Thursday, 16 October 2014

ಕಬ್ಬಿನ ಮುಕ್ತ ಸರಬರಾಜಿಗೆ ಅವಕಾಶ ಕಲ್ಪಸಲು ಮನವಿ ಮಂಡ್ಯ,ಅ.16- ಪಾಂಡವಪುರ ಉಪವಿಭಾಗದ ಶ್ರೀರಂಗಪಟ್ಟಣ ಮತ್ತು ಪಾಂಡವಪುರ ತಾಲ್ಲೂಕಿನಿಂದ ಮೈಸೂರಿನ ಬನ್ನಾರಿಯಮ್ಮನ್ ಸಕ್ಕರೆ ಕಾರ್ಖಾನೆಗೆ ಒಪ್ಪಿಗೆ ರಹಿತ ಕಬ್ಬನ್ನು ಮುಕ್ತವಾಗಿ ಸರಬರಾಜು ಮಾಡಲು ಅವಕಾಶ ಕಲ್ಪಿಸಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಕಳೆದ 10 ವರ್ಷಗಳಿಂದ ಒಪ್ಪಿಗೆ ರಹಿತ ಕಬ್ಬನ್ನು ಮೈಸೂರಿನ ಬನ್ನಾರಿಯಮ್ಮನ್ ಸಕ್ಕರೆ ಕಾರ್ಖಾನೆಗೆ ಸರಬರಾಜು ಮಾಡುತ್ತಲಿದ್ದು, ಮೈಸೂರಿನ ಜಿಲ್ಲಾಧಿಕಾರಿಗಳು ಸ್ಥಳೀಯ ರೈತರಿಗೆ ಆದ್ಯತೆ ನೀಡಬೇಕೆಂದು ಕಾರ್ಖಾನೆಗೆ ತಿಳಿಸಿದ್ದಾರೆ. ಇದರಿಂದಾಗಿ ಒಪ್ಪಿಗೆ ರಹಿತ ಕಬ್ಬಿನ 14 ತಿಂಗಳ ಅವಧಿ ಮಿರಿರುವುದರಿಂದ ಪಾಂಡವಪುರ ಉಪವಿಭಾಗದ ಶ್ರೀರಂಗಪಟ್ಟಣ ಮತ್ತು ಪಾಂಡವಪುರ ರೈತರು ಸಂಕಷ್ಟಕ್ಕೆ ಸಿಲುಕಿರುತ್ತಾರೆ. ಆದ್ದರಿಂದ ಮಂಡ್ಯ ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ ಮುಕ್ತ ಸರಬರಾಜಿಗೆ ಅವಕಾಶ ಕಲ್ಪಿಸುವಂತೆ ಕೋರಿದ್ದಾರೆ. ಕನ್ನಡ ರಾಜ್ಯೋತ್ಸವ: ವಿವಿಧ ಸಮಿತಿಗಳ ರಚನೆ ಮಂಡ್ಯ,ಅ.16-ಪ್ರತಿವರ್ಷದಂತೆ ಈ ವರ್ಷವು ಸಹ ಕನ್ನಡ ರಾಜ್ಯೋತ್ಸವವನ್ನು ವಿಜ್ರುಂಬಣೆಯಿಂದ ಆಚರಿಸುತ್ತಲಿದ್ದು, ವಿವಿಧ ಕಾರ್ಯಗಳಿಗೆ ಪ್ರತ್ಯೇಕ ಸಮಿತಿ ರಚನೆ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪೂರ್ಣಿಮಾ ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕರೆಯಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,ಪ್ರತಿ ವರ್ಷದಂತೆ ಕನ್ನಡ ರಾಜ್ಯೋತ್ಸವನ್ನು ಈ ವರ್ಷವೂ ಸಹ ಆಚರಿಸಲಾಗುವುದು ಆದರೆ ಪ್ರತಿ ವರ್ಷದಂತೆ ಗೊಂದಲ ಸೃಷ್ಠಿಯಾಗಬಾರದೆಂಬ ದೃಷ್ಠಿಯಿಂದ ಪ್ರಶಸ್ತಿ ಪ್ರಧಾನ ಸಮಿತಿ, ಸಾಂಸ್ಕøತಿಕ ಸಮಿತಿ, ವೇದಿಕೆಯ ಸಮಿತಿ, ಹಾಗೂ ಮೆರವಣಿಗೆ ಸಮಿತಿಗಳನ್ನು ರಚಿಸಲಾಗಿದೆ ಎಂದರು. ಎಲ್ಲ ಸಮಿತಿಯವರು ತಮ್ಮ ತಮ್ಮ ಜವಾಬ್ದಾರಿಯನ್ನು ಕಟ್ಟು ನಿಟ್ಟಾಗಿ ನಿಭಾಯಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸೂಚಿನೆ ನೀಡಿದರು. ಎಲ್ಲಾ ಅಧಿಕಾರಿಗಳು ಕನ್ನಡ ರಾಜ್ಯೋತ್ಸವದ ದಿನದಂದು ರಜೆ ಎಂದು ಭಾವಿಸಿ ಕಾರ್ಯಕ್ರಮದಿಂದ ಹೊರಗುಳಿದಿರುತ್ತಾರೆ. ಆದರೆ ಯಾವ ಅಧಿಕಾರಿಯೂ ಸಹ ಅಂದು ರಜಾದಿನ ವೆಂದು ಭಾವಿಸದೇ ನಾಡ ಹಬ್ಬದ ದಿನ ಎಂದು ಭಾವಿಸಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು. ಕಾರ್ಯಕ್ರಮದ ಮೊದಲು ಸ್ತಬ್ಧಚಿತ್ರಗಳ ಪ್ರದರ್ಶನ, ಕಲಾತಂಡಗಳೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಗುವುದು. ತದನಂತರ ವೇದಿಕೆಯ ಕಾರ್ಯಕ್ರಮಗಳನ್ನು ನಡೆಸಲಾಗುವುದೆಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಮೀರಾಶಿವಲಿಂಗಯ್ಯ, ಉಪವಿಭಾಗಾಧಿಕಾರಿ ಅರುಳ್ ಕುಮಾರ್, ಜಿ.ಪಂ.ಕಾರ್ಯಪಾಲಕ ಅಭಿಯಂತರ ಚಂದ್ರಹಾಸ್, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಅಧ್ಯಕ್ಷೆ ಮಂಜುಳ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

No comments:

Post a Comment