Sunday, 31 August 2014

ಹಲ್ಲೇಗೆರೆಯಲ್ಲಿ ಸೆ.7 ರಂದು ಉಚಿತ ಕಣ್ಣಿನ ಪೊರೆ ತಪಾಸಣಾ ಶಿಬಿರ
ಮಂಡ್ಯ ತಾಲೂಕು ಹಲ್ಲೇಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಅಮೆರಿಕಾದ ಸ್ಕೋಪ್ ಫೌಂಡೇಷನ್ ವತಿಯಿಂದ ಸೆ.7 ರಂದು ಭಾನುವಾರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಉಚಿತ ಕಣ್ಣಿನ ಪೊರೆ ತಪಾಸಣಾ ಶಿಬಿರ ಮತ್ತು ಆಧುನಿಕ ಶಸ್ತ್ರ ಚಿಕಿತ್ಸೆ ಮೂಲಕ ಐಒಎಲ್ ಅಳವಡಿಕೆ ಶಿಬಿರ ಆಯೋಜಿಸಲಾಗಿದೆ. ಮೈಸೂರಿನ ಭಗವಾನ್ ಮಹಾವೀರ ದರ್ಶನ್ ಆಸ್ಪತ್ರೆಯ ಕಣ್ಣಿನ ತಜ್ಞ ಡಾ.ಭರತ್‍ಕುಮಾರ್ ಸೋಲಂಕಿ ಮತ್ತಿತರರ ತಜ್ಞ ವೈದ್ಯರು ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಶಸ್ತ್ರ ಚಿಕಿತ್ಸೆಯನ್ನು ಮೈಸೂರಿನ ಮಹಾವೀರ್ ಆಸ್ಪತ್ರೆಯಲ್ಲಿ ಉಚಿತವಾಗಿ ಮಾಡಲಾಗುವುದು.ಕನ್ನಡಕವನ್ನು ಉಚಿತವಾಗಿ ನೀಡಲಾಗುವುದು. 2 ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಬೇಕು. ಹೆಚ್ಚಿನ ವಿವರಗಳಿಗೆ ಡಾ.ವೆಂಕಟೇಶ್-9986210736, ಡಾ.ಎಚ್.ಎನ್.ಎಲ್.ಮೂರ್ತಿ-08232-273215 ಅವರನ್ನು ಸಂಪರ್ಕಿಸಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.

No comments:

Post a Comment