Tuesday, 17 March 2015

ಮಂಡ್ಯ ಸುದ್ದಿಗಳು.

   ಮಾ. 18 ಮತ್ತು 19 ರಂದು ವಿದ್ಯುತ್ ಅಡಚಣೆ
ಮಂಡ್ಯ, ಮಾ. 17: ಕೆ.ಐ.ಎ.ಡಿ.ಬಿ ವಿದ್ಯುತ್ ವಿತರಣಾ ಕೇಂದ್ರದ ಗುತ್ತಲು ಫೀಡರ್‍ನ ವ್ಯಾಪ್ತಿಗೆ ಬರುವ ಪ್ರದೇಶದಲ್ಲಿ ಮಾರ್ಚ್ 18 ಮತ್ತು 19 ರಂದು ಬೆಳಗ್ಗೆ 10 ರಿಂದ ಸಂಜೆ 5ರ ವರೆಗೆ ರಸ್ತೆ ಅಗಲೀಕರಣ ಕೆಲಸ ನಡೆಯುವುದರಿಂದ ಈ ಫೀಡರ್‍ನ ವ್ಯಾಪ್ತಿಯಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದ್ದು, ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕೆಂದು ಸೆಸ್ಕಾಂನ ಕಾರ್ಯ ನಿರ್ವಾಹಕ ಅಭಿಯಂತರ ಎ.ಎನ್. ರವಿಶಂಕರ್ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಗುತ್ತಲು ರಸ್ತೆ, ಸ್ವರ್ಣಸಂದ್ರ, ಸಾಹುಕಾರ್ ಚನ್ನಯ್ಯ ಬಡಾವಣೆ, ಇಂದಿರಾ ಕಾಲೋನಿ, ಹಳೆಗುತ್ತಲು, ಅರಕೇಶ್ವರ ನಗರ, ಚಿಕ್ಕೇಗೌಡನದೊಡ್ಡಿ, ಸಾದತ್ ನಗರ, ಚನ್ನಪ್ಪನದೊಡ್ಡಿ, ಯತ್ತಗದಹಳ್ಳಿ, ನೆಹರು ನಗರ, ಭೋವಿ ಕಾಲೋನಿ, ಲೇಬರ್ ಕಾಲೋನಿ, ತಮಿಳ್ ಕಾಲೋನಿ, ಹಂದಿ ಹಳ್ಳ, ತಾವರಗೆರೆ ಪ್ರದೇಶದಲ್ಲಿ ಅಂದು ವಿದ್ಯುತ್ ಅಡಚಣೆಯಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ.19 ರಂದು ನಾಗಮಂಗಲದಲ್ಲಿ ವಿಚಾರ ಸಂಕಿರಣ
ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಾಗಮಂಗಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದಲ್ಲಿ ಮಾರ್ಚ್ 19 ರಂದು ಬೆಳಗ್ಗೆ 11.30ಕ್ಕೆ ಮದ್ಯಪಾನ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳು ಕುರಿತು ವಿಚಾರ ಸಂಕಿರಣ ಆಯೋಜಿಸಲಾಗಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆಯುವ ಈ ವಿಚಾರ ಸಂಕಿರಣದಲ್ಲಿ ನಾಗಮಂಗಲದ ಸಮಾಜ ಸೇವಕರಾದ ಶ್ರೀನಿವಾಸ್ ಅವರು ಉಪನ್ಯಾಸ ನೀಡುವರು. ಕಾಲೇಜಿನ ಪ್ರಾಂಶುಪಾಲರಾದ ನಂಜೇಗೌಡ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ಹರೀಶ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಕೆ.ಕೆ. ಧನಂಜಯ, ಕರ್ನಾಟಕ ಜಾನಪದ ಪರಿಷತ್ ನಾಗಮಂಗಲ ಘಟಕದ ಅಧ್ಯಕ್ಷರಾದ ಸಿ.ಎನ್. ಮಂಜೇಶ್, ಗ್ರಂಥಪಾಲಕರಾದ ಸಿ. ಸಿದ್ದರಾಜು ಅವರು ಭಾಗವಹಿಸುವರು ಎಂದು ಜಿಲ್ಲಾ ವಾರ್ತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ.20 ರಂದು ಶ್ರೀರಂಗಪಟ್ಟಣದಲ್ಲಿ ವಿಚಾರ ಸಂಕಿರಣ
ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶ್ರೀರಂಗಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಜನಮನ ಸಾಂಸ್ಕøತಿಕ ಪ್ರತಿಷ್ಠಾನದ ಸಹಯೋಗದಲ್ಲಿ ಮಾರ್ಚ್ 20 ರಂದು ಬೆಳಗ್ಗೆ 11.30ಕ್ಕೆ ಮದ್ಯಪಾನ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳು ಕುರಿತು ವಿಚಾರ ಸಂಕಿರಣ ಆಯೋಜಿಸಲಾಗಿದೆ.
ಶ್ರೀರಂಗಪಟ್ಟಣ ಸರ್ಕಾರಿ ಪಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮೈಸೂರಿನ ಸಾಹಿತಿಗಳಾದ ಕೆ.ಜೆ. ನಾರಾಯಣ ಅವರು ಉಪನ್ಯಾಸ ನೀಡುವರು. ಪ್ರಾಂಶುಪಾಲರಾದ ಗೌರಮ್ಮ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಶ್ರೀರಂಗಪಟ್ಟಣ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಜೆ.ಶ್ರೀನಿವಾಸ್, ಮಂಡ್ಯ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಖಜಾಂಚಿ ಸಿ.ಸಿದ್ದಲಿಂಗು, ಪತ್ರಕರ್ತರಾದ ಗಣಂಗೂರು ನಂಜೇಗೌಡ ಅವರು ಭಾಗವಹಿಸುವರು ಎಂದು ಜಿಲ್ಲಾ ವಾರ್ತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*****

No comments:

Post a Comment