Saturday, 23 August 2014

ಮಂಡ್ಯ-ಅನಂತಮೂರ್ತಿ ನಿಧನಕ್ಕೆ ಗಣ್ಯರ ಸಂತಾಪ

ಅನಂತಮೂರ್ತಿ ನಿಧನಕ್ಕೆ ಗಣ್ಯರ ಸಂತಾಪ
ಮಂಡ್ಯ: ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ಸಾಹಿತಿ ಡಾ.ಯು.ಆರ್.ಅನಂತಮೂರ್ತಿ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಂಬರೀಷ್, ಸಂಸದ ಸಿ.ಎಸ್.ಪುಟ್ಟರಾಜು, ಜಿ.ಪಂ. ಅಧ್ಯಕ್ಷೆ ಮಂಜುಳಾ ಪರಮೇಶ್, ಶಾಸಕರಾದ ಎನ್.ಚಲುವರಾಯಸ್ವಾಮಿ, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶ್‍ಗೌಡ, ಕನ್ನಡ ಸಾಹಿತ್ಯ ಪರಿಷತ್‍ನ ಮಾಜಿ ಅಧ್ಯಕ್ಷ ಡಾ.ಎಚ್.ಎಸ್.ಮುದ್ದೇಗೌಡ, ನಗರಸಭಾಧ್ಯಕ್ಷ ಸಿದ್ದರಾಜು ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
ಅನಂತಮೂರ್ತಿ ಅವರ ನಿಧನದಿಂದಾಗಿ ಸಾಹಿತ್ಯ ಲೋಕ ಬರುಡಾಗಿದ್ದು, ಹೊಸ ತಲೆಮಾರಿನ ಸಾಹಿತ್ಯ ಲೋಕಕ್ಕೆ ಸಂಸ್ಕಾರವನ್ನು ಕಲಿಸಿಕೊಟ್ಟ ಅನಂತಮೂರ್ತಿ ಅವರಿಗೆ ಚಿರಶಾಂತಿ ಲಭಿಸಲಿ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

No comments:

Post a Comment