ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಮಂಡ್ಯ ಇವರಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ 2013-14 ನೇ ಸಾಲಿನ ಆಧುನಿಕ ಹೈನುಗಾರಿಕೆ ಅನುಸರಿಸಲು ರೈತರುಗಳಿಗೆ ಸಹಾಯ ಯೋಜನೆ ಅನುಷ್ಠಾನಗೊಳಿಸಲು ಇಬ್ಬರು ಅರ್ಹ ಫಲಾನುಭವಿಗಳ ಆಯ್ಕೆ ಸಂಬಂಧ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫಲಾನುಭವಿಯು ಕನಿಷ್ಠ 5 ರಾಸು ಹೊಂದಿರಬೇಕು ಹಾಗೂ ಕೊಟ್ಟಿಗೆ ನಿರ್ಮಾಣಕ್ಕೆ ಸೂಕ್ತ ಜಾಗ ಲಭ್ಯತೆ ಇರಬೇಕು. ಈ ಯೋಜನೆಯಡಿ ಶೇ. 50 ರಷ್ಟು ಸಹಾಯಧನ ನೀಡಲಾಗುವುದು.
ಅರ್ಹ ಫಲಾನುಭವಿಗಳನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಲ್ಲಿ ಆಯ್ಕೆ ಮಾಡಲಿದ್ದು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಹಿಳೆಯರಿಗೆ/ ಅಂಗವಿಕಲರಿಗೆ ಇತರರಿಗೆ ನಿಯಮಾನುಸಾರ ಆದ್ಯತೆ ನೀಡಲಾಗುವುದು. ಪ್ರಕಟಣೆ ಹೊರಡಿಸಿದ 15 ದಿನಗಳೊಳಗಾಗಿ ಆಯಾ ತಾಲ್ಲೂಕು ಸಹಾಯಕ ನಿರ್ದೇಶಕರುಗಳಲ್ಲಿ ಅರ್ಜಿಯನ್ನು ಸ್ವೀಕರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಗೌರಿಗಣೇಶ ಮೂರ್ತಿಗಳನ್ನು ಮಾರಾಟ ಮಾಡುವ ವ್ಯಾಪಾರಸ್ಥರಿಗೆ ಸೂಚನೆ
ಮಂಡ್ಯ ನಗರಸಭಾ ವ್ಯಾಪ್ತಿಯಲ್ಲಿ ಮಣ್ಣಿನ ಗೌರಿ ಗಣೇಶ ಮೂರ್ತಿಗಳನ್ನು ಮಾರಾಟ ಮಾಡುವ ವ್ಯಾಪಾರಸ್ಥರಿಗೆ ಹಾಗೂ ಸಾರ್ವಜನಿಕರು ಆಗಸ್ಟ್ 28 ಹಾಗೂ 29ರಂದು ಗೌರಿ, ಗಣೇಶ ಆಚರಣೆ ಪ್ರಯುಕ್ತ, ಗೌರಿ, ಗಣೇಶ ಮೂರ್ತಿಗಳನ್ನು ತಯಾರಿಸಲು ಹಾಗೂ ಮಾರಾಟ ಮಾಡಲು ಸಾರ್ವಜನಿಕ ಹಿತದೃಷ್ಟಿಯಿಂದ ಪೊಲೀಸ್ ಇಲಾಖೆ ಹಾಗೂ ನಗರಸಭೆಯಿಂದ ನಿಗಧಿಪಡಿಸಿರುವ ನಗರಸಭೆ ವ್ಯಾಪ್ತಿಯಲ್ಲಿ ಬರುವ ಸಂತೆ ಮಾಳ, ಕಲಾಮಂದಿರದ ಹಿಂಭಾಗ, ಗುತ್ತಲು ಮಾರುತಿ ನಗರ ಆಟೋ ಸ್ಟ್ಯಾಂಡ್ ಬಳಿ (ರ) ಹಾಗೂ ಸ್ವರ್ಣಸಂದ್ರ ಆಟೋ ನಿಲ್ದಾಣದ ಬಳಿ ಇರುವ ಸ್ಥಳಗಳಲ್ಲಿ ಮಾತ್ರ ಅನುಮತಿ ಪಡೆದು ಮಣ್ಣಿನ ಮೂರ್ತಿಗಳನ್ನು ಮಾತ್ರ ಮಾರಾಟ ಮಾಡುವುದು. ತಪ್ಪಿದಲ್ಲಿ ನಗರಸಭೆ ಹಾಗೂ ಪೊಲೀಸ್ ಇಲಾಖೆ ವತಿಯಿಂದ ತೆರವುಗೊಳಿಸಲಾಗುವುದು ಎಂದು ಮಂಡ್ಯ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೋಷಕರ ಪತ್ತೆಗೆ ಸಹಕರಿಸಲು ಮನವಿ
ಆಗಸ್ಟ್ 4 ರಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಬಂದ ದೂರವಾಣಿಯ ಕರೆಯ ಮೂಲಕ ಒಂದು ದಿನದ ಗಂಡು ಮಗು ಸಿಕ್ಕಿರುವ ಬಗ್ಗೆ ಬಂದ ಮಾಹಿತಿಯನ್ವಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಡಾ.ಎಸ್. ದಿವಾಕರ್ ರವರು ಹಾಗೂ ಅವರ ಸಿಬ್ಬಂದಿ ವರ್ಗದವರಾದ ಕು.ಮಾನಸ, ಸಮಾಜ ಕಾರ್ಯಕರ್ತರು, ಕು.ಪವಿತ್ರ, ಔಟ್‍ರೀಚ್ ವರ್ಕರ್ ಹಾಗೂ ಶಂಕರ್, ಔಟ್‍ರೀಚ್ ವರ್ಕರ್ ಇವರನ್ನು ಒಳಗೊಂಡ ತಂಡ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಬ್ಬಲಗೆರೆಪುರ ಗ್ರಾಮಕ್ಕೆ ತೆರಳಿ ಶ್ರೀ. ಚಿಕ್ಕಯ್ಯ ಹಾಗೂ ಶ್ರೀಮತಿ. ಭಾಗ್ಯಮ್ಮರವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಒಂದು ವಾರದ ಗಂಡು ಮಗುವನ್ನು ವಶಕ್ಕೆ ಪಡೆಯಲಾಗಿರುತ್ತದೆ.
ಮಗುವನ್ನು ವಶಕ್ಕೆ ಪಡೆದ ನಂತರ, ಮಗುವನ್ನು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿ, ಸಮಿತಿಯ ಆದೇಶದಂತೆ ಮೇಲುಕೋಟೆಯ ಜನಪದ ಸೇವಾ ಟ್ರಸ್ಟ್ ವಶಕ್ಕೆ ನೀಡಲಾಗಿದೆ. ಮಗುವಿನ ತಂದೆ-ತಾಯಿ ಅಥವಾ ಪೋಷಕರು ಇದ್ದಲ್ಲಿ ಡಾ.ಎಸ್. ದಿವಾಕರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಮಂಡ್ಯ ಅಥವಾ ಮುಜೀಬ್ ಉನ್ನಿಸಾ, ಅಧ್ಯಕ್ಷರು, ಮಕ್ಕಳ ಕಲ್ಯಾಣ ಸಮಿತಿ, ಮಂಡ್ಯ ಇವರನ್ನು ಸಂಪರ್ಕಿಸಿ, ಮಗುವಿನ ಬಗ್ಗೆ ಪೂರಕ ದಾಖಲೆಗಳನ್ನು ಹಾಜರು ಪಡಿಸಿ ಮಗುವನ್ನು ವಶಕ್ಕೆ ಪಡೆಯಬಹುದಾಗಿದೆ.
ಮನೆಗೆ ಒಂದು ಶೌಚಾಲಯ ನಿರ್ಮಾಣಕ್ಕೆ ಕರೆ
ಗ್ರಾಮೀಣ ಭಾಗದಲ್ಲಿ ಜನರು ಸ್ವಚ್ಛತೆಗೆ ಆದ್ಯತೆ ನೀಡಿ ಮನೆಗೆ ಒಂದು ಶೌಚಾಲಯವನ್ನು ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರೋಹಿಣಿ ಸಿಂಧೂರಿ ಅವರು ತಿಳಿಸಿದರು.
ಅವರು ಸೋಮವಾರ ಸಂತೆಕಲಸಗೆರೆ ಗ್ರಾಮ ಪಂಚಾಯಿತಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಏರ್ಪಡಿಸಲಾಗಿದ್ದ ಬೀದಿ ನಾಟಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮಕ್ಕಳು ತಮ್ಮ ಮನೆಯಿಂದಲೇ ಸ್ವಚ್ಛತೆಯನ್ನು ರೂಢಿಸಿಕೊಳ್ಳುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಮನೆಯಲ್ಲಿಯೂ ಶೌಚಾಲಯ ನಿರ್ಮಾಣ ಮಾಡಿಕೊಳ್ಳಬೇಕು ಎಂದು ತಿಳಿಸಿದ ಅವರು ಬಯಲು ಬಹಿರ್ದೆಸೆಯಿಂದ ಆಗುವ ಅನಾನುಕೂಲಗಳ ಬಗ್ಗೆ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಸಮರ್ಪಣ ಸಾಂಸ್ಕøತಿಕ ಕಲಾ ಬಳಗ ಮತ್ತು ಶಿವಗಂಗಾ ಸಾಂಸ್ಕøತಿಕ ಕಲಾಬಳಗದ ಕಲಾವಿದರಿಂದ ಶೌಚಾಲಯ ನಿರ್ಮಾಣದಿಂದ ಆಗುವ ಅನುಕೂಲ ಮತ್ತು ಸ್ವಚ್ಛತೆಯ ಬಗ್ಗೆ ಬೀದಿ ನಾಟಕದ ಮೂಲಕ ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಈ ಕಾರ್ಯಕ್ರಮದಲ್ಲಿ ಸಂತೆಕಸಲಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಲಕ್ಷ್ಮೀನಾಗರಾಜ್, ಗ್ರಾಮ ಪಂಚಾಯಿತಿ ಸದಸ್ಯರಾದ ಭೋಮಿಗೌಡ, ಜಿಲ್ಲಾ ವಾರ್ತಾಧಿಕಾರಿಗಳಾದ ಆರ್.ರಾಜು, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪಿ.ಶಿವಣ್ಣ, ರಾಜೀವ ಪ್ರಶಸ್ತಿ ವಿಜೇತರಾದ ನಟರಾಜ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು
No comments:
Post a Comment