Wednesday, 3 September 2014

ಮಂಡ್ಯ,ಸೆ.3-ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರತರಲು ಪ್ರತಿಭಾ ಕಾರಂಜಿ ಕಾರ್ಯಕ್ರಮವು ಉತ್ತಮ ವೇದಿಕೆಯಾಗಿದೆ ಎಂದು  ಶ್ರೀಗೀತಾ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಕೆ.ಎಸ್.ಮಹದೇವೇಗೌಡ ಹೇಳಿದರು.
ಅವರು ನಗರದ ಶ್ರೀಗೀತಾ ವಿದ್ಯಾಸಂಸ್ಥೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಗಳ ಕಛೇರಿ, ನಮೂಹ ಸಂಪನ್ಮೂಲ ಕೇಂದ್ರ  ಹಾಗೂ ಗೀತಾ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ ಕಾರ್ಯಕ್ರಮವನ್ನು ಉದ್ಟಾಟನೆ ಮಾಡಿ ಮಾತನಾಡುತ್ತಿದ್ದರು.
ಶಿಕ್ಷಕರು ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಬೇಕು. ಕ್ರೀಡೆಯಲ್ಲಿ ಆಸಕ್ತಿ ಇರುವವರಿಗೆ ಕ್ರೀಡಾಕೂಟಕ್ಕೆ ಆಯ್ಕೆ ಮಾಡಬೇಕು. ವಿಜ್ಞಾನ ಚಟುವಟಿಕೆಗಳಲ್ಲಿ ಆಸಕ್ತಿ ಇರುವವರನ್ನು ಇನ್ಸ್‍ಸ್ಪೈರ್ ಅವಾರ್ಡ್‍ಗೆ ಸ್ಪರ್ಧೆ ಸಜ್ಜುಗೊಳಿಸಬೇಕು. ಪಠ್ಯೇತರ ಚಟುವಟಿಕೆಗಳಲ್ಲಿ ಪ್ರತಿಭೆ ಇರುವ ಮಕ್ಕಳನ್ನು ಗುರುತಿಸಿ ಪ್ರತಿಭಾ ಕಾರಂಜಿ ಮತ್ತಿತರರ ಕಾರ್ಯಕ್ರಮಗಳ ಮೂಲಕ ಅವರ ಪ್ರತಿಭೆಯನ್ನು ಹೊರತರಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಯಾವುದೇ ಕಾರಣಕ್ಕೂ  ಪ್ರತಿಭಾವಂತ ಮಕ್ಕಳಿಗೆ ಅನ್ಯಾಯ ಮಾಡಬಾರದು ಎಂದು ಸಲಹೆ ನೀಡಿದರು.
ಮಕ್ಕಳಲ್ಲಿ ಅವ್ಯಕ್ತವಾಗಿರುವ ಪ್ರತಿಭೆಯನ್ನು ಅನಾವರಣ ಮಾಡಿ ಬೆನ್ನುತಟ್ಟಿ ಪ್ರೋತ್ಸಾಹಿಸುವ ಕೆಲಸವನ್ನು ಪೋಷಕರು ಹಾಗೂ ಶಿಕ್ಷಕರು ಪ್ರಾಮಾಣಿಕವಾಗಿ ಮಾಡುವ ಮೂಲಕ ಮಕ್ಕಳ ಪ್ರತಿಭೆಯನ್ನು ಜಗತ್ತಿಗೆ ಅನಾವರಣ ಮಾಡಬೇಕು. ಇಂದಿನ ಮಕ್ಕಳೇ ನಾಳಿನ ಭೌವ್ಯ ಭಾರತದ ಸತ್ಪ್ರಜೆಗಳಾದ್ದರಿಂದ ಮಕ್ಕಳನ್ನು ಕೇವಲ ಪುಸ್ತಕಗಳನ್ನು ಮಾತ್ರ ಓದಬೇಕು, ಹೆಚ್ಚಿನ ಅಂಕಗಳನ್ನು ಗಳಿಸಬೇಕು ಎಂದು ಒತ್ತಾಯಿಸದೇ ಮಕ್ಕಳನ್ನು ಸ್ವತಂತ್ರವಾಗಿ ಕಲಿಯಲು ಬಿಟ್ಟು ಬಾಲ್ಯದಿಂದಲೇ ಉತ್ತಮವಾದ ಸಂಸ್ಕಾರ ಮತ್ತು ಸದ್ಗುಣಗಳನ್ನು ತುಂಬುವ ಮೂಲಕ ಭವಿಷ್ಯದ ಭಾರತದ ನಾಗರಿಕನನ್ನಾಗಿ ತಯಾರು ಮಾಡಬೇಕು ಎಂದು ಕರೆ ನೀಡಿದರು.
ಶ್ರೀಗೀತಾ ವಿದ್ಯಾಸಂಸ್ಥೆಯ ಸಹಕಾರ್ಯದರ್ಶಿ ಶ್ರೀಕಂಠಯ್ಯ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಿಕ್ಷಣ ಸಂಯೋಜಕರಾದ ರಮೇಶ್, ನಾಗಸ್ವಾಮಿ, ಸಿ.ಪಾಪಯ್ಯ, ನಿಂಗರಾಜು, ಗೀತಾ ವಿದ್ಯಸಂಸ್ಥೆಯ ಮುಖ್ಯ ಶಿಕ್ಷಕ ಎಂ.ಡಿ.ದಿನೇಶ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶಿಕ್ಷಕ ರಾಜು ಸ್ವಾಗತಿಸಿದರು, ಸಿ.ವಸಂತಕುಮಾರ್ ಕಾರ್ಯಕ್ರಮ ನಿರೂಪಿಸಿದರು, ಹೆಚ್.ಕೆ.ವಸಂತಕುಮಾರ್ ವಸಂತವಂದಿಸಿದರು.



ಮಂಡ್ಯ ನಗರದ ಗೀತಾ ವಿದ್ಯಾಸಂಸ್ಥೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ ಕಾರ್ಯಕ್ರಮವನ್ನು ಶ್ರೀಗೀತಾ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಕೆ.ಎಸ್.ಮಹದೇವೇಗೌಡ ಉದ್ಘಾಟಿಸಿದರು.  ಶ್ರೀಗೀತಾ ವಿದ್ಯಾಸಂಸ್ಥೆಯ ಸಹಕಾರ್ಯದರ್ಶಿ ಶ್ರೀಕಂಠಯ್ಯ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಿಕ್ಷಣ ಸಂಯೋಜಕರಾದ ರಮೇಶ್, ನಾಗಸ್ವಾಮಿ, ಸಿ.ಪಾಪಯ್ಯ, ನಿಂಗರಾಜು, ಗೀತಾ ವಿದ್ಯಸಂಸ್ಥೆಯ ಮುಖ್ಯ ಶಿಕ್ಷಕ ಎಂ.ಡಿ.ದಿನೇಶ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

No comments:

Post a Comment