ಏಪ್ರಿಲ್ 21 ರಂದು ಬಸವ ಜಯಂತಿ ಆಚರಣೆ ಸಿದ್ಧತೆಗೆ ಸೂಚನೆ
ಮೈಸೂರು,ಏ.09.ಮೈಸೂರು ಜಿಲ್ಲಾಡಳಿತ ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ್ಲ ಜಗಜ್ಯೋತಿ ಬಸವಣ್ಣ ಅವರ ಜನ್ಮಾದಿನಾಚರಣೆಯನ್ನು ಏಪ್ರಿಲ್ 21 ರಂದು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಹಾಗೂ ಪ್ರಭಾರ ಜಿಲ್ಲಾಧಿಕಾರಿ ಅರ್ಚನಾ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಬಸವಜಯಂತಿ ಆಚರಣೆ ಸಂಬಂಧ ಹಮ್ಮಿಕೊಳ್ಳಲಾದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಭಾರ ಜಿಲ್ಲಾಧಿಕಾರಿಯವರು ಬಸವ ಜಯಂತ್ರೋತ್ಸವದ ಅಂಗವಾಗಿ ಏಪ್ರಿಲ್ 21 ರಂದು ಬೆಳಿಗ್ಗೆ 10-30 ಗಂಟೆಗೆ ನಗರದ ಬಸವೇಶ್ವರದ ವೃತ್ತದಲ್ಲಿರುವ ಬಸವಣ್ಣ ಅವರ ಪುತ್ಥಳಿಗೆ ಮಾರ್ಲಾಪಣೆ ಮಾಡಿದ ನಂತರ ಬೆಳಿಗ್ಗೆ 11 ಗಂಟೆಗೆ ಕಲಾಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.
ಇದೇ ವೇಳೆ ಮಾತನಾಡಿದ ಬಸವ ಬಳಗಗಳ ಒಕ್ಕೂಟದ ಅಧ್ಯಕ್ಷರಾದ ಮೂಗೂರು ನಂಜುಂಡಸ್ವಾಮಿ ಅವರು ಒಕ್ಕೂಟದ ವತಿಯಿಂದ ಪ್ರತ್ಯೇಕವಾಗಿ ಏಪ್ರಿಲ್ 21 ರಿಂದ 23 ರವರೆಗೆ ಬಸವ ಜಯಂತಿ ಕಾರ್ಯಕ್ರಮವನ್ನು
ಆಯೋಜಿಸಲಾಗುವುದು. ಏಪ್ರಿಲ್ 20 ರಂದು ಸಂಜೆ ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣನವರ ಪುತ್ಥಳಿಗೆ ಮಾರ್ಲಾಪಣೆ ಹಾಗೂ ವಿವಿಧ ಕಲಾತಂಡಗಳನ್ನೊಳಗೊಂಡ ಮೆರವಣಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಅಲ್ಲದೇ ಏಪ್ರಿಲ್ 21 ರಂದು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗುವ ಬಸವ ಜಯಂತಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಯವರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.
ಬಸವಣ್ಣನವರ ಕುರಿತು ಉಪನ್ಯಾಸ ನೀಡಲು ಮಲಿಯೂರು ಗುರುಸ್ವಾಮಿ ಅವರನ್ನು ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಬಿಜಾಪುರದ ಸಿದ್ದೇಶ್ವರ ಸ್ವಾಮಿಜೀಯವರು ಕಾರ್ಯಕ್ರಮದ ದಿವ್ಯಸಾನ್ನಿಧ್ಯ ವಹಿಸಲು ಹಾಗೂ ಏಪ್ರಿಲ್ 21 ಹಾಗೂ 22 ರಂದು ಕಲಾಮಂದಿರವನ್ನು ದೀಪಾದಿಂದ ಅಲಂಕರಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.
ಅಧಿಕಾರಿ/ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಹಾಗೂ ಸಂಘ ಸಂಸ್ಥೆಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕಾಗಿ ಪ್ರಭಾರ ಜಿಲ್ಲಾಧಿಕಾರಿ ಅರ್ಚನಾ ಅವರು ತಿಳಿಸಿದರು
ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕುರಿಮಂಡಿ ಕಸಾಯಿಖಾನೆ ಬಂದ್
ಮೈಸೂರು,ಏ.10.ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೊಳಪಡುವ ಕುರಿ, ಮೇಕೆ ಕಸಾಯಿಖಾನೆ ಮತ್ತು ಇತರೆ ಎಲ್ಲ ಮಾಂಸದ ಅಂಗಡಿಗಳನ್ನು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ 2015 ರ ಏಪ್ರಿಲ್ 14 ರಂದು ಭಾನುವಾರ ಮುಚ್ಚಲಾಗುತ್ತದೆ. ಮೈಸೂರು ನಗರದಲ್ಲಿ ಸದರಿ ದಿನದಂದು ಮಾಂಸದ ವ್ಯಾಪಾರವನ್ನು ಕಡ್ಡಾಯವಾಗಿ ನಿಷೇದಿಸಲಾಗಿದೆ ಹಾಗೂ ಎಲ್ಲ ಮಾರುಕಟ್ಟೆ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಮೈಸೂರು ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕೈಗೊಳ್ಳುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧ ಏಪ್ರಿಲ್ 10 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮೈಸೂರು ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳಿಗೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಏಪ್ರಿಲ್ 17 ರಂದು ಮೈಸೂರು ವಿ.ವಿ 95ನೇ ವಾರ್ಷಿಕ ಘಟಿಕೋತ್ಸವ
ಮೈಸೂರು,ಏ.09-ಮೈಸೂರು ವಿಶ್ವವಿದ್ಯಾನಿಲಯದ 95ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮವು ಏಪ್ರಿಲ್ 17 ರಂದು ಬೆಳಿಗ್ಗೆ 11 ಗಂಟೆಗೆ ಕ್ರಾಫರ್ಡ್‍ಭವನದಲ್ಲಿ ನಡೆಯಲಿದೆ.
ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ರಾಷ್ಟ್ರೀಯ ಸಂಶೋಧನಾ ಮತ್ತು ಹೈದರಾಬಾದ್ ವಿಶ್ವವಿದ್ಯಾನಿಲಯದ ರಸಾಯನಶಾಸ್ತ್ರ ಶಾಲೆಯ ಸಂಶೋಧನಾ ಪ್ರಾಧ್ಯಾಪಕರಾದ ಪ್ರೊ|| ಗೋವರ್ದನ್ ಮೆಹತ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.
ರಾಜ್ಯದ ರಾಜ್ಯಪಾಲರು ಹಾಗೂ ಕುಲಾಧಿಪತಿಗಳ ವಾಜುಬಾಯಿ ವಾಲಾ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದು, ಉನ್ನತ ಶಿಕ್ಷಣ ಮತ್ತು ಪ್ರವಾಸೋದ್ಯಮ ಸಚಿವ ಆರ್. ವಿ. ದೇಶಪಾಂಡೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಜಿಲ್ಲಾ ಪ್ರವಾಸ
ಮೈಸೂರು,ಏ.09. ಡಾ|| ಸರೋಜಿನಿ ಮಹಿಷಿ ವರದಿ ಅನುಷ್ಠಾನ ಹಾಗೂ ನಾಮಫಲಕಗಳಲ್ಲಿ ತ್ರಿಭಾಷಾ ಸೂತ್ರ ಅಳವಡಿಸುವ ಬಗ್ಗೆ ಪರಿಶೀಲಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಎಲ್. ಹನುಮಂತಯ್ಯ ಅವರು ಏಪ್ರಿಲ್ 13 ರಂದು ಬೆಳಿಗ್ಗೆ 11-30 ಗಂಟೆಗೆ ಮೈಸೂರಿನಲ್ಲಿರುವ ಕೇಂದ್ರೀಯ ಆಹಾರ ಮತ್ತು ತಾಂತ್ರಿಕ ಸಂಶೋಧನಾ ಸಂಸ್ಥೆಗೆ ಭೇಟಿ ನೀಡಲಿದ್ದಾರೆ.
ಮಂದಪ್ಪ ಎಲ್.ಎಂ. ಅವರಿಗೆ ಪಿಎಚ್.ಡಿ. ಪದವಿ
ಮೈಸೂರು,ಏ.09.ಮೈಸೂರು ವಿಶ್ವವಿದ್ಯಾಲಯವು ಮಂದಪ್ಪ ಎಲ್.ಎಂ. ಅವರಿಗೆ ಪಿಎಚ್.ಡಿ. ಪದವಿ ಪ್ರಕಟಿಸಿದೆ. ಡಾ. ಹೆಚ್.ಕೆ. ಮನನ್‍ಮಣಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ “ಒoಟeಛಿuಟಚಿಡಿ ಆeಣeಛಿಣioಟಿ oಜಿ ಃಚಿಛಿiಟಟus ಅeಡಿeus ಚಿಟಿಜ Iಣs ಖಿoxiಟಿs iಟಿ ಈooಜ” ಕುರಿತು ಸಾದರಪಡಿಸಿದ ಃioಣeಛಿhಟಿoಟogಥಿ ವಿಷಯದ ಮಹಾಪ್ರಬಂಧವನ್ನು ಪಿಎಚ್.ಡಿ. ಪದವಿಗಾಗಿ ಅಂಗೀಕರಿಸಿದೆ. ಮಂದಪ್ಪ ಎಲ್.ಎಂ. ಅವರು ಸದರಿ ಪಿಎಚ್.ಡಿ. ಪದವಿಯನ್ನು ಮುಂದೆ ನಡೆಯುವ ವಾರ್ಷಿಕ ಘಟಿಕೋತ್ಸವದಲ್ಲಿ ಪಡೆಯಬಹುದಾಗಿದೆ ಎಂದು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರು ತಿಳಿಸಿದ್ದಾರೆ.

No comments:
Post a Comment