Tuesday, 7 April 2015

ನದಿ ಮೂಲದ ನೀರು ಸರಬರಾಜು ಯೋಜನೆಗೆ ಒತ್ತು: ಮುಖ್ಯಮಂತ್ರಿ

ನದಿ ಮೂಲದ ನೀರು ಸರಬರಾಜು ಯೋಜನೆಗೆ ಒತ್ತು: ಮುಖ್ಯಮಂತ್ರಿ

ಮೈಸೂರು, ಮಾರ್ಚ್8- ರಾಜ್ಯದೆಲ್ಲಡೆ ತಲೆದೂರಿರುವ ಕುಡಿಯುವ ನೀರಿನ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ನದಿ ಮೂಲದ ನೀರು ಸರಬರಾಜು ಯೋಜನೆಗೆ ರಾಜ್ಯ ಸರ್ಕಾರದವತಿಯಿಂದ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
 ನಿನ್ನೆ ತಾಲ್ಲೂಕಿನ ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಉದ್ಬೂರು ಗ್ರಾಮದಲ್ಲಿ ಹಮ್ಮಿಕೊಳ್ಳಲಾದ 72 ಕೋಟಿ ರೂ. ವೆಚ್ಚದ ಮೈಸೂರು ಮತ್ತು ನಂಜನಗೂಡು ತಾಲ್ಲೂಕಿನ ಮಾರ್ಗ ಮಧ್ಯದ 30 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಸೇರಿದಂತೆ 102 ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯವನ್ನು ನೆರವೇರಿಸಿ ಅವರು ಮಾತನಾಡಿದರು.
 ರಾಜ್ಯದಲ್ಲಿ ಬಹಳಷ್ಟು ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆಗೊಳಗಾಗಿವೆ. ಅಂತರ್ಜಲ ದಿನದಿಂದ ದಿನಕ್ಕೆ  ಕುಸಿಯುತ್ತಿದೆ. ನೀರಿನ ಸಮಸ್ಯೆ ನೀಗಿಸಲು ನದಿಗಳಿರುವ ಜಿಲ್ಲೆಗಳು ಸೇರಿದಂತೆ ಅದರ ಸುತ್ತಮುತ್ತಲಿನ ಜಿಲ್ಲೆಗಳ ಗ್ರಾಮಗಳಿಗೆ ಆದ್ಯತೆ ಮೇರೆಗೆ ನದಿ ಮೂಲದ ನೀರು ಸರಬರಾಜು ಯೋಜನೆಯ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು. ಬೇಸಿಗೆಯಲ್ಲಿ ಉದ್ಭವಿಸುವ ಸಮಸ್ಯೆಗಳನ್ನು ನೀಗಿಸಲು ರಾಜ್ಯ ಸರ್ಕಾರ ಈಗಾಗಲೇ ಮುನ್ನೆಚ್ಚರಿಕೆ ಕ್ರಮವಹಿಸಿದೆ ಎಂದು ಹೇಳಿದರು.
  ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ಮೈಸೂರು ಮತ್ತು ನಂಜನಗೂಡು ತಾಲ್ಲೂಕಿನ ಮಾರ್ಗ ಮಧ್ಯದ 30 ಗ್ರಾಮಗಳಿಗೆ ನದಿ ಮೂಲದ ಕುಡಿಯುವ ನೀರು ಸರಬರಾಜು ಯೋಜನೆಯಡಿ ಕೈಗೆತ್ತಿಕೊಳ್ಳಲಾದ 32 ಕೋಟಿ ರೂ. ವೆಚ್ಚದ ಕಾಮಗಾರಿಯನ್ನು ಇಂದು ಉದ್ಘಾಟಿಸಲಾಗಿದೆ. ಇದರಿಂದ 72 ಸಾವಿರಕ್ಕೂ ಹೆಚ್ಚು  ಜನರು ಕುಡಿಯುವ ನೀರಿನ ಸೌಲಭ್ಯ ಪಡೆಯಲಿದ್ದಾರೆ. ಮುಂದಿನ ದಿನಗಳಲ್ಲಿ 11 ಕೋಟಿ ರೂ. ವೆಚ್ಚದಲ್ಲಿ 11 ಗ್ರಾಮಗಳಿಗೆ ಈ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
 ದಲಿತರು, ಮಹಿಳೆಯರು ಹಾಗೂ ಅಲ್ಪಸಂಖ್ಯಾತರಿಗೆ ನೀಡಲಾದ 1350 ಕೋಟಿ ರೂ. ಸಾಲ, ಬಡವರಿಗೆ ಮನೆ ನಿರ್ಮಾಣಕ್ಕಾಗಿ ನೀಡಲಾದ 2448 ಕೋಟಿ ರೂ. ಸಾಲ ಹಾಗೂ ಭಾಗ್ಯ ಜೋತಿ ಹಾಗೂ ಕುಠಿರ ಜೋತಿ ಯೋಜನೆಯಡಿ ಮಾಡಲಾದ ಸಾಲವನ್ನು ರಾಜ್ಯ ಸರ್ಕಾರÀ ಮನ್ನ ಮಾಡಿದೆÉ ಎಂದ ಮುಖ್ಯಮಂತ್ರಿಗಳು ಅನ್ನಭಾಗ್ಯ ಯೋಜನೆಯಡಿ ಒಂದು ರೂಪಾಯಿಗೆ 1 ಕೆ.ಜಿ ಅಕ್ಕಿ ಹಾಗೂ ಗೋದಿ ಸೌಲಭ್ಯವನ್ನು ಪಡೆಯುತ್ತಿರುವ ಬಡವರು 2015-2016ನೇ ಸಾಲಿನಿಂದ ಸಂಪೂರ್ಣ ಉಚಿತವಾಗಿ ಸೌಲಭ್ಯವನ್ನು ಪಡೆಯಲಿದ್ದಾರೆ ಎಂದರು.
 ರಾಜ್ಯ ಸರ್ಕಾರ 2015-2016ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟಿ ವರ್ಗದವರ ಅಭಿವೃದ್ಧಿಗಾಗಿ 16,326 ಕೋಟಿ ರೂ. ಅನುದಾನವನ್ನು ಮೀಸಲಿರಿಸಿದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಚುನಾಯಿತ ಜನ ಪ್ರತಿನಿಧಿಗಳು ಅನುದಾನವು ದುರ್ಬಳಕೆಯಾಗದಂತೆ ಎಚ್ಚರವಹಿಸಬೇಕು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟಿ ವರ್ಗದÀ ಅರ್ಹರು ಸೌವಲತ್ತಿನ ಸಂಪೂರ್ಣ ಉಪಯೋಗ ಪಡೆಯುವಂತಾಗಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
 ಬಡ ಮಕ್ಕಳಿಗೆ ಶಿಕ್ಷಣದಲ್ಲಿ ಉತ್ತೇಜಿಸಲು ಹಾಗೂ ಖಾಸಗಿ ಶಾಲೆಗಳ ಮಕ್ಕಳಂತೆ ಸಮಾನ ಬಾಳು ಬದುಕಲು ಪ್ರಸಕ್ತ ಸಾಲಿನಿಂದ ಸರ್ಕಾರಿ ಶಾಲೆÉಗಳಲ್ಲಿ ವ್ಯಾಸಂಗ ಮಾಡುವ 1 ರಿಂದ 10ನೇ ತರಗತಿಯ ಮಕ್ಕಳಿಗೆ ಒಂದು ಜತೆ ಶೂ ಸೇರಿದಂತೆ 2 ಜತೆ ಸಾಕ್ಸ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  
 ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್,  ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಡಾ|| ಬಿ. ಪುಷ್ಪಾ ಅಮರನಾಥ್,  ವಿಧಾನಸಭಾ ಸದಸ್ಯರುಗಳಾದ ಜಿ.ಟಿ. ದೇವೇಗೌಡ, ಎಂ.ಕೆ. ಸೋಮಶೇಖರ್, ವಿಧಾನ ಪರಿಷತ್ ಸದಸ್ಯ ಆರ್. ಧರ್ಮಸೇನ, ಕಾವೇರಿ ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸಿ. ದಾಸೇಗೌಡ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಆರ್. ಮೋಹನ್‍ಕುಮಾರ್, ಪಂಚಾಯತ್ ಉಪಾಧ್ಯಕ್ಷ ಎಲ್. ಮಾದಪ್ಪ, ತಾಲ್ಲೂಕು ಪಂಚಾಯತ್ ಅಧ್ಯಕ್ಷ ಜಿ. ಕುಮಾರ್, ಉಪಾಧ್ಯಕ್ಷೆ ಲೋಕಾಮಣಿ ಹಾಗೂ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

    ಮೈಸೂರು ವಿಶ್ವ ವಿಖ್ಯಾತ ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು, ಮಾರ್ಚ್7. ಮೈಸೂರು ಜಿಲ್ಲೆಯನ್ನು ವಿಶ್ವದಲ್ಲೇ ಪ್ರಸಿದ್ಧ ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಗೊಳಿಸಲು ರಾಜ್ಯ ಸರ್ಕಾರದವತಿಯಿಂದ ಎಲ್ಲಾ ರೀತಿ ಸೌಕರ್ಯಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಂಗಳವಾರ
ನಗರದ ಲಿಡ್ಕರ್ ಮೈದಾನದಲ್ಲಿ ನರಸಿಂಹ ರಾಜ ವಿಧಾನ ಸಭಾ ಕ್ಷೇತ್ರದಲ್ಲಿ 128 ಕೋಟಿ ವೆಚ್ಚದಲ್ಲಿ ಹಮ್ಮಿಕೊಳ್ಳಲಾದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಹಾಗೂ ಶಂಕುಸ್ಥಾಪನೆ ಕಾರ್ಯವನ್ನು ನೆರವೇರಿಸಿ ಅವರು ಮಾತನಾಡಿದರು.
 ಮೈಸೂರು ಜಿಲ್ಲೆಯಲ್ಲಿ ಪ್ರವಾಸಿಗರನ್ನು ಆರ್ಕಷಿಸುವ ಅನೇಕ ವಿಶ್ವ ವಿಖ್ಯಾತ ಐಸಿಹಾಸಿ ಸ್ಥಳಗಳಿವೆ. ಆದರೆ ಅ ಸ್ಥಳಗಳು ಮೂಲಭೂತ ಸೌಕರ್ಯದಿಂದ ವಂಚಿತವಾಗಿವೆÉ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಿಶೇಷ ಆಸಕ್ತಿವಹಿಸಿ ಮೈಸೂರು ಜಿಲ್ಲೆಯಲ್ಲಿರು ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯವನ್ನು ಅಭಿವೃದ್ಧಿಗೊಳಿಸಲು ಆದ್ಯತೆ ಮೇರೆಗೆ ಅನುದಾನವನ್ನು ನೀಡಲಿದೆ. ಈಗಾಗಲೇ ಮೈಸೂರಿನಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸಲು 10 ಕೋಟಿ ರೂ. ಅನುದಾನದ ವಿಶೇಷ ಪ್ಯಾಕೇಜ್ ನೀಡಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಪ್ರವಾಸಿಗರನ್ನು ಆಕರ್ಷಿಸಲು ರೋಪ್‍ವೇಯನ್ನು ನಿರ್ಮಿಸಲಾಗುವುದು ಎಂದು ಹೇಳಿದರು.
  ರಾಜ್ಯ ಸರ್ಕಾರ ಮೈಸೂರಿನಲ್ಲಿ ಸೋಲಿಗ ಜನಾಂಗದ ಸಮುದಾಯ ಭವನದ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ ಹಾಗೂ ವಿಶ್ವಕರ್ಮ ಸಮುದಾಯದವರನ್ನು ಅಭಿವೃದ್ಧಿಗೊಳಿಸದಲು ವಿಶ್ವಕರ್ಮ ಅಭಿವೃದ್ಧಿ ಮಂಡಳಿಯನ್ನು ರಚಿಸಿದೆ. ಅಲ್ಲದೇ ಇತರೆ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.
  ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮೂಲಭೂತ ಸೌಕರ್ಯವನ್ನು ಅಭಿವೃದ್ಧಿಗೊಳಿಸಲು ರಾಜ್ಯ ಸರ್ಕಾರ ಬದ್ದವಾಗಿದ್ದು, ರಾಜ್ಯದ ಜನರು ನೆಮ್ಮಯಿಂದ ಬಾಳಲು ಶಾಂತಿಯುತ ವಾತಾವರಣ ನಿರ್ಮಾಣ ಮಾಡಲು ದಿನ ರಾತ್ರಿ ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
  ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್,  ಲೋಕೋಪಯೋಗಿ ಸಚಿವ ಡಾ|| ಹೆಚ್.ಸಿ. ಮಹದೇವಪ್ಪ, ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ಆರ್. ಲಿಂಗಪ್ಪ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಡಾ|| ಬಿ. ಪುಷ್ಪಾ ಅಮರನಾಥ್,  ವಿಧಾನಸಭಾ ಸದಸ್ಯರುಗಳಾದ ತನ್ವೀರ್ ಸೇಠ್, ಎಂ.ಕೆ. ಸೋಮಶೇಖರ್, ವಿಧಾನ ಪರಿಷತ್ ಸದಸ್ಯ ಆರ್.ಧರ್ಮಸೇನ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಆರ್. ಮೋಹನ್‍ಕುಮಾರ್, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷೆ ರೀಹಾನಬಾನು, ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ ಅನಂತು, ಮೈಸೂರು ಮಹಾನಗರ ಪಾಲಿಕೆ ಉಪ ಮಹಾಪೌರರು ಎಂ. ಮಹದೇವಮ್ಮ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಎಲ್. ಮಾದಪ್ಪ, ತಾಲ್ಲೂಕು ಪಂಚಾಯತ್ ಅಧ್ಯಕ್ಷ ಜಿ. ಕುಮಾರ್ ಹಾಗೂ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು
  

No comments:

Post a Comment