ಜೂ. 28 ರಂದು ಎಸ್‍ಸಿ, ಎಸ್‍ಟಿ ಕುಂದುಕೊರತೆ ಸಭೆ
ಮಂಡ್ಯ ಜೂ.27. ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲೆಯ ಎಸ್.ಸಿ., ಎಸ್.ಟಿ., ಜನಾಂಗದವರ ಕುಂದು ಕೊರತೆಗಳ ಕುರಿತು 2015ರ ಜೂನ್ 28 ರಂದು ಭಾನುವಾರ ಮಧ್ಯಾಹ್ನ 12 ರಿಂದ 1ರ ವರೆಗೆ ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಸಭೆ ಕರೆಯಲಾಗಿದೆ.
ಕುಂದು ಕೊರತೆ ಇರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಈ ಸಭೆಯಲ್ಲಿ ಭಾಗವಹಿಸಬೇಕು ಎಂದು ಪೊಲೀಸ್ ವರಿಷ್ಠಾಧಿಕಾರಿಗಳಾದ ಭೂಷಣ್ ಜಿ. ಬೊರಸೆ ಅವರು ಕೋರಿದ್ದಾರೆ.
ವಿಕಲಚೇತನರಿಗೆ ಉನ್ನತ, ತಾಂತ್ರಿಕ ಶಿಕ್ಷಣದ ಶುಲ್ಕ ಮರುಪಾವತಿಗೆ ಅರ್ಜಿ
ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ನಂತರ ಉನ್ನತ ಶಿಕ್ಷಣ, ವೃತ್ತಿ ಶಿಕ್ಷಣ, ತಾಂತ್ರಿಕ ಶಿಕ್ಷಣ, ಸ್ನಾತಕೋತ್ತರ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ಸರ್ಕಾರವು ನಿಗಧಿ ಪಡಿಸಿರುವ ಪರೀಕ್ಷಾ ಶುಲ್ಕ, ಬೋಧನಾ ಶುಲ್ಕ, ಪ್ರಯೋಗಾಲಯ ಶುಲ್ಕ,ಕ್ರೀಡಾ ಶುಲ್ಕ ಹಾಗೂ ಗ್ರಂಥಾಲಯ ಶುಲ್ಕಗಳನ್ನು ಮರುಪಾವತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿ ಹಾಗೂ ಅರ್ಜಿಗಳನ್ನು ಜಿಲ್ಲಾಅಂಗವಿಕಲರ ಕಲ್ಯಾಣಾಧಿಕಾರಿಗಳು, ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲ್ಲೂಕು ಕಛೇರಿ ಆವರಣ, ಮಂಡ್ಯ ಇಲ್ಲಿ ಪಡೆಯಲು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರೀಕರ ಕಲ್ಯಾಣಾಧಿಕಾರಿ ಕೆ.ಎಚ್. ರೇವಣೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
*****

No comments:
Post a Comment