ಬೃಹತ್ ಧ್ವನಿ ಬೆಳಕು ಕಾರ್ಯಕ್ರಮ
ನವೆಂಬರ್ 7 ರಿಂದ ಮೈಸೂರಿನಲ್ಲಿ ಕರ್ನಾಟಕ ವೈಭವ
ಮೈಸೂರು,ಅ.25.ಕರ್ನಾಟಕದ ಸಾಂಸ್ಕøತಿಕ ವೈಭವವನ್ನು ಬಿಂಬಿಸುವ ಬೃಹತ್ ಧ್ವನಿ ಬೆಳಕು ಕಾರ್ಯಕ್ರಮ ಮೈಸೂರು ವಿಶ್ವವಿದ್ಯಾನಿಲಯದ ಓವಲ್ ಮೈದಾನದಲ್ಲಿ ನವೆಂಬರ್ 7 ರಿಂದ 14 ರವರೆಗೆ ಅನಾವರಣಗೊಳ್ಳಲಿದೆ.
ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಾಗೂ ಪ್ರವಾಸಿಗರನ್ನು ಮೈಸೂರಿನತ್ತ ಸೆಳೆಯುವ ಪ್ರಯತ್ನವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಮಂತ್ರಾಲಯದ ಸಂಗೀತ ಮತ್ತು ನಾಟಕ ವಿಭಾಗ ಈ ಆಕರ್ಷಕ ಧ್ವನಿ ಬೆಳಕು ಕಾರ್ಯಕ್ರಮವನ್ನು ಪ್ರಸ್ತುತ ಪಡಿಸಲಿದೆ.
ಜಿಲ್ಲಾಡಳಿತ ವತಿಯಿಂದ ಕೈಗೊಳ್ಳಬೇಕಾದ ಸಿದ್ದತಾ ಕಾರ್ಯಕ್ರಮಗಳ ಬಗ್ಗೆ ಚರ್ಚೆಸಲು ಜಿಲ್ಲಾಧಿಕಾರಿ ಸಿ.ಶಿಖಾ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಏರ್ಪಡಿಸುವ ಬಗ್ಗೆ ವಿವಿಧ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಕಾರ್ಯಕ್ರಮಕ್ಕೆ ಅಗತ್ಯವಿರುವ ಕಲಾವಿದರನ್ನು ಸ್ಥಳೀಯವಾಗಿಯೇ ಆಯ್ಕೆ ಮಾಡಿಕೊಳ್ಳಲಿದ್ದು, ನೇರ ಸಂದರ್ಶನದ ಮೂಲಕ ಕಲಾವಿರದನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಕಲಾವಿದರ ವಾಸ್ತವ್ಯ, ಸಾರಿಗೆ ವ್ಯವಸ್ಥೆ, ವೇದಿಕೆ ವ್ಯವಸ್ಥೆ, ಉದ್ಘಾಟನಾ ಸಮಾರಂಭದ ವ್ಯವಸ್ಥೆಗಳ ಬಗ್ಗೆ ಸಭೆಯಲ್ಲಿ ಚರ್ಚೆಸಲಾಯಿತು. ಯಾವುದೇ ಲೋಪಕ್ಕೆ ಅವಕಾಶವಾಗದ ರೀತಿಯಲ್ಲಿ ಸಿದ್ದತೆ ಕೈಗೊಳ್ಳಲು ಜಿಲ್ಲಾಧಿಕಾರಿಗಳು ತಿಳಿಸಿದರು.
ಮೈದಾನಕ್ಕೆ ಅಗತ್ಯವಿರುವ ಬ್ಯಾರಿಕೇಡಿಂಗ್ ಕಾರ್ಯ ಕೈಗೊಳ್ಳಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಲಾಯಿತು. ವೇದಿಕೆ, ಪ್ರಸಾದನ ಕೊಠಡಿ ನಿರ್ಮಾಣ ಬಗ್ಗೆ ಕ್ರಮವಹಿಸಲು ಲೋಕೋಪಯೋಗಿ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಉದ್ಘಾಟನಾ ಸಮಾರಂಭದಲ್ಲಿ ನಾಡಗೀತೆ, ವೇದಿಕೆ ಕಾರ್ಯಕ್ರಮಗಳ ಸಮನ್ವಯ ನಿರ್ವಹಿಸಲು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ ಜಿಲ್ಲಾಧಿಕಾರಿಗಳು ಒಟ್ಟಾರೆ ಕಾರ್ಯಕ್ರಮದ ನೋಡಲ್ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಲು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಕಾರ್ಯಕ್ರಮ ನಡೆಯುವ ಅವಧಿಯಲ್ಲಿ ತಡೆ ರಹಿತ ವಿದ್ಯುತ್ ಪೂರೈಸುವಂತೆ ಚೆಸ್ಕಾಂ ಅಧಿಕಾರಿಗಳಿಗೆ ತಿಳಿಸಲಾಯಿತು.
ಸಭೆಯಲ್ಲಿ ನಿರ್ಮಿತಿ ಕೇಂದ್ರದ ಅಧಿಕಾರಿಗಳು, ಮಹಾನಗರ ಪಾಲಿಕೆ ಅಧಿಕಾರಿಗಳು, ಮುಡಾ ಆಯುಕ್ತ ಪಾಲಯ್ಯ, ಹೆಚ್ಚುವರಿ ಜಿಲ್ಲಾಧಿಕಾರಿ ಅರ್ಚನಾ ಸೇರಿದಂತೆ ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು.
ಕರ್ನಾಟಕ ವೈಭವ ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ಸುಮಾರು 80 ಕಲಾವಿದರು, ನಟ, ನಟಿಯರು, ಬಾಲಕಲಾವಿದರು, ನೃತ್ಯಗಾತಿಯರು ಅವಶ್ಯಕತೆ ಇದ್ದು, ಅಕ್ಟೋಬರ್ 30 ರಂದು ಬೆಳಗ್ಗೆ 10-30ಕ್ಕೆ ನಗರದ ರೈಲ್ವೆ ನಿಲ್ದಾಣದ ಸಮೀಪ ದಾಸಪ್ಪವೃತ್ತ, ಧನ್ವಂತ್ರಿರಸ್ತೆಯಲ್ಲಿರುವ ವಾರ್ತಾಭವನದಲ್ಲಿ ಕಲಾವಿದರ ಆಯ್ಕೆ ನಡೆಯಲಿದೆ.
ಸ್ಥಳೀಯ ಹಾಗೂ ಮೈಸೂರು ಸುತ್ತಮುತ್ತಲಿನ ಆಸಕ್ತರು ಆಯ್ಕೆಗಾಗಿ ಹಾಜರಾಗಬಹುದಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲಿಚ್ಫಿಸುವ ಕಲಾವಿದರು ದೃಢೀಕರಿಸಿದ ಮೂರು ಸ್ಟ್ಯಾಂಪ್ ಅಳತೆಯ ಭಾವಚಿತ್ರದೊಡನೆ ವೈಯಕ್ತಿಕ ವಿವರಗಳನ್ನೊಳಗೊಂಡ ಅರ್ಜಿಯೊಂದಿಗೆ ಆಯ್ಕೆಯ ಸಂದರ್ಶನಕ್ಕೆ ಹಾಜರಾಗಬೇಕಾಗಿದೆ.
ಅರ್ಜಿಗಳು ಪ್ರಾದೇಶಿಕ ಉಪನಿರ್ದೇಶಕರು, ಸಂಗೀತ ನಾಟಕ ವಿಭಾಗ, ಬೆಂಗಳೂರು ಮುಕ್ಕಾಂ ಮೈಸೂರು ಇವರ ಹೆಸರಿನಲ್ಲಿರಬೇಕು. ಆಯ್ಕೆಯಾದ ಕಲಾವಿದರಿಗೆ ನಿಗಧಿತ ಗೌರವ ಧನ ಹಾಗೂ ಪ್ರಮಾಣಪತ್ರ ನೀಡಲಾಗುವುದು. ಆಯ್ಕೆದಾರರ ನಿರ್ಧಾರವೇ ಅಂತಿಮವಾಗಿರುತ್ತದೆ.
ಟಿ.ನರಸೀಪುರ ತಾಲೂಕಿನಲ್ಲಿ ಗ್ರಾಮಸಂಪರ್ಕ ಕಾರ್ಯಕ್ರಮ
ಮೈಸೂರು,ಅ.25.ಟಿ.ನರಸೀಪುರ ತಾಲೂಕಿನ ಆಯ್ದ ಗ್ರಾಮಗಳಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಗ್ರಾಮವಾಹಿನಿ ಮತ್ತು ಗ್ರಾಮಸಂಪರ್ಕ ಕಾರ್ಯಕ್ರಮವನ್ನು ಅಕ್ಟೋಬರ್ 27 ರಿಂದ ನವೆಂಬರ್ 7 ರವರೆಗೆ ಹಮ್ಮಿಕೊಳ್ಳಲಾಗಿದೆ.
ಅಕ್ಟೋಬರ್ 27-ಮೂಗೂರು, ಹೊಸಹಳ್ಳಿ, 28-ಮಾದಾಪುರ, ಹಿರಿಯೂರು, 29-ಟಿ.ನರಸೀಪುರ, ಕೊತ್ತೇಗಾಲ, ಕುರುಬೂರು, 30-ತಲಕಾಡು, ಒಡೆಯಾಂಡಹಳ್ಳಿ, 31-ವಾಟಾಳು, ಸುಜ್ಜಲೂರು, ನವೆಂಬರ್ 3-ಬನ್ನೂರು, ಸೋಮನಹಳ್ಳಿ, 4-ಬಿ.ಸೀ.ಹಳ್ಳಿ, ಭುಗತಹಳ್ಳಿ, 5-ಕೊಡಗಹಳ್ಳಿ, ಗಾಡಿ ಜೋಗಿಹುಂಡಿ, 6-ಹೆಗ್ಗೂರು, ನಂಜಾಪುರ ಹಾಗೂ 7-ಬೀಡನಹಳ್ಳಿ, ದಾಸೇಗೌಡನಕೊಪ್ಪಲು ಗ್ರಾಮಗಳಲ್ಲಿ ಚಾಮರಾಜನಗರದ ರಂಗಜಂಗಮ ಕಲಾ ಬಳಗ ತಂಡದಿಂದ ಬೀದಿನಾಟಕ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಚಲನಚಿತ್ರ ಪ್ರದರ್ಶನ ಹಾಗೂ ಛಾಯಾಚಿತ್ರಪ್ರದರ್ಶನ ಕಾರ್ಯಕ್ರಮ ನಡೆಯಲಿದೆ.
ಗಾಂಧಿ ಸಪ್ತಾಹ: ಇದೇ ಸಂದರ್ಭದಲ್ಲಿ ಮೈಸೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗಾಂಧಿ ಸಪ್ತಾಹ ಕಾರ್ಯಕ್ರಮವನ್ನು ಅಕ್ಟೋಬರ್ 27 ರಿಂದ ನವೆಂಬರ್ 4 ರವರೆಗೆ ಟಿ.ನರಸೀಪುರ ತಾಲ್ಲೂಕಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಅಕ್ಟೋಬರ್ 27 ರಂದು ಮೂಗೂರು ಸರ್ಕಾರಿ ಪ್ರೌಢಶಾಲೆ, 28 ರಂದು ಮಾದಾಪುರ ಸರ್ಕಾರಿ ಪ್ರೌಢಶಾಲೆ, 29 ರಂದು ಟಿ.ನರಸೀಪುರ ಸರ್ಕಾರಿ ಪದವಿ ಪೂರ್ವ ಕಾಲೇಜು, 30 ರಂದು ತಲಕಾಡು ಸರ್ಕಾರಿ ಪದವಿ ಪೂರ್ವ ಕಾಲೇಜು, 31 ರಂದು ವಾಟಾಳು ಸರ್ಕಾರಿ ಪ್ರೌಢಶಾಲೆ, ನವೆಂಬರ್ 3 ರಂದು ಬನ್ನೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ 4 ರಂದು ಬಿ.ಸೀಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಕುರಿತ ಚಲನಚಿತ್ರ ಪ್ರದರ್ಶನ, ಗಾಂಧಿಸ್ಮøತಿ ವಾಚನ, ಪ್ರಾರ್ಥನಾ ಗೀತೆಗಳ ಕಾರ್ಯಕ್ರಮ ಹಾಗೂ ಸ್ವಚ್ಫತಾ ಕಾರ್ಯಕ್ರಮ ನಡೆಯಲಿದೆ ಎಂದು ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಎ.ಆರ್. ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಕ್ಟೋಬರ್ 31 ರಂದು ವಿಶೇಷ ಸಭೆ
ಮೈಸೂರು,ಅ.25.ಮೈಸೂರು ಮಹಾನಗರ ಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ಅಕ್ಟೋಬರ್ 31 ರಂದು ಬೆಳಿಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆ ವಿಶೇಷ ಸಭೆ ಜರುಗಲಿದೆ ಎಂದು ಮೈಸೂರು ಮಹಾನಗರ ಪಾಲಿಕೆಯ ಕೌನ್ಸಿಲ್ ಕಾರ್ಯದರ್ಶಿ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ ಮುಂದೂಡಿಕೆ
ಮೈಸೂರು,ಅ.25.ದಿನಾಂಕ 28-10-2014 ರಂದು ನಿಗಧಿಯಾಗಿದ್ದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯನ್ನು ದಿನಾಂಕ 6-11-2014ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
ಸಾಂಸ್ಕøತಿಕ ಸ್ಪರ್ಧೆ
ಮೈಸೂರು,ಅ.25.ಮೈಸೂರು ವಿಶ್ವವಿದ್ಯಾನಿಲಯ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ವತಿಯಿಂದ 2014-15ನೇ ಸಾಲಿನ ಅಂತರ ಕಾಲೇಜು ಸಾಹಿತ್ಯ ಮತ್ತು ಸಾಂಸ್ಕøತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭ ಅಕ್ಟೋಬರ್ 27 ರಿಂದ 29 ರವರೆಗೆ ನಡೆಯಲಿದ್ದು, ಅಕ್ಟೋಬರ್ 27 ರಂದು ಬೆಳಗ್ಗೆ 10 ಗಂಟೆಗೆ ಮಾನಸಗಂಗೋತ್ರಿಯ ಮಾನವಿಕ ಸಭಾಂಗಣ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಪಿ.ಕೆ.ರಾಜಶೇಖರ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಅವರು ಅಧ್ಯಕ್ಷತೆ ವಹಿಸುವರು.
ಬೆಂಗಳೂರಿನ ಖ್ಯಾತ ಚಲನಚಿತ್ರ ಹಾಗೂ ಕಿರುತೆರೆ ನಟಿ ಸೌಮ್ಯಲತ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಅಕ್ಟೋಬರ್ 28 ರಂದು ಮೈಸೂರು ಚಲೋ ಚಳವಳಿ ದಿನಾಚರಣೆ
ಮೈಸೂರು,ಅ.25.ಜಿಲ್ಲಾಡಳಿತ ವತಿಯಿಂದ ಮೈಸೂರು ಚಲೋ ಚಳವಳಿ ದಿನಾಚರಣೆಯು ಅಕ್ಟೋಬರ್ 28 ರಂದು ಬೆಳಗ್ಗೆ 11-30 ಗಂಟೆಗೆ ಶಾಂತಲಾ ಚಿತ್ರಮಂದಿರದ ಎದುರು ಸುಬ್ಬರಾಯನಕೆರೆ ಉದ್ಯಾನವನದಲ್ಲಿ ನಡೆಯಲಿದೆ.
ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರು ಧ್ವಜಾರೋಹಣ ಹಾಗೂ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕ ವಾಸು ಅವರು ಅಧ್ಯಕ್ಷತೆ ವಹಿಸುವರು.
ಲೋಕೋಪಯೋಗಿ ಸಚಿವ ಡಾ.ಹೆಚ್.ಸಿ. ಮಹದೇವಪ,್ಪ ಮಹಾನಗರಪಾಲಿಕೆ ಮಹಾಪೌರರಾದ ಆರ್.ಲಿಂಗಪ್ಪ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಡಾ| ಬಿ.ಪುಷ್ಪಾ ಅಮರನಾಥ್, ಲೋಕಸಬಾ ಸದಸ್ಯ ಪ್ರತಾಪ ಸಿಂಹ, ಆರ್. ಧ್ರುವನಾರಾಯಣ್, ಸಿ.ಎಸ್.ಪುಟ್ಟರಾಜು, ವಿಧಾನಸಭಾ ಸದಸ್ಯ ತನ್ವೀರ್ ಸೇಠ್, ಎಂ.ಕೆ. ಸೋಮಶೇಖರ್, ಜಿ.ಟಿ.ದೇವೇಗೌಡರು, ಚಿಕ್ಕಮಾದು, ಸಾ.ರಾ. ಮಹೇಶ್, ಹೆಚ್.ಪಿ. ಮಂಜುನಾಥ್, ಕೆ.ವೆಂಕಟೇಶ್, ವಿಧಾನಪರಿಷತ್ ಸದಸ್ಯ ಸಿ.ಹೆಚ್.ವಿಜಯಶಂಕರ್, ಗೋ.ಮಧುಸೂದನ್, ಮರಿತಿಬ್ಬೇಗೌಡ, ಎಸ್.ನಾಗರಾಜು, ಆರ್. ಧರ್ಮಸೇನ, ಮಹಾನಗರಪಾಲಿಕೆಯ ಉಪ ಮಹಾಪೌರ ಎಂ. ಮಹದೇವಮ್ಮ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಎಲ್. ಮಾದಪ್ಪ, ತಾಲ್ಲೂಕು ಪಂಚಾಯತ್ ಅಧ್ಯಕ್ಷ ಜಿ. ಕುಮಾರ್, ಉಪಾಧ್ಯಕ್ಷ ಎ ಲೋಕಮಣಿ ಭಾಗವಹಿಸುವರು.
ಅಂದು ಬೆಳಗ್ಗೆ 10 ಗಂಟೆಗೆ ಸುಬ್ಬರಾಯನಕೆರೆ ಸ್ಮಾರಕ ಭವನದಿಂದ ಮೆರವಣಿಗೆಗೆ ಮಹಾನಗರಪಾಲಿಕೆ ಮಹಾಪೌರರಾದ ಆರ್.ಲಿಂಗಪ್ಪ ಅವರು ಚಾಲನೆ ನೀಡುವರು. ಮೆರವಣಿಗೆಯು ಸುಬ್ಬರಾಯನಕೆರೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಭವನದಿಂದ ಹೊರಟು ನೂರಡಿ ರಸ್ತೆಯಲ್ಲಿ ಬಲಕ್ಕೆ ತಿರುಗಿ ರಾಮಸ್ವಾಮಿ ವೃತ್ತ ತಲುಪಿ, ರಾಮಸ್ವಾಮಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮತ್ತೆ ನೂರಡಿ ರಸ್ತೆ ಮಾರ್ಗವಾಗಿ ಪಾಠಶಾಲೆ, ಸಯ್ಯಾಜಿರಾವ್ ರಸ್ತೆ, ಕೆ.ಆರ್.ವೃತ್ತ, ಡಿ.ದೇವರಾಜ ಅರಸ್ ರಸ್ತೆಯಲ್ಲಿ ಎಡಕ್ಕೆ ತಿರುಗಿ ನಾರಾಯಣ ಶಾಸ್ತ್ರಿ ರಸ್ತೆ ಮೂಲಕ ಸ್ವಾತಂತ್ರ್ಯ ಹೋರಾಟಗಾರರ ಭವನ ತಲುಪುವುದು. ಮಧ್ಯಾಹ್ನ 2-30 ಗಂಟೆಗೆ ಕಲಾಮಂದಿರದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ.
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಸಂಘದ ಅಧ್ಯಕ್ಷ ಡಿ.ಎಸ್. ಜಗದೀಶ್ ಅವರುಗಳು ವಿಶೇಷ ಉಪನ್ಯಾಸ ನೀಡುವರು.
ಅಪರಿಚಿತÀ ವ್ಯಕ್ತಿಯ ಶವÀ ಪತ್ತೆಗಾಗಿ ಮನವಿ
ಮೈಸೂರು,ಅ.25.ಮೈಸೂರು ರೈಲು ನಿಲ್ದಾಣದ ಯಾರ್ಡ್‍ನ ಪಿಟ್ ಲೈನ್ ನಂ. 3ರಲ್ಲಿ ನಿಂತಿದ್ದ ನಂ 56234 ಪ್ಯಾಸೆಂಜರ್ ರೈಲುಗಾಡಿಯ ಕೋಚ್ ನಂ. ಎಸ್‍ಡಬ್ಲ್ಯೂಆರ್ ಜಿಎಸ್ 08420ರಲ್ಲಿ ಅಕ್ಟೋಬರ್ 23 ರಂದು ಸುಮಾರು 65 ವರ್ಷ ಅಪರಿಚಿತ ವ್ಯಕ್ತಿಯು ಮೃತಪಟ್ಟಿದ್ದಾರೆ. ಈ ಕುರಿತು ಅಸಹಜ ಮರಣ ಪ್ರಕರಣ ದಾಖಲಾಗಿದೆ ಹಾಗೂ ತನಿಖೆ ಕೈಗೊಂಡಿದ್ದು, ತನಿಖಾ ಕಾಲದಲ್ಲಿ ಮೃತರÀÀ ವಾರಸುದಾರರು ಪತ್ತೆಯಾಗಿರುವುದಿಲ್ಲ.
ಅಪರಿಚಿತ ವ್ಯಕ್ತಿಯು ಐದುವೆರೆ ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, ದುಂಡು ಮುಖ, ತಲೆಯಲ್ಲಿ ಸುಮಾರು 3 ಅಡಿ ಉದ್ದದ ಕಪ್ಪು-ಬಿಳಿ ಕೂದಲು, ಮೃತನ ಎಡಗಣ್ಣಿನ ಪಕ್ಕದಲ್ಲಿ ಒಂದು ಅವರೆ ಕಾಳು ಗಾತ್ರದ ಕಾರಳು ಇರುತ್ತದೆ. ತಿಳಿ ಗುಲಾಬಿ ಬಣ್ಣದ ತುಂಬು ತೋಳಿನ ಶರ್ಟ್, ಬಿಳಿ ಸ್ಯಾಂಡೋ ಬನಿಯನ್, ನಶೆ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.
ಮೃತ ವ್ಯಕ್ತಿ ದೇಹವÀನ್ನು ಮೈಸೂರಿನ ಮೆಡಿಕಲ್ ಕಾಲೇಜಿನ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. ಮೃತರÀ ವಾರಸುದಾರರ ಬಗ್ಗೆ ಮಾಹಿತಿ ದೊರೆತಲ್ಲಿ ಠಾಣಾಧಿಕಾರಿಗಳು, ಮೈಸೂರು ರೈಲ್ವೆ ಪೊಲೀಸ್ ಠಾಣೆ ಅವರನ್ನು ಅಥವಾ ದೂರವಾಣಿ ಸಂಖ್ಯೆ 0821-2516579 ಸಂಪರ್ಕಿಸಬಹುದಾಗಿದೆ.
No comments:
Post a Comment