ಮಂಡ್ಯ: ಮಧುರ ಮಂಡ್ಯ ಲಯನ್ಸ್ ಸಂಸ್ಥೆ ವತಿಯಿಂದ ಗೌರಿ-ಗಣೇಶ ಹಬ್ಬದ ಅಂಗವಾಗಿ ಕ್ಯಾತುಂಗೆರೆಯ ವಿಕಸನ ಜೋಗುಳ ದತ್ತು ಸೇವಾ ಕೇಂದ್ರ ಹಾಗೂ ಬಾಲ ಕಾರ್ಮಿಕರ ವಿಶೇಷ ವಸತಿ ಶಾಲೆಯ ಮಕ್ಕಳಿಗೆ ನೋಟ್‍ಬುಕ್ ಮತ್ತು ಸಮವಸ್ತ್ರ ವಿತರಿಸಲಾಯಿತು.
ಅಧ್ಯಕ್ಷ ಬಿ.ಎಂ.ಅಪ್ಪಾಜಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅನಾಥ ಮಕ್ಕಳನ್ನು ಸಾಕಿ ಸಲುಹಿತ್ತಿರುವ ಸಂಸ್ಥೆಯ ಕಾರ್ಯ ಶ್ಲಾಘನೀಯವಾದುದು. ಸಮಾಜ ಕಣ್ಣು ತೆರೆಯುವ ಕೆಲಸವನ್ನು ಸಂಘಸಂಸ್ಥೆಗಳು ಮಾಡುತ್ತಿದ್ದು, ದಾನಿಗಳು ಕೈಜೋಡಿಸಬೇಕು ಎಂದು ಹೇಳಿದರು.
ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾದ ಮಕ್ಕಳನ್ನು ಪೆÇೀಷಣೆ ಮಾಡುವ ಜೊತೆಗೆ ವಿಧ್ಯಾಬ್ಯಾಸ ನೀಡಿ, ಅವರನ್ನು ಸಮಾಜ ಮುಖಿಗೆ ತರುವ ಪ್ರಯತ್ನ ಮಾಡಲಾಗುತ್ತಿದೆ. ಲಯನ್ಸ್ ಸಂಸ್ಥೆಯು ಹಲವಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅನಾಥ ಮಕ್ಕಳ ವಿದ್ಯಾಭ್ಯಾಸಕ್ಕೂ ನೆರವಾಗಿದೆ ಎಂದರು.
ಲಯನ್ಸ್ ಸಂಸ್ಥೆ ಗ್ರಾಮೀಣ ಪ್ರದೇಶದಲ್ಲಿಯೂ ಸಮಾಜ ಸೇವೆ ಮಾಡುತ್ತಿದ್ದು, ಸಮವಸ್ತ್ರ, ನೋಟ್‍ಬುಕ್ ವಿತರಣೆ ಮಾಡಲಾಗುತ್ತಿದೆ. ಬಾಲ ಕಾರ್ಮಿಕರ ರಕ್ಷಣೆ, ನೊಂದವರಿಗೆ ನೆರವು ನೀಡುತ್ತಿದ್ದೇವೆ ಎಂದು ತಿಳಿಸಿದರು.
ತಾಪಂ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು, ಲಯನ್ಸ್ ವಲಯಾಧ್ಯಕ್ಷ ಆನಂದ್, ಕಾರ್ಯದರ್ಶಿ ಸಿದ್ದರಾಮೇಗೌಡ, ಪ್ರಾಂತೀಯ ಅಧ್ಯಕ್ಷ ನಾರಾಯಣಸ್ವಾಮಿ, ಲಯನ್ಸ್ ಸಂಸ್ಥೆಯ ಕರಿಯಪ್ಪ, ಬಿ.ಕೆ.ಮಾದು, ಮಹೇಶ್, ವಿಕಸನ ಸಂಸ್ಥೆಯ ಮಹೇಶ್ ಚಂದ್ರಗುರು ಇತರರು ಭಾಗವಹಿಸಿದ್ದರು.

No comments:
Post a Comment