Wednesday, 17 September 2014

ಕಬಡ್ಡಿ ಪಂದ್ಯಾವಳಿಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ
ಮಂಡ್ಯ ಸೆ.17 . ಶ್ರೀರಂಗಪಟ್ಟಣ ತಾಲ್ಲೂಕಿನ ಬಿದರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಬಾಲಕರು ದಿನಾಂಕ 15-9-2014 ಹಾಗೂ 16-9-2014 ರಂದು ಮಂಡ್ಯ ವಿ.ಸಿ. ಫಾರಂನಲ್ಲಿ ನಡೆದ 14 ವರ್ಷದೊಳಗಿನ ಬಾಲಕರ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದು, ದಿನಾಂಕ 19-9-2014 ರಂದು ನಡೆಯುವ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.  
ಸರ್.ಎಂ.ವಿಶ್ವೇಶ್ವರಯ್ಯ ಜನ್ಮ ದಿನಾಚರಣೆ:ಕಾಲೇಜು ಮಟ್ಟದ ಪ್ರಬಂಧ ಸ್ಪರ್ಧೆ
ಕೆ.ಆರ್.ಪೇm:É ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ಸರ್.ಎಂ.ವಿಶ್ವೇಶ್ವರಯ್ಯ ಅವರ 154ನೇ ಜನ್ಮ ದಿನಾಚರಣೆಯ ಪ್ರಯುಕ್ತ ತಾಲ್ಲೂಕು ಮಟ್ಟದ ಪದವಿ ಪೂರ್ವ, ಪದವಿ ಇಂಜಿನಿಯರಿಂಗ್ ಡಿಪ್ಲೊಮಾ, ಬಿ.ಎಡ್, ಡಿಎಡ್, ಐಟಿಐ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಸೆ. 27ರ ಶನಿವಾರ ಬೆಳಿಗ್ಗೆ 11ಕ್ಕೆ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ.
ಪ್ರಬಂಧದ ವಿಷಯ “ಪ್ರಸ್ತುತ ಕೈಗಾರಿಕಾ ತಂತ್ರಜ್ಞಾನದಲ್ಲಿ ಸರ್.ಎಂ.ವಿಶ್ವೇಶ್ವರಯ್ಯರವರ ಪಾತ್ರ” ವಾಗಿದ್ದು, ಪ್ರತಿ ಕಾಲೇಜಿನಿಂದ ಇಬ್ಬರು ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದು. ಹೆಸರು ನೋಂದಾಯಿಸಲು ಸೆಪ್ಟೆಂಬರ್ 25 ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಚಾಲಕರಾದ ಡಿ.ಎಸ್.ಧನಂಜಯ್ಯ ಸಹಾಯಕ ಪ್ರಾಧ್ಯಾಪಕರು 87225-94966, ಕೆಂಪಯ್ಯ ಎ. ಸಹಾಯಕ ಪ್ರಾಧ್ಯಾಪಕರು 99808-88695 ಮತ್ತು ರಾಘವೇಂದ್ರ ಎಸ್.ಜಿ ಸಹಾಯಕ ಪ್ರಾಧ್ಯಾಪಕರು 99645-85008 ಗೆ ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹೆಚ್.ಎಲ್.ಮಹಾದೇವ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No comments:

Post a Comment