Friday, 5 September 2014

ಡಾ.ಎಂ.ಹೆಚ್.ಮರಿಗೌಡ ರಾಜ್ಯಮಟ್ಟದ ಅತ್ಯುತ್ತಮ ತೋಟಗಾರಿಕಾ
ರೈತ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಂಡ್ಯ, ಸೆ.05 .ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಇವರ ವತಿಯಿಂದ ಕೃಷಿ ಮೇಳ-2014ರ ಡಾ.ಎಂ.ಹೆಚ್.ಮರಿಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ ನೀಡಲು  ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ರೈತರು ಅರ್ಜಿಗಳನ್ನು  ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ ಅಥವಾ ಕೃಷಿ ವಿಜ್ಞಾನ ಕೇಂದ್ರ, ವಿ.ಸಿ.ಫಾರಂ, ಮಂಡ್ಯ, ಇವರಿಂದ ಪಡೆಯುವುದು. ಅರ್ಜಿ ನಮೂನೆಯನ್ನು ಕೃಷಿ ವಿಶ್ವವಿದ್ಯಾನಿಲಯದ ವೆಬ್‍ಸೈಟ್ ತಿತಿತಿ.uಚಿsbಚಿಟಿgಚಿಟoಡಿe.eಜu.iಟಿ ನಿಂದಲೂ ಪಡೆಯಬಹುದು.
 ಭರ್ತಿ ಮಾಡಿದ ಅರ್ಜಿಗಳನ್ನು ಕಾರ್ಯಕ್ರಮ ಸಂಯೋಜಕರು, ಕೃಷಿ ವಿಜ್ಞಾನ ಕೇಂದ್ರ, ವಿ.ಸಿ.ಫಾರಂ, ಮಂಡ್ಯ ಇವರ ಮುಖಾಂತರ ಅಕ್ಟೋಬರ್ 10 ರೊಳಗೆ ವಿಸ್ತರಣಾ ನಿರ್ದೇಶಕರು, ವಿಸ್ತರಣಾ ನಿರ್ದೇಶನಾಲಯ, ಕೃಷಿ ವಿಶ್ವವಿದ್ಯಾನಿಲಯ, ಹೆಬ್ಬಾಳ, ಬೆಂಗಳೂರು-24  ಇಲ್ಲಿಗೆ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಿದೆ.
ಕಾರ್ಪ್‍ರೈತ ಪ್ರಶಸ್ತಿಗೆ ಅರ್ಜಿ ಆಹ್ವಾನ
ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಕೃಷಿ ಮೇಳ-2014ರ ಸಂದರ್ಭದಲ್ಲಿ ಕಾರ್ಪೋರೇಷನ್ ಬ್ಯಾಂಕ್ ಪ್ರಾಯೋಜಿತ ಕಾರ್ಪ್ ರೈತ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದ್ದು ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಯನ್ನು ಸಮಗ್ರ ಕೃಷಿಯಲ್ಲಿ (IಈS) ತೊಡಗಿರುವ ಒಬ್ಬ ಪ್ರಗತಿಪರ ರೈತ ಹಾಗೂ ಒಬ್ಬ ರೈತ ಮಹಿಳೆಯರಿಗೆ ಮಾತ್ರ ನೀಡಲಾಗುವುದು.  ಈ ಪ್ರಶಸ್ತಿಯು ಪ್ರಶಸ್ತಿ ಪತ್ರ ಹಾಗೂ ರೂ 10,000/-ಗಳ ನಗದು ಬಹುಮಾನವನ್ನು ಒಳಗೊಂಡಿರುತ್ತದೆ. ಆಸಕ್ತ ರೈತರು ಅರ್ಜಿಗಳನ್ನು ಕೃಷಿ ವಿಜ್ಞಾನ ಕೇಂದ್ರ, ವಿ.ಸಿ.ಫಾರಂ, ಮಂಡ್ಯ, ಜಂಟಿ ಕೃಷಿ ನಿರ್ದೇಶಕರು, ಕೃಷಿ ಇಲಾಖೆ,  ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಉಪ ನಿರ್ದೇಶಕರು, ರೇμÉ್ಮ ಇಲಾಖೆ, ಉಪ ನಿರ್ದೇಶಕರು, ಮೀನುಗಾರಿಕೆ ಇಲಾಖೆ,  ಉಪ ನಿರ್ದೇಶಕರು, ಪಶು ಸಂಗೋಪನಾ ಇಲಾಖೆ ಮತ್ತು ಜಿಲ್ಲಾ ಜಲಾನಯನ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ ಜಲಾನಯನ ಅಭಿವೃದ್ಧಿ ಇಲಾಖೆ, ಮಂಡ್ಯ ಇವರಿಂದ ಪಡೆಯಬಹುದು.
ಅರ್ಜಿ ನಮೂನೆಯನ್ನು ಕೃಷಿ ವಿಶ್ವವಿದ್ಯಾನಿಲಯದ ವೆಬ್‍ಸೈಟ್ ತಿತಿತಿ.uಚಿsbಚಿಟಿgಚಿಟoಡಿe.eಜu.iಟಿ ನಿಂದಲೂ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಕಾರ್ಯಕ್ರಮ ಸಂಯೋಜಕರು, ಕೃಷಿ ವಿಜ್ಞಾನ ಕೇಂದ್ರ, ವಿ.ಸಿ.ಫಾರಂ, ಮಂಡ್ಯ ಇವರ ಮುಖಾಂತರ 10.10.2014ರ ಒಳಗೆ ವಿಸ್ತರಣಾ ನಿರ್ದೇಶಕರು, ವಿಸ್ತರಣಾ ನಿರ್ದೇಶನಾಲಯ, ಕೃಷಿ ವಿಶ್ವವಿದ್ಯಾನಿಲಯ, ಹೆಬ್ಬಾಳ, ಬೆಂಗಳೂರು - 24  ಇಲ್ಲಿಗೆ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯ  ಮಟ್ಟದ ರೈತ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸಮಗ್ರ ಕೃಷಿ ಪದ್ಧತಿಯನ್ನು ತೊಡಗಿಸಿಕೊಂಡಿರುವ ಒಬ್ಬ ರೈತ ಅಥವಾ ರೈತ ಮಹಿಳೆಯರಿಗೆ ದಿವಂಗತ  ಸಿ. ಭೈರೇಗೌಡ ರಾಜ್ಯ ಮಟ್ಟದ ರೈತ ಪ್ರಶಸ್ತಿ  ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿಯನ್ನು ಕೃಷಿ ವಿಜ್ಞಾನ ಕೇಂದ್ರ, ವಿ.ಸಿ.ಫಾರಂ, ಮಂಡ್ಯ, ಜಂಟಿ ಕೃಷಿ ನಿರ್ದೇಶಕರು, ಕೃಷಿ ಇಲಾಖೆ,  ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಉಪ ನಿರ್ದೇಶಕರು, ರೇμÉ್ಮ ಇಲಾಖೆ, ಉಪ ನಿರ್ದೇಶಕರು, ಮೀನುಗಾರಿಕೆ ಇಲಾಖೆ, ಉಪ ನಿರ್ದೇಶಕರು, ಪಶು ಸಂಗೋಪನಾ ಇಲಾಖೆ ಮತ್ತು ಜಿಲ್ಲಾ ಜಲಾನಯನ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ ಜಲಾನಯನ ಅಭಿವೃದ್ಧಿ ಇಲಾಖೆ, ಮಂಡ್ಯ ಇವರಿಂದ ಪಡೆಯಬಹುದು.   ಅರ್ಜಿ ನಮೂನೆಯನ್ನು ಕೃಷಿ ವಿಶ್ವವಿದ್ಯಾನಿಲಯದ ವೆಬ್‍ಸೈಟ್ ತಿತಿತಿ.uಚಿsbಚಿಟಿgಚಿಟoಡಿe.eಜu.iಟಿ ನಿಂದಲೂ ಪಡೆಯಬಹುದು.
 ಭರ್ತಿ ಮಾಡಿದ ಅರ್ಜಿಗಳನ್ನು ಶಿಫಾರಸ್ಸಿನೊಂದಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೃಷಿ ಇಲಾಖೆ, ಮಂಡ್ಯ ಅಥವಾ ಕಾರ್ಯಕ್ರಮ ಸಂಯೋಜಕರು, ಕೃಷಿ ವಿಜ್ಞಾನ ಕೇಂದ್ರ, ವಿ.ಸಿ.ಫಾರಂ, ಮಂಡ್ಯ ಇವರ ಮುಖಾಂತರ 10.10.2014ರ ಒಳಗೆ ವಿಸ್ತರಣಾ ನಿರ್ದೇಶಕರು, ವಿಸ್ತರಣಾ ನಿರ್ದೇಶನಾಲಯ, ಕೃಷಿ ವಿಶ್ವವಿದ್ಯಾನಿಲಯ, ಹೆಬ್ಬಾಳ, ಬೆಂಗಳೂರು-24  ಇಲ್ಲಿಗೆ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಿದೆ.
ಜಿಲ್ಲಾ ಮಟ್ಟದ ಅತ್ಯುತ್ತಮ ರೈತ/ ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ
      ಜಿಲ್ಲಾ ಮಟ್ಟದ ಅತ್ಯುತ್ತಮ ರೈತ/ರೈತ ಮಹಿಳೆ ಪ್ರಶಸ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಜಿಲ್ಲೆಯ ಒಬ್ಬ ಪ್ರಗತಿಪರ ರೈತ/ರೈತ ಮಹಿಳೆಯನ್ನು ಆಯ್ಕೆ ಮಾಡಿ  ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ ಮತ್ತು ರೂ 2,000/-ಗಳ ನಗದು ನೀಡಲಾಗುವುದು.   ಅರ್ಜಿಯನ್ನು ಕೃಷಿ ವಿಜ್ಞಾನ ಕೇಂದ್ರ, ವಿ.ಸಿ.ಫಾರಂ, ಮಂಡ್ಯ, ಜಂಟಿ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಉಪ ನಿರ್ದೇಶಕರು, ರೇμÉ್ಮ ಇಲಾಖೆ, ಉಪ ನಿರ್ದೇಶಕರು ಮೀನುಗಾರಿಕೆ ಇಲಾಖೆ ಹಾಗೂ ಉಪ ನಿರ್ದೇಶಕರು ಪಶು ಸಂಗೋಪನಾ ಇಲಾಖೆ ಮಂಡ್ಯ ಇವರುಗಳಿಂದ ಪಡೆಯಬಹುದು. ಅರ್ಜಿ ನಮೂನೆಯನ್ನು ಕೃಷಿ ವಿಶ್ವವಿದ್ಯಾನಿಲಯದ ವೆಬ್‍ಸೈಟ್ ತಿತಿತಿ.uಚಿsbಚಿಟಿgಚಿಟoಡಿe.eಜu.iಟಿ ನಿಂದಲೂ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಶಿಫಾರಸ್ಸಿನೊಂದಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಮಂಡ್ಯ ಅಥವಾ ಕೃಷಿ ವಿಜ್ಞಾನ ಕೇಂದ್ರ, ವಿ.ಸಿ.ಫಾರಂ, ಮಂಡ್ಯ, ಇಲ್ಲಿಗೆ ಸೆಪ್ಟೆಂಬರ್ 30 ರೊಳಗೆ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

ತಾಲ್ಲೂಕು ಮಟ್ಟದ ಅತ್ಯುತ್ತಮ ಯುವ ರೈತ/ ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ
      ಕೃಷಿ ಮೇಳದಲ್ಲಿ ಕೃಷಿ ಪ್ರಶಸ್ತಿ ನೀಡಲು ಯುವ ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೇಳದಲ್ಲಿ ಪ್ರತಿ ತಾಲ್ಲೂಕಿನ ಒಬ್ಬ ಯುವ ಪ್ರಗತಿಪರ ರೈತ ಹಾಗೂ ಪ್ರಗತಿಪರ ರೈತ ಮಹಿಳೆಯನ್ನು ಆಯ್ಕೆ ಮಾಡಿ  ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ ಮತ್ತು ರೂ 1,000-00 (ಒಂದು ಸಾವಿರ ರೂಪಾಯಿ) ನಗದು ನೀಡಲಾಗುವುದು. ಅರ್ಜಿಯನ್ನು ಕೃಷಿ ವಿಜ್ಞಾನ ಕೇಂದ್ರ, ವಿ.ಸಿ.ಫಾರಂ, ಮಂಡ್ಯ, ಜಂಟಿ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಆಯಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು, ಹಿರಿಯ ಸಹಾಯಕ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಸಹಾಯಕ ನಿರ್ದೇಶಕರು, ರೇμÉ್ಮ ಇಲಾಖೆ, ಸಹಾಯಕ ನಿರ್ದೇಶಕರು, ಮೀನುಗಾರಿಕೆ ಇಲಾಖೆ,  ಸಹಾಯಕ ನಿರ್ದೇಶಕರು, ಪಶು ಸಂಗೋಪನಾ ಇಲಾಖೆ ಮತ್ತು ಹಾಗೂ ವಲಯ ಅರಣ್ಯಾಧಿಕಾರಿಗಳು ಇವರುಗಳಿಂದ ಪಡೆಯಬಹುದು.
       ಅರ್ಜಿಯನ್ನು ಕೃಷಿ ವಿಶ್ವವಿದ್ಯಾನಿಲಯದ ವೆಬ್‍ಸೈಟ್ ತಿತಿತಿ.uಚಿsbಚಿಟಿgಚಿಟoಡಿe.eಜu.iಟಿ ನಿಂದಲೂ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಶಿಫಾರಸ್ಸಿನೊಂದಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಮಂಡ್ಯ ಅಥವಾ ಕೃಷಿ ವಿಜ್ಞಾನ ಕೇಂದ್ರ, ವಿ.ಸಿ.ಫಾರಂ, ಮಂಡ್ಯ ಅಥವಾ ಆಯಾ ತಾಲ್ಲೂಕಿನ ಅಭಿವೃದ್ಧಿ ಇಲಾಖೆ ಇಲ್ಲಿಗೆ 30.09.2014ರ ಒಳಗೆ ತಲುಪಿಸಬೇಕೆಂದು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಜ್ಞಾನ ಕೇಂದ್ರ, ವಿ.ಸಿ.ಫಾರಂ, ಮಂಡ್ಯ, ದೂರವಾಣಿ : 08232-277456 ಮೊಬೈಲ್ : 94498 64250 ಸಂಪರ್ಕಿಸುವುದು.
ಗಿರಿಜನ ಉಪ ಯೋಜನೆಯಡಿ ಪತ್ರಿಕೋದ್ಯಮ ಪರವೀಧರರಿಗೆ ವೃತ್ತಿ
ಕೌಶಲ್ಯ/ನಿರೂಪಣಾ ಕೌಶಲ್ಯ ತರಬೇತಿ
       ಗಿರಿಜನ ಉಪ ಯೋಜನೆಯಡಿಯಲ್ಲಿ ಗಿರಿಜನ ಸಮುದಾಯಕ್ಕೆ ಸೇರಿದ ಪತ್ರಿಕೋದ್ಯಮ ಪದವಿ ಮತ್ತು   ಮತ್ತು ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ವೃತ್ತಿ ಕೌಶಲ್ಯ ಹಾಗೂ ನಿರೂಪಣಾ ಕೌಶಲ್ಯತೆ ರೂಢಿಸಿಕೊಳ್ಳಲು 2014-15ನೇ ಸಾಲಿನಲ್ಲಿ  ವಾರ್ತಾ ಇಲಾಖೆಯ ವತಿಯಿಂದ  ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮದ ಅನುಷ್ಟಾನಕ್ಕಾಗಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಒಟ್ಟು 30 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಬೇಕಾಗಿರುತ್ತದೆ. ವಿಶ್ವವಿದ್ಯಾನಿಲಯಗಳಲ್ಲಿ  ಪತ್ರಿಕೋದ್ಯಮ/ ಸಮೂಹ ಸಂವಹನ/ ವಿದ್ಯುನ್ಮಾನ ಮಾಧ್ಯಮ ಅಧ್ಯಯನ ವಿಭಾಗದ  ಪದವಿ ಅಥವಾ ಸ್ನಾತಕೋತ್ತರ ಪದವಿಯ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡಕ್ಕೆ ಸೇರಿದ ಹಿಂದಿನ ಅರ್ಹತಾ ಪರೀಕ್ಷೆಯಲ್ಲಿ  ಕನಿಷ್ಠ ಶೇಕಡ 50ರಷ್ಟು ಅಂಕ ಪಡೆದಿರುವ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಈ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.
ಅರ್ಹ ವಿದ್ಯಾರ್ಥಿಗಳ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಹಾಗೂ ಹಿಂದಿನ ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಶೇಕಡವಾರು ವಿವರಗಳೊಂದಿಗೆ  ಸಂಬಂಧಿಸಿದ ವಿಶ್ವವಿದ್ಯಾನಿಲಯದ ವಿಭಾಗ ಮುಖ್ಯಸ್ಥರು ಅಥವಾ ಸರ್ಕಾರಿ ಪದವಿ ಕಾಲೇಜಿನ ಪ್ರಾಚಾರ್ಯರ ಮೂಲಕ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ನೀಡಲು  ಕೋರಿದೆ.
ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ: ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ
ಮಂಡ್ಯ ನಗರಸಭಾ ವ್ಯಾಪ್ತಿಯ ವತಿಯಿಂದ 2014-15ನೇ ಸಾಲಿನಲ್ಲಿ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ನಲ್ಮ್) ಕಾರ್ಯಕ್ರಮ ಜಾರಿಗೆ ಬಂದಿದ್ದು, ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ವ್ಯಕ್ತಿಗತ ಮತ್ತು ಗುಂಪು ಉದ್ಯಮಶೀಲತೆ (ಸಾಲ ಮತ್ತು ಬಡ್ಡಿ ಸಹಾಯಧನ) ಕಾರ್ಯಕ್ರಮದಲ್ಲಿ ನಗರ ಪ್ರದೇಶದಲ್ಲಿ ಬಡ ಕುಟುಂಬಕ್ಕೆ ಸೇರಿದ (ಬಿಪಿಎಲ್) ವ್ಯಕ್ತಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ, ಸ್ವಯಂ ಉದ್ಯೋಗ, ಉದ್ದಿಮೆ ಮತ್ತು ಕಿರು ಉದ್ದಿಮೆಗಳನ್ನು ಸ್ಥಾಪಿಸುವ ಗುಂಪುಗಳಿಗೆ ಲಾಭದಾಯಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಫಲಾನುಭವಿಗಳು ಮಂಡ್ಯ ನಗರಸಭೆಯಲ್ಲಿ ಅರ್ಜಿ ಪಡೆದು ಎಲ್ಲಾ ದಾಖಲೆಗಳೊಂದಿಗೆ ಸೆಪ್ಟೆಂಬರ್ 30 ರ ಸಂಜೆ 4.00 ಗಂಟೆಯೊಳಗೆ ಸಲ್ಲಿಸುವುದು. ಹೆಚ್ಚಿನ ವಿವರಗಳಿಗಾಗಿ ಮಂಡ್ಯ ನಗರಸಭೆಯ ಬಡತನ ನಿರ್ಮೂಲನಾ ಕೋಶ (ಎಸ್.ಜೆ.ಎಸ್.ಆರ್.ವೈ.) ವಿಭಾಗ (ದೂರವಾಣಿ ಸಂಖ್ಯೆ:08232-224555, 226749) ವನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜಮಾಬಂದಿ ಕಾರ್ಯಕ್ರಮ
  ಮಂಡ್ಯ ತಾಲ್ಲೂಕಿನ ಕೊತ್ತತ್ತಿ ಹೋಬಳಿ ಮಂಗಲ ಗ್ರಾಮ ಪಂಚಾಯಿತಿಯ ಕಾರ್ಯಾಲಯದ ವತಿಯಿಂದ 2014-15ನೇ ಸಾಲಿನ ಜಮಾಬಂದಿ ಕಾರ್ಯಕ್ರಮವನ್ನು  ಸೆಪ್ಟೆಂಬರ್ 6 ರಂದು ಬೆಳಿಗ್ಗೆ 11.00 ಗಂಟೆಗೆ ಮಂಗಲ ಗ್ರಾಮ ಪಂಚಾಯಿತಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರ
 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ವತಿಯಿಂದ  ಜಿಲ್ಲೆಯಲ್ಲಿ  2014 ಸೆಪ್ಟೆಂಬರ್ ಮಾಹೆಯಲ್ಲಿ ವಿವಿಧ ಸ್ಥಳಗಳಲ್ಲಿ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು  ತಿಳಿಸಿದ್ದಾರೆ.
 ಸೆಪ್ಟೆಂಬರ್ 2ರಂದು ಪಾಂಡವಪುರ, 3 ರಂದು ಹಲಗೂರು, 5 ರಂದು ಕೆ.ಆರ್.ಪೇಟೆ, 6 ರಂದು ತೂಬಿನಕೆರೆ,  8 ರಂದು ಕೆರಗೋಡು, 9 ರಂದು ಬೆಳಗೊಳ, 12 ರಂದು ಕೆ.ಎಂ.ದೊಡ್ಡಿ,  15 ರಂದು ಗೆಜ್ಜಲಗೆರೆ, 16 ರಂದು ಕ್ಯಾತಂಗೆರೆ,   17 ರಂದು ನಾಗಮಂಗಲ,  19 ರಂದು ಮಳವಳ್ಳಿ,  20 ರಂದು  ಬೆಳ್ಳೂರು , 22 ರಂದು ಕಿಕ್ಕೇರಿ, 23 ರಂದು ಹೆಮ್ಮಿಗೆ ಗ್ರಾಮಗಳಲ್ಲಿ ಬೆಳಿಗ್ಗೆ 10.00 ಗಂಟೆಗೆ ಶಿಬಿರ ನಡೆಯಲಿದೆ.  6 ರಂದು ಅರಕೆರೆ, 11 ರಂದು ಕೆಸ್ತೂರು, ಹಾಗೂ 12 ರಂದು ಕಿರುಗಾವಲು ಗ್ರಾಮಗಳಲ್ಲಿ ಮಧ್ಯಾಹ್ನ 12.00 ಗಂಟೆಗೆ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರಗಳು ನಡೆಯಲಿವೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಕೋರಿದೆ.
ಕರ್ತವ್ಯ ಮತ್ತು ಜವಾಬ್ದಾರಿಯ ಬಗ್ಗೆ ಕಾರ್ಯಾಗಾರ
          ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತವು ಮಂಡ್ಯ ವೃತ್ತದ ಅಧಿಕಾರಿಗಳಿಗೆ ನ್ಯಾಯಾಲಯದ ಪ್ರಕರಣಗಳನ್ನು ಸೂಕ್ತ ಹಾಗೂ ಸಮರ್ಪಕವಾದ ರೀತಿಯಲ್ಲಿ ವಿಲೇವಾರಿ ಮಾಡುವ ಬಗ್ಗೆ ಅಧಿಕಾರಿಗಳ ಕರ್ತವ್ಯ ಮತ್ತು ಜವಾಬ್ದಾರಿಯ ಬಗ್ಗೆ ಕಾರ್ಯಗಾರವನ್ನು ಶುಕ್ರವಾರ ಮಂಡ್ಯ ವೃತ್ತದ ಅಧೀಕ್ಷಕ ಇಂಜಿನಿಯರ್(ವಿ), ರವರ ಕಚೇರಿಯಲ್ಲಿ ಆಯೋಜಿಸಲಾಗಿತ್ತು. ಜಿಲ್ಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ (ನಿವೃತ್ತ) ಕೆ.ಎಲ್.ಶಿವಲಿಂಗೇಗೌಡ ರವರು ಉಪನ್ಯಾಸವನ್ನು ನೀಡಿದರು. ಕಾರ್ಯಗಾರವನ್ನು ಚಾವಿಸನಿನಿಯ ಮಂಡ್ಯ ವೃತ್ತದ ಉಪ ಲೆಕ್ಕ ನಿಯಂತ್ರಣಾಧಿಕಾರಿ ಬಸವರಾಜು ಅವರು ಉದ್ಘಾಟಿಸಿದರು. ಕಾರ್ಯನಿರ್ವಾಹಕ ಇಂಜಿನಿಯರ್(ವಿ), ಲೋಕೇಶ್, ಲೆಕ್ಕಾಧಿಕಾರಿ ಡಿ.ಎಸ್.ಸುರೇಂದ್ರ, ನಿಗಮ ಕಚೇರಿಯ ಎಸ್.ಹೆಚ್.ಸಂಜಯ್,  ದೊಡ್ಡಯ್ಯ. ಎನ್ ಹಾಗೂ ಚಾವಿಸನಿನಿಯ ಕ್ರೀಡಾ ಕಾರ್ಯದರ್ಶಿ ಎಂ.ಎ.ಮಂಜುನಾಥ್ ಉಪಸ್ಥಿತರಿದ್ದರು. ಮಂಡ್ಯ ವೃತ್ತದ ಮದ್ದೂರು/ಮಂಡ್ಯ/ಪಾಂಡವಪುರ/ನಾಗಮಂಗಲ ವಿಭಾಗದ ಅಧಿಕಾರಿಗಳು ಹಾಗೂ ನೌಕರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.(ಭಾವಚಿತ್ರ ಲಗತ್ತಿಸಿದೆ)
ಅಕ್ರಮ 460 ಗ್ರಾಂ. ಒಣ ಗಾಂಜಾ ವಶ : ಮೊಕದ್ದಮೆ ದಾಖಲು
    ದಿನಾಂಕ 27-8-2014 ರಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕು ಚಿಕ್ಕ ಅರಸಿನಕೆರೆ ಹೋಬಳಿ, ಸಬ್ಬನಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ 460 ಗ್ರಾಂ. ಒಣ ಗಾಂಜಾ ಹಾಗೂ 1600 ಕೆ.ಜಿ. ಗಾಂಜಾ ಬೀಜವನ್ನು ಮಾರಾಟ ಮಾಡಲು ಹೊಂದಿರುವುದನ್ನು ಮಂಡ್ಯ ಜಿಲ್ಲೆ ಅಬಕಾರಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪತ್ತೆ ಹಚ್ಚಿ ಆರೋಪಿ ಆರ್. ರಾಮಯ್ಯ ಅಲಿಯಾಸ್ ಬೆಣ್ಣೆ ರಾಮಯ್ಯ ಬಿನ್ ಲೇ. ರಾಮಯ್ಯ, 48 ವರ್ಷ, ಸಬ್ಬನಹಳ್ಳಿ, ಮದ್ದೂರು ತಾಲ್ಲೂಕು ಎಂಬಾತನ ವಿರುದ್ಧ ಎನ್.ಡಿ.ಪಿ.ಎಸ್. ಕಾಯ್ದೆಯಡಿ ಮೊಕದ್ದಮೆ ದಾಖಲಿಸಿ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಮಂಡ್ಯ ಜಿಲ್ಲೆಯ ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೈಸ್ ಕೆ.ಎಲ್. ನಾಗೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No comments:

Post a Comment