Saturday, 21 March 2015

ಡಿಕೆ ರವಿ ನಿಗೂಢ ಸಾವು ಪ್ರಕರಣ: ಯಾವುದೇ ಸಂಗತಿಯನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ.



ಸೋಮವಾರ ಸದನದಲ್ಲಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸರಕಾರದ ನಿಲುವೇನೆಂಬುದನ್ನು ಸ್ಪಷ್ಟಪಡಿಸುವುದಾಗಿ ಅವರು ಮಾಧ್ಯಮಕ್ಕೆ ತಿಳಿಸಿದರು. ರವಿ ಸಾವಿನ ಪ್ರಕರಣವನ್ನು ಸಿಐಡಿ ಬದಲು ಸಿಬಿಐಗೆ ವಹಿಸಬೇಕೆಂದು ವಿರೋಧ ಪಕ್ಷ ಮತ್ತು ಸಾರ್ವಜನಿಕರಿಂದ ಒತ್ತಡ ಬರುತ್ತಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಲೇಬೇಕಾಗಿದೆ.

ಕಡೆಗೂ ಬಾಯಿಬಿಟ್ಟ ಸಿದ್ದು ಕೋಲಾರದ ಡಿಸಿಯಾಗಿದ್ದಾಗ ಡಿಕೆ ರವಿ ಭೂಗಳ್ಳರಿಗೆ ಸಿಂಹಸ್ವಪ್ನವಾಗಿದ್ದರು. ಕೆಲ ರಾಜಕಾರಣಿಗಳಿಂದ ಡಿಕೆ ರವಿಯವರಿಗೆ ಬೆದರಿಕೆಯ ಕರೆಗಳೂ ಬಂದಿದ್ದವು. ಈ ಹಿನ್ನೆಲೆಯಲ್ಲಿ ಕೋಲಾರದಿಂದ ಬೆಂಗಳೂರಿಗೆ ಅವರನ್ನು ಟ್ರಾನ್ಸ್‌ಫರ್ ಮಾಡಲಾಗಿತ್ತು. ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಕೂಡ ತೆರಿಗೆಗಳ್ಳರ ವಿರುದ್ಧ ರವಿ ತಿರುಗಿಬಿದ್ದಿದ್ದರು. ಅವರಿಂದ ಕೊಲೆ ಬೆದರಿಕೆ ಕರೆ ಬಂದಿದ್ದರಿಂದ ರವಿಯವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

No comments:

Post a Comment