯ ಕಟ್ಟಡ, ಮಾನಸಗಂಗೋತ್ರಿ, ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು. (ದೂರವಾಣಿ ಸಂಖ್ಯೆ: 0821-2516844, ಮೊಬೈಲ್ ಸಂಖ್ಯೆ 9449686641) ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.
ಕಂಬೈನ್ಡ್ ಡಿಫೆನ್ಸ್ ಸರ್ವಿಸಸ್ ಎಕ್ಸಾಮಿನೇಷನ್-2014
ಕೇಂದ್ರ ಲೋಕ ಸೇವಾ ಆಯೋಗ , ನವದೆಹಲಿ ಇವರು ರಕ್ಷಣಾ ಪಡೆಗಳಾದ ಆರ್ಮಿ, ನೇವಿ & ಏರ್ ಫೋರ್ಸ್ ಗಳಲ್ಲಿ ಸುಮಾರು 464 ಆಫೀಸರ್ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದಾರೆ.
ಅಂಗೀಕೃತ ವಿಶ್ವವಿದ್ಯಾನಿಲಯದ ಯಾವುದಾದರು ಪದವಿ ಪಡೆದಿರಬೇಕು. ಪ್ರಸಕ್ತ ಸಾಲಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವವರೂ ಸಹ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ತಿತಿತಿ.uಠಿsಛಿoಟಿಟiಟಿe.ಟಿiಛಿ.iಟಿ ವೆಬ್ ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 18 ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗೆ ಲೋಕ ಸೇವಾ ಆಯೋಗದ ವೆಬ್ ಸೈಟ್: hಣಣಠಿ://ತಿತಿತಿ.uಠಿsಛಿ.gov.iಟಿ ನೋಡಿ ಅಥವಾ ಉಪಮುಖ್ಯಸ್ಥರು, ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಮಾನಸಗಂಗೋತ್ರಿ, ಮೈಸೂರು ಇವರನ್ನು ( ದೂರವಾಣಿ: 0821-2516844,9449686641) ಇವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.
ಬ್ಯಾಂಕಿಂಗ್ ಸಾಮಾನ್ಯ ಸ್ಪರ್ಧಾತ್ಮಕ ಪರೀಕ್ಷೆ 2014
ಭಾರತದ 20 ಕ್ಕಿಂತ ಹೆಚ್ಚು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಪ್ರೊಬೇಷನರಿ ಅಧಿಕಾರಿ ಹುದ್ದೆಗಳನ್ನು ಒಂದೇ ಸಾಮಾನ್ಯ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ “ಆನ್‍ಲೈನ್” ಮೂಲಕ ಅರ್ಜಿಗಳನ್ನುಆಹ್ವಾನಿಸಿದ್ದಾರೆ.
ಈ ಪರೀಕ್ಷೆಯಲ್ಲಿ ಪಡೆಯುವ ಅಂಕಗಳ ಆಧಾರದ ಮೇಲೆ 20 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಪ್ರೊಬೇಷನರಿ ಅಧಿಕಾರಿ ಹುದ್ದೆಗಳಿಗೆ ಒಂದು ವರ್ಷದವರೆಗೆ ಅರ್ಜಿ ಸಲ್ಲಿಸಿ ನೇರವಾಗಿ ಸಂದರ್ಶನಕ್ಕೆ ಅರ್ಹತೆ ಪಡೆಯಬಹುದು. ಪ್ರತಿಯೊಂದು ಬ್ಯಾಂಕಿನ ನೇಮಕಾತಿಗೆ ಪ್ರತ್ಯೇಕ ಪರೀಕ್ಷೆ ಬರೆಯುವ ಅವಶ್ಯಕತೆ ಇರುವುದಿಲ್ಲ.
ಯಾವುದಾದರು ಪದವಿಯಲ್ಲಿ ತೇರ್ಗಡೆ ಹೊಂದಿರಬೇಕು. ಕನಿಷ್ಟ 20 ವರ್ಷ ತುಂಬಿರಬೇಕು & ಗರಿಷ್ಟ 30 ವರ್ಷ ಮೀರಿರಬಾರದು. ಪರಿಶಿಷ್ಟಜಾತಿ/ಪಂಗಡ &ಓಬಿಸಿ (ಕೇಂದ್ರ) ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಅರ್ಜಿಯನ್ನು ವೆಬ್‍ಸೈಟ್; ತಿತಿತಿ.ibಠಿs.iಟಿ ನಲ್ಲಿ ಆನ್‍ಲೈನ್ ಮೂಲಕ ಆಗಸ್ಟ್ 11 ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ವೆಬ್ ಸೈಟ್ ತಿತಿತಿ.ibಠಿs.iಟಿ ನೋಡಿ ಅಥವಾ
ಉಪ ಮುಖ್ಯಸ್ಥರು, ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಗ್ರಂಥಾಲಯ ಕಟ್ಟಡ, ಮಾನಸಗಂಗೋತ್ರಿ, ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ದೂರವಾಣಿ- 2516844/8892019297 ಇವರನ್ನು ಸಂಪರ್ಕಿಸಲು ತಿಳಿಸಿದೆ.
ಕಲಾವಿದರುಗಳಿಗೆ ಸೂಚನೆ
ಕಲೆ ಮತ್ತು ಸಾಹಿತ್ಯಕ್ಕೆ ಸಂಬಂಧಪಟ್ಟಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಾಶಾಸನ ಪಡೆಯುತ್ತಿರುವ ಮಂಡ್ಯ ಜಿಲ್ಲೆಯ ಎಲ್ಲಾ ಕಲಾವಿದರು/ಸಾಹಿತಿಗಳು ಸ್ವಂತ ಮನೆ ಇಲ್ಲದೆ ಇರುವವರು ತಾವು ವಾಸಿಸುತ್ತಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ವಸತಿ ರಹಿತ ದೃಢಿಕರಣ ಪತ್ರವನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕಲಾಮಂದಿರ, ಮಂಡ್ಯ ವಿಳಾಸಕ್ಕೆ ಒಂದು ವಾರದೊಳಗೆ ಸಲ್ಲಿಸಲು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾಸಿರಿ ಯೋಜನೆ : ಕಾಲೇಜುಗಳಿಗೆ ಸೂಚನೆ
ವಿದ್ಯಾಸಿರಿ ಯೋಜನೆಯಡಿ ವಿದ್ಯಾರ್ಥಿಗಳು ಊಟ ಮತ್ತು ವಸತಿ ಸಹಾಯ ಯೋಜನೆ- ‘ವಿದ್ಯಾರ್ಥಿ ವೇತನ’ ಪಡೆಯುವ ನಿಟ್ಟಿನಲ್ಲಿ, ಎಲ್ಲ ಕಾಲೇಜುಗಳು-ಪಾಸ್ ಪೋರ್ಟಲ್ ನಲ್ಲಿ ಕೋರ್ಸ್‍ಗಳ ವಿವರವನ್ನು ಆಗಸ್ಟ್ 10 ರೊಳಗಾಗಿ ಅಪ್‍ಲೋಡ್ ಮಾಡುವಂತೆ ಸೂಚನೆ ನೀಡಲಾಗಿದೆ.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪದವಿ ಪೂರ್ವ, ಐಟಿಐ, ಡಿಪ್ಲೋಮಾ, ಪಾಲಿಟೆಕ್ನಿಕ್, ಪದವಿ, ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್, ವೈದ್ಯಕೀಯ, ಇಂಜಿನಿಯರಿಂಗ್, ಕೃಷಿ ಮತ್ತು ಪಶುವೈದ್ಯಕೀಯ, ಸ್ನಾತಕೋತ್ತರ, ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿ ಸಹಾಯ ಯೋಜನೆ (ವಿದ್ಯಾಸಿರಿ) ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಇತ್ಯಾದಿ ಸೌಲಭ್ಯಗಳನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ, ಸಂಬಂಧಪಟ್ಟ ಕಾಲೇಜುಗಳು ಇ-ಪಾಸ್ ಪೋರ್ಟ್‍ಲ್‍ನಲ್ಲಿ ಕಾಲೇಜಿನ ಮಾಹಿತಿ ಮತ್ತು ಕಾಲೇಜಿನ ಭೋಧಿಸಲಾಗುತ್ತಿರುವ ಕೋರ್ಸುಗಳ ವಿವರಗಳನ್ನು ಅಪ್‍ಲೋಡ್ ಮಾಡಬೇಕು.
2013-2014 ನೇ ಸಾಲಿನಲ್ಲಿ ಇ-ಪಾಸ್ ಪೋರ್ಟಲ್‍ನಲ್ಲಿ ಅಪ್‍ಲೋಡ್ ಮಾಡದೇ ಇರುವ, ರಾಜ್ಯದ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು, ಕಾಲೇಜುಗಳ ರಜಿಸ್ಟ್ರೇಷನ್ ನಂ, ಅಫಿಲಿಯೇಷನ್ ನಂ, ಪೂರ್ಣ ವಿಳಾಸ, ಪ್ರಾಂಶುಪಾಲರ ಹೆಸರು, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ವೆಬ್‍ಸೈಟ್(ಇದ್ದಲ್ಲಿ), ಕಾಲೇಜಿನ ಬ್ಯಾಂಕ್‍ಖಾತೆ/ಐಎಫ್‍ಎಸ್‍ಸಿ ಕೋಡ್, ಭೋಧಿಸಲಾಗುತ್ತಿರುವ(ಮಾನ್ಯತೆ ಪಡೆದ) ಕೋರ್ಸುಗಳ ಮಾಹಿತಿಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವೆಬ್‍ಪೋರ್ಟಲ್ hಣಣಠಿ://ಞಚಿಡಿeಠಿಚಿss.ಛಿgg.gov.iಟಿ ರಲ್ಲಿ ಅಪ್ ಲೋಡ್ ಮಾಡಬೇಕು. ಹೊಸದಾಗಿ ಯೂಸರ್-ಐಡಿ ಮತ್ತು ಪಾಸ್‍ವರ್ಡ್‍ಗಳ ಅಗತ್ಯ ಇರುವ ಕಾಲೇಜು ಪ್ರಾಂಶುಪಾಲರು ಕಾಲೇಜಿನ ಅಫಿಲಿಯೇಷನ್ ಆದೇಶ ಮತ್ತು ಮಾನ್ಯತೆ ಪಡೆದ ಕೋರ್ಸುಗಳ ಕುರಿತ ಆದೇಶಗಳ ಸ್ಕ್ಯಾನ್ ಪ್ರತಿಗಳೊಂದಿಗೆ, ಆಯುಕ್ತರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರ ಇ-ಮೇಲ್ hಣಣಠಿ://bಛಿಜbಟಿg@ಞಚಿಡಿ.ಟಿiಛಿ.iಟಿ ವಿಳಾಸಕ್ಕೆ ಪತ್ರವನ್ನು ಕಳುಹಿಸಬಹುದು. ಕಾಲೇಜುಗಳಿಗೆ ನೀಡಲಾದ ಯೂಸರ್-ಐಡಿ ಮತ್ತು ಪಾಸ್‍ವರ್ಡ್‍ಗಳನ್ನು ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳನ್ನು ಸಂಪರ್ಕಿಸಿ ಪಡೆದು ಆ.10 ರೊಳಗಾಗಿ ತಪ್ಪದೇ ಅಪ್‍ಲೋಡ್ ಮಾಡಬೇಕು.
ಊಟ ಮತ್ತು ವಸತಿ ಸಹಾಯ ಯೋಜನೆ(ವಿದ್ಯಾಸಿರಿ), ವಿದ್ಯಾರ್ಥಿ ವೇತನ ಮತ್ತು ಶುಲ್ಕ ವಿನಾಯಿತಿ ಇತ್ಯಾದಿಗಳನ್ನು ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಅಂಕಪಟ್ಟಿಯಲ್ಲಿ ಇರುವ ರೀತಿಯಲ್ಲಿಯೇ (ಉದಾಹರಣೆಗೆ, ಬಿ. ಸಂತೋಷ್ ಇದ್ದರೆ ಬ್ಯಾಂಕ್ ಖಾತೆ ತರೆಯುವಾಗ ಬಿ. ಸಂತೋಷ್ ಎಂದೇ ನಮೂದಿಸಬೇಕು. ಸಂತೋಷ್. ಬಿ. ಎಂದು ನಮೂದಿಸಬಾರದು) ವಿದ್ಯಾರ್ಥಿಗಳ ಹೆಸರಿನಲ್ಲಿ ಯಾವುದಾದರೂ ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಇರುವ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ, ಬ್ಯಾಂಕ್ ಖಾತೆಯನ್ನು ತೆರೆಯಲು ವಿದ್ಯಾರ್ಥಿಗಳಿಗೆ ಸೂಚನೆಗಳನ್ನು ನೀಡುವಂತೆ ಬಿಸಿಎಂ ಜಿಲ್ಲಾ ಅಧಿಕಾರಿ ಲಿಂಗರಾಜಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಣೆಯಾದ ಗಂಡಸಿನ ಪತ್ತೆಗೆ ಸಹಕರಿಸಲು ಮನವಿ
ಮಂಡ್ಯ ನಗರದ ಹೌಸಿಂಗ್ ಬೋರ್ಡ್‍ನ ಮಹದೇವಮ್ಮ ಪತಿ ಮುತ್ತುರಾಜ್ ದಿನಾಂಕ 14-7-2014 ರಿಂದ ನಾಪತ್ತೆಯಾಗಿದ್ದಾರೆ.
ಕಾಣೆಯಾದ ಗಂಡಸಿನ ಚಹರೆ ಇಂತಿದೆ. ವಯಸ್ಸು 34 ವರ್ಷ, 5.2 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ ಹೊಂದಿದ್ದು, ಎಡಕಣ್ಣಿನ ಕೆಳಭಾಗ ಕಪ್ಪು ಮಚ್ಚೆ ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಕಪ್ಪು ಬಣ್ಣದ ಪ್ಯಾಂಟ್, ಪಿಂಕ್ ಬಣ್ಣದ ಶರ್ಟ್ ಧರಿಸಿರುತ್ತಾರೆ. ಈ ಚಹರೆ ಪಟ್ಟಿಯುಳ್ಳ ವ್ಯಕ್ತಿ ಪತ್ತೆಯಾದಲ್ಲಿ ಕೂಡಲೇ ಮಂಡ್ಯ ಕಂಟ್ರೋಲ್ ರೂಂ : 08232-224888, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ: 08232-224500 ಹಾಗೂ ಪಶ್ಚಿಮ ಪೊಲೀಸ್ ಠಾಣೆ 08232-224666 ಕ್ಕೆ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.

No comments:
Post a Comment