Thursday, 2 July 2015

ಮೇಲ್ಭಾಗದ ನಾಲೆಗಳಿಗೆ ಶೀಘ್ರವೇ ನೀರು ಹರಿಸಲು ತೀರ್ಮಾನ

ಕೆಆರ್‍ಎಸ್ ನೀರಾವರಿ ಸಲಹಾ ಸಮಿತಿ ಸಭೆ
ಮೇಲ್ಭಾಗದ ನಾಲೆಗಳಿಗೆ ಶೀಘ್ರವೇ ನೀರು ಹರಿಸಲು ತೀರ್ಮಾನ
ಮಂಡ್ಯ ಜುಲೈ 2 . ಬೆಳೆದು ನಿಂತಿರುವ ಕಬ್ಬು ಒಣಗುತ್ತಿರುವ ಹಿನ್ನೆಲೆಯಲ್ಲಿ ಈ ಬೆಳೆಗಳನ್ನು ಉಳಿಸಿಕೊಳ್ಳಲು ಕೃಷ್ಣರಾಜ ಸಾಗರ ಜಲಾಶಯದಿಂದ ಹುಲಿಕೆರೆ ಸುರಂಗದ ಮೇಲ್ಭಾಗದಲ್ಲಿರುವ ಅಚ್ಚುಕಟ್ಟು ಪ್ರದೇಶದ ಬೆಳೆಗಳಿಗೆ ತಕ್ಷಣವೇ ಹಾಗೂ ಸುರಂಗದ ಕೆಳ ಭಾಗದ ನಾಲೆಗೆ ನಾಲ್ಕೈದು ದಿನದಲ್ಲಿ ನೀರು ಹರಿಸಲು ತೀರ್ಮಾನಿಸಲಾಗಿದೆ.
ವಸತಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ. ಎಚ್. ಅಂಬರೀಷ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕೆಆರ್‍ಎಸ್ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
ಸುರಂಗದ ದುರಸ್ಥಿ ಕಾಮಗಾರಿ ನಡೆಯುತ್ತಿರುವುದರಿಂದ ನಾಲ್ಕೈದು ದಿನದಲ್ಲಿ ಕಾಮಗಾರಿ ಪೂರ್ಣಗೊಳಿಸಿ, ನೀರು ಹರಿಸಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಸಭೆಯಲ್ಲಿ ಕಾವೇರಿ ನೀರಾವರಿ ನಿಗಮದ ಅಧ್ಯಕ್ಷರಾದ ದಾಸೇಗೌಡ, ಶಾಸಕರಾದ ಎನ್. ಚಲುವರಾಯಸ್ವಾಮಿ, ಪಿ. ಎಂ. ನರೇಂದ್ರಸ್ವಾಮಿ, ಕೆ.ಎಸ್.ಪುಟ್ಟಣ್ಣಯ್ಯ, ಡಿ.ಸಿ. ತಮ್ಮಣ, ಎ.ಬಿ. ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿಗಳಾದ ಡಾ. ಅಜಯ್ ನಾಗಭೂಷಣ್, ಮುಖ್ಯ ಇಂಜಿನಿಯರ್ ಶಿವಶಂಕರ್, ಅಧೀಕ್ಷಕ ಇಂಜಿನಿಯರ್ ಶಂಕರೇಗೌಡ, ಸಮಿತಿಯ ಸದಸ್ಯರುಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

No comments:

Post a Comment