Thursday, 2 October 2014

ಶ್ರೀಕೃಷ್ಣ ಸಂಧಾನ ನಾಟಕ ಪ್ರದರ್ಶನ
ಮಂಡ್ಯ: ತಾಲ್ಲೂಕಿನ ಮಾರಗೌಡನಹಳ್ಳಿಯ ಶ್ರೀ ಪಂಚಲಿಂಗೇಶ್ವರ ಕೃಪಾ ಪೋಷಿತ ನಾಟಕ ಮಂಡಳಿ ವತಿಯಿಂದ ‘ಶ್ರೀಕೃಷ್ಣ ಸಂಧಾನ’ ಪೌರಾಣಿಕ ನಾಟಕ ಪ್ರದರ್ಶನವನ್ನು ಅ.3ರಂದು ರಾತ್ರಿ ಆಯೋಜಿಸಲಾಗಿದೆ.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬದ ಪ್ರಯುಕ್ತ ದಿವಂಗತ ಎಂ.ಸುರೇಶ್ ಹಾಗೂ ದಿವಂಗತ ಎಂ.ಸಿ.ಶ್ರೀಧರ್ ಸ್ಮರಣಾರ್ಥ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ.
ಅಂದು ರಾತ್ರಿ 9ಕ್ಕೆ ಕಾಂಗ್ರೆಸ್ ಮುಖಂಡ ಅಮರಾವತಿ ಚಂದ್ರಶೇಖರ್ ನಾಟಕ ಪ್ರದರ್ಶನ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಶ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಎಂಪಿಸಿಎಸ್ ಮಾಜಿ ಅಧ್ಯಕ್ಷ ಎಂ.ಕರೀಗೌಡ, ಕೃಷಿಕ ಸಮಾಜದ ಸದಸ್ಯ ಎಂ.ಸುದರ್ಶನ್, ಗ್ರಾಪಂ ಅಧ್ಯಕ್ಷ ಆನಂದ್, ಕೆರಗೋಡು ಪಿಎಸ್‍ಐ ಮುನಿಯಪ್ಪ ಭಾಗವಹಿಸುವರು.

No comments:

Post a Comment