ಪ್ರವಾಸ ಕಾರ್ಯಕ್ರಮ
ಮೈಸೂರು,ಏ.15.-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಪ್ರಿಲ್ 16 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಿಗ್ಗೆ 10-30ಕ್ಕೆ ಹೆಲಿಕಾಪ್ಟರ್ ಮೂಲಕ ಸುತ್ತೂರಿನ ರೆಸಿಡೆನ್ಸಿಯಲ್ ಸ್ಕೂಲ್ ಮೈದಾನ ಹೆಲಿಪ್ಯಾಡ್‍ಗೆ ಆಗಮಿಸಿ ನಂತರ ಬೆಳಿಗ್ಗೆ 11-30ಕ್ಕೆ ಮೈಸೂರು ತಾಲ್ಲೂಕಿನ ಸುತ್ತೂರಿನ ಬಿಳಿಗೆರೆ ಗ್ರಾಮದಲ್ಲಿ ವರುಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ 70 ಗ್ರಾಮಗಳಿಗೆ ಬಹು ಗ್ರಾಮಗಳ ಕುಡಿಯುವ ನೀರಿನ ಯೋಜನೆಗೆ ಶಿಲಾನ್ಯಾಸ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 2-20 ಗಂಟೆಗೆ ತಿ. ನರಸೀಪುರ ತಾಲ್ಲೂಕಿನ ವಿದ್ಯೋದಯ ಕಾಲೇಜು ಆವರಣದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ 124ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 5 ಗಂಟೆಗೆ ಬಲ್ಲಾಳ್ ವೃತ್ತದಲ್ಲಿರುವ ಭಾರತ ರತ್ನ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ 124ನೇ ಜಯಂತೋತ್ಸವ ಕಾರ್ಯಕ್ರಮ ಭಾಗವಹಿಸುವರು. ನಂತರ ರಾತ್ರಿ 7-30 ಗಂಟೆಗೆ ಮೈಸೂರು ರಸ್ತೆಯ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.
ಅನ್ನಭಾಗ್ಯ ಯೋಜನೆ ಅಕ್ಕಿ ದುರಪಯೋಗಯಾಗದಂತೆ ಎಚ್ಚರ ವಹಿಸಲು ಸೂಚನೆ
ಮೈಸೂರು,ಏ.15. ಅನ್ನ ಭಾಗ್ಯ ಯೋಜನೆ ಸೇರಿದ ಅಕ್ಕಿಯ ದುರುಪಯೋಗ ಸಂಬಂಧ ಈಗಾಗಲೇ ಎರಡು ಪ್ರಕರಣಗಳು ದಾಖಲಾಗಿದ್ದು, ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ವರ್ತಕರು ಎಚ್ಚರವಹಿಸಬೇಕು ಎಂದು ಆಹಾರ ಹಾಗೂ ನಾಗರೀಕರ ಸರಬರಾಜು ಇಲಾಖೆ ಹಿರಿಯ ಉಪ ನಿರ್ದೇಶಕರಾದ ರಾಮೇಶ್ವರಪ್ಪ ಅವರು ತಿಳಿಸಿದ್ದಾರೆ.
ಇಂದು ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಧಾನ್ಯ ವ್ಯಾಪಾರಿ ಸಂಘ, ಅಕ್ಕಿ ಗಿರಣಿ ಸಂಘ, ಎ.ಪಿ.ಎಂ.ಸಿ ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯವನ್ನಾಗಿಸಲು ಸರ್ಕಾರ ಅನ್ನ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಇದ್ದರಿಂದ ರಾಜ್ಯದ ಬಡ ಜನರು ಹೊಟ್ಟೆ ತುಂಬ ಊಟ ಮಾಡುವಂತ್ತಾಗಿದೆ. ಆದರೆ ಹಣ ಗಳಿಸುವ ದುರಾಶೆಯಿಂದ ಕೆಲವರು ಬಡವರಿಗೆ ಸೇರಬೇಕಾದ ಅಕ್ಕಿಯನ್ನು ದುರುಪಯೋಗ ಪಡೆಸಿಕೊಳ್ಳುತ್ತಿದ್ದಾರೆ. ವರ್ತಕರ, ಧಾನ್ಯ ವ್ಯಾಪಾರಿಗಳ ಹಾಗೂ ಸಂಬಂಧಿಸಿದ ಸಂಘಗಳಿಗೆ ಅಕ್ಕಿ ದುರುಪಯೋಗದ ಪ್ರಕರಣಗಳು ಗಮನಕ್ಕೆ ಬಂದಲ್ಲಿ ಜಿಲ್ಲಾಡಳಿತಕ್ಕೆ ದೂರು ನೀಡಬೇಕು ಹಾಗೂ ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.
ಆಹಾರ ಧ್ಯಾನ, ತರಕಾರಿ ಹಾಗೂ ಹಣ್ಣುಗಳಿಗೆ ಕೃತಕ ಬಣ್ಣವನ್ನು ಮಿಶ್ರಣ ಮಾಡುವ ಬಗ್ಗೆ ಜಿಲ್ಲಾಡಳಿತ ಎಚ್ಚರ ವಹಿಸುತ್ತಿದೆ. ಕೃತಕ ಬಣ್ಣಗಳು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ ಎಂದು ತಿಳಿದಿದ್ದರೂ ಕೆಲವು ವ್ಯಾಪರಸ್ಥರು ಹಣಕ್ಕಾಗಿ ಈ ದಂಧೆಯಲ್ಲಿ ಪಾಲುದಾರರಾಗಿದ್ದಾರೆ. ಅಂತಹ ವಹಿವಾಟುಗಳು ಜಿಲ್ಲೆಯಲ್ಲಿ ನಡೆಯದಂತೆ ಈಗಾಗಲೇ ಜಿಲ್ಲಾಡಳಿತ ಕ್ರಮವಹಿಸಿದೆ ಎಂದರು.
ಜಿಲ್ಲೆಯಲ್ಲಿ ಅಕ್ಕಿ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ. ಬಳ್ಳಾರಿ, ರಾಯಚೂರು, ತುಮುಕೂರು ಜಿಲ್ಲೆಗಳಿಂದ ಸಾಕಾಷ್ಟು ಪ್ರಮಾಣದಲ್ಲಿ ಅಕ್ಕಿ ಸರಬರಾಜು ಆಗುತ್ತಿದೆ ಎಂದು ತಿಳಿಸಿದರು.
ಕೃಷಿ ಉತ್ಪನ್ನ ಮಾರುಕಟ್ಟೆ ಸಹಾಯಕ ನಿರ್ದೇಶಕರಾದ ಶ್ರೀನಿವಾಸ್ ರೆಡ್ಡಿ, ಧಾನ್ಯ ವ್ಯಾಪಾರಿ ಸಂಘ, ಅಕ್ಕಿ ಗಿರಣಿ ಸಂಘದ ಪದಾಧಿಕಾರಿಗಳು ಹಾಗೂ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.
(ಛಾಯಾಚಿತ್ರ ಲಗತ್ತಿಸಿದೆ).
ಏಪ್ರಿಲ್ 25 ರಂದು ಶ್ರೀ ಭಗೀರಥ ಜಯಂತಿ
ಮೈಸೂರು,ಏ.15. ಶ್ರೀ ಭಗೀರಥ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಡಳಿತ ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಏಪ್ರಿಲ್ 25 ರಂದು ಅದ್ದೂರಿಯಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸರ್ಕಾರದ ವತಿಯಿಂದ ಮೊಟ್ಟ ಮೊದಲ ಭಾರಿಗೆ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಏಪ್ರಿಲ್ 25 ರಂದು ಬೆಳಿಗ್ಗೆ 9-30 ಗಂಟೆಗೆ ಕೋಟೆ ಆಂಜನೇಯ ದೇವಸ್ಥಾನ ಆವರಣದ ಮುಂಭಾಗ ಶ್ರೀ ಭಗೀರಥ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಸಲು ಹಾಗೂ ಮೆರವಣಿಗೆಯಲ್ಲಿ ಕಲಾತಂಡಗಳು ಭಾಗವಹಿಸಲು ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಅರ್ಚನಾ ತಿಳಿಸಿದರು.
ವೇದಿಕೆ ಕಾರ್ಯಕ್ರಮವು ಬೆಳಿಗ್ಗೆ 11-00 ಗಂಟೆಗೆ ಕಲಾಮಂದಿರದಲ್ಲಿ ನಡೆಯಲಿದ್ದು, ಶಿಷ್ಠಾಚಾರದ ಪ್ರಕಾರ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಅಲ್ಲದೇ ಸಂಘ ಸಂಸ್ಥೆಗಳ ಮುಖ್ಯಸ್ಥರಿಗೆ ಆಹ್ವಾನ ಪತ್ರಿಕೆಗಳನ್ನು ತಲುಪಿಸಲು ಕ್ರಮ ವಹಿಸಬೇಕು. ಶ್ರೀ ಭಗೀರಥ ಜಯಂತಿ ಕಾರ್ಯಕ್ರಮಕ್ಕೆ ಸರ್ಕಾರದ ಎಲ್ಲ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದರು.
ಜಿಲ್ಲಾ ಕೇಂದ್ರದಲ್ಲಿ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮಕ್ಕೆ ರೂ. 50 ಸಾವಿರ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಆಚರಣೆಗಾಗಿ ತಲಾ ರೂ. 25 ಸಾವಿರ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಜಯಂತಿ ಮೆರವಣಿಗೆ ಸಾಗುವ ದಾರಿಯಲ್ಲಿ ಹಾಗೂ ವೇದಿಕೆ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಭದ್ರತಾ ವ್ಯವಸ್ಥೆಗೆ ಕ್ರಮವಹಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಜ್ಞಾನ ಸಾಗರ ಮಠದ ಸ್ವಾಮಿಜೀ ಚಿನ್ನಸ್ವಾಮಿ, ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಪುಟ್ಟರಂಗಶೆಟ್ಟಿ, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜು, ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಹೆಚ್.ಕೆ.ರಾಮು, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ರಾಜಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲ ಮಠಪತಿ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಬೇಸಿಗೆ ಕಾಲ: ಮೈಸೂರು ಮಹಾನಗರ ಪಾಲಿಕೆಯಿಂದ ಮುನ್ನೆಚ್ಚರಿಕೆ ಕ್ರಮ
ಮೈಸೂರು,ಏ.15. ಬೇಸಿಗೆ ಕಾಲದಲ್ಲಿ ಕಾಲರ/ ಕರುಳುಬೇನೆಯಂತಹ ಸಾಂಕ್ರಾಮಿಕ ರೋಗಗಳು ಹರಡದಂತೆ ಮೈಸೂರು ಮಹಾನಗರ ಪಾಲಿಕೆಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಡಾ| ಸಿ.ಜಿ. ಬೆಟಸೂರ್ ಮಠ್ ಅವರು ತಿಳಿಸಿದ್ದಾರೆ.
ಹೋಟಲ್, ಕ್ಯಾಂಟಿನ್, ಫಾಸ್ಟ್ ಪುಡ್ ಹುದ್ದಿಮೆದಾರರು ಗ್ರಾಹಕರಿಗೆ ಬಿಸಿಯಾದ ನೀರು, ಶುಚಿಯಾದ ಆಹಾರವನ್ನು ಸರಬರಾಜು ಮಾಡಬೇಕು. ತಟ್ಟೆ ಮತ್ತು ಲೋಟ್‍ಗಳನ್ನು ಸೋಪಿನ ನೀರು ಮತ್ತು ಬಿಸಿ ನೀರಿನಲ್ಲಿ ತೊಳೆಯಬೇಕು. ನೆಲ ಮತ್ತು ಟೇಬಲ್‍ಗಳನ್ನು ಕ್ರಿಮಿನಾಶಕ ಉಪಯೋಗಿ ಶುಚಿಗೊಳಿಸಬೇಕು. ಅಡಿಗೆ ಮನೆ ಹಾಗೂ ಹೋಟಲ್‍ನ ಸುತ್ತಮುತ್ತ ಆವರಣವನ್ನು ಶುಚಿಯಾಗಿರಿಸಬೇಕು. ಆಹಾರ ಪಾದಾರ್ಥ ಉತ್ತಮ ಗುಣಮಟ್ಟದಾಗಿರಬೇಕು. ಸಪ್ಲೆಯರ್ ಆರೋಗ್ಯವಂತರಾಗಿರಬೇಕು ಹಾಗೂ ಅವರು ಗ್ರಾಹಕರಿಗೆ ಊಟ ತಿಂಡಿ ಸರಬರಾಜು ಮಾಡುವ ಸಂದರ್ಭಗಳಲ್ಲಿ ಕಡ್ಡಾಯವಾಗಿ ಎಪ್ರಾನ್ ಮತ್ತು ಗ್ಲೋಸ್ ಹಾಕಿ ಕೊಂಡಿರಬೇಕು.
ಶೌಚಾಲಯ ವ್ಯವಸ್ಥೆ ಉತ್ತಮವಾಗಿರಬೇಕು. ಸಿದ್ದಪಡಿಸಿದ ತಿಂಡಿ ಪದಾರ್ಥಗಳನ್ನು ಕಡ್ಡಾಯವಾಗಿ ಗ್ಲಾಸ್ ಕೇಸ್‍ನಲ್ಲಿ ಇಡಬೇಕು. ಪುಟ್‍ಪಾತ್‍ನಲ್ಲಿ ತಿಂಡಿ ಪದಾರ್ಥ ಮಾರಾಟ ಮಾಡುವವರು ಕೊಯ್ದು ಹಣ್ಣು ಹಂಪಲುಗಳನ್ನು ಸೊಳ್ಳೆ, ನೊಣ ಬೀಳದಂತೆ ಗಾಜಿನ ಪಟ್ಟಿಗೆಯಲ್ಲಿಟ್ಟು ಮಾರಾಟ ಮಾಡಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮೈಸೂರು,ಏ.15. ಮೈಸೂರು ಜಿಲ್ಲೆಯ ಡಿ.ಎಂ.ಜಿ. ಹಳ್ಳಿಯ ಜವಾಹರ ನವೋದಯ ವಿದ್ಯಾಲಯದಲ್ಲಿ 9ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ.
2014-15ನೇ ಸಾಲಿನ 8ನೇ ತರಗತಿಯಲ್ಲಿ ಉತ್ತೀರ್ಣವಾಗಿರುವ ಎಲ್ಲಾ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯು ಜೂನ್ 7 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೈಸೂರಿನ ಡಿ.ಎಂ.ಜಿ. ಹಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ ಪ್ರವೇಶ ಪರೀಕ್ಷೆ ನಡೆಸಲಾಗುವುದು.
ಅರ್ಜಿಯು ಮೇ 15 ರೊಳಗೆ ಮೈಸೂರು ಜಿಲ್ಲೆಯ ಡಿ.ಎಂ.ಜಿ. ಹಳ್ಳಿ ಜವಾಹರ್ ನವೋದಯ ವಿದ್ಯಾಲಯದಲ್ಲಿ ಉಚಿತವಾಗಿ ದೊರೆಯುತ್ತದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2905068ನ್ನು ಸಂಪರ್ಕಿಸಬಹುದು.
ಏಪ್ರಿಲ್ 17 ರಂದು ಜಿ.ಪಂ. ಕೆ.ಡಿ.ಪಿ ಸಭೆ
ಮೈಸೂರು,ಏ.15.-ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮಗಳು ಸೇರಿದಂತೆ) ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾ ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಏಪ್ರಿಲ್ 17 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಏಪ್ರಿಲ್ 17 ರಂದು 95ನೇ ವಾರ್ಷಿಕ ಘಟಿಕೋತ್ಸವ
ಮೈಸೂರು,ಏ.15.ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಗಳು, ಸಿಂಡಿಕೇಟ್ ಮತ್ತು ಶಿಕ್ಷಣ ಮಂಡಳಿಯ ಸದಸ್ಯರು ಏಪ್ರಿಲ್ 17 ರಂದು ಬೆಳಿಗ್ಗೆ 11 ಗಂಟೆಗೆ ಕ್ರಾಫರ್ಡ್ ಭವನದಲ್ಲಿ 95ನೇ ವಾರ್ಷಿಕ ಘಟಿಕೋತ್ಸವ ನಡೆಯಲಿದೆ.
ಭಾರತೀಯ ವಿಜ್ಞಾನ ಸಂಸ್ಥೆ ಹಾಗೂ ರಾಷ್ಟ್ರೀಯ ಸಂಶೋಧನಾ ಪ್ರಾಧ್ಯಾಪಕರು ರಾಸಾಯನಶಾಸ್ತ್ರ ಶಾಖೆಯ ವಿಶ್ರಾಂತ ನಿರ್ದೇಶಕ ಪ್ರೊ|| ಗೋವರ್ಧನ್ ಮೆಹತ ಅವರು ಘಟಿಕೋತ್ಸವ ಭಾಷಣ ಮಾಡುವರು.
ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳು ಘನತೆವೆತ್ತ ವಾಜುಬಾಯಿ ವಾಲ್ ಅವರು ಅಧ್ಯಕ್ಷತೆ ವಹಿಸುವರು.
ಉನ್ನತ ಶಿಕ್ಷಣ ಮತ್ತು ಪ್ರವಾಸೋದ್ಯಮ ಸಚಿವ ಆರ್.ವಿ. ದೇಶಪಾಂಡೆ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

No comments:
Post a Comment