ಸೆಪ್ಟೆಂಬರ್ 6 ಮತ್ತು 7ರಂದು ಗಗನಚುಕ್ಕಿ ಜಲಪಾತೋತ್ಸವ-ಜಿಲ್ಲಾಧಿಕಾರಿಗಳಾದ ಡಾ. ಅಜಯ್ ನಾಗಭೂಷಣ್
ಮಂಡ್ಯ, ಆಗಸ್ಟ್ 18 . ಮಳವಳ್ಳಿ ತಾಲ್ಲೂಕು ಶಿವನಸಮುದ್ರ ಬಳಿ ಇರುವ ನಾಡಿನ ಪ್ರಮುಖ ಪ್ರವಾಸಿತಾಣ ಗಗನಚುಕ್ಕಿಯಲ್ಲಿ 2014ರ ಸೆಪ್ಟೆಂಬರ್ 6 ಮತ್ತು 7 ರಂದು ಜಲಪಾತೋತ್ಸವ ಆಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಅಜಯ್ ನಾಗಭೂಷಣ್ ತಿಳಿಸಿದರು.
ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ. ಅಜಯ್ ನಾಗಭೂಷಣ್ ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು
ಜಲಪಾತೋತ್ಸವ ಕಾರ್ಯಕ್ರಮವನ್ನು ಆಚರಿಸಲು ಒಟ್ಟು 50 ಲಕ್ಷ ರೂ.ಗಳ ಅನುದಾನ ದೊರೆತಿದೆ. ಈ ಪೈಕಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ 25 ಲಕ್ಷ ರೂ. ಹಾಗೂ ಪ್ರವಾಸೋದ್ಯಮ ಇಲಾಖೆ 25 ಲಕ್ಷ ರೂ.ಗಳನ್ನು ನೀಡುತ್ತಿದೆ. ಅನುದಾನವನ್ನು ಅಗತ್ಯಕ್ಕೆ ಅನುಗುಣವಾಗಿ ಸಮರ್ಪಕವಾಗಿ ಬಳಸಿಕೊಂಡು ವ್ಯವಸ್ಥಿತವಾಗಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಅಧಿಕಾರಿಗಳಿಗೆ ಅವರು ತಿಳಿಸಿದರು.
ಮಂಡ್ಯ ಉಪ ವಿಭಾಗಾಧಿಕಾರಿ ಅರುಳ್ ಕುಮಾರ್ ಅವರನ್ನು ಗಗನಚುಕ್ಕಿ ಜಲಪಾತೋತ್ಸವದ ವಿಶೇಷಾಧಿಕಾರಿಗಳಾಗಿ ನೇಮಿಸಲಾಗುತ್ತಿದೆ. ಇವರು ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿಯನ್ನು ನೋಡಿಕೊಳ್ಳಬೇಕು ಎಂದು ತಿಳಿಸಿದರು.
ವಾಹನಗಳ ಸುಗಮ ಸಂಚಾರಕ್ಕಾಗಿ ಪ್ರವೇಶ ದ್ವಾರ ಹಾಗೂ ನಿರ್ಗಮನದ ದ್ವಾರದ ವರೆಗೂ ಬೆಳಕಿನ ವ್ಯವಸ್ಥೆ ಮಾಡುವಂತೆ ಸೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು.
ಪ್ರವಾಸಿಗರು ಕುಳಿತು ಕಾರ್ಯಕ್ರಮವನ್ನು ವೀಕ್ಷಿಸಲು ಅನುಕೂಲವಾಗುವಂತೆ ಸುಸಜ್ಜಿತವಾಗಿ ವೇದಿಕೆ ನಿರ್ಮಿಸಬೇಕು. ಕುಡಿಯುವ ನೀರು ಪೂರೈಕೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಸ್ಥಳದಲ್ಲಿ ನೈರ್ಮಲ್ಯ ಕಾಪಾಡಬೇಕು ಎಂದು ಮಳವಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹೇಳಿದರು.
ಕಾರ್ಯಕ್ರಮದ ಆಯೋಜನೆಗಾಗಿ ವಿವಿಧ ಸಮಿತಿಗಳನ್ನು ನೇಮಿಸಿ ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು. ಸಾಕಷ್ಟು ಕಾಲಾವಕಾಶ ಇರುವುದರಿಂದ ಎಲ್ಲವನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದು ಹೇಳಿದರು.
ಪ್ರವಾಸಿಗರ ಅನುಕೂಲಕ್ಕಾಗಿ ಆಹಾರ ಮೇಳವನ್ನು ಆಯೋಜಿಸಲಾಗುವುದು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಆಹಾರ ಮೇಳಕ್ಕೆ ಸ್ಥಳ ಗುರುತಿಸಿ, ಆಸಕ್ತರಿಗೆ ಉಚಿತವಾಗಿ ಒದಗಿಸಿಕೊಡಬೇಕು ಎಂದು ಹೇಳಿದರು.
ಗಣ್ಯರ ಹಾಗೂ ಕಲಾವಿದರ ವಾಸ್ತವ್ಯಕ್ಕಾಗಿ ಅತಿಥಿಗೃಹಗಳನ್ನು ಕಾಯ್ದಿರಿಸುವಂತೆ ಅವರು ಸೂಚಿಸಿದರು.
ಪೊಲೀಸ್ ವರಿಷ್ಠಾಧಿಕಾರಿಗಳಾದ ಭೂಷಣ್ ಜಿ. ಬೊರಸೆ ಅವರು ಮಾತನಾಡಿ, ಜಲಪಾತೋತ್ಸವದಲ್ಲಿ ಗಣ್ಯರು ಹಾಗೂ ಕಲಾವಿದರನ್ನು ಗುರುತಿಸುವುದು ಕಷ್ಟ. ಪಾಸ್‍ಗಳನ್ನು ವಿತರಿಸಿದರೆ ಭದ್ರತಾ ನಿರ್ವಹಣೆ ಸರಾಗವಾಗುತ್ತದೆ. ಆದ್ದರಿಂದ ಪಾಸ್ ಅಗತ್ಯ ಇರುವವರ ಪಟ್ಟಿಯನ್ನು ಮುಂಚಿತವಾಗಿ ಕಳುಹಿಸಿಕೊಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ತಿಳಿಸಿದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಎನ್.ಅಣ್ಣೇಗೌಡ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಎಂ.ಎನ್.ಹರೀಶ್, ಮತ್ತಿತರರು ಉಪಸ್ಥಿತರಿದ್ದರು.
ಸೆಪ್ಟೆಂಬರ್ 10 ರಂದು ಶ್ರೀಕೃಷ್ಣ ಜಯಂತಿ ಆಚರಣೆ
ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾ ಮಂದಿರದಲ್ಲಿ ಸೆಪ್ಟೆಂಬರ್ 10 ರಂದು ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮವನ್ನು ಆಚರಿಸಲು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ (ಆಡಳಿತ) ಪ್ರಕಾಶ್ ಅವರು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಸಭೆಯಲ್ಲಿ ಹಾಜರಿದ್ದ ವಿವಿಧ ಸಮಾಜಗಳ ಮುಖಂಡರು ಸಲಹೆ ನೀಡುವಂತೆ ತಿಳಿಸಿದರು.
ದಲಿತ ಸಂಘರ್ಷ ಸಮಿತಿ ಮುಖಂಡರಾದ ಎಂ. ಬಿ. ಶ್ರೀನಿವಾಸ್ ಅವರು ಮಾತನಾಡಿ, ಶ್ರೀ ಕೃಷ್ಣ ಜಯಂತಿಯಂದು ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರೆ ಹೆಚ್ಚಿನ ಜನರ ಗಮನ ಸೆಳೆಯಬಹುದು ಎಂದು ಹೇಳಿದರು.
ಶ್ರೀಕೃಷ್ಣನ ಕುರಿತ ಸಂಗೀತ ಕಾರ್ಯಕ್ರಮವನ್ನು ಕಲಾ ಮಂದಿರದಲ್ಲಿ ಆಯೋಜಿಸಬೇಕೆಂಬ ಸಲಹೆ ಸಭೆಯಲ್ಲಿ ವ್ಯಕ್ತವಾಯಿತು.
ಇದೇ ಪ್ರಥಮ ಬಾರಿಗೆ ಜಿಲ್ಲಾಡಳಿತದ ವತಿಯಿಂದ ಶ್ರೀಕೃಷ್ಣ ಜಯಂತಿ ಆಚರಿಸಲಾಗುತ್ತಿದೆ. ಸಂಘ ಸಂಸ್ಥೆಗಳ ಮುಖಂಡರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಉಪ ಕಾರ್ಯದರ್ಶಿ ಪ್ರಕಾಶ್ ಅವರು ಮನವಿ ಮಾಡಿದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ತಹಶೀಲ್ದಾರ್ ವಿ. ಪ್ರಿಯದರ್ಶಿನಿ, ಮಲ್ಲಾರಾಧ್ಯ ಪ್ರಸನ್ನ, ಗುರುದೇವ ಲಲತಕಲಾ ಅಕಾಡೆಮಿಯ ರಾಧಾಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.
ವಿಷಯಾಧಾರಿತ ಶಿಕ್ಷಣ ಮತ್ತು ಜಾಗೃತಿ ಹಾಗೂ ಸಸಿ ನೆಡುವ ಕಾರ್ಯಕ್ರಮ
ಮಂಡ್ಯ, ಆಗಸ್ಟ್ 18 . ನೆಹರು ಯುವ ಕೇಂದ್ರ, ನಿರ್ಮಲ್ ಭಾರತ್ ಅಭಿಯಾನ್, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಮಂಡ್ಯ, ಶ್ರೀ ಚೌಡೇಶ್ವರಿ ಯುವಜನ ಮತ್ತು ಮಹಿಳಾ ಅಭಿವೃದ್ಧಿ ಸಂಘ (ರಿ), ಕೆ.ಹೊನ್ನಲಗೆರೆ ಹಾಗೂ ಕನ್ನಡ ಯುವಕರ ಸಂಘ (ರಿ), ಹುಣಸೆಮರದದೊಡ್ಡಿ, ಮದ್ದೂರು ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 19 ರಂದು ಬೆಳಿಗ್ಗೆ 11.30 ಗಂಟೆಗೆ ಕೆ.ಹೊನ್ನಲಗೆರೆಯ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ವಿಷಯಾಧಾರಿತ ಶಿಕ್ಷಣ ಮತ್ತು ಜಾಗೃತಿ ಹಾಗೂ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 11.30 ಮದ್ದೂರಿನ ಶಾಸಕರಾದ ಡಿ.ಸಿ.ತಮ್ಮಣ್ಣ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸದಸ್ಯರಾದ ಬಿ.ರಾಮಕೃಷ್ಣ ಅವರು ಅಧ್ಯಕ್ಷತೆ ವಹಿಸುವರು.
ಪ್ರವಾಸ ಕಾರ್ಯಕ್ರಮ
ಬೆಂಗಳೂರಿನ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾದ ಡಾ|| ಟಿ.ಎನ್. ಕಮ್ಮರಡಿ ಅವರು ಆಗಸ್ಟ್ 20 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು ಅಂದು ಸಂಜೆ 4.00 ಗಂಟೆಗೆ ಮಂಡ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಭೇಟಿ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಆ..22 ರಂದು ಪುರುಷರಿಗೆ ಹಾಗೂ ಮಹಿಳೆಯರಿಗೆ ಸ್ಪರ್ಧೆ
ನೆಹರು ಯುವ ಕೇಂದ್ರ, ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಮಂಡ್ಯ, ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್, ಮಂಡ್ಯ, ಕೆ.ವಿ.ಶಂಕರಗೌಡ ಸ್ಮಾರಕ ಯುವಜನ ಸಂಘ (ರಿ), ಕೀಲಾರ ಇವರುಗಳ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 22 ರಂದು ಬೆಳಿಗ್ಗೆ 9.00 ಗಂಟೆಗೆ ಕೀಲಾರ (ಗೊಜ್ಜೇಗೌಡರ ಗಂಗಾಧರರವರ ಗದ್ದೆ) ಗ್ರಾಮದಲ್ಲಿ ಜಿಲ್ಲಾ ಮಟ್ಟದ ಪುರುಷರ ಕೆಸರು ಗದ್ದೆ ವಾಲೀಬಾಲ್ ಪಂದ್ಯಾವಳಿ ಮತ್ತು ಹಗ್ಗ ಜಗ್ಗಾಟ ಹಾಗೂ ಮಹಿಳೆಯರಿಗೆ ಕೆಸರು ಗದ್ದೆ ಓಟ ಮತ್ತು ಹಗ್ಗ ಜಗ್ಗಾಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಯುವಜನರು ಈ ಸ್ಪರ್ಧೆಗಳಲ್ಲಿ ಭಾಗವಹಿಸಿ ಗ್ರಾಮೀಣ ಕ್ರೀಡೆಗಳಿಗೆ ಜೀವ ತುಂಬಬೇಕಾಗಿದೆ. ಹೆಚ್ಚಿನ ವಿವರಗಳಿಗೆ ಬಿ.ಎನ್. ಚಂದ್ರಶೇಖರ್-9880431367, ಕೆ.ಪಿ.ಸಂತೋಷ್-9945181861, ಕೆ.ಆರ್.ಶಿವಶಂಕರ್-8722382595 ಇವರನ್ನು ಸಂಪರ್ಕಿಸುವುದು.
ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ
ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಸಿಖ್ಖರು, ಬೌದ್ದರು ಹಾಗೂ ಪಾರ್ಸಿಯನ್, ವಿದ್ಯಾರ್ಥಿಗಳಿಗೆ ಸಿ.ಇ.ಟಿ. ಪರೀಕ್ಷೆಗೆ ಅನುಕೂಲವಾಗುವಂತೆ ಪ್ರತಿಷ್ಠಿತ ಸಂಸ್ಥೆಗಳಿಂದ ಮಂಡ್ಯ ನಗರದಲ್ಲಿ ದಿನಾಂಕ 1-9-2014 ರಿಂದ 31-3-2015 ರವರೆಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ದ್ವಿತೀಯ ಪಿ.ಯು.ಸಿ.ಯಲ್ಲಿ ಪಿ.ಸಿ.ಎಂ.ಬಿ. ಕೋರ್ಸಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಜನಾಂಗದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಳೇ ತಾಲ್ಲೂಕು ಕಚೇರಿ ಹತ್ತಿರ, ಮಂಡ್ಯ ಇವರಿಂದ ಉಚಿತವಾಗಿ ಪಡೆದು ಆಗಸ್ಟ್ 27 ರೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08232-220835 ಅನ್ನು ಸಂಪರ್ಕಿಸುವುದು.
ಮೆಟ್ರಿಕ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ : ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಪ್ರಸಕ್ತ ಸಾಲಿಗೆ ಊಟ ಮತ್ತು ವಸತಿ ಸಹಾಯ ಯೋಜನೆ (ವಿದ್ಯಾಸಿರಿ) ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಇಲಾಖೆಯ ಸರ್ಕಾರಿ/ಸರ್ಕಾರಿ ಅನುದಾನಿತ ವಿದ್ಯಾರ್ಥಿ ನಿಲಯ/ವಸತಿ ಕಾಲೇಜುಗಳಲ್ಲಿ ಪ್ರವೇಶ ದೊರೆಯದ ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಈ ಸೌಲಭ್ಯವನ್ನು ಒದಗಿಸಲಾಗುವುದು.
ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ, ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಇವುಗಳಲ್ಲಿ ಒಬ್ಬ ವಿದ್ಯಾರ್ಥಿ ಯಾವುದಾದರೂ ಒಂದು ಸೌಲಭ್ಯಕ್ಕೆ ಅರ್ಹರಿರುತ್ತಾರೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನಾಂಕವಾಗಿರುತ್ತದೆ. ಅರ್ಜಿ ಸಲ್ಲಿಸಲು hಣಣಠಿ://ಞಚಿಡಿeಠಿಚಿss.ಛಿgg.gov.iಟಿ ಹಾಗೂ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ಅನ್ನು ಸಂಪರ್ಕಿಸಬಹುದು. ಹೆಚ್ಚಿನ ವಿವರಗಳಿಗಾಗಿ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು/ತಾಲ್ಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳನ್ನು ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವೆಬ್‍ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ಹಾಗೂ hಣಣಠಿ://ಞಚಿಡಿeಠಿಚಿss.ಛಿgg.gov.iಟಿ ಅನ್ನು ಸಂಪರ್ಕಿಸುವುದು.
ಕಾಣೆಯಾದ ಯುವಕನÀ ಪತ್ತೆಗೆ ಸಹಕರಿಸಲು ಮನವಿ
ಮಳವಳ್ಳಿ ತಾಲ್ಲೂಕು, ಬೆಳಕವಾಡಿ ಪೊಲೀಸ್ ವಸತಿ ಗೃಹದಲ್ಲಿ ವಾಸವಾಗಿದ್ದ ಆರ್. ಕೃಷ್ಣ ಎಂಬುವರು ತಮ್ಮ ಮಗ ಎಂ.ಕೆ.ರಾಘವೇಂದ್ರ ದಿನಾಂಕ 15-8-2014 ರಂದು ಬೆಂಗಳೂರಿನ ಬಿ.ಹೆಚ್.ಇ.ಎಲ್ ಕಂಪನಿಯಲ್ಲಿ ಕೆಲಸ ಸಿಕ್ಕಿರುವುದಾಗಿ ಹೇಳಿ ಹೋದವರು ಇದೂವರೆಗೂ ವಾಪಸ್ ಬಾರದೇ ನಾಪತ್ತೆಯಾಗಿರುತ್ತಾನೆ ಎಂದು ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುತ್ತಾರೆ.
ಕಾಣೆಯಾದ ಎಂ.ಕೆ. ರಾಘವೇಂದ್ರರವರ ಚಹರೆ ಇಂತಿದೆ. ವಯಸ್ಸು 22 ವರ್ಷ, ಎಣ್ಣೆಗೆಂಪು ಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು, 6 ಅಡಿ ಎತ್ತರ ಹೊಂದಿದ್ದು, ಕನ್ನಡ ಮಾತನಾಡುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಕಪ್ಪು ಬಿಳಿ ಬಣ್ಣದ ಶರ್ಟ್ ಮತ್ತು ಬೂದಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಈ ಚಹರೆ ಪಟ್ಟಿಯುಳ್ಳ ಯುವಕ ಪತ್ತೆಯಾದಲ್ಲಿ ಕೂಡಲೆ ಕಂಟ್ರೋಲ್ ರೂಂ : 08232-224888, ಬೆಳಕವಾಡಿ ಪೊಲೀಸ್ ಠಾಣೆ : 08231-240034, ಎಸ್.ಪಿ. ಮಂಡ್ಯ 08232-224500 ಕ್ಕೆ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ

No comments:
Post a Comment