ಸೆ.5 ರಂದು ಶಿಕ್ಷಕರ ದಿನಾಚರಣೆ
ಮಂಡ್ಯ, ಸೆ.02.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್ 5 ರಂದು ಬೆಳಿಗ್ಗೆ 10.00 ಗಂಟೆಗೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವÀರಾದ ಡಾ|| ಎಂ.ಹೆಚ್. ಅಂಬರೀಷ್ ಅವರು ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮಂಜುಳಾ ಪರಮೇಶ್, ಲೋಕಸಭಾ ಸದಸ್ಯರಾದ ಸಿ.ಎಸ್. ಪುಟ್ಟರಾಜು, ರಾಜ್ಯಸಭಾ ಸದಸ್ಯ ಕೆ.ರೆಹಮಾನ್ ಖಾನ್, ವಿಧಾನಸಭೆಯ ಶಾಸಕರುಗಳಾದ ಎನ್. ಚೆಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿ, ಕೆ.ಎಸ್.ಪುಟ್ಟಣ್ಣಯ್ಯ, ರಮೇಶ್‍ಬಾಬು ಬಂಡೀಸಿದ್ದೇಗೌಡ, ಕೆ.ಸಿ.ನಾರಾಯಣಗೌಡ, ಡಿ.ಸಿ.ತಮ್ಮಣ್ಣ ಹಾಗೂ ವಿಧಾನ ಪರಿಷತ್ ಸದಸ್ಯರುಗಳಾದ ವಿಮಲಾಗೌಡ, ಮರಿತಿಬ್ಬೇಗೌಡ, ಅಶ್ವಥ್ ನಾರಾಯಣ್, ಡಿ.ಎಸ್.ವೀರಯ್ಯ, ಬಿ. ರಾಮಕೃಷ್ಣ, ಗೋ.ಮಧುಸೂದನ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಸುಜಾತ ನಾಗೇಂದ್ರ, ಜಿಲ್ಲಾ ಪಂಚಾಯ್‍ನ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ವಿಜಯಾನಂದ್, ನಗರಸಭಾ ಅಧ್ಯಕ್ಷರಾದ ಬಿ.ಸಿದ್ದರಾಜು, ಮಂಡ್ಯ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಟಿ.ಸಿ.ಶಂಕರೇಗೌಡ, ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಂಜೀವ್ ಕುಮಾರ್ ರವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಗೌರವಧನದ ಆಧಾರದ ಮೇಲೆ ನೇಮಕಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಮಂಡ್ಯ ತಾಲ್ಲೂಕು, ದುದ್ದ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಕೇಂದ್ರಗಳಾದ ಕೀಲಾರ-1(ಪ.ಜಾತಿ), ತಾಳೆಮೇಳೆದೊಡ್ಡಿ(ಸಾಮಾನ್ಯ), ಮಾಡವೀರನಹಳ್ಳಿ(ಮಿನಿ)(ಸಾಮಾನ್ಯ), ಹೆಗ್ಗಡತಹಳ್ಳಿ (ಮಿನಿ)(ಸಾಮಾನ್ಯ) ಅಂಗನವಾಡಿ ಕಾರ್ಯಕರ್ತೆಯರ ಹಾಗೂ 01 ಅಂಗನವಾಡಿ ಸಹಾಯಕಿಯ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ತಮ್ಮ ಸ್ವಂತ ಕೈ ಬರಹದಲ್ಲಿ ಸ್ಪಷ್ಟವಾಗಿ ಭರ್ತಿ ಮಾಡಿ ದೃಢೀಕರಿಸಿದ ದಾಖಲೆಗಳು ಹಾಗೂ ಇತ್ತೀಚಿನ ಭಾವಚಿತ್ರದೊಡನೆ ಸೆಪ್ಟೆಂಬರ್ 25ರ ಸಂಜೆ 5.00 ಗಂಟೆಯೊಳಗೆ ಅರ್ಜಿ ಸಲ್ಲಿಸುವುದು. ಅರ್ಜಿಯನ್ನು ಟೆಂಡರ್ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು. ಅರ್ಜಿಯೊಂದಿಗೆ ಯಾವುದೇ ಅಗತ್ಯ ದಾಖಲೆಗಳನ್ನು ಸಲ್ಲಿಸದೆ ಇದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಛೇರಿ ವೇಳೆಯಲ್ಲಿ ದುದ್ದ, ಶಿಶು ಅಭಿವೃದ್ಧಿ ಯೋಜನಾಧಿಕಾರಿ (ದೂರವಾಣಿ ಸಂ: 08232-227575) ಯವರನ್ನು ಸಂಪರ್ಕಿಸಬಹುದಾಗಿದೆ.
ಉದ್ಯೋಗ ಮೇಳ
ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯ ವತಿಯಿಂದ ಸೆಪ್ಟೆಂಬರ್ 6 ರಂದು ಬೆಳಿಗ್ಗೆ 10.30ಕ್ಕೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಪ್ರಾದೇಶಿಕ ಸಾರಿಗೆ ಕಛೇರಿ ಎದುರು, ಮಂಡ್ಯ ಇಲ್ಲಿ 18 ರಿಂದ 30 ವರ್ಷ ವಯೋಮಿತಿಯೊಳಗಿನ ಪಿ.ಯು.ಸಿ./ಯಾವುದೇ ಪದವಿ, ಎಂ.ಬಿ.ಎ. (ಹೆಚ್‍ಆರ್ ಮಾರ್ಕೆಂಟಿಂಗ್) ನಲ್ಲಿ ಉತ್ತೀರ್ಣರಾದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳನ್ನು ಎಇಜಿಐಎಸ್ ಬೆಂಗಳೂರು ಮತ್ತು ಎಸ್‍ಇಆರ್‍ಸಿಒ ಬಿಪಿಒ ಸರ್ವೀಸಸ್ ಬೆಂಗಳೂರು ಇವರು ಎಕ್ಸಿಕ್ಯೂಟೀವ್ಸ್, ಅಡ್ಮಿನ್, ಸಿಆgಎಂ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲು ಉದ್ಯೋಗ ಮೇಳ ಆಯೋಜಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಮೂಲ ದಾಖಲಾತಿಗಳೊಂದಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗುವುದು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 08232-220126/2394300ನ್ನು ಸಂಪರ್ಕಿಸುವುದು.
ರಾಜಿ ಸಂಧಾನದ ಮೂಲಕ ವ್ಯಾಜ್ಯ ಇತ್ಯರ್ಥಕ್ಕೆ ಮನವಿ
ಮಂಡ್ಯ ಜಿಲ್ಲೆಯ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಂಡ್ಯ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ತಾಲ್ಲೂಕು ಕಾನೂನು ಸೇವಾ ಸಮಿತಿಗಳಲ್ಲಿ 2014ರ ಸೆಪ್ಟೆಂಬರ್ 1 ರಿಂದ ಡಿಸೆಂಬರ್ 6 ರವರೆಗೆ ರಾಷ್ಟ್ರೀಯ ಜನತಾ ನ್ಯಾಯಾಲಯ ನಡೆಸಲಾಗುತ್ತಿದ್ದು, ಇಲ್ಲಿ ರಾಜಿ ಸಂಧಾನದ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾದಿಕಾರದ ಸದಸ್ಯ ಕಾರ್ಯದರ್ಶಿಗಳೂ ಆಗಿರುವ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸದಾನಂದ ಎಂ ದೊಡ್ಡಮನಿ ಅವರು ತಿಳಿಸಿದ್ದಾರೆ.
ನ್ಯಾಯಾಲಯಕ್ಕೆ ದಾಖಲಾಗದ ವ್ಯಾಜ್ಯಪೂರ್ವ ಪ್ರಕರಣಗಳು ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿಯಾಗಬಹುದಾದ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗುತ್ತದೆ. ಜನತಾ ನ್ಯಾಯಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳುವುದರ ಮೂಲಕ ವ್ಯಾಜ್ಯ ಮುಕ್ತ ಜೀವನವನ್ನು ನಡೆಸಬಹುದಾಗಿರುತ್ತದೆ. ರಾಜಿಯಾಗಬಹುದಾದ ಪ್ರಕರಣಗಳನ್ನು ಜನತಾ ನ್ಯಾಯಾಲಯದಲ್ಲಿ ರಾಜಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ ನ್ಯಾಯಾಲಯದ ಆವರಣದಲ್ಲಿರುವ ತಾಲ್ಲೂಕು ಕಾನೂನು ಸೇವಾ ಸಮಿತಿ ಅಥವಾ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸುವಂತೆ ಅವರು ತಿಳಿಸಿದ್ದಾರೆ.

No comments:
Post a Comment