Monday, 10 August 2015

ಜನರ ವಲಸೆಯನ್ನು ತಡೆಯುವ ನಿಟ್ಟಿನಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಕಲ್ಪಿಸುವಂತೆ ತಾಪಂಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ (ಅಭಿವೃದ್ಧಿ) ಎನ್.ಡಿ. ಪ್ರಕಾಶ್ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ  ನಡೆದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಜಿಲ್ಲೆಯ ಕೆಲ ತಾಲ್ಲೂಕುಗಳಲ್ಲಿ ಬರದ ಛಾಯೆ ಆವರಿಸಿರುವುದರಿಂದ ಜನರ ಸಂಕಷ್ಟಗಳನ್ನು ದೂರ ಮಾಡುವ ನಿಟ್ಟಿನಲ್ಲಿ  ಉದ್ಯೋಗ ಸೃಜಿಸುವಂತೆ ಸಲಹೆ ನೀಡಿದರು.
ಜಿಲ್ಲೆಯಲ್ಲಿ ಒಟ್ಟು 234 ಗ್ರಾಮ ಪಂಚಾಯಿತಿಗಳಿದ್ದು, ಪ್ರತಿ ಪಂಚಾಯಿತಿಯಿಂದ ಕನಿಷ್ಠ 50 ವ್ಯಕ್ತಿಗತ ಕಾಮಗಾರಿಗಳನ್ನು ಮಾಡಿಸಬೇಕು ಎಂದರು.
ಅರ್ಹ ರೈತರ ಜಮೀನು ಅಭಿವೃದ್ಧಿಪಡಿಸಲು ಮಾದರಿ ಅಂದಾಜು ಪಟ್ಟಿಯಂತೆ ಬದು ನಿರ್ಮಾಣ, ಕೃಷಿಹೊಂಡ, ಗಿಡನೆಡುವಿಕೆ, ತೋಟಗಾರಿಕೆ/ ರೇಷ್ಮೆ ಅಭಿವೃದ್ಧಿ ಮತ್ತು ಮನೆಯಲ್ಲಿ ಜಾನುವಾರು ದೊಡ್ಡಿ ಕಾಮಗಾರಿಗಳಿಗೆ ಕೂಡಲೇ ಚಾಲನೆ ನೀಡುವಂತೆ ತಿಳಿಸಿದರು.
ಜಲ ಮತ್ತು ಮಣ್ಣಿನ ಸಂರP್ಷÀಣೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು. ಕೆರೆಗಳ ಅಭಿವೃದ್ಧಿ, ಜಲಾನಯನ ಪ್ರದೇಶಗಳ ಅಭಿವೃದ್ಧಿ, ಕೃಷಿ ಹೊಂಡಗಳ ನಿರ್ಮಾಣ, ಅರ್ಹ ರೈತರ ಜಮೀನುಗಳಲ್ಲಿ ತೋಟಗಾರಿಕೆ ಕಾಮಗಾರಿಗೆ ಆದ್ಯತೆ ನೀಡಬೇಕು. ನೆಡುತೋಪು, ದನದ ಕೊಟ್ಟಿಗೆಗಳ ನಿರ್ಮಾಣ ಮುಂತಾದ ಕೆಲಸಗಳನ್ನು ಕೈಗೆತ್ತಿಕೊಳ್ಳಬೇಕು ಎಂದರು.
ಅನುಷ್ಠಾನ ಇಲಾಖೆಗಳೊಂದಿಗೆ ಒಗ್ಗೂಡಿಸುವಿಕೆಗಾಗಿ ಸಮನ್ವಯ ಸಾಧಿಸುವುದು. ವಿಶೇಷವಾಗಿ ಅರಣ್ಯ ಇಲಾಖೆಯಡಿ ಪ್ರತಿ ತಾಲೂಕಿಗೆ ಕನಿಷ್ಠ 20 ಕಿ.ಮೀ  ರಸ್ತೆ ಬದಿ ಸಾಲುಮರ ನೆಡುವ ಕಾಮಗಾರಿ ಕೈಗೆತ್ತಿಕೊಳ್ಳುವುದು ಹಾಗೂ ಅರ್ಹ ಫಲಾನುಭವಿಗಳ ಹೊಲಗಳಲ್ಲಿ ನೆಡುತೋಪು ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಸೂಚನೆ ನೀಡಿದರು.
ಈ ಎಲ್ಲಾ ಕೆಲಸಗಳನ್ನು ತP್ಷÀಣದಿಂದಲೇ ಪ್ರಾರಂಭಿಸಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಈ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡುವುದು. ಅಕುಶಲ ಕೆಲಸ ಬಯಸುವ ಜನರಿಗೆ ಉದ್ಯೋಗ ನೀಡದಿದ್ದರೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.

ಮಂಡ್ಯ: ಸರ್ಕಾರಿ ನೌಕರರು ಮತ್ತು ಕುಟುಂಬದ ಅವಲಂಬಿತ ಸದಸ್ಯರುಗಳಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಒದಗಿಸುವ ಜ್ಯೋತಿ ಸಂಜೀವಿನಿ ಯೋಜನೆ ಅನುಷ್ಠಾನ ಸಂಬಂಧ ಆ. 12ರಂದು ಬೆಳಿಗ್ಗೆ 10 ಗಂಟೆಗೆ ನಗರದ ರೈತ ಸಭಾಂಗಣದಲ್ಲಿ ಕಾರ್ಯಾಗಾರ ಆಯೋಜಿಸಲಾಗಿದೆ.
ಜಿಲ್ಲೆಯಲ್ಲಿ ಬರುವ ಎಲ್ಲಾ ವೇತನ ಬಟವಾಡೆ ಅಧಿಕಾರಿಗಳು, ಸಂಬಂಧಪಟ್ಟ ಸಿಬ್ಬಂದಿ ಹಾಗೂ ಮಂಡ್ಯ ಜಿಲ್ಲಾ ನೌಕರರ ಸಂಘದ ಎಲ್ಲಾ ಹಂತದ ಪದಾಧಿಕಾರಿಗಳು ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆ ತಿಳಿಸಿದೆ.

No comments:

Post a Comment