Friday, 10 October 2014


ವಿದ್ಯಾರ್ಥಿವೇತನ ಆನಲೈನ್ ನೋಂದಣಿಗೆ ದಿನಾಂಕ ವಿಸ್ತರಣೆ
   ಮೈಸೂರು,ಅ.10.ಮೈಸೂರು ತಾಲ್ಲೂಕು ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಆನ್‍ಲೈನ್ ನೋಂದಣಿ ದಿನಾಂಕವನ್ನು ಅಕ್ಟೋಬರ್ 30 ರವರೆಗೆ ವಿಸ್ತರಿಸಲಾಗಿದೆ.
   ಪ್ರಸಕ್ತ ಸಾಲಿನಲ್ಲಿ 1ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಇಲಾಖಾ ವೆಬ್‍ಸೈಟ್ sತಿ.ಞಚಿಡಿ.ಟಿiಛಿ.iಟಿ  ನಲ್ಲಿ ನೋಂದಾಯಿಸಿಕೊಳ್ಳುವುದು.  2 ರಿಂದ 10ನೇ ತರಗತಿಯವರೆಗೆ ವ್ಯಾಸಾಂಗ ಮಾಡುತ್ತಿದ್ದು, ಕಳೆದ ವರ್ಷಗಳಲ್ಲಿ ನೋಂದಣಿಯಾಗಿರದ ವಿದ್ಯಾರ್ಥಿಗಳು ಮ್ಯಾನ್ಯುಯಲ್ ಅರ್ಜಿಯನ್ನು ಭರ್ತಿ ಮಾಡಿ ಸಂಬಂಧಿಸಿದ ಶಾಲಾ ಮುಖ್ಯೋಪಾಧ್ಯಾಯರಿಗೆ ಅಗತ್ಯ ದಾಖಲೆಗಳೊಂದಿಗೆ ನೀಡಲು ಕೋರಿದೆ.
   ಈವರೆವಿಗೂ ನವೀಕರಣ ವಿದ್ಯಾರ್ಥಿಗಳ ಪರಿಶೀಲನಾ ಪಟ್ಟಿಯನ್ನು ಪಡೆಯದ ಶಾಲಾ ಮುಖ್ಯೋಪಾಧ್ಯಾಯರುಗಳು ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು ಅಕ್ಟೋಬರ್ 30 ರೊಳಗೆ ಹಿಂದಿರುಗಿಸಲು ಕೋರಿದೆ.
   ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2520910ನ್ನು ಸಂಪರ್ಕಿಸಬಹುದು. 
ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನ
     ಮೈಸೂರು,ಅ.10.ಮೈಸೂರು ತಾಲ್ಲೂಕು ಸಮಾಜ ಕಲ್ಯಾಣ ಇಲಾಖಾವತಿಯಿಂದ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವವರ ಮಕ್ಕಳಿಗೆ ಕೇಂದ್ರ ಪುರಸ್ಕøತ ಕಾರ್ಯಕ್ರಮದಡಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಆನ್ ಲೈನ್ ಮೂಲಕ ನೋಂದಣಿಗೆ ಅರ್ಜಿ ಆಹ್ವಾನಿಸಿದೆ.
     ಚರ್ಮಹದಮಾಡುವವರು, ಚರ್ಮಸುಲಿಯುವವರು ಹಾಗೂ ಚಿಂದಿ ಆಯುವವರು ಈ ವೃತ್ತಿಯಲ್ಲಿ ತೊಡಗಿರುವವರು ಪೌರಾಡಳಿತ ಇಲಾಖೆಯಿಂದ ಧೃಢೀಕೃತ ಪತ್ರ ಪಡೆದು ಅಕ್ಟೋಬರ್ 30 ರೊಳಗೆ ಅರ್ಜಿ ಸಲ್ಲಿಸಬಹುದು.
     ಹೆಚ್ಚಿನ ಮಾಹಿತಿಗೆ ಮೈಸೂರು ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ, # 446, ಸರಸ್ವತಿ ನಿಲಯ, ಕೆಂಪನಂಜಾಂಬ ಅಗ್ರಹಾರ, ಮೈಸೂರು ದೂರವಾಣಿ ಸಂಖ್ಯೆ 0821-2520910ನ್ನು ಸಂಪರ್ಕಿಸಬಹುದು. 

ಕೃಷಿ ಹಾಗೂ ಆರ್ಥಿಕ ಸಾಕ್ಷರತೆ ವಿಚಾರ ಸಂಕಿರಣ
    ಮೈಸೂರು,ಅ.10.ಮೈಸೂರು ವಿಶ್ವವಿದ್ಯಾನಿಲಯ ಸಾಮಥ್ರ್ಯವರ್ಧಿತ ಉತ್ಕøಷ್ಠಜ್ಞಾನ ಸಂಶೋಧನಾ ಯೋಜನೆ ಹಾಗೂ ಪ್ರಸಾರಭಾರತಿ, ಭಾರತದ ಸಾರ್ವಜನಿಕ ಪ್ರಸಾರ ಸೇವೆ, ಆಕಾಶವಾಣಿ ಹಾಗೂ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಇವರ ಸಂಯುಕ್ತಾಶ್ರಯದಲ್ಲಿ ಮರಳಿ  ಬಾ ಮಣ್ಣಿಗೆ ಬಾನುಲಿ ಸರಣಿ ಕಾರ್ಯಕ್ರಮದ ಅಂಗವಾಗಿ ಕೃಷಿ ಹಾಗೂ ಆರ್ಥಿಕ ಸಾಕ್ಷರತೆ ಕುರಿತು ವಿಚಾರ ಸಂಕಿರಣ ಅಕ್ಟೋಬರ್ 14 ರಂದು ಬೆಳಗ್ಗೆ 10-30 ಗಂಟೆಗೆ ವಿಶ್ವವಿದ್ಯಾನಿಲಯದ ರಾಣಿ ಬಹದ್ದೂರು ಸಭಾಂಗಣದಲ್ಲಿ ನಡೆಯಲಿದೆ.
    ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ಆಕಾಶವಾಣಿ ಉಪನಿರ್ದೇಶಕ ಡಾ| ಆನಂದ ವಿ. ಪಾಟೀಲ್ ಅವರು ಅಧ್ಯಕ್ಷತೆ ವಹಿಸುವರು.
    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಪಿ.ಎ.ಗೋಪಾಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಬಿ.ಎ/ಬಿ.ಕಾಂ., ಪೂರಕ ಪರೀಕ್ಷೆ ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ
      ಮೈಸೂರು,ಅ.10.ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಅಕ್ಟೋಬರ್ /ನವೆಂಬರ್ 2014ರಲ್ಲಿ ನಡೆಯುವ ಬಿ.ಎ/ಬಿ.ಕಾಂ., ಪೂರಕ ಪರೀಕ್ಷೆಗಳು ಅಕ್ಟೋಬರ್ 14 ರಿಂದ ಪ್ರಾರಂಭವಾಗುತ್ತಿದ್ದು, ಪ್ರವೇಶ ಪತ್ರವನ್ನು ಆಯಾ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲಾಗಿದೆ. ವಿದ್ಯಾರ್ಥಿಗಳು 3 ದಿನ ಮುಂಚೆ ಪ್ರವೇಶ ಪತ್ರ ಪಡೆದುಕೊಳ್ಳುವುದು.
     ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ವೆಬ್‍ಸೈಟ್ ತಿತಿತಿ.ಞsouexಚಿm.iಟಿ  ನಲ್ಲಿ ಸಹ ಪ್ರವೇಶ ಪತ್ರವನ್ನು ಪಡೆಯಬಹುದು ಹಾಗೂ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2515169, 2519942 ನ್ನು ಸಂಪರ್ಕಿಸಬಹುದು.
ಬಹಿರಂಗ ಹರಾಜು
      ಮೈಸೂರು,ಅ.10.ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಎನ್.ಆರ್.ಮೊಹಲ್ಲಾ ಮೈಸೂರು-07 ರಲ್ಲಿರುವ ವಿವಿಧ ವೃತ್ತಿ ಘಟಕದ ನಿರುಪಯುಕ್ತ ವಸ್ತುಗಳನ್ನು ಅಕ್ಟೋಬರ್ 15 ರಂದು ಬೆಳಗ್ಗೆ 11 ಗಂಟೆಗೆ ಬಹಿರಂಗ ಹರಾಜಿನ ಮೂಲಕ ಸಂಸ್ಥೆಯ ಆವರಣದಲ್ಲಿ ವಿಲೇವಾರಿ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2498456ನ್ನು ಸಂಪರ್ಕಿಸಬಹುದು.

     ಪರಿಷ್ಕøತ ಪ್ರವಾಸ ಕಾರ್ಯಕ್ರಮ
     ಮೈಸೂರು,ಅ.10.ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ನಾಡೋಜಾ ಡಾ|| ಎಸ್.ಆರ್. ನಾಯಕ್ ಅವರು ಅಕ್ಟೋಬರ್ 11 ರಂದು ಸಂಜೆ 6 ಗಂಟೆಗೆ ಜೆ.ಎಸ್.ಎಸ್. ಕಾನೂನು ಕಾಲೇಜಿನಲ್ಲಿ  ಆಯೋಜಿಸಿರುವ ಪದವಿ ಪ್ರಧಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ನಂತರ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅಕ್ಟೋಬರ್ 12 ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ತೆರಳುವರು.
ಅಂಚೆ ಮೂಲಕ ಕನ್ನಡ ಶಿಕ್ಷಣ
      ಮೈಸೂರು,ಅ.10.ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಈ ಎರಡೂ ಸಂಸ್ಥೆಗಳು ಒಟ್ಟಾಗಿ ನವೆಂಬರ್ 1, 1985 ರಿಂದ ಕರ್ನಾಟಕದಲ್ಲಿರುವ ಕನ್ನಡ ಬಾರದ ಸರ್ಕಾರಿ ನೌಕರರಿಗೆ ಹಾಗೂ ಸಾರ್ವಜನಿಕರಿಗೆ ಹನ್ನೆರಡು ತಿಂಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ ನಡೆಸುತ್ತಿವೆ.
     ಕರ್ನಾಟಕದಲ್ಲಿರುವ ನಗರಸಭೆ, ಕ.ವಿ.ಪ್ರ.ನಿ.ನಿ., ಕೆ.ಎಸ್.ಆರ್.ಟಿ.ಸಿ., ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ರಾಷ್ಟ್ರೀಕೃತ ಬ್ಯಾಂಕ್ ನೌಕರರು ಹೆಸರು ನೋಂದಾಯಿಸಿಕೊಳ್ಳಬಹುದು.
    ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ನೋಂದಾಯಿಸಿಕೊಂಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕ ಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ಕರ್ನಾಟಕ ಸರ್ಕಾರ ವಿನಾಯಿತಿ ನೀಡಿದೆ.
   ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರುವ 18 ರಿಂದ 50 ವರ್ಷ ವಯೋಮಿತಿಯೊಳಗಿನ ಸಾರ್ವಜನಿಕರು ಸಹ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನಾಂಕವಾಗಿದ್ದು, ಆಸಕ್ತರು ಭರ್ತಿ ಮಾಡಿದ ಅರ್ಜಿಯ ಜೊತೆಯಲ್ಲಿ ರೂ. 250/- ಡಿಮ್ಯಾಂಡ್ ಡ್ರಾಫ್ಟ್‍ನ್ನು ಕಳುಹಿಸಿ ಕೊಡಬೇಕು.
   ಅರ್ಜಿ ನಮೂನೆ ಮತ್ತು ತರಬೇತಿ ವಿವರಗಳನ್ನು ಪ್ರಭಾರಿ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು-570006. ಇಲ್ಲಿ ಪಡೆಯಬಹುದಾಗಿದೆ.

ವಿದ್ಯುತ್ ಗೋಪುರಗಳ ಬಗ್ಗೆ ಎಚ್ಚರ ವಹಿಸಿ
ಮೈಸೂರು,ಅ.10.ಮೈಸೂರು ನಗರದ ವ್ಯಾಪ್ತಿಯ 66/ಕೆವಿ. ಕಡಕೊಳ–ಟಿವಿ.ಎಸ್ ಏಕ ವಿದ್ಯುತ್ ಮಾರ್ಗವನ್ನು ಸ್ವಯಂ ನಿರ್ವಹಣೆ ಅಡಿಯಲ್ಲಿ 220/66/11 ಕೆ.ವಿ. ಕಡಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಟಿ.ವಿ.ಎಸ್ ಫ್ಯಾಕ್ಟರಿವರೆಗೆ  3.668 ಕಿ.ಮೀ. ಹೊಸದಾಗಿ ನಿರ್ಮಾಣ ಮಾಡಲಾಗಿದ್ದು, ಈ ಮಾರ್ಗದಲ್ಲಿ ವಿದ್ಯುತ್ ಚೇತನಗೊಳಿಸಲಾಗುವುದು.
ಈ ವಿದ್ಯುತ್ ಮಾರ್ಗವು  ಕಡಕೊಳ, ಬ್ಯಾತಹಳ್ಳಿ ಮಾರ್ಗವಾಗಿ ಟಿ.ವಿ.ಎಸ್ ಫ್ಯಾಕ್ಟರಿ ವರೆಗೆ ಹಾದು ಹೋಗುತ್ತದೆ. 

ವಿದ್ಯುತ್ ಗೋಪುರಗಳ ಮೇಲೆ ವಿದ್ಯುತ್ ವಾಹಕವು ಚಾಲನೆಗೊಳ್ಳುವುದರಿಂದ, ಸಾರ್ವಜನಿಕರು ಗೋಪುರಗಳಿಗೆ ದನಕರುಗಳನ್ನು ಕಟ್ಟುವುದಾಗಲಿ, ಲೋಹದ ಪಟ್ಟಿಯನ್ನು ತೆಗೆಯುವುದಾಗಲಿ, ಗೋಪುರಗಳನ್ನು ಹತ್ತುವುದಾಗಲಿ ತಂತಿಗಳನ್ನು ಮುಟ್ಟುವುದಾಗಲಿ, ಗೋಪುರಗಳ ಕೆಳಗಡೆ ಮರಗಿಡಗಳನ್ನು ನೆಡುವುದಾಗಲಿ, ಗೋಪುರಗಳಿಗೆ ಬಳ್ಳಿ ಮತ್ತು ಹಗ್ಗ ಮುಂತಾದುವುಗಳನ್ನು ಎಳೆಯುವುದಾಗಲಿ, ಗಾಳಿಪಟವನ್ನು ಗೋಪುರದ ಹತ್ತಿರ ಹಾರಿಸುವುದಾಗಲಿ ತುಂಬಾ ಅಪಾಯಕಾರಿ ಹಾಗೂ ಪ್ರಾಣ ಹಾನಿಯಾಗುತ್ತದೆ.
     ಈ ಸೂಚನೆಯನ್ನು ಉಲ್ಲಂಘಿಸಿದ ಪಕ್ಷದಲ್ಲಿ ಉಂಟಾಗುವ ಯಾವುದೇ ತರಹದ ಅಪಘಾತ ಅಥವಾ ಪ್ರಾಣ ಹಾನಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಜವಾಬ್ದಾರರಲ್ಲ ಎಂದು ಮೈಸೂರು ಕವಿಪ್ರನಿನಿ.,ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No comments:

Post a Comment