Friday, 1 August 2014

ಮಂಡ್ಯ-ಶಾಸಕ ರಮೇಶ್ ಬಂಡಿಸಿದ್ದೇಗೌಡರಿಂದ ಕ್ರೀಡಾಕೂಟಕ್ಕೆ ಚಾಲನೆ.

ಮಂಡ್ಯ: ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕ್ರೀಡೆಯೂ ಅಗತ್ಯ. ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಪಿ ಭಾಗವಹಿಸುವ ಮೂಲಕ ತಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳುವುದರ ಜೊತೆಗೆ ಸಮಾಜದ ಸ್ವಾಸ್ತ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಪ್ರಯತ್ನ ನಡೆಸಬೇಕು ಎಂದು ಶಾಸಕ ಎ.ಬಿ. ರಮೇಶ್ ಬಂಡಿಸಿದ್ದೇಗೌಡ ಕಿವಿಮಾತು ಹೇಳಿದರು.
ನಗರದ ಸರ್.ಎಂ.ವಿ. ಕ್ರೀಡಾಂಗಣದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಇಂಡುವಾಳು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ದಕ್ಷಿಣ ವಲಯ ಇವರ ವತಿಯಿಂದ ನಡೆದ ಯಲಿಯೂರು ಹಾಗೂ ಕೊತ್ತತ್ತಿ ವ್ಯಾಪ್ತಿಯ ಹಿರಿಯ ಪ್ರಾಥಮಿಕ ಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟ ಸಮಾರಂಭದ ಅಧ್ಯಕ್ಷತೆ ವಹಿಸಿ  ಮಾತನಾಡಿದ ಅವರು, ಸ್ಪರ್ಧಾತ್ಮಕ ಜಗತ್ತಿನಲ್ಲಿ ಓದಿನಷ್ಟೇ ಕ್ರೀಡೆಯೂ ಮುಖ್ಯವಾದುದು. ವಿದ್ಯಾರ್ಥಿಗಳು ಓದಿನಷ್ಟೇ ಕ್ರೀಡೆಗೂ ಮಹತ್ವ ನೀಡಬೇಕು. ಕ್ರೀಡಾ ಮನೋಭಾವದಿಂದ ಸೋಲು ಗೆಲುವನ್ನು ಸ್ವೀಕರಿಸಬೇಕು ಎಂದು ಹೇಳಿದರು.
ತಾ.ಪಂ. ಅಧ್ಯಕ್ಷ ಟಿ.ಸಿ. ಶಂಕರೇಗೌಡ ಮಾತನಾಡಿ, ದೈಹಿಕ ಶಿಕ್ಷಕರು ಕ್ರೀಡೆಯಲ್ಲಿ  ಆಸಕ್ತಿ ಇರುವ ವಿದ್ಯಾರ್ಥಿಗಳನ್ನು ಗುರುತಿಸಿ ಅಂತಹ ಕ್ರೀಡೆಗಳಲ್ಲಿ ಸತತ ಅಭ್ಯಾಸ ಮಾಡಿಸಿ ಒಳ್ಳೆಯ ಕ್ರೀಡಾಪಟುಗಳನ್ನು ತಯಾರು ಮಾಡಬೇಕು ಎಂದು ಸಲಹೆ ನೀಡಿದರು.
ಗ್ರಾಮೀಣ ಪ್ರದೇಶದಲ್ಲಿ ಕ್ರೀಡೆಗಳು ಕಡಿಮೆಯಾಗುತ್ತಿವೆ. ಕ್ರಿಕೆಟ್‍ನಂತಹ ಆಧುನಿಕ ಕ್ರೀಡೆಯನ್ನು ಹೊರತುಪಡಿಸಿ, ಗ್ರಾಮೀಣ ಭಾಗದ ಕ್ರೀಡೆಗಳಾದ ಕಬಡ್ಡಿ, ಗೋಲಿ, ಮರಕೋತಿಯಂತಹ ಜಾನಪದ ಸೊಗಡಿನ ಕ್ರೀಡೆಗಳು ಕಣ್ಮರೆಯಾಗುತ್ತಿದೆ. ಇಂತಹ ಕ್ರೀಡೆಗಳ ಬಗೆಗೂ ಆಸಕ್ತಿ ಬೆಳೆಸಿಕೊಳ್ಳಬೇಕು. ಆ ಮೂಲಕ ಗ್ರಾಮೀಣ ಕ್ರೀಡೆಯನ್ನು ಮುಂದಿನ ಪೀಳಿಗೆಗೆ ಕೊಡುಗೆ ನೀಡಬೇಕು ಎಂದು ಹೇಳಿದರು.
ಜನಸಂಖ್ಯಾ ಸ್ಪೋಟದಿಂದಾಗಿ ಭಾರತ ಇತರ ರಾಷ್ಟ್ರಗಳು ತಿರುಗಿನೋಡುಂತಾಗಿದೆ. ಆದರೆ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಭಾರತ 7ನೇ ಸ್ಥಾನಕ್ಕೆ ತಲುಪಿದೆ. ಸಾಧನೆ ಗುರುತಿಸುವಂತಾಗಿದೆ. ವಿದ್ಯಾರ್ಥಿಗಳು ಇದನ್ನು ಮನಗಂಡು ಸತತ ಅಭ್ಯಾಸದಿಂದ ರಾಷ್ಟ್ರ ಹಾಗೂ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಬೇಕು ಎಂದು ತಿಳಿಸಿದರು.
ಜಿ.ಪಂ. ಸದಸ್ಯೆ ಚಂದ್ರಕಲಾ ನಂಜುಂಡಾಚಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವು,  ತಾ.ಪಂ. ಸದಸ್ಯ ತ್ಯಾಗರಾಜಯ್ಯ, ಶಾಲಾಭಿವೃದ್ಧಿಸಮಿತಿ ಅಧ್ಯಕ್ಷ ಎಂ.ರಾಜು, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಟಿ. ರವಿಶಂಕರ್, ಸದಸ್ಯರಾದ ಹೊನ್ನಗಿರೀಗೌಡ, ಸಿದ್ದೇಗೌಡ, ಚಲುವರಾಜು, ವzಖ್ಯ ಶಿಕ್ಷಕ ಮಹದೇವು, ನಾರಾಯಣಗೌಡ ಇತರರು ಸಮಾರಂಭದಲ್ಲಿ ಭಾಗವಹಿಸಿದ್ದರು.

ಮಂಡ್ಯ: ವಿದ್ಯಾರ್ಥಿಗಳಿಗೆ ಸರ್ಕಾರ ಸಮವಸ್ತ್ರ, ಪಠ್ಯ ಪುಸ್ತಕ, ಬೆಳಗ್ಗೆ ಹಾಲು, ಮಧ್ಯಾಹ್ನದ ಬಿಸಿಯೂಟ, ವಿದ್ಯಾರ್ಥಿ ವೇತನ ನೀಡುತ್ತಿದೆ. ದಾನಿಗಳಿಂದಲೂ ವಿದ್ಯಾರ್ಥಿಗಳಿಗೆ ಅಗತ್ಯವಾದ ನೋಟ್‍ಬುಕ್, ಜಾಮಿಟ್ರಿ ಬಾಕ್ಸ್ ನೀಡುತ್ತಿರುವುದು ಶ್ಲಾಘನೀಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವು ತಿಳಿಸಿದರು.
ನಗರದ ಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳಿಂದ ಸಂಗ್ರಹಿಸಿರುವ ನೋಟ್‍ಬುಕ್, ಜಾಮಿಟ್ರಿಬಾಕ್ಸ್‍ಗಳನ್ನು ವಿತರಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಯಲ್ಲಿ ಗುಣಾತ್ಮಕ ಶಿಕ್ಷಣ ನೀಡುತ್ತಿದರೂ ವಿದ್ಯಾರ್ಥಿಗಳ  ಸಂಖ್ಯೆ ಕಡಿಮೆಯಾಗುತ್ತಿದೆ. ಆಧುನಿಕ ಪ್ರಪಂಚದಲ್ಲಿ ಪೆÇೀಷಕರು ನಮ್ಮ ಮಕ್ಕಳು ಆಟೋ, ಬಸ್ಸುಗಳಲ್ಲಿ ಹೋಗಬೇಕು ಎಂದು ತಿಳಿದು ಖಾಸಗಿ ಶಾಲೆಗಳಿಗೆ ಕಳುಹಿಸುತ್ತಿದ್ದಾರೆ. ಸಿಇಟಿಯಂತಹ ತರಬೇತಿಯನ್ನು ಖಾಸಗಿ ಶಾಲೆಯಲ್ಲಿ ಕೆಲಸ ಮಾಡುವ  ಶಿಕ್ಷಕರು ಪಡೆದಿರುವುದಿಲ್ಲ. ಸರ್ಕಾರಿ ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕರು ತರಬೇತಿ ಪಡೆದಿರುತ್ತಾರೆ. ಇದರಿಂದಾಗಿ ಗುಣಾತ್ಮಕ ಶಿಕ್ಷಣ ನೀಡಲು ಸಾಧ್ಯ. ಇದನ್ನು ಪೆÇೀಷಕರು ಮನಗಾಣಬೇಕಾಗಿದೆ ಎಂದು ಸಲಹೆ ನೀಡಿದರು.
ನಗರಸಭಾ ಉಪಾಧ್ಯಕ್ಷೆ ಚಂದ್ರಕಲಾ ಶಿವರಾಂ, ಸದಸ್ಯರಾದ ಹೊಸಹಳ್ಳಿ ಬೋರೇಗೌಡ, ಸುಜಾತಮಣಿ, ಶಿಕ್ಷಕರ ಸಂಘದ ಅಧ್ಯಕ್ಷ ಟಿ. ರವಿಶಂಕರ್, ಶಿಕ್ಷಕರಾದ ಲಿಂಗರಾಜು, ವೆಂಕಟಶೆಟ್ಟಿ ಇತರರು ಸಮಾರಂಭದಲ್ಲಿ ಭಾಗವಹಿಸಿದ್ದರು.


No comments:

Post a Comment