Tuesday, 7 October 2014


ಕುಡಿಯುವ ನೀರು ಸಮಸ್ಯೆ ಆಗದಂತೆ  ಅಗತ್ಯ ಕ್ರಮ ವಹಿಸುವಂತೆ ಸೂಚನೆ
  ಮಂಡ್ಯ,sಅ.7. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಮಸ್ಯೆ ಆಗದಂತೆ ಕ್ರಮವಹಿಸಿ, ಕುಡಿಯುವ ನೀರಿನ ಕಾಮಗಾರಿಗಳನ್ನು ಆದಷ್ಟು ಬೇಗ ಮುಗಿಸಲು ಮುಂದಾಗಬೇಕು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಸಂಜೀವ್ ಕುಮಾರ್ ಅವರು  ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

  ಗ್ರಾಮೀಣಾ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರು ಘಟಕಗಳನ್ನು ಅಳವಡಿಸಲು 157 ಕಾಮಗಾರಿಗಳನ್ನು ಕೈಗೊಳ್ಳÀಲಾಗಿದ್ದು, 61 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಆದಷ್ಟು ಬೇಗ ಈ ಕಾಮಗಾರಿಗಳನ್ನು ಮುಗಿಸುವಂತೆ ತಿಳಿಸಿದ ಅವರು ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾದ ವೇಳೆ ಅಗತ್ಯತೆಗೆ ಅನುಗುಣವಾಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಕ್ರಮವಹಿಸುವಂತೆ ತಿಳಿಸಿದರು. ಅಲ್ಲದೇ ಸಕಾಲ ಯೋಜನೆಯಲ್ಲಿ ಬರುವ ಅರ್ಜಿಗಳನ್ನು ತಡ ಮಾಡದೇ ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡುವಂತೆ ಅಧಿಕಾರಿಗಳು ಜವಬ್ದಾರಿಯುತವಾಗಿ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.

   2013-14ನೇ ಸಾಲಿನ ವಾಜಪೇಯಿ ನಗರ ವಸತಿ ಯೋಜನೆಯಡಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ 505 ಮನೆಗಳನ್ನು ನಿರ್ಮಿಸಲು ಗುರಿ ನೀಡಿದ್ದು, 480 ಫಲಾನುಭವಿಗಳನ್ನು ಗುರ್ತಿಸಿ, 124 ಮನೆಗಳನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಸಭೆಯಲ್ಲಿ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿ ಮಾತಾನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿರವರು ಫಲಾನುಭವಿಗಳನ್ನು ಗುರ್ತಿಸಿ, ಆದಷ್ಟು ಬೇಗ ಮನೆಗಳನ್ನು ನಿರ್ಮಿಸಿ ಪ್ರಾರಂಭಿಸಲು ಶೀಘ್ರವೇ ಅಗತ್ಯ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ತಿಳಿಸಿದರು.

  ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳಾದ ಡಾ.ಅಜಯ್ ನಾಗಭೂಷಣ ಅವರು ವಾಜಪೇಯಿ ನಗರ ನಿವೇಶನ ಯೋಜನೆಯಡಿ 1900 ನಿವೇಶಗಳನ್ನು ಅರ್ಹ ನಿವೇಶನ ರಹಿತರಿಗೆ ಹಂಚಿಕೆ ಮಾಡಲು ಅಗತ್ಯವಾದ ಭೂಮಿಯನ್ನು ಗುರ್ತಿಸಿ ಕ್ರಮ ವಹಿಸುವಂತೆ ಸಭೆಯಲ್ಲಿ ಸೂಚಿಸಿದರು. ಅಲ್ಲದೇ ಜಿಲ್ಲೆಯಲ್ಲಿ ಸಾಕ್ರಾಮಿಕ ರೋಗಗಳನ್ನು ತಡೆಗಟ್ಟಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗೆ ಸೂಚಿಸಿದರು.

ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೋಹಿಣಿ ಸಿಂಧೂರಿ, ಅಪರ ಜಿಲ್ಲಾಧಿಕಾರಿಗಳಾದ ಬಿ.ಆರ್ ಪೂರ್ಣಿಮಾ, ಅಪರ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಅಕ್ಟೋಬರ್ 8ರಂದು ಮಹರ್ಷಿ ವಾಲ್ಮೀಕಿಯವರ ಜಯಂತಿ
  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಂಡ್ಯ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 8 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾ ಮಂದಿರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
      ವಸತಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಎಚ್.ಅಂಬರೀಷ್ ಅವರು  ಕಾರ್ಯಕ್ರಮದ ಉದ್ಘಾಟನೆ ಹಾಗೂ ಅಧ್ಯಕ್ಷತೆ ವಹಿಸುವರು. ನಿವೃತ್ತ ಕೆ.ಎ.ಎಸ್ ಅಧಿಕಾರಿಗಳಾದ ಶ್ರೀ ಡಿ. ಮಲ್ಲು ಅವರು ಮಹರ್ಷಿ ವಾಲ್ಮೀಕಿಯವರ ಬಗ್ಗೆ ವಿಶೇಷ ಉಪನ್ಯಾಸ ನೀಡುವರು.
 ಅಂದು ಬೆಳಿಗ್ಗೆ 9.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಂಂದಿರದವರೆಗೆ ಮೆರವಣಿಗೆಯನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ಅಜಯ್ ನಾಗಭೂಷಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಕ್ಟೋಬರ್ 9 ರಂದು ಜಿಲ್ಲಾ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ
    ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಬೆಂಗಳೂರು ಮತ್ತು ಮಂಡ್ಯ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಬೆಂಗಳೂರು, ನಬಾರ್ಡ ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 9 ರಂದು ಜಿಲ್ಲಾ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಮಂಡ್ಯದ ಗುರು ಭವನದಲ್ಲಿ ಸಂಜೆ 3.30 ಗಂಟೆಗೆ ಏರ್ಪಡಿಸಲಾಗಿದೆ.
   ವಸತಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಎಚ್.ಅಂಬರೀಷ್ ಅವರು ಕಾರ್ಯಕ್ರಮದ ಉದ್ಘಾಟನೆ ಹಾಗೂ ಅಧ್ಯಕ್ಷತೆ ವಹಿಸುವರು. ಲೋಕೋಪಯೋಗಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಮಳಿಗೆಗಳ ಉದ್ಘಾಟನೆ ಮಾಡುವರು ಎಂದು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚುನಾವಣಾ ಗುರುತಿನ ಚೀಟಿ ಸಂಖ್ಯೆ ಮತ್ತು ಆಧಾರ್ ಕಾರ್ಡ ಸಂಖ್ಯೆಯನ್ನು  ಸಂಗ್ರಹಿಸಿ ನೋಂದಣಿ ಮಾಡುವ ಒಂದು ದಿನದ ವಿಶೇಷ ಆಂದೋಲನ
   ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖಾ ವತಿಯಿಂದ ಅಕ್ಟೋಬರ್ 9 ರಂದು ಮಂಡ್ಯ ಪಟ್ಟಣ (ನಗರ) ವ್ಯಾಪ್ತಿಯ ಪಡಿತರ ಚೀಟಿದಾರರ ಪಡಿತರ ಚೀಟಿಗಳಿಗೆ ಚುನಾವಣಾ ಗುರುತಿನ ಚೀಟಿ ಸಂಖ್ಯೆ ಮತ್ತು ಆಧಾರ್ ಕಾರ್ಡ ಸಂಖ್ಯೆಯನ್ನು  ಸಂಗ್ರಹಿಸಿ ನೋಂದಣಿ ಮಾಡುವ ಒಂದು ದಿನದ ವಿಶೇಷ ಆಂದೋಲನವನ್ನು ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಕಚೇರಿ ಹಿಂಭಾಗ( ಜಿಲ್ಲಾಧಿಕಾರಿಗಳ ಕಟ್ಟಡದ ಪಕ್ಕ) ಮಂಡ್ಯ ಇಲ್ಲಿ ಬೆಳಿಗ್ಗೆ 10 ರಿಂದ 4 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.    
     ಇದುವರೆವಿಗೂ ಎಸ್.ಎಂ.ಎಸ್ ಕಳುಹಿಸದೇ ಇರುವ ಪಡಿತರ ಚೀಟಿದಾರರು ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಕಚೇರಿ ಹಿಂಭಾಗ( ಜಿಲ್ಲಾಧಿಕಾರಿಗಳ ಕಟ್ಟಡದ ಪಕ್ಕ)  ಈ ಸ್ಥಳಕ್ಕೆ ಭೇಟಿ ನೀಡಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೇಂದು ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

          ನಗರಸಭೆ ವತಿಯಿಂದ ನಿವೇಶ ವಿತರಣೆಗೆ ಅರ್ಜಿ ಕರೆದಿಲ್ಲ: ಸ್ಪಷ್ಟನೆ
 ಮಂಡ್ಯ ನಗರಸಭಾ ಕಚೇರಿಯಿಂದ ನಿವೇಶನಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಅನಧಿಕೃತವಾಗಿ ಅರ್ಜಿಗಳನ್ನು ತಯಾರಿಸಿಕೊಂಡು ಸಹಿ ಮಾಡಿಸಿ ಸಾರ್ವಜನಿಕರನ್ನು ದಿಕ್ಕು ತಪ್ಪಿಸಲಾಗುತ್ತಿದೆ ಎಂದು ಬಗ್ಗೆ ಮೇ 26 ರಂದು ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗಿರುತ್ತದೆ. ಆದರೆ ಮಂಡ್ಯ ನಗರಸಭೆಯಿಂದ ಯಾವುದೇ ರೀತಿಯ ನಿವೇಶನಗಳನ್ನು ವಿತರಣೆ ಮಾಡಲು ಯಾವುದೇ ಅರ್ಜಿಗಳನ್ನು ಕರೆದಿರುವುದಿಲ್ಲವೆಂದು ಸಾರ್ವಜನಿಕರಿಗೆ ನಗರಸಭೆ ಪೌರಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
                                   ಜನ ಸಂಪರ್ಕ ಸಭೆ
    ಜಿಲ್ಲಾ ಸರ್ಕಾರಿ ಅಧಿಕಾರಿಗಳ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ಅಕ್ಟೋಬರ್ 10ರಂದು ಶ್ರೀರಂಗಪಟ್ಟಣ ಉಪವಿಭಾಗ ವ್ಯಾಪ್ತಿಗೆ ಸಂಬಂಧಿಸಿದಂತೆ  ಶ್ರೀರಂಗಪಟ್ಟಣದಲ್ಲಿ,  ಪಾಂಡವಪುರ ಉಪವಿಭಾಗದ ವ್ಯಾಪ್ತಿಗೆ ಸಂಬಂಧಿಸಿದಂತೆ ಪಾಂಡವಪುರದಲ್ಲಿ ಮಧ್ಯಾಹ್ನ 2.30 ಗಂಟೆಗೆ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ.
   ಅಕ್ಟೋಬರ್ 13ರಂದು ಬೆಳಿಗ್ಗೆ 11 ಗಂಟೆಗೆ ಕೆ.ಆರ್.ಪೇಟೆ-1&2 ಉಪ ವಿಭಾಗÀ ವ್ಯಾಪ್ತಿಗೆ ಸಂಬಂಧಿಸಿದಂತೆ ಕೆ.ಆರ್.ಪೇಟೆಯಲ್ಲಿ , ನಾಗಮಂಗಲ ಉಪ ವಿಭಾಗ ವ್ಯಾಪ್ತಿಗೆ ಸಂಬಂಧಿಸಿದಂತೆ  ನಾಗಮಂಗಲದಲ್ಲಿ ಮಧ್ಯಾಹ್ನ 2.30 ಗಂಟೆಗೆ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾದೆ.
     ಅಕ್ಟೋಬರ್ 14ರಂದು ಬೆಳಿಗ್ಗೆ 11 ಗಂಟೆಗೆ ಮದ್ದೂರು-1&2 ಉಪ ವಿಭಾಗದ ವ್ಯಾಪ್ತಿಗೆ ಸಂಬಂಧಿಸಿದಂತೆ ಮದ್ದೂರುನಲ್ಲಿ, ಮಳವಳ್ಳಿ ಉಪ ವಿಭಾಗದ ವ್ಯಾಪ್ತಿಗೆ ಸಂಬಂಧಿಸಿದಂತೆ ಮಳವಳ್ಳಿಯಲ್ಲಿ ಮಧ್ಯಾಹ್ನ 2.30 ಗಂಟೆಗೆ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಅಧೀüಕ್ಷಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
         




No comments:

Post a Comment