Monday, 13 October 2014

ಆರು ತಿಂಗಳಲ್ಲಿ ಜಿಲ್ಲೆ ಅಪೌಷ್ಟಿಕತೆ ಮುಕ್ತ ಮಕ್ಕಳ ಪ್ರದೇಶ: ಜಿ.ಪಂ.ಅಧ್ಯಕ್ಷೆ ಮೈಸೂರು,ಅ.15. ಮುಂದಿನ ಆರು ತಿಂಗಳೊಳಗಾಗಿ ಮೈಸೂರು ಜಿಲ್ಲೆಯನ್ನು ಅಪೌಷ್ಟಿಕತೆ ಮುಕ್ತ ಮಕ್ಕಳ ಪ್ರದೇಶವÀನ್ನಾಗಿ ಮಾಡಲು ಕ್ರಮವಹಿಸುವಂತೆ ಆರೋಗ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಡಾ. ಬಿ.ಪುಷ್ಪಾ ಅಮರನಾಥ್ ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಕೆಡಿಪಿ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ರಾಧಾ ಅವರಿಂದ ಅಪೌಷ್ಟಿಕತೆ ಮಕ್ಕಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಪಂಚಾಯತ್ ಅಧಕ್ಷರು ಜಿಲ್ಲೆಯಲ್ಲಿ 710 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತಿದ್ದಾರೆ. ಈ ಮಕ್ಕಳನ್ನು ಅಪೌಷ್ಟಿಕತೆಯಿಂದ ಮುಕ್ತಗೊಳಿಸಬೇಕು. ಆರೋಗ್ಯ ಮತ್ತು ಶಿಕ್ಷಣ ಇಲಾಖೆಯೊಂದಿಗೆ ಸಮನ್ವಯ ಮಾಡಿಕೊಂಡು ಯೋಜನೆಯನ್ನು ರೂಪಿಸಿ ಮುಂದಿನ ಆರು ತಿಂಗಳಿನಲ್ಲಿ ಜಿಲ್ಲೆಯನ್ನು ಅಪೌಷ್ಟಿಕತೆ ಮುಕ್ತ ಮಕ್ಕಳ ಪ್ರದೇಶವನ್ನಾಗಿ ಮಾಡಲು ಕ್ರಮವಹಿಸಬೇಕೆಂದು ಹೇಳಿದರು. ಯಾವುದೇ ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದು. ಅಪೌಷ್ಟಿಕತೆ ಮಕ್ಕಳನ್ನು ಕಾಡುವ ಒಂದು ದೊಡ್ಡ ಸಮಸ್ಯೆ. ರಾಜ್ಯ ಸರ್ಕಾರವು ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗಾಗಿ ಜನಪ್ರಿಯ ಕ್ಷೀರಾಭಾಗ್ಯ ಯೋಜನೆ ಸೇರಿದಂತೆ ಹಲವು ಯೋಜನೆಗಳು ಜಾರಿಗೊಳಿಸಿದೆ. ಈ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು ಹಾಗೂ ಅರ್ಹರ ಪಾಲಾಗುವಂತೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಹೇಳಿದರು. ಕೆಲವು ಖಾಸಗಿ ಶಾಲೆಗಳು ಮಕ್ಕಳಿಗೆ ದಸರಾ ರಜೆಯನ್ನು ಪೂರ್ಣಪ್ರಮಾಣದಲ್ಲಿ ನೀಡಿಲ್ಲ ಎಂಬುವುದು ನನ್ನ ಗಮನಕ್ಕೆ ಬಂದಿದೆ. ಖಾಸಗಿ ಅಥವಾ ಸರ್ಕಾರಿ ಶಾಲೆಗಳಾಗಿರಲಿ, ಮಕ್ಕಳು ಸಂಪೂರ್ಣವಾಗಿ ವಿಶ್ವ ವಿಖ್ಯಾತ ಮೈಸೂರು ದಸರಾ ರಜೆಯನ್ನು ಆನಂದಿಸಬೇಕು. ಪೂರ್ಣವಾಗಿ ರೆಜೆ ನೀಡದ ಶಾಲೆಗಳ ಬಗ್ಗೆ ಮಾಹಿತಿ ಪಡೆದು ಕ್ರಮವಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಸೂಚಿಸಿದರು. ಸರ್ಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದರು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಮುಖ್ಯ ಮಂತ್ರಿ ಸೇರಿದಂತೆ ಮೂರು ಸಚಿವರು ಪ್ರತಿನಿಧಿಸುವ ಜಿಲ್ಲೆಯಲ್ಲಿ ನಿರೀಕ್ಷಿತ ಮಟ್ಟದ ಅಭಿವೃದ್ಧಿಯನ್ನು ಕಾಣಲು ಸಾಧ್ಯವಾಗದಿರುವುದು ವಿಷಾದನಿಯ. ಇಲಾಖೆಗಳ ಮಧ್ಯೆ ಸಮನ್ವಯದ ಕೊರತೆಯೇ ಇದ್ದಕ್ಕೆ ಮೂಲ ಕಾರಣ. ಮುಂದಿನ ದಿನಗಳಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯ ಕಾಪಾಡಿಕೊಂಡು ಅಭಿವೃದ್ಧಿ ಕಾರ್ಯಕ್ಕಾಗಿ ಬಿಡುಗಡೆಗೊಂಡಿರುವ ಅನುದಾನವು ಸಂಪೂರ್ಣವಾಗಿ ಬಳಕೆ ಮಾಡಬೇಕು ಹಾಗೂ ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಸಾಗಿಸಬೇಕು ಎಂದು ಹೇಳಿದರು. ಅಧಿಕಾರಿಗಳಿಗೆ ತಮ್ಮ ಇಲಾಖೆ ಸಂಬಂಧಪಟ್ಟ ಪ್ರಗತಿ ಕುರಿತು ಅನುಪಾಲನ ವರದಿ ಸಲ್ಲಿಸಲು ಸಾಕಷ್ಟು ಕಾಲಾವಕಾಶ ನೀಡಲಾಗಿತ್ತು. ಆದರೆ ಪ್ರಮುಖ ಇಲಾಖೆಗಳು ನಿಗದಿತ ಸಮಯದಲ್ಲಿ ವರದಿ ನೀಡಿಲ್ಲ. ಅನೇಕ ಅಧಿಕಾರಿ ಸಭೆಗೆ ನಿಗದಿ ಪಡಿಸಿರುವ ಸಮಯದ ನಂತರ ಸಭೆಗೆ ಬಂದಿದ್ದಾರೆ ಹಾಗೂ ಕೆಲವರು ಅನುಮತಿ ಪಡೆಯದೆ ಸಭೆಗೆ ಗೈರು ಹಾಜರಾಗಿದ್ದಾರೆ. ಮಾಸಿಕ ಕೆಡಿಪಿ ಸಭೆಯು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಅತ್ಯಂತ ಪ್ರಾಮುಖ್ಯತೆ ಪಡೆದ ಸಭೆ. ಮುಂದಿನ ಸಭೆಯಲ್ಲಿ ಈ ಯಾವುದೇ ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ ಎಂದ ಅಧ್ಯಕ್ಷರು ಇಂದಿನ ಸಭೆಗೆ ಗೈರು ಹಾಜರಾಗಿರುವ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಗೋಪಾಲ್ ಅವರಿಗೆ ತಿಳಿಸಿದರು. ಸಭೆ ಪ್ರಾರಂಭಕ್ಕೂ ಮುನ್ನ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಸ್ವಚ್ಛತಾ ಭಾರತ್ ಅಭಿಯಾನದ ಪ್ರತಿಜ್ಞಾ ವಿಧಿಯನ್ನು ಸಭಾಂಗಣದಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಬೋಧಿಸಿದರು. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಮಾದಪ್ಪ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ರಾಜಣ್ಣ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಜವರೇಗೌಡ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ರಾಜಯ್ಯ, ಉಪ ಕಾರ್ಯದರ್ಶಿ ಶಂಕರ್‍ರಾಜು, ಮಹೇಶ್, ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. ಕಲಾಕೃತಿ ಮಳಿಗೆ ಉದ್ಘಾಟನೆ ಮೈಸೂರು,ಅ.15.ದಸರಾ ವಸ್ತುಪ್ರದರ್ಶನ ಮಹಿಳಾ ಮತ್ತು ಮಕ್ಕಳ ಉಪಸಮಿತಿ ವತಿಯಿಂದ ಮಹಿಳೆಯರು ಮತ್ತು ಮಕ್ಕಳ ಕಲಾಕೃತಿಗಳ ಪ್ರದರ್ಶನದ ಮಳಿಗೆಯನ್ನು ಅಕ್ಟೋಬರ್ 16 ರಂದು ಸಂಜೆ 5-30 ಕ್ಕೆ ವಸ್ತುಪ್ರದರ್ಶನದ ಆವರಣದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ಕೆ.ಎಸ್.ಮುದಗಲ್ ಅವರು ಉದ್ಘಾಟಿಸುವರು ಎಂದು ದಸರಾ ವಸ್ತುಪ್ರದರ್ಶನ ಮಹಿಳಾ ಮತ್ತು ಮಕ್ಕಳ ಉಪಸಮಿತಿ ಅಧ್ಯಕ್ಷೆ ಡಾ ಶೈಲಾ ಬಾಲರಾಜ್ ಅವರು ತಿಳಿಸಿದ್ದಾರೆ. ಸಂಶೋಧನ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ ಮೈಸೂರು,ಅ.15.ಮೈಸೂರಿನ ಮಾನಸಗಂಗೋತ್ರಿಯಲ್ಲಿರುವ ಮೈಸೂರು ವಿಶ್ವವಿದ್ಯಾನಿಲಯದ ಸಮಾಜಕಾರ್ಯ ಅಧ್ಯಯನ ವಿಭಾಗವು 2014-15ನೇ ಶೈಕ್ಷಣಿಕ ಸಾಲಿನಲ್ಲಿ ಎರಡು ಸಂಶೋಧನ ಸಹಾಯಕ ಹುದ್ದೆಯನ್ನು ತಾತ್ಕಲಿಕವಾಗಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವವರು ಯಾವುದೇ ವಿಶ್ವವಿದ್ಯಾನಿಲಯದಿಂದ ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ಅಂಕಗಳೊಂದಿಗೆ ಪಾಸಗಿರಬೇಕು. ಇಂಗ್ಲೀಷ್ ಭಾಷೆ, ಕನ್ನಡ ಭಾಷೆ ಹಾಗೂ ಕಂಪ್ಯೂಟರ ಜ್ಞಾನ ಹೊಂದಿರಬೇಕು.ಕೌಶಲ್ಯ ತರಬೇತಿಯಲ್ಲಿ ಉತ್ತಮ ಅನುಭವವುಳ್ಳವರಿಗೆ ಪ್ರಥಮ ಆಧ್ಯತೆ ನೀಡಲಾಗುವುದು. ಆಸಕ್ತರು ತಮ್ಮ ಸ್ವ-ವಿವರ (ಃio-ಜಚಿಣಚಿ) ಮತ್ತು ಅಗತ್ಯ ಶೈಕ್ಷಣಿಕ ದಾಖಲೆಗಳ ಜೆರಾಕ್ಸ ಪ್ರತಿಯೊಂದಿಗೆ ದಿನಾಂಕ 17.10.2014 ರೊಳಗಾಗಿ ಅರ್ಜಿಯನ್ನು ಅಧ್ಯಕ್ಷರು, ಸಮಾಜಕಾರ್ಯ ಅಧ್ಯಯನ ವಿಭಾಗ, ಮಾನಸಗಂಗೋತ್ರಿ, ಮೈಸೂರು. ಇವರಿಗೆ ಸಲ್ಲಿಸುವುದು. ಹೆಚ್ಚಿನ ವಿವರಗಳಿಗೆ ಮೈಸೂರು ವಿಶ್ವವಿದ್ಯಾನಿಲಯ ಸಮಾಜಕಾರ್ಯ ಅಧ್ಯಯನ ವಿಭಾಗ, ಮಾನಸಗಂಗೋತ್ರಿ, ಮೈಸೂರು, ಕಾರ್ಯಲಯವನ್ನು ಸಂಪರ್ಕಿಸಬಹುದು. ಅಕ್ಟೋಬರ್ 25 ರಂದು ಫೋನ್ ಇನ್ ಕಾರ್ಯಕ್ರಮ ಮೈಸೂರು,ಅ.15.ಮೈಸೂರು ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಸಮಸ್ಯೆಗಳಿಗೆ ಸಂಬಂಧಿಸಿದಂತೆ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು ಅಕ್ಟೋಬರ್ 25 ರಂದು ಬೆಳಗ್ಗೆ 10 ರಿಂದ 11 ಗಂಟೆಯವರೆಗೆ ಸಾರ್ವಜನಿಕರ ಕುಂದುಕೊರತೆ/ಅಹವಾಲು ಆಲಿಸುವ ಫೋನ್ ಇನ್ ಕಾರ್ಯಕ್ರಮ ನಡೆಸಲಿದ್ದಾರೆ. ಸಾರ್ವಜನಿಕರು ದೂರವಾಣಿ ಸಂಖ್ಯೆ 0821-2414433ಗೆ ಕರೆ ಮಾಡಿ ತಮ್ಮ ಕುಂದುಕೊರತೆಗಳ ಬಗ್ಗೆ ಚರ್ಚಿಸಬಹುದು ಎಂದು ಮೈಸೂರು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಿಸಿನೆಸ್ ಡೆವಲಪ್‍ಮೆಂಟ್ ದಿನ ಆಚರಣೆ ಮೈಸೂರು,ಅ.15.ಅಂಚೆ ಇಲಾಖೆಯು ದಿನಾಂಕ 09/10/2014 ರಿ0ದ 15/10/2014 ರವರೆಗೆ ರಾಷ್ಟ್ರೀಯ ಅಂಚೆ ಸಪ್ತಾಹವನ್ನು ಆಚರಿಸುತ್ತಿದ್ದು, ರಾಷ್ಟ್ರೀಯ ಅಂಚೆ ಸಪ್ತಾಹದ ಅಂಗವಾಗಿ ಯಾದವಗಿರಿ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಮಂಗಳವಾರ (ದಿನಾ0ಕ 14/10/2014) ವಿಭಾಗೀಯ ಮಟ್ಟದ ಬಿಸಿನೆಸ್ ಡೆವಲಪ್‍ಮೆಂಟ್ ದಿನವನ್ನು ಆಚರಿಸಲಾಯಿತು. ದೈನಂದಿನ ಜೀವನದ ವ್ಯವಹಾರಗಳಲ್ಲಿ ಮತ್ತು ದೇಶದ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ದಿಯಲ್ಲಿ ಅಂಚೆ ಇಲಾಖೆಯ ಕೊಡುಗೆಗಳ ಬಗ್ಗೆ ಜನ ಜಾಗೃತಿ ಮೂಡಿಸುವುದು ಮತ್ತು ಗ್ರಾಹಕರಲ್ಲಿ ಅಂಚೆ ಇಲಾಖೆಯ ಕಾರ್ಯ ವೈಖರಿ ಹಾಗೂ ಪಾತ್ರದ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ತಿಳುವಳಿಕೆ ಮೂಡಿಸುವ ಈ ಸಪ್ತಾಹದ ಉದ್ದೇಶವಾಗಿದೆ. ಹಿರಿಯ ಅಂಚೆ ಅಧೀಕ್ಷಕ ಡಿ. ಶಿವಯ್ಯ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಅಂಚೆ ವ್ಯವಹಾರಗಳನ್ನು ಹಾಗೂ ಇತರೆ ವಹಿವಾಟುಗಳನ್ನು ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಇಲಾಖೆಯು ಕೈಗೊಂಡಿರುವ ಹೊಸ ಯೋಜನೆಗಳ ಬಗ್ಗೆ ವಿವರಿಸಿದ ಅವರು ರೈಲು ನಿಲ್ದಾಣದ ಸಮೀಪದಲ್ಲಿರುವ ಆರ್‍ಎಮ್‍ಎಸ್ ಕಚೇರಿಯಲ್ಲಿ ಲಾಜಿಸ್ಟಿಕ್ ಅಂಚೆ, ಬಿಸಿನೆಸ್ ಪಾರ್ಸಲ್ ಹಾಗೂ ಅಂಚೆಗಳನ್ನು ಸಂಗ್ರಹಿಸಿ ರವಾನಿಸುವ ಸಲುವಾಗಿಯೇ 5 ಪಿಕ್‍ಅಪ್ ವಾಹನಗಳನ್ನು ನಿಯೋಜಿಸಲಾಗಿದೆ ಎಂದರು. ಗ್ರಾಮಾಂತರ ಪ್ರದೇಶಗಳಲ್ಲಿರುವ ಅಂಚೆ ಕಛೇರಿಗಳಲ್ಲಿ ವಿದ್ಯುತ್ ಬಿಲ್‍ಗಳನ್ನು ಪಾವತಿಸುವ ವ್ಯವಸ್ಥೆಯನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ನಗರದ 4 ಅಂಚೆ ಕಛೇರಿಗಳಲ್ಲಿ ಶೀಘ್ರದಲ್ಲಿಯೇ ಎ ಟಿ ಎಮ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ತಿಳಿಸಿದರು. ಅಂಚೆ ಜೀವ ವಿಮೆಯನ್ನು ಈಗಾಗಲೇ ಆನ್ ಲೈನ್ ಮಾಡಲಾಗಿದ್ದು ಉಳಿತಾಯ ಖಾತೆ ಯೋಜನೆಯಲ್ಲಿ ಕೋರ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು. ಸಹಾಯಕ ಅಂಚೆ ಅಧೀಕ್ಷಕ ಮಂಜುನಾಥ್ ರಾವ್, ವಿರುಪಾಕ್ಷಪ್ಪ ಸೇರಿದಂತೆ ಕೈಗಾರಿಕೋದ್ಯಮಿಗಳು, ಅಂಚೆ ಇಲಾಖೆಯ ಮುಖ್ಯಸ್ಥರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಶ್ರೇಷ್ಠ ಲೇಖಕಪ್ರಶಸ್ತಿಗೆ ಅರ್ಜಿ ಆಹ್ವಾನ ಮೈಸೂರು,ಅ.15.ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಕನ್ನಡದಲ್ಲಿ ವಿಜ್ಞಾನ ವಿಷಯದ ಪುಸ್ತಕಗಳ ಬರವಣಿಗೆಯನ್ನು ಪ್ರೋತ್ಸಾಹಿಸುವ ಸಲುವಾಗಿ 2009 ರಿಂದ ಶ್ರೇಷ್ಠ ಲೇಖಕ ರಾಜ್ಯ ಮಟ್ಟದ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ. 2014-15ನೇ ಸಾಲಿನ ಶ್ರೇಷ್ಠ ಲೇಖಕ ಪ್ರಶಸ್ತಿಗೆ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಕನ್ನಡದಲ್ಲಿ ಪುಸ್ತಕಗಳನ್ನು ಪ್ರಕಟಿಸಿರುವ ಲೇಖಕರಿಂದ ಅರ್ಜಿ ಆಹ್ವಾನಿಸಿದೆ. ಪುಸ್ತಕಗಳ ಸಂಖ್ಯೆಗನುಗುಣವಾಗಿ ಪ್ರತಿ ವಿಷಯಕ್ಕೆ ಗರಿಷ್ಠ 2 ಪ್ರಶಸ್ತಿ ನೀಡಲಾಗುವುದು. ಆಯ್ಕೆಯಾದ ಲೇಖಕರಿಗೆ ರೂ. 25 ಸಾವಿರಗಳ ಪುರಸ್ಕಾರ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಜನವರಿ 2014 ರಿಂದ ಡಿಸೆಂಬರ್ 2014 ರೊಳಗೆ ಕನ್ನಡದಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಈ ಪ್ರಶಸ್ತಿಗೆ ಸಲ್ಲಿಸಬಹುದು. ಲೇಖಕರು ನಿಗದಿತ ನಮೂನೆಯು ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು 2015ರ ಜನವರಿ 5 ರೊಳಗೆ ಸದಸ್ಯ ಕಾರ್ಯದರ್ಶಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ವಿಜ್ಞಾನಭವನ, 24/2, 21ನೇ ಮುಖ್ಯ ರಸ್ತೆ, ಬಿಡಿಎ ಕಾಂಪ್ಲೆಕ್ಸ್ ಹತ್ತಿರ ಬನಶಂಕರಿ 2ನೇ ಹಂತ, ಬೆಂಗಳೂರು-560070 ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-2671160ನ್ನು ವೆಬ್‍ಸೈಟ್ ತಿತಿತಿ.ಞsಣಚಿಛಿಚಿಜemಥಿ.oಡಿg ನಲ್ಲಿ ಸಂಪರ್ಕಿಸಬಹುದು. ಅಕ್ಟೋಬರ್ 20 ರಂದು ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನÀ ಉದ್ಘಾಟನೆ ಮೈಸೂರು,ಅ.15.ಮೈಸೂರಿನ ನಂಜರಾಜ ಬಹದ್ದೂರು ಛತ್ರದಲ್ಲಿ ರಾಜ್ಯಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನದ ಉದ್ಘಾಟನೆಯನ್ನು ಅಕ್ಟೋಬರ್ 20 ರಂದು ಸಂಜೆ 4 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಕಂದಾಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿಧಾನಸಭಾ ಸದಸ್ಯರಾದ ವಾಸು ಅವರು ಅಧ್ಯಕ್ಷತೆ ವಹಿಸುವರು. ಲೋಕೋಪಯೋಗಿ ಸಚಿವ ಡಾ.ಹೆಚ್.ಸಿ. ಮಹದೇವಪ,್ಪ ಮಹಾನಗರಪಾಲಿಕೆ ಮಹಾಪೌರರಾದ ಆರ್.ಲಿಂಗಪ್ಪ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಡಾ| ಬಿ.ಪುಷ್ಪಾ ಅಮರನಾಥ್, ಲೋಕಸಬಾ ಸದಸ್ಯ ಪ್ರತಾಪ ಸಿಂಹ, ಆರ್. ಧ್ರುವನಾರಾಯಣ್, ಸಿ.ಎಸ್.ಪುಟ್ಟರಾಜು, ವಿಧಾನಸಭಾ ಸದಸ್ಯ ತನ್ವೀರ್ ಸೇಠ್, ಎಂ.ಕೆ. ಸೋಮಶೇಖರ್, ಜಿ.ಟಿ.ದೇವೇಗೌಡರು, ಚಿಕ್ಕಮಾದು, ಸಾ.ರಾ. ಮಹೇಶ್, ಹೆಚ್.ಪಿ. ಮಂಜುನಾಥ್, ಕೆ.ವೆಂಕಟೇಶ್, ವಿಧಾನಪರಿಷತ್ ಸದಸ್ಯ ಸಿ.ಹೆಚ್.ವಿಜಯಶಂಕರ್, ಗೋ.ಮಧುಸೂದನ್, ಮರಿತಿಬ್ಬೇಗೌಡ, ಎಸ್.ನಾಗರಾಜು, ಆರ್. ಧರ್ಮಸೇನ, ಮಹಾನಗರಪಾಲಿಕೆಯ ಉಪ ಮಹಾಪೌರ ಎಂ. ಮಹದೇವಯ್ಯ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಎಲ್. ಮಾದಪ್ಪ, ತಾಲ್ಲೂಕು ಪಂಚಾಯತ್ ಅಧ್ಯಕ್ಷ ಜಿ. ಕುಮಾರ್, ಉಪಾಧ್ಯಕ್ಷ ಎ ಲೋಕಮಣಿ ಹಾಗೂ ಇತರೆ ಗಣ್ಯರು ಸಮಾರಂಭದ ಅತಿಥಿಗಳಾಗಿ ಪಾಲ್ಗೊಳ್ಳುವರು. ನ್ಯಾಯಾಂಗ ಆಡಳಿತ ತರಬೇತಿ ಭತ್ಯೆ ಅರ್ಜಿ ಆಹ್ವಾನ ಮೈಸೂರು,ಅ.15.ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆವತಿಯಿಂದ ಒಂದು ಮುಸ್ಲಿಂ ಹಾಗೂ ಒಂದು ಕ್ರಿಶ್ಚಿಯನ್ ಅಭ್ಯರ್ಥಿಗೆ ನಾಲ್ಕು ವರ್ಷ ಕಾಲಾವಧಿಯ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ಭತ್ಯೆ ನೀಡಲು ಅರ್ಹ ಕಾನೂನು ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, # 1179, ನಂ.17, 8ನೇ ಕ್ರಾಸ್, ಡಿ.ದೇವರಾಜ ಅರಸು ರಸ್ತೆ, ಭೀಮ & ಬ್ರದರ್ಸ್ ಜ್ಯೂಯಲರಿ ಹಿಂಭಾಗ, ಮೈಸೂರು ಇಲ್ಲಿ ಅಕ್ಟೋಬರ್ 31 ರೊಳಗೆ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 10 ರೊಳಗಾಗಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2422088ನ್ನು ಸಂಪರ್ಕಿಸಬಹುದು. ಕಂಪ್ಯೂಟರ್ ತರಬೇತಿ ಮಹಿಳೆಯರಿಂದ ಅರ್ಜಿ ಆಹ್ವಾನ ಮೈಸೂರು,ಅ.15.ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಪಿ.ಯು.ಸಿ ಹಾಗೂ ಅದಕ್ಕಿಂತ ಹೆಚ್ಚಿನ ವಿದ್ಯಾರ್ಹತೆ ಹೊಂದಿರುವ 18 ರಿಂದ 35 ವರ್ಷ ವಯೋಮಿತಿಯೊಳಗಿನ ವಿದ್ಯಾವಂತ ನಿರುದ್ಯೋಗಿ ಮಹಿಳೆಯರಿಗೆ ಉಚಿತವಾಗಿ ಕಂಪ್ಯೂಟರ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ. ಕಂಪ್ಯೂಟರ್ ಪ್ರೋಗ್ರಾಮರ್, ಅಕೌಂಟಿಂಗ್ ಮತ್ತು ಕಂಪ್ಯೂಟರ್, ಡೆಸ್ಕ್ ಟಾಪ್ ಪಬ್ಲಿಸಿಂಗ್ ವಿತ್ ಕನ್ನಡ ನುಡಿ, ವೆಬ್ ಡಿಜೈನರ್ ವಿಷಯಗಳಲ್ಲಿ ಕಿಯೋನಿಕ್ಸ್ ತರಬೇತಿ ಸಂಸ್ಥೆಯಿಂದ ತರಬೇತಿ ನೀಡಲಾಗುವುದು. ಆಸಕ್ತರು ಸ್ವವಿವರಗಳನ್ನೊಳಗೊಂಡ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ:27-10-2014ರ ಒಳಗೆ ಆಯಾಯ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: ಹೆಚ್.ಡಿ.ಕೋಟೆ-08228-255320, ಹುಣಸೂರು-08222-252254, ಮೈಸೂರು ಗ್ರಾಮಾಂತರ-0821-2567940, ಮೈಸೂರು ನಗರ-0821-2491962, ಪಿರಿಯಾಪಟ್ಟಣ-08223-274742 ಹಾಗೂ ಟಿ.ನರಸೀಪುರ-08227-261267 ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೈಸೂರು ರವರ ದೂರವಾಣಿ ಸಂಖ್ಯೆ 0821-2495432, 0821-2498031 ರಲ್ಲಿ ಸಂಪರ್ಕಿಸಬಹುದು. ಬಿ.ಇಡಿ ಪ್ರವೇಶ ಪರೀಕ್ಷೆ ಮೈಸೂರು,ಅ.15.ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2014-15ನೇ ಸಾಲಿನ ಬಿ.ಇಡಿ ತರಗತಿಗೆ ಪ್ರವೇಶ ಬಯಸಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಬಿ.ಇಡಿ ಪ್ರವೇಶ ಪರೀಕ್ಷೆಯು ದಿನಾಂಕ 19-10-2014 ರಂದು ಬೆಳಗ್ಗೆ 10 ರಿಂದ 12 ಗಂಟೆಯವರೆಗೆ ಕರ್ನಾಟಕ ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಅರ್ಜಿ ಸಲ್ಲಿಸಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಈಗಾಗಲೇ ಅಂಚೆ ಮೂಲಕ ಪ್ರವೇಶ ಪತ್ರಗಳನ್ನು ರವಾನಿಸಲಾಗಿದೆ. ತಲುಪದೇ ಇರುವ ವಿದ್ಯಾರ್ಥಿಗಳು ಅಂತರ್ಜಾಲದಲ್ಲಿ (ತಿತಿತಿ.ಞsoumಥಿsoಡಿe.eಜu.iಟಿ ಅಇಖಿ ಇxಚಿms) ತಮ್ಮ ಅರ್ಜಿ ಸಂಖ್ಯೆಯನ್ನು ಟೈಪ್ ಮಾಡಿ ಬಿ.ಇಡಿ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಪಡೆಯುವುದು ಅಥವಾ ಸಂಬಂಧಪಟ್ಟ ಪರೀಕ್ಷಾ ಕೇಂದ್ರಗಳಿಗೆ ಒಂದು ದಿನ ಮೊದಲು ತೆರಳಿ ಅರ್ಜಿ ಸಲ್ಲಿಸಿರುವ ದಾಖಲೆ ಒದಗಿಸಿ ಬಿ.ಇಡಿ ಪ್ರವೇಶ ಪತ್ರವನ್ನು ಪಡೆದು ಬರೆಯಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2519952, 2519943, 2519948 ಗಳನ್ನು ಸಂಪರ್ಕಿಸುವುದು.

No comments:

Post a Comment