Friday, 8 August 2014

ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರವೇಶ ಶುಲ್ಕವನ್ನು 620ರೂಗಳಿಂದ ಏಕಾಏಕಿ 15ಸಾವಿರ ರೂಗಳಿಗೆ ಹೆಚ್ಚಿಸಿರುವ ಕ್ರಮವನ್ನು ಖಂಡಿಸಿ ಪ್ರತಿಭಟನೆ

ಕೆ.ಆರ್.ಪೇಟೆ,ಆ.08,(ಶ್ರೀನಿವಾಸ್)-ರಾಜ್ಯ ಸರ್ಕಾರವು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರವೇಶ ಶುಲ್ಕವನ್ನು 620ರೂಗಳಿಂದ ಏಕಾಏಕಿ 15ಸಾವಿರ ರೂಗಳಿಗೆ ಹೆಚ್ಚಿಸಿರುವ ಕ್ರಮವನ್ನು ಖಂಡಿಸಿ ಪಟ್ಟಣದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಸಾವಿರಾರು ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ತೃತೀಯ ಮತ್ತು ಅಂತಿಮ ವರ್ಷದ ಬಿಇ ತರಗತಿಗಳಿಗೆ ಪ್ರವೇಶ ಪಡೆಯಲು ಕಳೆದ  ಸಾಲಿನಲ್ಲಿ ಕೇವಲ 620ರೂ ಪ್ರವೇಶ ಶುಲ್ಕವನ್ನು ನಿಗಧಿಪಡಿಸಲಾಗಿತ್ತು. ಆದರೆ ಈ ಭಾರಿಯ ಪ್ರವೇಶಕ್ಕೆ ಜಾತಿ ಮತ್ತು ಆದಾಯದ ಧೃಢೀಕರಣ ಪತ್ರವನ್ನು ಹಾಜರುಪಡಿಸಿದ್ದರೂ ಸಹ 15620-00ರೂ ಶುಲ್ಕವನ್ನು ಪಾವತಿಸಬೇಕೆಂದು ರಾಜ್ಯ ಸರ್ಕಾರವು ಅವೈಜ್ಞಾನಿಕ ಸುತ್ತೋಲೆಯನ್ನು ಹೊರಡಿಸಿರುವುದರಿಂದಾಗಿ ಬಡ ವಿದ್ಯಾರ್ಥಿಗಳು ಪ್ರವೇಶ ಶುಲ್ಕವನ್ನು ಪಾವತಿಸಲು ಪರದಾಡಬೇಕಾಗಿದೆ. ಆದ್ದರಿಂದ ಸರ್ಕಾರವು ಶುಲ್ಕ ಹೆಚ್ಚಿಸಿರುವ ಆದೇಶವನ್ನು ವಾಪಸ್ ಪಡೆದುಕೊಂಡು ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕು ಎಂದು ವಿದ್ಯಾರ್ಥಿಗಳು ಸರ್ಕಾರವನ್ನು ಒತ್ತಾಯ ಮಾಡಿದರು.
ವಿದ್ಯಾರ್ಥಿಗಳ ಪ್ರತಿಭಟನೆಯ ವಿಷಯ ತಿಳಿದು ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿಗೆ ಬೇಟಿ ನೀಡಿದ  ಶಾಸಕ ನಾರಾಯಣಗೌಡ ಕಾಲೇಜಿಗೆ ಭೇಟಿ ನೀಡಿ ಪ್ರತಿಭಟನಾನಿರತ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರಲ್ಲದೇ ರಾಜ್ಯದ ಉನ್ನತ ಶಿಕ್ಷಣ ಸಚಿವರಾದ ಆರ್.ವಿ.ದೇಶಪಾಂಡೆ ಅವರೊಂದಿಗೆ ದೂರವಾಣಿಯಲ್ಲಿ ಸಂಪರ್ಕಿಸಿ ಬಡ ವಿದ್ಯಾರ್ಥಿಗಳಿಗಾಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ಮನವಿ ಮಾಡಿದರು. ಈ ಬಗ್ಗೆ ಸಚಿವರು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಶುಲ್ಕ ಪರಿಷ್ಕರಿಸುವ ಭರವಸೆ ನೀಡಿದ್ದಾರೆ ಎಂದು ಶಾಸಕರು ತಿಳಿಸಿದ ನಂತರ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆಯನ್ನು ಹಿಂಪಡೆದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಕೆ.ಆರ್.ಹೇಮಂತ್‍ಕುಮಾರ್, ಹೆಚ್.ಆರ್.ಲೋಕೇಶ್, ಜಿಲ್ಲಾ ಪಡಿತರ ವಿತರಕರ ಸಂಗದ ಅಧ್ಯಕ್ಷ ಅಂಚನಹಳ್ಳಿ ಸುಬ್ಬಣ್ಣ, ವಿದ್ಯಾರ್ಥಿ ಸಂಘದ ಮುಖಂಡರಾದ ನಟರಾಜ್, ಡಿ.ಚಂದ್ರಶೇಖರ್, ಅನುಷಾ, ಚಂದು, ಪುನೀತಾ, ಮತ್ತಿತರರು ಉಪಸ್ಥಿತರಿದ್ದರು.
ಚಿತ್ರಶೀರ್ಷಿಕೆ: 08-ಏಖPಇಖಿ-01 ಕೆ.ಆರ್.ಪೇಟೆ ಪಟ್ಟಣದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರವೇಶ ಶುಲ್ಕವನ್ನು ಹೆಚ್ಚಿಸಿರುವ ಕ್ರಮವನ್ನು ವಿರೋಧಿಸಿ ಎಬಿವಿಪಿ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಿದ ಸ್ಥಳಕ್ಕೆ ಬೇಟಿ ನೀಡಿದ ಶಾಸಕ ನಾರಾಯಣಗೌಡ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು.

No comments:

Post a Comment