ಕರ್ನಾಟಕ ಸರ್ಕಾರ
ಉಪನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ,
ಎರಡನೇ ಮಹಡಿ, ನಂ.17, ಭಗವಾನ್ ಮಹಾವೀರ ರಸ್ತೆ, (ಇನ್‍ಫೆಂಟ್ರಿ ರಸ್ತೆ) ಬೆಂಗಳೂರು-560 001
ವಾರ್ತಾ ವಿಶೇಷ
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯ ಹಾಗೂ ವಿದ್ಯಾರ್ಥಿವೇತನ ಸೌಲಭ್ಯ
ಬೆಂ. ಗ್ರಾ. ಜಿಲ್ಲೆ. ಮಾ: 2 _ ಅಲ್ಪಸಂಖ್ಯಾತರ ಸಮುದಾಯದ ಮುಸಲ್ಮಾನರು, ಕ್ರಿಶ್ಚಿಯನ್ನರು, ಜೈನರು, ಭೌದ್ಧರು, ಸಿಖ್ಖರು, ಮತ್ತು ಪಾರ್ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಅಲ್ಪಸಂಖ್ಯಾತರ ಇಲಾಖೆಯು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ/ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿವೇತನ, ಪ್ರೋತ್ಸಾಹಧನ, ನರ್ಸಿಂಗ್, ಕಂಪ್ಯೂಟರ್ ತರಬೇತಿ, ಜೈನ್ ಸಮುದಾಯದವರಿಗೆ ವಿದ್ಯಾರ್ಥಿವೇತನ, ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಇತ್ಯಾದಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ, ಹೊಸಕೋಟೆ ಟೌನ್, ಬೆಂಗಳೂರು ಗ್ರಾಮಾಂತರ, ಬಾಲಕರಿಗೆ ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ, ಸಿಂಡಿಕೇಟ್ ಬ್ಯಾಂಕ್ ಕಟ್ಟಡ, ಮೂರನೇ ಮಹಡಿ, ಜೆ.ಪಿ. ಆಸ್ಪತ್ರೆ ಎದುರು, ಮೈಸೂರ್ ಬ್ಯಾಂಕ್ ಹಿಂಭಾಗ, ಪರಮಣ್ಣ ಲೇಔಟ್, ನೆಲಮಂಗಲ ಟೌನ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಸತಿ ನಿಯಲಗಳಿದ್ದು, ಸೌಲಭ್ಯ ಪಡೆಯುವವರು ಅರ್ಜಿಗಳನ್ನು ಆಯಾ ವಿದ್ಯಾರ್ಥಿನಿಲಯದಲ್ಲಿ ಪಡೆಯಬಹುದು.
ವಿದ್ಯಾರ್ಥಿವೇತನ ಕಾರ್ಯಕ್ರಮಗಳು: ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ:- 1ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು. ರಾಜ್ಯದ ಸರ್ಕಾರಿ/ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವರ್ಷ ಒಂದಕ್ಕೆ ರೂ.1000/-ರಿಂದ 5000/- ರವರೆಗೆ ವಿದ್ಯಾರ್ಥಿವೇತನ ನೀಡಲಾಗುವುದು. ವಿದ್ಯಾರ್ಥಿವೇತನಕ್ಕೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳನ್ನು ತಿebsiಣe:-ತಿತಿತಿ.ಉoಞಜom.ಞಚಿಡಿ.ಟಿiಛಿ ನಲ್ಲಿ ಪಡೆಯಬಹುದು.
ಕುಟುಂಬದ ವಾರ್ಷಿಕ ಆದಾಯ ಮಿತಿ ರೂ.1.00 ಲಕ್ಷಕ್ಕೆ ಮೀರಿರಬಾರದು. ವಿದ್ಯಾರ್ಥಿಯು ಹಿಂದಿನ ತರಗತಿಯಲ್ಲಿ ಶೇ.50 ರಷ್ಟು ಅಂಕ ಗಳಿಸಿರಬೇಕು. ಶೇ30 ರಷ್ಟು ವಿದ್ಯಾರ್ಥಿ ವೇತನವನ್ನು ಬಾಲಕಿಯರಿಗೆ ಮೀಸಲಿರಿಸಿದೆ.
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ: ಪಿಯುಸಿ ನಂತರದ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್‍ಡಿ.ಯವರಿಗಿನ ಎಲ್ಲಾ ಕೋರ್ಸ್‍ಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಅವಕಾಶವಿದೆ. ರಾಜ್ಯದ ಸರ್ಕಾರಿ/ಅನುದಾನಿತ/ಹಾಗೂ ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪಾವತಿಸಿದ ಪ್ರವೇಶ ಶುಲ್ಕ ಹಾಗೂ ಭೋಧನ ಶುಲ್ಕವನ್ನು ಆಧರಿಸಿ ಗರಿಷ್ಠ ರೂ.3500/- ರಿಂದ ರೂ.7500/- ರವರೆಗೆ ಪ್ರತಿ ವರ್ಷಕ್ಕೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ವಿದ್ಯಾರ್ಥಿವೇತನಕ್ಕೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ ನಂತರ ಅದರ ಮೂಲಪ್ರತಿಯಲ್ಲಿ ವಿದ್ಯಾರ್ಥಿಯು ಕಾಲೇಜಿನ ಪ್ರಾಂಶುಪಾಲರಿಂದ ಧೃಢೀಕರಿಸಿ ರುಜು ಪಡೆದು ಕೇಳಿರುವ ಎಲ್ಲಾ ದಾಖಲೆಗಳ (ಆದಾಯ ಪತ್ರ, ಅಂಕಪಟ್ಟಿ, ಕಾಲೇಜಿಗೆ ಕಟ್ಟಿರುವ ಶುಲ್ಕ ಜೆರಾಕ್ಸ್ ಪ್ರತಿ, ವಿದ್ಯಾರ್ಥಿಯ ಬ್ಯಾಂಕಿನ ಖಾತೆಯ ವಿವರ, ಮತ್ತು ಭಾವ ಚಿತ್ರ)¸ಮೇತ ಪೂರ್ಣ ಅರ್ಜಿಯನ್ನು ಜಿಲ್ಲಾ ಕಚೇರಿ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ವಿಶ್ವೇಶ್ವರಯ್ಯ ಗೋಪುರ, 1ನೇ ಮಹಡಿ, ಪೋಡಿಯಂ ಬ್ಲಾಕ್, ಬೆಂಗಳೂರು-560001. ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗೆ ತಿebsiಣe:-ತಿತಿತಿ.ಉoಞಜom.ಞಚಿಡಿ.ಟಿiಛಿ ನಲ್ಲಿ ಲಭ್ಯವಿರುತ್ತದೆ. ಹಿಂದಿನ ತರಗತಿಯಲ್ಲಿ ಶೇ.50 ರಷ್ಟು ಅಂಕ ಗಳಿಸಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ.2 ಲಕ್ಷಕ್ಕೆ ಮೀರಿರಬಾರದು, ಶೇ 30 ರಷ್ಟು ವಿದ್ಯಾರ್ಥಿ ವೇತನವನ್ನು ಬಾಲಕಿಯರಿಗಾಗಿ ಮೀಸಲಿರಿಸಿದೆ.
No comments:
Post a Comment