ಮುಖ್ಯಮಂತ್ರಿಗಳ ಪ್ರವಾಸ ಕಾರ್ಯಕ್ರಮ.
ಮೈಸೂರು,ಜೂ.27-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 27 ರಂದು ಮೈಸೂರಿನಲ್ಲಿ ವಾಸ್ತವ್ಯ ಹೂಡಿ ಜೂನ್ 28 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಜೂನ್ 28 ರಂದು ಬೆಳಿಗ್ಗೆ 10 ಗಂಟೆಗೆ ಹೆಚ್.ಡಿ.ಕೋಟೆ ತಾಲ್ಲೂಕಿನಲ್ಲಿರುವ ಕಬಿನಿ ಜಲಾಯಶಕ್ಕೆ ಬಾಗಿನ ಅರ್ಪಣೆ ಮಾಡಲಿದ್ದಾರೆ. ಬೆಳಿಗ್ಗೆ 11-30ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.
ಸುರಕ್ಷಿತ ಪ್ರದೇಶಕ್ಕೆ ತೆರಳಲು ಸೂಚನೆ
ಮೈಸೂರು,27.ಕಾವೇರಿ ನೀರಾವರಿ ನಿಗಮದ ಕಬಿನಿ ಜಲಾಶಯದ ಗರಿಷ್ಠ ನೀರಿನ ಮಟ್ಟವು 2284 ಅಡಿಗಳಾಗಿದ್ದು, ಇಂದಿನ ನೀರಿನ ಮಟ್ಟವು 2279.50 ಅಡಿಗಳಷ್ಟು ತಲುಪಿರುತ್ತದೆ. ಹಾಲಿ 30000 ಕ್ಯೂಸೆಕ್ಸ್ (ಮೂವತ್ತು ಸಾವಿರ ಕ್ಯೂಸೆಕ್ಸ್) ಇದ್ದು, ನೀರು ಜಲಾಶಯಕ್ಕೆ ಹರಿದು ಬರುತ್ತಿದ್ದು, ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಈಗಾಗಲೇ 15000 ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗುತ್ತಿದ್ದು, ಒಳಹರಿವಿನ ಪ್ರಮಾಣ ಹೆಚ್ಚಾಗುವ ಸಂಭವವಿರುವುದರಿಂದ, ಜಲಾಶಯದಿಂದ ಇನ್ನು ಹೆಚ್ಚಿನ ಪ್ರಮಾಣದಲ್ಲಿ ನದಿಗೆ ನೀರು ಬಿಡಬೇಕಾಗಿರುವುದರಿಂದ, ನದಿ ಪಾತ್ರದ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ತಮ್ಮ ಜಾನುವಾರುಗಳೊಡನೆ ಸುರಕ್ಷಿತ ಪ್ರದೇಶಗಳಿಗೆ ತೆರಳಲು ಕಬಿನಿ ಮತ್ತು ವರುಣಾ ನಾಲಾ ವೃತ್ತ ಹಾಗೂ ನೀರಾವರಿ ಅಧೀಕ್ಷಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ
ಮೈಸೂರು,ಜೂ.27. ತಿ. ನರಸೀಪುರ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇದ್ದ 06 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 02 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ದಿನಾಂಕ:30-04-2015 ರಂದು ನಡೆದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಆಯ್ಕೆ ಸಮಿತಿಯು ಆಯ್ಕೆ ಮಾಡಿರುವ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಕಛೇರಿಯಲ್ಲಿ ಪ್ರಕಟಿಸಲಾಗಿದೆ. ಪ್ರಕಟಿಸಿರುವ ಸಂಭವನೀಯ ಆಯ್ಕೆ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ:04-07-2015 ರೊಳಗಾಗಿ ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ತಿ. ನರಸೀಪುರ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ
ಮೈಸೂರು,ಜೂ.27.ಮೈಸೂರು ನಗರದಲ್ಲಿ ದಿನಾಂಕ 28-06-2015 ರಂದು ಯು.ಜಿ.ಸಿ.ನೆಟ್ ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷೆ ನಡೆಯುವ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಹಾಗೂ ಪರೀಕ್ಷೆ ಸುಗಮವಾಗಿ ನಡೆಸಲು ಮೈಸೂರು ನಗರದ 20 ಪರೀಕ್ಷಾ ಕೇಂದ್ರಗಳ ಬಳಿ ದಿನ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪರೀಕ್ಷೆ ನಡೆಯುವ 200 ಮೀಟರ್ ವ್ಯಾಪ್ತಿ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ಆದೇಶ ಹೊರಡಿಸಿದ್ದಾರೆ.
1973ರ ಸಿ.ಆರ್.ಪಿ.ಸಿ. ಕಲಂ 144ರ ಅನ್ವಯ ಹೊರಡಿಸಿದ ಈ ಆದೇಶದನ್ವಯ ಪರೀಕ್ಷಾ ಕೇಂದ್ರಗಳ ಬಳಿ ಇರುವ ಎಲ್ಲ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆಯೂ, ಪರೀಕ್ಷಾರ್ಥಿಗಳು ಮತ್ತು ಪರೀಕ್ಷಾ ಸಿಬ್ಬಂದಿಗಳನ್ನು ಹೊರತುಪಡಿಸಿ ಅನಧಿಕೃತ ವ್ಯಕ್ತಿಗಳು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಸಂಚರಿಸಬಾರದು ಮತ್ತು ಯಾರೂ ಆಕ್ಷೇಪಾರ್ಹ ವಸ್ತುಗಳನ್ನು ಒಯ್ಯಬಾರದೆಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

No comments:
Post a Comment