ಕಾರ್ಯಕ್ರಮ
ಮೈಸೂರು,ಆ.18.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 20 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಿಗ್ಗೆ 10-35 ಗಂಟೆಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿಗಳು ಬೆಳಿಗ್ಗೆ 11-30 ಗಂಟೆಗೆ ಹುಣಸೂರಿನ ಡಿ.ದೇವರಾಜ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಡಿ.ದೇವರಾಜ ಅರಸು ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಹುಣಸೂರಿನ ಕಲ್ಲಹಳ್ಳಿ ಗ್ರಾಮದಲ್ಲಿ ಡಿ.ದೇವರಾಜ ಅರಸು ಅವರ ಸಮಾಧಿಗೆ ಗೌರವಾರ್ಪಣೆ ಹಾಗೂ ಕಲ್ಲಹಳ್ಳಿಯನ್ನು ಮಾದರಿ ಗ್ರಾಮವನ್ನಾಗಿ ಅಭಿವೃದ್ಧಿ ಪಡಿಸಲು ದತ್ತು ತೆಗೆದುಕೊಳ್ಳುವ ಬಗ್ಗೆ ಘೋಷಿಸಿದ ನಂತರ ಮಧ್ಯಾಹ್ನ 3 ಗಂಟೆಗೆ ಮಾನಸ ಗಂಗೋತ್ರಿ ಡಿ. ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವ ಉದ್ಘಾಟನೆ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 6 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರೆಳಲಿದ್ದಾರೆ.
ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ.
ಮೈಸೂರು,ಆ.18:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 6 ವರ್ಷ ಮೇಲ್ಪಟ್ಟ ಹಾಗೂ 15 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು, ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ, ಸಾಹಸ ಪ್ರದರ್ಶಿಸಿದ ಬಾಲಕರಿಗೆ “ಹೊಯ್ಸಳ ಪ್ರಶಸ್ತಿ” ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ ಪ್ರಶಸ್ತಿ” ನೀಡಿ ಗೌರವಿಸಲು ಅರ್ಜಿ ಆಹ್ವಾನಿಸಿದೆ. ಈ ಪ್ರಶಸ್ತಿ ರೂ.10,000/-ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.
ಅಸಾಧಾರಣ ಧೈರ್ಯ, ಶೌರ್ಯ ಸಾಧಿಸಿರುವ ಪ್ರಕರಣವು ಆಗಸ್ಟ್-2014 ರಿಂದ ಜುಲೈ-2015 ರೊಳಗೆ ನಡೆದಿರಬೇಕು ಹಾಗೂ ಸಾಧನೆ ಜಿಲ್ಲಾ ಮಟ್ಟದಲ್ಲಿ ಗುರುತಿಸಿರಬೇಕು. ಶೌರ್ಯ ಸಾಧನೆ ತೋರಿದ ಬಗ್ಗೆ, ಆರಕ್ಷಕ ಇಲಾಖೆ ಪ್ರಾಥಮಿಕ ತನಿಖಾ ವರದಿ (ಎಫ್.ಐ.ಆರ್) ಅನ್ನು ಲಗತ್ತಿಸಬೇಕು.
ಈ ಹಿಂದೆ ಯಾವುದಾದರೂ ವರ್ಷಗಳಲ್ಲಿ ಪ್ರಸ್ತಾವನೆ ಜಿಲ್ಲಾ/ರಾಜ್ಯ/ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಪರಿಗಣಿಸಲ್ಪಟ್ಟಿದ್ದಲ್ಲಿ ಮತ್ತೊಮ್ಮೆ ಸಲ್ಲಿಸಲು ಅವಕಾಶವಿರುವುದಿಲ್ಲ.
ಅರ್ಜಿ ನಮೂನೆಯನ್ನು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ನಂ:9/ಎ, 3ನೇ ಮಹಡಿ, ಕೃಷ್ಣಧಾಮ ಎದುರು, ಸಾಹುಕಾರ್ ಚೆನ್ನಯ್ಯ ರಸ್ತೆ, ಸರಸ್ವತಿಪುರಂ, ಮೈಸೂರು ಇಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ತ್ರಿಪ್ರತಿಯಲ್ಲಿ ದಿನಾಂಕ:05-09-2015ರೊಳಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:2498031 ಅಥವಾ 2495432ನ್ನು ಸಂಪರ್ಕಿಸಬಹುದಾಗಿದೆ.
ತಂಬಾಕು ನಿಷೇಧ ಕಾಯ್ದೆ ಕುರಿತು ಕಾರ್ಯಾಗಾರ
ಮೈಸೂರು,ಆ.18.ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಸಿಗರೇಟು ಮತ್ತು ಇತರೇ ತಂಬಾಕು ಉತ್ಪನ್ನಗಳ ನಿಷೇಧ ಕಾಯ್ದೆ 2003 (ಛಿoಠಿಣಚಿ-2003) ಅನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಸಲುವಾಗಿ ಆಗಸ್ಟ್ 19 ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರು ಮಹಾನಗರ ಪಾಲಿಕೆ ಕಚೇರಿ ಹಳೇ ಕೌನ್ಸಿಲ್ ಸಭಾಂಗಣದಲ್ಲಿ ಒಂದು ದಿನದ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿದೆ.
ಈ ತರಬೇತಿ ಕಾರ್ಯಾಗಾರಕ್ಕೆ ಆರೋಗ್ಯ ವಿಭಾಗದ ಅಧಿಕಾರಿ ಹಾಗೂ ಸಿಬ್ಬಂದಿಗಳು ವಲಯ ಆಯುಕ್ತರು ಮತ್ತು ಅಭಿವೃದ್ಧಿ ಅಧಿಕಾರಿಗಳು ತಪ್ಪದೇ ಹಾಜರಾಗುವಂತೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 20 ರಂದು ಸಮಾಜಿಕ ಅಭಿವೃದ್ಧಿ ಕುರಿತು ವಿಚಾರ ಸಂಕಿರಣ
ಮೈಸೂರು,ಆ.18-ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ಹಾಗೂ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜು ಸಹಯೋಗದೊಂದಿಗೆ ಸಾಮಾಜಿಕ ಅಭಿವೃದ್ಧಿ ಕುರಿತು ವಿಚಾರ ಸಂಕಿರಣ ಆಗಸ್ಟ್ 20 ರಂದು ಮಧ್ಯಾಹ್ನ 2 ಗಂಟೆಗೆ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಪಿ. ವಿಶ್ವನಾಥ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ಯೋಜನಾ ನಿರ್ದೇಶಕ ಕೆ.ಎಸ್. ಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಕೆ.ಬಿ. ಪ್ರಭುಸ್ವಾಮಿ, ಮಾನಸಗಂಗೋತ್ರಿ ಅರ್ಥಶಾಸ್ತ್ರ ಮತ್ತು ಸಹಕಾರ ಅಧ್ಯಯನ ವಿಭಾಗದ ಅಧ್ಯಕ್ಷ ಡಾ|| ಮಹೇಂದ್ರಕುಮಾರ್ ಎಸ್., ಅಶೋಕ ಹಾರ್ಡ್‍ವೇರ್ ಪ್ರೊಪೈಟರ್ ಪಿ. ರಾಜೇಂದ್ರಕುಮಾರ್., ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ|| ಎನ್. ಶಂಕರ್, ಮಾನಸ ಗಂಗೋತ್ರಿ ಅರ್ಥಶಾಸ್ತ್ರ ಮತ್ತು ಸಹಕಾರ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕ ಡಾ|| ಎಂ. ಮಹೇಶ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೆ. ತಿಬ್ಬೇಗೌಡ ಅವರುಗಳು ಭಾಗವಹಿಸುವರು.
ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಮೈಸೂರು,ಆ.18.ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ 2015-16ನೇ ಸಾಲಿಗೆ ಜಿಎನ್‍ಎಂ, ಪ್ಯಾರಾ ಮೆಡಿಕಲ್ (ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ) ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ, ತರಬೇತಿ ಶುಲ್ಕ ಹಾಗೂ ಇತರೆ ಶುಲ್ಕ ನೀಡಲು ಅರ್ಜಿ ಆಹ್ವಾನಿಸಿದೆ.
ಈ ಹಿಂದೆ ತರಬೇತಿ ಶುಲ್ಕ ಮತ್ತು ಶಿಷ್ಯ ವೇತನಕ್ಕೆ ಆಯ್ಕೆಯಾಗಿದ್ದು ಪ್ರಸಕ್ತ ಸಾಲಿನಲ್ಲೂ ವ್ಯಾಸಂಗ ಮುಂದುವರಿಸಿರುವ ಅಭ್ಯರ್ಥಿಗಳು ಸಹ ನವೀಕರಣಕ್ಕಾಗಿ ಅರ್ಜಿ ಸಲ್ಲಿಸಬೇಕು.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 5 ಕಡೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ವೆಬ್ ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ಹಾಗೂ ಞಚಿಡಿeಠಿಚಿss.ಛಿgg.gov.iಟಿ ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸೋಮಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋರಿಕೆ ವರ್ಗಾವಣೆ : ಆಗಸ್ಟ್ 23 ರಿಂದ ಕೌನ್ಸಿಲಿಂಗ್
ಮೈಸೂರು,ಆ.18.-ಸಾರ್ವಜನಿಕ ಶಿಕ್ಷಣ ಇಲಾಖೆ 2015ನೇ ಸಾಲಿನ, ಮೈಸೂರು ವಿಭಾಗದೊಳಗಿನ ಪ್ರೌಢಶಾಲಾ ಶಿಕ್ಷಕರ ಘಟಕದೊಳಗಿನ ಕೋರಿಕೆ ವರ್ಗಾವಣೆಯ ಅಂತಿಮ ಆದ್ಯತಾ ಪಟ್ಟಿ ಯನ್ನು ದಿನಾಂಕ 17-08-2015 ರಂದು ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನಲ್ಲಿ ಪ್ರಕಟಿಸಿದೆ. ಕೋರಿಕೆ ವರ್ಗಾವಣೆಯ ಅಂತಿಮ ಆದ್ಯತಾ ಪಟ್ಟಿಯಲ್ಲಿರುವ ಶಿಕ್ಷಕ ವೃಂದದವರಿಗೆ ದಿನಾಂಕ 23-08-2015ರಿಂದ 25-08-2015ರವರೆಗೆ ಕೌನ್ಸಿಲಿಂಗ್ ಇರುತ್ತದೆ.
ಕೌನ್ಸಿಲಿಂಗ್‍ಗೆ ಹಾಜರಾಗುವ ಶಿಕ್ಷಕರು ಇತ್ತೀಚಿನ ಭಾವಚಿತ್ರ ಲಗತ್ತಿಸಿರುವ ಸೇವಾ ದೃಢೀಕರಣ ಪತ್ರ, ತೀವ್ರತರಹ ಖಾಯಿಲೆ/ಅಂಗವಿಕಲ ಪ್ರಕರಣದವರು ಮೈಸೂರು ವಿಭಾಗದ ವೈದ್ಯಕೀಯ ಮಂಡಳಿಯಿಂದ ನೀಡಲಾದ ಮೂಲ ಪ್ರಮಾಣ ಪತ್ರ, ಪತಿ ಮತ್ತು ಪತ್ನಿ ಪ್ರಕರಣದವರು ಪತಿ ಅಥವಾ ಪತ್ನಿಯ ಮೂಲ ಸೇವಾ ಮತ್ತು ವಾಸ ದೃಢೀಕರಣ ಪತ್ರ, ವಿಧವಾ ಶಿಕ್ಷಕರ ಪ್ರಕರಣದವರು ಪತಿಯ ಮೂಲ ಮರಣ ಪ್ರಮಾಣ ಪತ್ರ ಅಥವಾ ಇತರೆ ಯಾವುದಾದರೂ ಒಂದು ದಾಖಲೆಯನ್ನು ಹಾಜರುಪಡಿಸುವುದು, ಸೈನಿಕ ಪ್ರಕರಣದವರು ಸಕ್ಷಮ ಪ್ರಾಧಿಕಾರದಿಂದ ಪಡೆದ ಮೂಲ ಪ್ರಮಾಣ ಪತ್ರ., ವಿವಾಹಿತ ಶಿಕ್ಷಕರ ಪ್ರಕರಣದಲ್ಲಿ ಪತಿ ಅಥವಾ ಪತ್ನಿ ಈ ಆದ್ಯತೆಯಡಿಯಲ್ಲಿ ಎಷ್ಟು ಬಾರಿ ವರ್ಗಾವಣೆ ಪಡೆದಿರುತ್ತಾರೆ ಎಂಬ ಬಗ್ಗೆ ಸಕ್ಷಮ ಅಧಿಕಾರಿಗಳಿಂದ ದೃಢೀಕರಣ ಪತ್ರದೊಂದಿಗೆ ಹಾಜರಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಭಾಗೀಯ ಕಾರ್ಯದರ್ಶಿಗಳು ಬಿ.ಕೆ. ಬಸವರಾಜ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ದರಪಟ್ಟಿ ಕರೆಯಲು ಮಾಹಿತಿ ಆಹ್ವಾನ
ಮೈಸೂರು,ಆ.18-ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೈಸೂರು ಕಚೇರಿ ವತಿಯಿಂದ ಆಗಿಂದಾಗ್ಗೆ ಆಹ್ವಾನ ಪತ್ರಿಕೆಗಳ ಮುದ್ರಣ, ಹೆದ್ದಾರಿ ಫಲಕಗಳಿಗೆ ಫ್ಲೆಕ್ಸ್/ವಿನೈಲ್ ಅಳವಡಿಕೆ, ಕ್ಷೇತ್ರಪ್ರಚಾರ ವಾಹನಕ್ಕೆ ಫ್ಲೆಕ್ಸ್ ಅಳವಡಿಕೆ, ಕಿರುಹೊತ್ತಿಗೆ ಮುದ್ರಣ ಮೊದಲಾದ ಕೆಲಸಗಳಿಗೆ ದರಪಟ್ಟಿ ಕರೆಯಬೇಕಾಗಿರುತ್ತದೆ. ಆದ್ದರಿಂದ ಇಂತಹ ಕಾರ್ಯಗಳನ್ನು ನಿರ್ವಹಿಸಿ ಅನುಭವ ಇರುವ ಸಂಸ್ಥೆಗಳನ್ನು ಗುರುತಿಸಿ ಪಟ್ಟಿ ಮಾಡಲು ಹಾಗೂ ಅಗತ್ಯವಿದ್ದಾಗ ದರಪಟ್ಟಿ ಪಡೆಯಲು ನಿಗಧಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಿದೆ. ನಿಗಧಿತ ನಮೂನೆಯನ್ನು ಹಾಗೂ ಹೆಚ್ಚಿನ ವಿವರಗಳನ್ನು ಉಪನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾಭವನ, ಧನ್ವಂತ್ರಿ ರಸ್ತೆ ಮೈಸೂರು ಇವರಿಂದ ಪಡೆದುಕೊಂಡು ದಿನಾಂಕ 22-08-2015ರ ಒಳಗೆ ಮಾಹಿತಿ ನೀಡಲು ಕೋರಲಾಗಿದೆ.
ವಿದ್ಯಾರ್ಥಿವೇತನ: ಹೊಸ ವೆಬ್‍ಸೈಟ್‍ನಲ್ಲಿ ನೋಂದಣಿ
ಮೈಸೂರು,ಆ.18.ಪರಿಶಿಷ್ಟ ವರ್ಗದ ಇಲಾಖಾ ವತಿಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಈ ಹಿಂದೆ ಉಪಯೋಗಿಸುತ್ತಿದ್ದ ವೆಬ್‍ಸೈಟ್‍ನ್ನು ಸ್ಥಗಿತಗೊಳಿಸಲಾಗಿದೆ. ಹೊಸದಾಗಿ ನ್ಯಾಷಿನಲ್ ಸ್ಕಾಲರ್‍ಶಿಪ್ ಪೊರ್ಟಲ್ ತಂತ್ರಾಂಶ ಪ್ರಾರಂಭಿಸಲಾಗಿದೆ.
9ನೇ ತರಗತಿ, 10ನೇ ತರಗತಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ ಶಿಕ್ಷಣ ಹಾಗೂ ಇನ್ನುಳಿದ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ತಿತಿತಿ.sಛಿhoಟಚಿಡಿshiಠಿ.gov.iಟಿ ವೆಬ್‍ಸೈಟ್‍ನಲ್ಲಿ ಹೆಸರು ನೋಂದಾಯಿಸಿಕೊಳ್ಳುವುದು. ಈ ವೆಬ್‍ಸೈಟ್‍ನಲ್ಲಿ ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಮಾತ್ರ ಭಾರತ ಸರ್ಕಾರದ ವಿದ್ಯಾರ್ಥಿವೇತನ ಮಂಜೂರು ಮಾಡಲು ಸಾಧ್ಯವಾಗುತ್ತದೆ ಎಂದು ಮೈಸೂರು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅನರ್ಹರು ಬಿಪಿಎಲ್ ಕಾರ್ಡ್ ಹೊಂದಿದ್ದರೆ: ದೂರು ಸಲ್ಲಿಸಿ
ಮೈಸೂರು,ಆ.18.-ಮೈಸೂರು ನಗರ ಆಹಾರ ಇಲಾಖೆಗೆ ತಪ್ಪು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿ ಪಡೆದವರಿಗೆ ಜುಲೈ 31 ರೊಳಗಾಗಿ ಸ್ವಯಂ ಪ್ರೇರಿತರಾಗಿ ಬಿಪಿಎಲ್ ಕಾರ್ಡ್‍ನ್ನು ಸರ್ಕಾರಕ್ಕೆ ಆಧ್ಯರ್ಪಿಸುವಂತೆ ತಿಳಿಸಲಾಗಿತ್ತು.
ಮೈಸೂರು ನಗರದಲ್ಲಿ ಸ್ವಯಂ ಪ್ರೇರಿತರಾಗಿ 74 ಅರ್ಹರಲ್ಲದ ಬಿಪಿಎಲ್ ಕಾರ್ಡುದಾರರು ಕಾರ್ಡ್‍ನ್ನು ಸರ್ಕಾರಕ್ಕೆ ಆಧ್ಯರ್ಪಿಸಿರುತ್ತಾರೆ ಎಂದು ಮೈಸೂರು ನಗರ ಅನೌಪಚಾರಿಕ ಪಡಿತರ ಪ್ರದೇಶ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಅನರ್ಹರು, ಸರ್ಕಾರಿ ನೌಕರರು, ಪಿಂಚಣಿದಾರರು ಬಿಪಿಎಲ್ ಪಡಿತರ ಚೀಟಿ ಹೊಂದಿದ್ದಲ್ಲಿ ಹಾಗೂ ಒಂದೇ ಮನೆಯಲ್ಲಿ ಎರಡು ಅನಿಲ ಸಂಪರ್ಕ ಹೊಂದಿರುವುದು ಕಂಡು ಬಂದಲ್ಲಿ ಮಾಹಿತಿಯನ್ನು ಸಹಾಯಕ ನಿರ್ದೇಶಕರು ಪಡಿತರ ಕಚೇರಿ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಕೊಠಡಿ ಸಂಖ್ಯೆ 21 ಇಲ್ಲಿಗೆ ದೂರು ಸಲ್ಲಿಸುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 29 ರಂದು ತ್ರೈಮಾಸಿಕ ಕೆ.ಡಿ.ಪಿ ಸಭೆ
ಮೈಸೂರು,ಆ.18-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 29 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮಗಳು ಸೇರಿದಂತೆ) ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪಿ.ಎ. ಗೋಪಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 20 ರಂದು ಡಿ. ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವ
ಮೈಸೂರು,ಆ.18.-ಮಾಜಿ ಮುಖ್ಯಮಂತ್ರಿ ಸಾಮಾಜಿಕ ಪರಿವರ್ತನೆ ಹರಿಕಾರ ಡಿ. ದೇವರಾಜ ಅರಸು ಜನ್ಮ ಶತಮಾನೋತ್ಸವ ಹಾಗೂ ದೇವರಾಜ ಅರಸು ಪ್ರಶಸ್ತಿ ಪ್ರಧಾನ ಸಮಾರಂಭವು ಆಗಸ್ಟ್ 20 ರಂದು ನಡೆಯಲಿದೆ.
ಬೆಳ್ಳಿಗೆ 9 ಗಂಟೆಗೆ ಬೆಂಗಳೂರು ವಿಧಾನಸೌಧ ಆವರಣದ ಪಶ್ಚಿಮ ದ್ವಾರದಲ್ಲಿರುವ ದೇವರಾಜ ಅರಸು ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗಣ್ಯರು ಮಾಲಾರ್ಪಣೆ ಮಾಡಲಿದ್ದಾರೆ. ಬೆಳಿಗ್ಗೆ 11-15ಕ್ಕೆ ಹುಣಸೂರು ಟೌನ್‍ನಲ್ಲಿ ಡಿ. ದೇವರಾಜ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ದೇವರಾಜ ಅರಸು ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೇರವೇರಿಸಲಾಗುವುದು. ಮಧ್ಯಾಹ್ನ 12 ಗಂಟೆಗೆ ಕಲ್ಲಹಳ್ಳಿ ಪುಣ್ಯ ಭೂಮಿಯಲ್ಲಿ ಗೌರವಾರ್ಪಣೆ ಹಾಗೂ ಕಲ್ಲಹಳ್ಳಿಯನ್ನು ಮಾದರಿ ಗ್ರಾಮವನ್ನಾಗಿ ಅಭಿವೃದ್ಧಿ ಪಡಿಸಲು ಸರ್ಕಾರದಿಂದ ದತ್ತು ಸ್ವೀಕಾರ ಘೋಷಿಸುವ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಹೆಚ್.ಪಿ. ಮಂಜುನಾಥ್ ಅವರು ಅಧ್ಯಕ್ಷತೆ ವಹಿಸುವರು.
ಮಧ್ಯಾಹ್ನ 3 ಗಂಟೆಗೆ ಮೈಸೂರು ಮಾನಸಗಂಗೋತ್ರಿ ಬಯಲು ರಂಗಮಂದಿರದಲ್ಲಿ ಡಿ. ದೇವರಾಜ ಅರಸು ಶತಮಾನೋತ್ಸವ ಮತ್ತು ದೇವರಾಜ ಅರಸು ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ವಾಸು ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಹೆಚ್. ಆಂಜನೇಯ, ಭಾರತ ಸರ್ಕಾರದ ಕಾನೂನು ಸಚಿವ ಡಿ.ವಿ. ಸದಾನಂದಗೌಡ, ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪಶುಸಂಗೋಪನೆ ಸಚಿವ ಟಿ.ಬಿ. ಜಯಚಂದ್ರ, ಸಹಕಾರ ಹಾಗೂ ಸಕ್ಕರೆ ಸಚಿವ ಹೆಚ್.ಎಸ್. ಮಹದೇವ ಪ್ರಸಾದ್, ಲೋಕೋಪಯೋಗಿ ಸಚಿವ ಡಾ|| ಹೆಚ್.ಸಿ. ಮಹದೇವಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಹಜ್ ಸಚಿವ ಆರ್. ರೋಷನ್ ಬೇಗ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಉಮಾಶ್ರೀ, ವಿಧಾನಸಭೆ ಅಧ್ಯಕ್ಷ ಕಾಗೋಡು ತಿಮ್ಮಪ್ಪ, ಮಾಜಿ ಮುಖ್ಯಮಂತ್ರಿ ಹಾಗೂ ಲೋಕಸಭಾ ಸದಸ್ಯ ಎಂ. ವೀರಪ್ಪ ಮೊಯ್ಲಿ, ಮಾಜಿ ಮುಖ್ಯಮಂತ್ರಿ ಧರಂಸಿಂಗ್, ಮಾಜಿ ಮುಖ್ಯಮಂತ್ರಿ ಹಾಗೂ ಲೋಕಸಭಾ ಸದಸ್ಯ ಬಿ.ಎಸ್. ಯಡಿಯೂರಪ್ಪ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ, ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಮಾಜಿ ಪ್ರಧಾನಮಂತ್ರಿ ಹಾಗೂ ಲೋಕಸಭಾ ಸದಸ್ಯ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಮಾಜಿ ಕೇಂದ್ರ ಸಚಿವ ಹಾಗೂ ಲೋಕಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಮಾಜಿ ಕೇಂದ್ರ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಆಸ್ಕರ್‍ಫೆರ್ನಾಂಡೀಸ್ , ಮಾಜಿ ಕೇಂದ್ರ ಸಚಿವ ಜಾಫರ್ ಷರೀಫ್, ಮೈಸೂರು ಮಹಾನಗರಪಾಲಿಕೆ ಮಹಾಪೌರ ಆರ್.ಲಿಂಗಪ್ಪ, ವಿಧಾನಸಭೆ ಉಪಾಧ್ಯಕ್ಷ ಶಿವಶಂಕರ್ ರೆಡ್ಡಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಡಾ| ಪುಷ್ಪಾವತಿ ಅಮರನಾಥ್, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ್, ಪ್ರತಾಪ ಸಿಂಹ, ಸಿ.ಎಸ್. ಪುಟ್ಟರಾಜು, ವಿಧಾನಸಭಾ ಸದಸ್ಯರಾದ ತನ್ವೀರ್ ಸೇಠ್, ಎಂ.ಕೆ.ಸೋಮಶೇಖರ್, ಜಿ.ಟಿ.ದೇವೇಗೌಡ, ಕೆ.ವೆಂಕಟೇಶ್, ಸಾ.ರಾ.ಮಹೇಶ್, ಹೆಚ್.ಪಿ. ಮಂಜುನಾಥ್, ಚಿಕ್ಕಮಾದು, ವಿಧಾನಪರಿಷತ್ ಸದಸ್ಯರಾದ ಸಿ.ಹೆಚ್.ವಿಜಯಶಂಕರ್, ಗೋ. ಮಧುಸೂದನ್, ಮರಿತಿಬ್ಬೇಗೌಡ, ಎಸ್.ನಾಗರಾಜು, ಆರ್. ಧರ್ಮಸೇನ, ಕಾವೇರಿ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಸಿ. ದಾಸೇಗೌಡ, , ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಆರ್. ಮೋಹನ್ ಕುಮಾರ್, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆರ್. ಮೂರ್ತಿ, ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ ಅನಂತು, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷೆ ರೀಹಾನಬಾನು, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಹೆಚ್. ಕಾಂತರಾಜು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಚಂದ್ರಪ್ಪ, ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಶ್ರೀನಿವಾಸಾಚಾರಿ, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ನಾರಾಯಣ, ಮಾಜಿ ಸಚಿವೆ ಹಾಗೂ ಮಾಜಿ ಲೋಕಸಭಾ ಸದಸ್ಯೆ ಚಂದ್ರಪ್ರಭಾ ಅರಸು, ದೇವರಾಜ ಅರಸು ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ಪ್ರೊ| ಓ. ಅನಂತರಾಮಯ್ಯ, ಡಿ.ದೇವರಾಜ ಅರಸು ಅವರ ಪುತ್ರಿ ಭಾರತೀ ಅರಸು, ಮಾಜಿ ಸಚಿವ ಹಾಗೂ ಡಿ.ದೇವರಾಜ ಅರಸು ಜನ್ಮ ಶತಮಾನೋತ್ಸವ ಕಾರ್ಯಕಾರಿ ಸಮಿತಿ ಅಧ್ಯಕ್ಷ ಅಡಗೂರು ಹೆಚ್. ವಿಶ್ವನಾಥ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ವಿ. ಅನ್ಬುಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್ ಸೇರಿದಂತೆ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕಾಣೆಯಾದವರ ಪತ್ತೆಗಾಗಿ ಮನವಿ
ಮೈಸೂರು,ಆ.18.-ಬೆಂಗಳೂರು ಬಿ.ಡಿ.ಎ. ಲೇಔಟ್ ನಿವಾಸಿ 39 ವರ್ಷದ ಸಂಜಯ್ ಮತ್ತು ಅವರ ಪತ್ನಿ 32 ವರ್ಷದ ಶಶಿರೇಖಾ ಹಾಗೂ ಅವರ ಮಗ 8 ವರ್ಷದ ಸೋಹನ್ ಜುಲೈ 26 ರಿಂದ ಕಾಣೆಯಾಗಿದ್ದು, ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ.
ಕಾಣೆಯಾದವರ ಚಹೆರೆ ಇಂತಿದೆ: ಸಂಜಯ್ ವಯಸ್ಸು 39 ವರ್ಷ, ಸಾಧಾರಣ ಮೈಕಟ್ಟು, ಕೋಲುಮುಖ, ಗೋಧಿ ಮೈಬಣ್ಣ, 6 ಅಡಿ ಎತ್ತರ, ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ಮಾತನಾಡುತ್ತಾರೆ.
ಶಶಿರೇಖ ವಯಸ್ಸು 32 ವರ್ಷ, ಸಾಧಾರಣ ಮೈಕಟ್ಟು, ಕೂಲುಮುಖ, ಎಣ್ಣೆಗೆಂಪು ಮೈಬಣ್ಣ, 5.6 ಅಡಿ ಎತ್ತರ, ಕನ್ನಡ ಭಾಷೆ ಮಾತನಾಡುತ್ತಾರೆ.
ಸೋಹನ್ ವಯಸ್ಸು 8 ವರ್ಷ, ಸಾಧಾರಣ ಮೈಕಟ್ಟು, ದುಂಡುಮುಖ, ಎಣ್ಣೆಗೆಂಪು ಮೈಬಣ್ಣ, 3.6 ಅಡಿ ಎತ್ತರ, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ಇದ್ದಲ್ಲಿ ಬ್ಯಾಟರಾಯನಪುರ ಪೊಲೀಸ್ ಠಾಣೆಗೆ ತಿಳಿಸುವುದು ಎಂದು ಪ್ರಕಟಣೆ ತಿಳಿಸಿದೆ.

No comments:
Post a Comment