ನೀರಿನ ಸಮಸ್ಯೆ ಉದ್ಭವಿಸದಂತೆ ಎಚ್ಚರವಹಿಸಲು ಮುಖ್ಯಮಂತ್ರಿ ಸೂಚನೆ
ಮೈಸೂರು,ಮೇ,೨. ಯಾವುದೇ ಕಾರಣಕ್ಕೂ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಎಚ್ಚರವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಮುಖ್ಯಮಂತ್ರಿಯವರು ಕುಡಿಯುವ ನೀರಿನ ಸಮಸ್ಯೆಯಿಂದ ಜನರು ತೊಂದರೆ ಅನುಭವಿಸಬಾರದು. ನಗರ ಪ್ರದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರಿನ ಲಭ್ಯವಿದ್ದರೂ ಜನರು ನೀರಿನ ಸಮಸ್ಯೆಯಿಂದ ಬಳಲುತಿದ್ದಾರೆ. ನೀರಿನ ಅಕ್ರಮ ಸೋರಿಕೆಗೆ ಮೊದಲು ಕಡಿವಾಣ ಆಕಬೇಕು. ಅಧಿಕಾರಿಗಳು ಯಾವ ಒತ್ತಡಕೆ ಮಣಿಯದೆ ಅಕ್ರಮ ನೀರಿನ ನಿಯಂತ್ರಣಕ್ಕೆ ಮುಂದಾಗುವ ಮೂಲಕ ನಗರ ವಾಸಿಗಳು ನೀರಿನ ಸಮಸ್ಯೆಯಿಂದ ತೊಂದರೆ ಅನುಭವಿಸದಂತೆ ಕ್ರಮವಹಿಸಬೇಕು ಎಂದು ತಿಳಿಸಿದರು.
ಗ್ರಾಮಾಂತರ ಪ್ರದೇಶದ ಕೆಲವು ಭಾಗದಲ್ಲಿ ಮಳೆಯಾಗಿದೆ. ಆದರೆ ನೀರಿನ ಸಮಸ್ಯೆ ಮಾತ್ರ ಕುಂದಿಲ್ಲ. ಕುಡಿಯುವ ನೀರಿನ ಸಮಸ್ಯೆ ಇರುವ ಪ್ರದೇಶಗಳನ್ನು ಗುರುತಿಸಿ ಸಮಸ್ಯೆಗೆ ಪರಿಹಾರ ನೀಡಬೇಕು. ಒಟ್ಟಿನಲ್ಲಿ ನಗರ ಹಾಗೂ ಗ್ರಾಮಂತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆಯ ಕ್ರಮವಹಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.
ಮೈಸೂರು ನಗರ ಅಭಿವೃದ್ಧಿಗಾಗಿ ಎರಡು ಬಾರಿ 100 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಲಾಗಿದೆ. ಈಗಾಗಲೇ ಆರಂಭಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವ ಜೊತೆಯಲ್ಲಿ ಹೊಸ ಕಾಮಗಾರಿಯನ್ನು ಶೀಘ್ರ ಪ್ರಾರಂಭಿಸಬೇಕು. ನೀಡಿರುವ ಅನುದಾನವನ್ನು ವ್ಯವಸ್ಥಿತವಾಗಿ ವೆಚ್ಚ ಮಾಡುವುದರೊಂದಿಗೆ ಕಾಮಗಾರಿಗಳು ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ತಿಳಿಸಿದರು.
ಮೈಸೂರು ನಗರ ಪಾಲಿಕೆವತಿಯಿಂದ ನಿರಂತರ ತೆರಿಗೆ ವಸುಲಾತಿಯಾಗಬೇಕು. ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸರ್ಕಾರದ ಅನುದಾನವನ್ನೇ ನಿರೀಕ್ಷಿಸದೆ ಪಾಲಿಕೆಯು ಸ್ವಂತ ಸಂಪ್ಮೂಲವನ್ನು ಕಂಡುಕೊಳ್ಳಬೇಕು. ನಗgದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ಜಾಹೀರಾತು ಫಲಕಗಳನ್ನು ತೆರವುಗೊಳಿಸಬೇಕು. ಬಹಳಷ್ಟು ಐತಿಹಾಸಿಕ ಕಟ್ಟಡವಿರುವ ಸಾಂಸ್ಕøತಿಕ ನಗರಿ ಮೈಸೂರಿನ ಸೌಂದರ್ಯಕ್ಕೆ ದಕ್ಕೆಯಾಗದಂತೆ ಮೈಸೂರು ನಗರ ಪಾಲಿಕೆವತಿಯು ಎಚ್ಚರವಹಿಸಬೇಕು. ಎಂದು ಸೂಚಿಸಿದರು.
ಗ್ರಾಮೀಣ ಭಾಗದಲ್ಲಿ ರಸ್ತೆಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳ ಗ್ರಾಮೀಣ ರಸ್ತೆ ಅಭಿವೃದ್ಧಿ ನಿಧಿಯಿಂದ (ಲಮ್ ಸಮ್ ಗ್ರಾಂಟ್) 53 ಕೋಟಿ ರೂ. ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಕಾಮಗಾರಿ ಕೆಲವು ಕಡೆ ಪ್ರಾರಂಭವಾಗಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಮುಂದಿನ ಮೂರು ತಿಂಗಳೊಳಗೆ ರಸ್ತೆ ಕಾಮಗಾರಿಗಳು ಪೂರ್ಣಗೊಂಡಿರಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಅಧಿಕಾರಿಗಳನ್ನು ನೇರ ಹೊಣೆಗಾರರಾಗಿ ಮಾಡಲಾಗುವುದು ಎಂದು ತಿಳಿಸಿದರು.
ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ ಕಾರ್ಯದ ಪ್ರಗತಿ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಸಿ.ಶಿಖಾ ಅವರು ಮೈಸೂರು ಜಿಲ್ಲೆಯಾದ್ಯಂತ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮೇ 1ರ ಅಂತ್ಯದೊರಗೆ ಶೇ. 99.44 ಗುರಿ ಮುಟ್ಟಲಾಗಿದೆ. 2011 ಗಣತಿಯಂತೆ ಮೈಸೂರು ಜಿಲ್ಲೆಯಲ್ಲಿ ಒಟ್ಟು 7,00,968 ಮನೆಗಳಿದ್ದು, 2015ರ ಸಮೀಕ್ಷೆಯಂತೆ 32,825 ಹೆಚ್ಚುವರಿ ಮನೆಗಳು ನಿರ್ಮಾಣವಾಗಿವೆ ಹಾಗೂ 215 ಹೊಸ ಬ್ಲಾಕ್ ಹೆಚ್ಚವರಿಯಾಗಿದೆ ಎಂದರು. ಸಮೀಕ್ಷೆ ಕಾರ್ಯವು 100 ರಷ್ಟು ಪ್ರಗತಿ ಹೊಂದಬೇಕು. ನಗರ ಹಾಗೂ ಗ್ರಾಮಾಂತರ ಚಾರ್ಜ್ ನಿಯೋಜಿಸಿ ಬಿಟ್ಟಿರುವ ಜನರ ಮಾಹಿತಿಯನ್ನು ಸೇರಿಸಲು ಅವಕಾಶ ಕಲ್ಪಿಸಲು ಕ್ರಮವಹಿಸಿ ಎಂದು ಮುಖ್ಯಮಂತ್ರಿಯವರು ತಿಳಿಸಿದರು.
ಅನ್ನ ಭಾಗ್ಯ ಯೋಜನೆಯ ಆಹಾರ ದಾನ್ಯ ಕಾಲಸಂತೆಯಲ್ಲಿ ಮಾರಾಟವಾಗದಂತೆ ಎಚ್ಚರವಹಿಸಬೇಕು. ಅರ್ಹ ಪಲಾನುಭವಿಗಳಿಗೆ ಸೌಲಭ್ಯ ಸಿಗಬೇಕು. ಮಧ್ಯವರ್ತಿಗಳಿಗೆ ಯೋಜನೆ ಪಲಸಿಗದಂತೆ ಕ್ರಮವಹಿಸಬೇಕು. ಒಟ್ಟಿನಲ್ಲಿ ಸರ್ಕಾರದ ಉದ್ದೇಶ ಸಫಲಗೊಳ್ಳಬೇಕು ಎಂದು ಹೇಳಿದರು.
ಇದೇ ವೇಳೆ ಸರ್ಕಾರಿ ಅತಿಥಿಗೃಹದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಕುಂದು ಕೊರತೆಯನ್ನು ಆಲಿಸಿದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಶ್ರೀನಿವಾಸ್ ಪ್ರಸಾದ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಾಂಬಳೆ, ಮುಡಾ ಆಯುಕ್ತರಾದ ಪಾಲಯ್ಯ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋಪಾಲ್, ಮೈಸೂರು ನಗರ ಪೊಲೀಸ್ ಆಯುಕ್ತರಾದ ದಯಾನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ ಹಾಗೂ ಇತರರು ಸಭೆಯಲ್ಲಿ ಭಾಗವಹಿಸಿದರು.

No comments:
Post a Comment