ನ.7 ರಂದು ಜಿ.ಪಂ. ಸಾಮಾನ್ಯ ಸಭೆ
ಮಂಡ್ಯ ನ.3-ಮಂಡ್ಯ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯನ್ನು ನವೆಂಬರ್ 7ರಂದು ಬೆಳಿಗ್ಗೆ 11.00 ಗಂಟೆಗೆ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಟಿ.ಮಂಜುಳಾ ಪರಮೇಶ್ ಅವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆಯನ್ನು ಕರೆಯಲಾಗಿದೆ ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ.11 ರಂದು ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ
ವಸತಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮವೂ ಸೇರಿದಂತೆ) 2014-15ನೇ ಸಾಲಿನ ಅಕ್ಟೋಬರ್ 2014ರ ಅಂತ್ಯದವರೆಗಿನ ದ್ವಿತೀಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ನವೆಂಬರ್ 11 ರಂದು ಬೆಳಿಗ್ಗೆ 11.00 ಗಂಟೆಗೆ ಜಿಲ್ಲಾ ಪಂಚಾಯತ್‍ನ ಕಾವೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ರಾಜ್ಯ ಯೋಜನೆಯಡಿ ತರಬೇತಿ: ಅರ್ಜಿ ಆಹ್ವಾನ
ಮದ್ದೂರು ಪುರಸಭಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ವಿದ್ಯಾವಂತ ನಿರುದ್ಯೋಗಿಗಳಿಗೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ರಾಜ್ಯ ಯೋಜನೆಯಡಿ ಅಕೌಂಟಿಂಗ್ ಮತ್ತು ಟ್ಯಾಲಿ, ಕಂಪ್ಯೂಟರ್ ಫಂಡಮೆಂಟಲ್, ಎಂ.ಎಸ್. ಆಫೀಸ್, ಇಂಟರ್‍ನೆಟ್ ಮತ್ತು ಡಿಟಿಪಿ, ಲಘುವಾಹನ ಚಾಲನಾ ತರಬೇತಿ ಹಾಗೂ ಭಾರಿವಾಹನ ಚಾಲನಾ ತರಬೇತಿಗಳನ್ನು ಉಚಿತವಾಗಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಗಳನ್ನು ಮದ್ದೂರು ಪುರಸಭಾ ಕಚೇರಿಯಿಂದ ಪಡೆದು ಸೂಕ್ತ ದಾಖಲೆಗಳೊಂದಿಗೆ ನವೆಂಬರ್ 15 ರಂದು ಸಂಜೆ 5.30 ಗಂಟೆಯೊಳಗೆ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಮದ್ದೂರು ಪುರಸಭೆ ಕಚೇರಿಯನ್ನು ಸಂಪರ್ಕಿಸುವಂತೆ ಮದ್ದೂರು ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments:
Post a Comment