ಮುಖ್ಯ ಮಂತ್ರಿಗಳ ಪ್ರವಾಸ ಕಾರ್ಯಕ್ರಮ
ಮೈಸೂರು,ಅ.29.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 30 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಿಗ್ಗೆ 10-05 ಗಂಟೆಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿಗಳು ಕಲಾಮಂದಿರದಲ್ಲಿ ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಯೋಜಿಸಿರುವ ಶತಮಾನೋತ್ಸವ ಸಮಾರೋಪ ಸಮಾರಂಭವನ್ನು ಉದ್ಘಾಟಿಸುವರು. ಮಧ್ಯಾಹ್ನ 12 ಗಂಟೆಗೆ ಮೈಸೂರು ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರೆಳಲಿದ್ದಾರೆ.
ಸಮಸ್ಯೆಗಳಿಗೆ ಕನ್ನಡಿ ಹಿಡಿದ ಜನಸಂದರ್ಶನ ಸಭೆ
ಮೈಸೂರು,ಅ.29.ಸರಿಯಾದ ಸಮಯಕ್ಕೆ ಬಸ್ ಬುರತ್ತಿದೆಯೇ? ಪಡಿತರ ಆಹಾರ ಧಾನ್ಯ ನಿಗಧಿತ ಪ್ರಮಾಣದಲ್ಲಿ ದೊರೆಯುತ್ತಿದೆಯೆ?, ಆಸ್ಪತ್ರೆಗೆ ವೈದ್ಯರು ಬರುತ್ತಿದ್ದಾರಾ, ಔಷಧಿಗಳು ಸಿಗುತ್ತಿದೆಯೇ?, ಕುಡಿಯುವ ನೀರು ಸಮಸ್ಯೆ ಇದೆಯೇ?, ಬಸ್‍ಗಳ ವ್ಯವಸ್ಥೆ ಸಾಕಾಷ್ಟುಯಿದೆಯೇ?, ಜಮೀನಿನ ಖಾತೆ ಮಾಡಿ ಕೊಡುತ್ತಿದ್ದಾರಾ .... ಇಂತಹ ಹಲವು ಪ್ರಶ್ನೆಗಳನ್ನು ಸಾರ್ವಜನಿಕರ ಮುಂದೆ ಇಟ್ಟವರು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಗಳಾದ ರಾಮಯ್ಯ ಅವರು.
ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ವರುಣ ವಿಧಾನಸಭಾ ಕ್ಷೇತ್ರದಲ್ಲಿ ಗ್ರಾಮಪಂಚಾಯತ್‍ವಾರು ಸರಣಿ ಜನಸಂದರ್ಶನ ಸಭೆ ನಡೆಸುತ್ತಿರುವ ಜಂಟಿ ಕಾರ್ಯದರ್ಶಿ ರಾಮಯ್ಯ ಅವರು ಇಂದು ನಂಜನಗೂಡು ತಾಲ್ಲೂಕು ಕೊಣನೂರು ಹಾಗೂ ದಾಸನೂರು ಗ್ರಾಮಪಂಚಾಯತ್ ಕೇಂದ್ರಗಳಲ್ಲಿ ಜನಸಂಪರ್ಕ ಸಭೆ ನಡೆಸಿದರು.
ಸಭೆಯ ಆರಂಭಕ್ಕೆ ಸಭೆಗೆ ಆಗಮಿಸಿದ್ದ ವಿವಿಧ ಇಲಾಖೆ ಅಧಿಕಾರಿಗಳನ್ನು ಸಾರ್ವಜನಿಕರಿಗೆ ಪರಿಚಯಸಿದ ಅವರು ಅಧಿಕಾರಿಗಳ ಮೊಬೈಲ್ ದೂರವಾಣಿ ಸಂಖ್ಯೆಗಳನ್ನು ನೀಡಲು ತಿಳಿಸಿದರಲ್ಲದೆ ಆಯಾಯ ಇಲಾಖೆಗಳಿಂದ ನಿರ್ವಹಿಸುವ ಕೆಲಸದ ಸ್ವರೂಪವನ್ನು ಪರಿಚಯಿಸಿದರು ಹಾಗೂ ಸಂಬಂಧಿ ಕೆಲಸಕ್ಕೆ ಆಯಾಯ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಸಾರ್ವಜನಿಕರಿಗೆ ತಿಳಿಸಿದರು.
ಕೊಣನೂರಿನಲ್ಲಿ ಪಡಿತರ ವಿತರಣೆಗೆ ತಿಂಗಳಲ್ಲಿ 3 ದಿನ ಮಾತ್ರ ಬರುತ್ತಾರೆ. 8 ರೂ. ವಾಹನ ಬಾಡಿಗೆಯನ್ನು ಪಡಿತರದಾರರಿಂದಲೇ ವಸೂಲಿ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದಾಗ ಈ ಬಗ್ಗೆ ಮಾಹಿತಿ ಪಡೆದು ಕ್ರಮ ವಹಿಸುವುದಾಗಿ ತಹಶೀಲ್ದಾರರು ತಿಳಿಸಿದರು. ಜಮೀನಿನ ಖಾತೆ ವರ್ಗಾವಣೆಯಲ್ಲಿ ತುಂಬ ಸಮಸ್ಯೆ ಉಂಟಾಗುತ್ತಿದ್ದು, ಗ್ರಾಮಲೆಕ್ಕಾಧಿಕಾರಿಗಳು ಸಾರ್ವಜನಿಕರಿಗೆ ಲಭ್ಯವಾಗುತ್ತಿಲ್ಲವೆಂಬ ದೂರು ವ್ಯಾಪಕವಾಗಿ ಕೇಳಿ ಬಂದಾಗ 45 ದಿನಗಳ ಒಳಗಾಗಿ ಈ ಸಮಸ್ಯೆ ಬಗೆಹರಿಸಲು ರಾಮಯ್ಯ ಸೂಚಿಸಿದರು.
ಈ ಭಾಗದಲ್ಲಿ ವಿಶೇಷವಾಗಿ ಕಂದಾಯ ಅದಾಲತ್ ವ್ಯವಸ್ಥೆ ಮಾಡಿ ಖಾತಾ ಸಮಸ್ಯೆ ಬಗೆಹರಿಸುವುದಾಗಿ ಸಭೆಯಲ್ಲಿ ಉಪಸ್ಥಿತರಿದ್ದ ಸಹಾಯಕ ಆಯುಕ್ತರು ತಿಳಿಸಿದರು.
ಕೆರೆ ತುಂಬಿಸುವ ಯೋಜನೆಯಡಿ ಕೊಣನೂರು ಕೆರೆಯನ್ನು ತುಂಬಿಸಲಾಗಿದೆ. ಕೆರೆ ಅಂಗಳವನ್ನು ಸ್ಮಶಾನವಾಗಿ ಬಳಸಲಾಗುತ್ತಿತ್ತು, ಕೆರೆ ತುಂಬಿದ ನಂತರ ಸ್ಮಶಾನದ ಸಮಸ್ಯೆ ಉಂಟಾಗಿದೆ ಎಂದು ಕೊಣನೂರು ಗ್ರಾಮಸ್ಥರು ಅಹವಾಲು ಹೇಳಿಕೊಂಡರು. ಹನುಮನಪುರದಲ್ಲಿಯೂ ಸ್ಮಶಾನದ ಸಮಸ್ಯ ಇದೆ ಎಂದಾಗ ಸರ್ಕಾರಿ ಜಮೀನು ಲಭ್ಯವಿದ್ದರೆ ಕೂಡಲೇ ಮಂಜೂರು ಮಾಡಿಕೊಡಲಾಗುವುದು. ನರೇಗಾ ಯೋಜನೆಯಡಿ ಅಭಿವೃದ್ಧಿ ಪಡಿಸಲಾಗುವುದು 3 ತಿಂಗಳ ಒಳಗಾಗಿ ಈ ಬಗ್ಗೆ ಕ್ರಮವಹಿಸಲಾಗುವುದು ಎಂದು ತಹಶೀಲ್ದಾರ್ ತಿಳಿಸಿದರು.
ವಿಕಲಚೇತನರ ಸಮಸ್ಯೆಗೆ ಸ್ಪಂದನೆ:
ಸಭೆಯಲ್ಲಿ ಹಲವು ವಿಕಲಚೇತನರು, ಪೋಷಕರು ಹಾಜರಿದ್ದು, ಸರ್ಕಾರದಿಂದ ದೊರೆಯಬೇಕಾದ ಸೌಲಭ್ಯಗಳು ದೊರೆಯದಿರುವ ಬಗ್ಗೆ ದೂರಿದರು. 21 ವರ್ಷ ವಯಸ್ಸಿನ ಬುದ್ಧಿಮಾಂದ್ಯ ವಿಕಲಚೇತನನ ಪೋಷಕರೊಬ್ಬರು ಐ.ಡಿ. ಕಾರ್ಡ್ ಸೇರಿದಂತೆ ಸೌಲಭ್ಯಗಳಿಗೆ ಮನವಿ ಸಲ್ಲಿಸಿದಾಗ ಸಂಬಂಧಿಸಿದ ನಿಗಮದಿಂದ ಪೋಷಕರಿಗೆ ಸಾಲಸೌಲಭ್ಯ ಮಂಜೂರು ಮಾಡಲು ತಿಳಿಸಲಾಯಿತು ಹಾಗೂ ಅಗತ್ಯ ವೈದ್ಯಕೀಯ ನೆರವು ಒದಗಿಸಿಕೊಡಲು ತಿಳಿಸಿದರು.
ಅಂಧ ಯುವತಿಯೊಬ್ಬರು ಇಂಥದೇ ಮನವಿ ಸಲ್ಲಿಸಿದಾಗ ನಂಜನಗೂಡು ಬಾಲಕಿಯರ ಹಾಸ್ಟೆಲ್‍ನಲ್ಲಿ ಪಾರ್ಟ್ ಟೈಮ್ ಸಂಗೀತ ಶಿಕ್ಷಕಿಯಾಗಿ ನೇಮಿಸಿಕೊಳ್ಳಲು ತಿಳಿಸಲಾಯಿಲ್ಲದೆ ಜೊತೆಗೆ ಕರೆದುಕೊಂಡು ಹೋಗುವ ಆಕೆಯ ತಾಯಿಗೆ ಅಡುಗೆ ಸಹಾಯಕರ ಕೆಲಸ ನೀಡುವ ಸಾದ್ಯತೆಯ ಬಗ್ಗೆಯೂ ಪರಿಶೀಲಿಸಲು ತಿಳಿಸಲಾಯಿತು.
ಕೊಣನೂರು ಕೆರೆ ತುಂಬಿಸಿದ ನಂತರ ಹಿನ್ನೀರಿನಿಂದಾಗಿ ತಮ್ಮ ಜಮೀನು ಮುಳುಗಡೆ ಆಗಿ ಜೀವನಕ್ಕೂ ತೊಂದರೆ ಆಗಿರುವುದಾಗಿ ಮಹಿಳೆಯೊಬ್ಬರು ತಿಳಿಸಿದಾಗ ಕೆರೆ ಅಂಗಳ ಒತ್ತುವರಿ ಆಗದಿದ್ದರೆ ನ್ಯಾಯ ಸಮ್ಮತವಾಗಿ ದೊರೆಯಬೇಕಾದ ಪರಿಹಾರ ದೊರೆಕಿಸಿಕೊಡಲು ರಾಮಯ್ಯ ತಿಳಿಸಿದರು. ಅಲ್ಲದೆ ಅವರ ಜಮೀನಿಗೆ ಸೂಕ್ತ ರಸ್ತೆ ಸಂಪರ್ಕ ಕಲ್ಪಿಸಿಕೊಡಲು ಸಹ ತಿಳಿಸಿದರು.
ಪ್ರತಿ ಗ್ರಾಮಕ್ಕೂ ಸರ್ಕಾರದಿಂದ ಮಂಜೂರು ಆದ ಯೋಜನಾ ವಿವರಗಳನ್ನು ಸಭೆಯಲ್ಲಿ ಓದಿ ಹೇಳಿದ ರಾಮಯ್ಯ ಅವರು ಈ ಕಾಮಗಾರಿಗಳು ಆಗಿವೆಯೇ, ಗುಣಮಟ್ಟದ ಕೆಲಸ ಆಗಿದೆಯೇ ಎಂಬ ಮಾಹಿತಿ ಪಡೆದುಕೊಂಡರು. ಬೋರ್‍ವೆಲ್ 3 ವರ್ಷಗಳು ಕಳೆದಿದ್ದರೂ ಇನ್ನು ಕೈ ಪಂಪ್ ಅಳವಡಿಸಿಲ್ಲ. ಕೆಲವು ಬೋರ್‍ವೆಲ್‍ಗಳಿಗೆ ಪಂಪ್ ಇದ್ದರೆ ಪೈಪ್ ಲೈನ್ ಇಲ್ಲ ಎಂಬ ಮಾಹಿತಿಯನ್ನು ಸಾರ್ವಜನಿಕರು ಗಮನಕ್ಕೆ ತಂದಾಗ ಈ ಬಗ್ಗೆ ಕ್ರಮವಹಿಸುವುದಾಗಿ ಸಂಬಂಧಿಸಿದ ಅಧಿಕಾರಿಗಳು ಸಮಜಾಯಿಷಿ ನೀಡಿದರು.
ಸಮಸ್ಯೆಗಳು ಇದ್ದಾಗ ಅಧಿಕಾರಿಗಳ ಬಳಿ ನೀವೂ ಅಲೆಯುತ್ತಿದ್ದೀರಿ. ಈಗ ಅಧಿಕಾರಿಗಳೇ ನಿಮ್ಮ ಮನೆ ಬಾಗಿಲಿಗೆ ಬಂದಿದ್ದಾರೆ. ಎಲ್ಲ ಸಮಸ್ಯೆಗಳ ಮಾಹಿತಿ ಪಡೆದು ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ರಾಮಯ್ಯ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೇತ್ರದ ಜನರ ಸಮಸ್ಯೆ ಬಗೆಹರಿಸಲು ವಿಶೇಷ ಆಸಕ್ತಿ ವಹಿಸಿದ್ದು, ಅವರ ಸೂಚನೆ ಮೇರೆಗೆ ಈ ಸಭೆ ನಡೆಸಲಾಗುತ್ತಿದ್ದು, ಸಮಸ್ಯೆಗಳಿಗೆ ಪರಿಹಾರ ದೊರೆಕಿಸುವುದಾಗಿ ಹೇಳಿದರು.
ಕಳಪೆ ಕಾಮಗಾರಿಗಳ ಬಗ್ಗೆ ಹಲವು ದೂರುಗಳು ಕೇಳಿಬಂದಾಗ ಈ ಕಾಮಗಾರಿಗಳ ಬಗ್ಗೆ ಅಧಿಕಾರಿಗಳಿಂದ ತನಿಖೆ ನಡೆಸಲಾಗುವುದು ಅಲ್ಲದೆ ಕಾಮಗಾರಿ ಕಳೆಪೆ ಎಂದು ಕಂಡುಬಂದಲ್ಲಿ ಹಣ ಪಾವತಿ ತಡೆಹಿಡಿಯಲಾಗುವುದು ಎಂದರು.
ಗ್ರಾಮವಾರು ಆಗಬೇಕಾಗಿರುವ ಕಾಮಗಾರಿಗಳ ವಿವರಗಳನ್ನು ಸಭೆಯಲ್ಲಿ ಪಡೆದುಕೊಳ್ಳಲಾಯಿತು. ಸಮುದಾಯ ಭವನಗಳಿಗೆ ಬೇಡಿಕೆ, ಕಾಂಕ್ರೀಟ್ ರಸ್ತೆಗಳ ನಿರ್ಮಾಣ, ಹೆಚ್ಚುವರಿ ಬಸ್ ವ್ಯವಸ್ಥೆ, ಹೆಚ್ಚುವರಿ ಕುಡಿಯುವ ನೀರಿನ ವ್ಯವಸ್ಥೆ, ಸ್ಮಶಾನ, ಮೊದಲಾದ ಹಲವು ಬೇಡಿಕೆಗಳನ್ನು ಸಾರ್ವಜನಿಕರು ಸಭೆಯಲ್ಲಿ ಮಂಡಿಸಿದರು.
ಕಾವೇರಿ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಶಿವಶಂಕರ್, ಸಹಾಯಕ ಆಯುಕ್ತ ಆನಂದ್, ಚೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ಸುನಿಲ್‍ಕುಮಾರ್, ತಹಶೀಲ್ದಾರ್ ರಾಮಪ್ಪ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ಕೃಷ್ಣರಾಜು, ತಾಲ್ಲೂಕು ವೈದ್ಯಾಧಿಕಾರಿ ಡಾ|| ಕಲಾವತಿ , ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಪ್ರಭಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಇಂಜಿನಿಯರ್ ಭಾಸ್ಕರ್, ಸೇರಿದಂತೆ ವಿವಿಧ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.
ಅನುಸೂಚಿತ ಜಾತಿ ಮತ್ತು ಪಂಗಡÀ ಕಲ್ಯಾಣ ಸಮಿತಿ: ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ
ಮೈಸೂರು,ಅ.29.ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಹಾಗೂ ಸಮಿತಿಯ ಸದಸ್ಯರುಗಳಾದ ವಿಧಾನಸಭಾ ಸದಸ್ಯ ಮನೋಹರ್ ಹೆಚ್. ತಹಶೀಲ್ದಾರ್, ರಾಜಾ ವೆಂಕಟಪ್ಪ ನಾಯಕ, ಎಂ.ಟಿ.ಬಿ. ನಾಗರಾಜ್, ಆರ್. ನರೇಂದ್ರ, ರಾಜು ಅಲಗೂರು, ಬಿ.ಎಂ. ನಾಗರಾಜು, ಎಸ್.ಎನ್. ನಾರಾಯಣಸ್ವಾಮಿ ಕೆ.ಎಂ., ಆರ್. ಜಗದೀಶ್ ಕುಮಾರ್, ಅರವಿಂದ ಚಂದ್ರಕಾಂತ ಬೆಲ್ಲದ್, ತಿಪ್ಪರಾಜು, ಹೆಚ್.ಕೆ.ಕುಮಾರಸ್ವಾಮಿ, ಶಾರದಾ ಪೂರ್ಯ ನಾಯ್ಕ್, ಕೆ.ಎಂ. ತಿಮ್ಮರಾಯಪ್ಪ, ಪಿ. ರಾಜೀವ್, ವಿಧಾನ ಪರಿಷತ್ ಸದಸ್ಯ ಸಿ.ಹೆಚ್.ವಿಜಯಶಂಕರ್, ರಘುನಾಥರಾವ್ ಮಲ್ಕಾಪುರೆ, ಆರ್. ಧರ್ಮಸೇನ, ಅರುಣ್ ಶಹಾಪುರ, ತಾರಾ ಅನೂರಾಧ ನವೆಂಬರ್ 2 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅವರುಗಳು ಅಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳವರ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ, ಎಸ್‍ಸಿಪಿ/ಟಿಎಸ್‍ಪಿ ಅನುದಾನದ ಬಳಕೆ, ಸುಳ್ಮ್ಳ ಜಾತಿ ಪ್ರಮಾಣ ಪತ್ರ, ಜಿಲ್ಲಾಧಿಕಾರಿ/ಉಪ ವಿಭಾಗಾಧಿಕಾರಿ ಮತ್ತು ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಬಾಕಿ ಇರುವ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಜಮೀನಿಗೆ ಸಂಬಂಧಿಸಿದ ಪ್ರಕರಣಗಳ ಇತ್ಯರ್ಥ, ನೇಮಕಾತಿ/ಮುಂಬಡ್ತಿಯಲ್ಲಿ ಮೀಸಲಾತಿ ಹಾಗೂ ಬ್ಲಾಕ್‍ಲಾಗ್ ಹುದ್ದೆಗಳ ಭರ್ತಿ ಬಗ್ಗೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಮಕ್ಷವ್ಮದಲ್ಲಿ ಜಿಲ್ಲಾ ಮಟ್ಟದ ಪರಿಶೀಲನಾ ಸಭೆ ನಡೆಸಲಿದ್ದಾರೆ.
ನ. 1 ರಂದು ಕನ್ನಡ ರಾಜ್ಯೋತ್ಸವ
ಮೈಸೂರು,ಅ.29.-ಜಿಲ್ಲಾಡಳಿತದ ವತಿಯಿಂದ ನವೆಂಬರ್ 1 ರಂದು ಕೋಟೆ ಶ್ರೀ ಅಂಜುನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಕನ್ನಡ ರಾಜೋತ್ಸವ ಆಚರಿಸಲಾಗುವುದು.
ಅಂದು ಬೆಳಿಗ್ಗೆ 8-30 ಗಂಟೆಗೆ ಅರಮನೆ ಆವರಣದಲ್ಲಿರುವ ಶ್ರೀ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ನಂತರ ಕೋಟೆ ಶ್ರೀ ಅಂಜುನೇಯ ದೇವಸ್ಥಾನದ ಆವರಣದಲ್ಲಿ ಶ್ರೀ ಭುವನೇಶ್ವರಿ ದೇವಿ ಪುತ್ಥಳಿಗೆ ಪುಷ್ಪಾರ್ಚನೆ ಮಾಡಲಾಗುವುದು. ಪುಷ್ಪರ್ಚನೆಯ ನಂತರ ಭುವನೇಶ್ವರಿ ದೇವಿ ಮೆರವಣಿಗೆ ಕೆ.ಆರ್.ವೃತ್ತ ಸಯ್ಯಾಜಿರಾವ್ ರಸ್ತೆ, ಇರ್ವಿನ್ ರಸ್ತೆ, ಅಶೋಕ ರಸ್ತೆ ಮೂಲಕ ಸಾಗಿ ಪುರಭವನ ತಲುಪಲಿದೆ.
ಬೆಳಿಗ್ಗೆ 9 ಗಂಟೆಗೆ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.
ಲೋಕೋಪಯೋಗಿ ಸಚಿವ ಡಾ| ಹೆಚ್.ಸಿ. ಮಹದೇವಪ್ಪ, ಮೈಸೂರು ಮಹಾನಗರ ಪಾಲಿಕೆ ಮಹಾಪೌರ ಆರ್. ಲಿಂಗಪ್ಪ,ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಡಾ| ಪುಷ್ಪಾವತಿ ಅಮರನಾಥ್, ಲೋಕಸಭಾ ಸದಸ್ಯರಾದ ಪ್ರತಾಪ ಸಿಂಹ, ಆರ್. ಧ್ರುವನಾರಾಯಣ್, ಸಿ.ಎಸ್. ಪುಟ್ಟರಾಜು, ವಿಧಾನಸಭಾ ಸದಸ್ಯರಾದ ತನ್ವೀರ್ ಸೇಠ್, ಜಿ.ಟಿ.ದೇವೇಗೌಡ, ಕೆ.ವೆಂಕಟೇಶ್, ಎಂ.ಕೆ. ಸೋಮಶೇಖರ್, ವಾಸು, ಹೆಚ್.ಪಿ. ಮಂಜುನಾಥ್, ಸಾ.ರಾ.ಮಹೇಶ್, ಚಿಕ್ಕಮಾದು, ವಿಧಾನಪರಿಷತ್ ಸದಸ್ಯರಾದ ಸಿ.ಹೆಚ್.ವಿಜಯಶಂಕರ್, ಗೋ. ಮಧುಸೂದನ್, ಎಸ್.ನಾಗರಾಜು, ಆರ್. ಧರ್ಮಸೇನ, ಕಾವೇರಿ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಸಿ. ದಾಸೇಗೌಡ, , ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಆರ್. ಮೋಹನ್ ಕುಮಾರ್, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆರ್. ಮೂರ್ತಿ, ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ ಅನಂತು, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷೆ ರೀಹಾನಬಾನು, ಮೈಸೂರು ಮಹಾನಗರ ಪಾಲಿಕೆ ಉಪ ಮಹಾಮಹಾಪೌರರಾದ ಎಂ. ಮಹದೇವಮ್ಮ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಎಲ್. ಮಾದಪ್ಪ, ಮೈಸೂರು ತಾಲ್ಲೂಕು ಪಂಚಾಯತ್ ಅಧ್ಯಕ್ಷ ಡಿ ಕೃಷ್ಣಮೂರ್ತಿ ಹಾಗೂ ಉಪಾಧ್ಯಕ್ಷೆ ರಾಣಿ ಅವರುಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸಂಜೆ 5 ಗಂಟೆಗೆ ಸಾಂಸ್ಕøತಿಕ ಕಾರ್ಯಕ್ರಮಗಳು ಕಲಾಮಂದಿರದಲ್ಲಿ ನಡೆಯಲಿದ್ದು, ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್, ಮೈಸೂರು ಮಹಾನಗರ ಪಾಲಿಕೆ ಮಹಾಪೌರ ಆರ್. ಲಿಂಗಪ್ಪ ಹಾಗೂ ಶಾಸಕ ವಾಸು ಅವರು ಭಾಗವಹಿಸಲಿದ್ದಾರೆ.
ನ. 5 ರಂದು ನಾಲ್ವಡಿ ಜಯಂತಿ
ಮೈಸೂರು,ಅ.29.-ಜಿಲ್ಲಾಡಳಿತದ ವತಿಯಿಂದ ನವೆಂಬರ್ 5 ರಂದು ಬೆಳಿಗ್ಗೆ 11 ಗಂಟೆಗೆ ಕಲಾಮಂದಿರದಲ್ಲಿ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಿಸಲಾಗುವುದು.
ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ವಾಸು ಅವರು ಅಧ್ಯಕ್ಷತೆ ವಹಿಸುವರು.ಖ್ಯಾತ ವಕೀಲರಾದ ಡಾಪಿ.ಎಸ್. ದ್ವಾರಕಾನಾಥ್ ಅವರು ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ.
ಲೋಕೋಪಯೋಗಿ ಸಚಿವ ಡಾ| ಹೆಚ್.ಸಿ. ಮಹದೇವಪ್ಪ, ಮೈಸೂರು ಮಹಾನಗರ ಪಾಲಿಕೆ ಮಹಾಪೌರ ಆರ್. ಲಿಂಗಪ್ಪ, ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಡಾ| ಪುಷ್ಪಾ ಅಮರನಾಥ್, ಲೋಕಸಭಾ ಸದಸ್ಯರಾದ ಪ್ರತಾಪ ಸಿಂಹ, ಆರ್. ಧ್ರುವನಾರಾಯಣ್, ಸಿ.ಎಸ್. ಪುಟ್ಟರಾಜು, ವಿಧಾನಸಭಾ ಸದಸ್ಯರಾದ ತನ್ವೀರ್ ಸೇಠ್, ಜಿ.ಟಿ.ದೇವೇಗೌಡ, ಕೆ.ವೆಂಕಟೇಶ್, ಎಂ.ಕೆ. ಸೋಮಶೇಖರ್, ಹೆಚ್.ಪಿ. ಮಂಜುನಾಥ್, ಸಾ.ರಾ.ಮಹೇಶ್, ಚಿಕ್ಕಮಾದು, ವಿಧಾನಪರಿಷತ್ ಸದಸ್ಯರಾದ ಸಿ.ಹೆಚ್.ವಿಜಯಶಂಕರ್, ಗೋ. ಮಧುಸೂದನ್, ಎಸ್.ನಾಗರಾಜು, ಆರ್. ಧರ್ಮಸೇನ, ಕಾವೇರಿ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಸಿ. ದಾಸೇಗೌಡ, , ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಆರ್. ಮೋಹನ್ ಕುಮಾರ್, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆರ್. ಮೂರ್ತಿ, ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ ಅನಂತು, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷೆ ರೀಹಾನಬಾನು, ಮೈಸೂರು ಮಹಾನಗರ ಪಾಲಿಕೆ ಉಪ ಮಹಾಮಹಾಪೌರರಾದ ಎಂ. ಮಹದೇವಮ್ಮ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಎಲ್. ಮಾದಪ್ಪ, ಮೈಸೂರು ತಾಲ್ಲೂಕು ಪಂಚಾಯತ್ ಅಧ್ಯಕ್ಷ ಡಿ ಕೃಷ್ಣಮೂರ್ತಿ ಹಾಗೂ ಉಪಾಧ್ಯಕ್ಷೆ ರಾಣಿ ಅವರುಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಅಂದು ಬೆಳಿಗ್ಗೆ 9-30 ಗಂಟೆಗೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮೆರವಣಿಗೆ ನಡೆಯಲಿದ್ದು, ಮೆರವಣಿಗೆ ಅರಮನೆ ಆವರಣದಲ್ಲಿರುವ ಪ್ರಸನ್ನ ಲಕ್ಷ್ಮೀರಮಣಸ್ವಾಮಿ ದೇವಸ್ಥಾನದ ಮುಂಭಾಗದಿಂದ ಹೊರಟು ಅರಮನೆ ಉತ್ತರ ದ್ವಾರದ ಮೂಲಕ ಕೆ.ಆರ್.ವೃತ್ತ ತಲುಪಲಿದೆ. ಕೆ.ಆರ್.ವೃತ್ತದಲ್ಲಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿಗೆ ಗಣ್ಯರಿಂದ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಿದ ನಂತರ ಮೆರವಣಿಗೆಯು ಡಿ.ದೇವರಾಜ ಅರಸ್ ರಸ್ತೆ, ಮೆಟ್ರೋಪೋಲ್ ವೃತ್ತದ ಮೂಲಕ ಕಲಾಮಂದಿರ ತಲುಪಲಿದೆ.
ಡಾ.ಬಿ.ಎನ್ ಸುರೇಶ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ
ಮೈಸೂರು,ಅ.29.ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ 2015 ರ ಜೀವಮಾನದ ಸಾಧನೆ ಪ್ರಶಸ್ತಿ ಪ್ರಕಟಿಸಿದೆ. ಪ್ರಶಸ್ತಿಯನ್ನು ಇಸ್ರೋನ ಡಾ|| ವಿಕ್ರಂ ಸಾರಾಭಾಯಿ ಡಿಸ್ಟಿಂಗ್ವಿಶ್ಡ್ ಪ್ರೊಫೆಸರ್ ಹಾಗೂ ಖ್ಯಾತ ಬಾಹ್ಯಕಾಶ ವಿಜ್ಞಾನಿ ಪದ್ಮಭೂಷಣ ಡಾ.ಬಿ.ಎನ್ ಸುರೇಶ್ ಅವರಿಗೆ ನವೆಂಬರ್ 5 ರಂದು ಬೆಂಗಳೂರಿನ ವಿವಿಪುರಂನ ಇನ್ಸ್ಟಿಟ್ಯೂಟ್ ಆಫ್ ಟೆಕ್ನಲಾಜಿ ಸಭಾಂಗಣದಲ್ಲಿ ನಡೆಯಲಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಎಂಟನೇ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಾಡಲಾಗುವುದು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸದಸ್ಯ ಕಾರ್ಯದರ್ಶಿ ಡಾ ಹೆಚ್ ಹೊನ್ನೇಗೌಡ ಅವರು ತಿಳಿಸಿದ್ದಾರೆ.
ಪ್ರಶಸ್ತಿ ಸ್ವರ್ಣ ಪದಕ, ಸನ್ಮಾನ ಪತ್ರ ಹಾಗೂ 1 ಲಕ್ಷ ನಗದು ಒಳಗೊಂಡಿರುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮಗ್ರ ಪ್ರಶಸ್ತಿ
ಮೈಸೂರು,ಅ.29.ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಇತ್ತೀಚಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನಡೆಸಿದ ಸಾಂಸ್ಕøತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ಮೈಸೂರಿನ ಲಲಿತಾಶರ್ಮ ಅವರು 70 ರಿಂದ 80ರ ವಯೋಮಾನದ ವಿಭಾಗದಲ್ಲಿ ಪ್ರಥಮ ಬಹುಮಾನ ಹಾಗೂ ಸಮಗ್ರ ಪ್ರಶಸ್ತಿ ಪಡೆದಿರುತ್ತಾರೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸ ಕೈಗಾರಿಕಾ ನೀತಿ ಉತ್ತಮ ಆಶಾದಾಯಕವಾಗಿದೆ : ಎಂ. ಶಿವಶಂಕರ್
ಮೈಸೂರು29-ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ ಹೊಸ ಉದ್ಯಮಶೀಲರಿಗೆ ಹೊಸ ಕೈಗಾರಿಕಾ ನೀತಿ ಉತ್ತಮ ಆಶಾದಾಯಕವಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಎಂ. ಶಿವಶಂಕರ್ ಅವರು ತಿಳಿಸಿದರು.
ಅವರು ಬೆಂಗಳೂರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಮೈಸೂರು ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಸಿಡಾಕ್, ಧಾರವಾಡ ಮತ್ತು ಮೈಸೂರು ಮಹಾರಾಣಿ ಕಲಾ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಮಹಾರಾಣಿ ಕಲಾ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಬಾವಿ ಮತ್ತು ಹಾಲಿ ಹೊಸ ಉದ್ಯಮಶೀಲರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹೊಸ ಕೈಗಾರಿಕಾ ನೀತಿ ಉದ್ಯಮ ಶೀಲರಿಗೆ ಹೆಚ್ಚು ಉಪಯುಕ್ತವಾಗಿದ್ದು, ಅದನ್ನು ಸದುಪಯೋಗಪಡಿಸಿಕೊಂಡು ಭವಿಷ್ಯವನ್ನು ಅತ್ಯುತ್ತಮವಾಗಿ ರೂಢಿಸಿಕೊಳ್ಳಬೇಕೆಂದು ಕರೆ ನೀಡಿದರು.
ಮಹಾರಾಣಿ ಕಾಲೇಜಿನ ಪ್ರಾಂಶುಪಾಲ ಎಂ. ಪುರುಷೋತ್ತಮ್ ಮಾತನಾಡಿ ಬ್ಯಾಂಕುಗಳಲ್ಲಿ ಯಥೇಚ್ಫವಾದ ಸಾಲ ಸೌಲಭ್ಯ ದೊರೆಯುತ್ತಿದೆ. ಅದನ್ನು ಬಳಸಿಕೊಂಡು ಯುವಕ ಯುವತಿಯರು ಸ್ವಾವಲಂಬಿಯಾಗಬೇಕೆಂದರು.
ರುಡ್‍ಸೆಟ್ ಸಂಸ್ಥೆಯ ನಿರ್ದೇಶಕ ಅನಂತ ಪದ್ಮನಾಭ ಸೇರಿದಂತೆ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮೈಸೂರು ಮಹಾನಗರಪಾಲಿಕೆ ಚುನಾವಣೆ
ಮೈಸೂರು,ಅ.29.ಮೈಸೂರು ಮಹಾನಗರಪಾಲಿಕೆ ನೂತನ ಮೇಯರ್/ ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗಾಗಿ ದಿನಾಂಕ 13-11-2015 ರಂದು ಬೆಳಿಗ್ಗೆ 11-30 ಗಂಟೆಗೆ ಮೈಸೂರು ಮಹಾ ನಗರಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ಚುನಾವಣೆ ನಡೆಸಲಾಗುವುದು ಎಂದು ಮೈಸೂರು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ನಿಯಮಾವಳಿಯಂತೆ ನಗರಪಾಲಿಕಾ ಸದಸ್ಯರು, ಸಂಬಂಧಿಸಿದ ಲೋಕಸಭಾ ಸದಸ್ಯರು, ವಿಧಾನಸಭಾ ಸದಸ್ಯರು ಮತ್ತು ವಿಧಾನಪರಿಷತ್ ಸದಸ್ಯರುಗಳಿಗೆ ತಿಳುವಳಿಕೆ ಪತ್ರ ಕಳುಹಿಸಲಾಗಿದ್ದು, ದಿನಾಂಕ 13-11-2015 ರಂದು ಬೆಳಿಗ್ಗೆ 11-30 ಗಂಟೆಗೆ ಮಹಾನಗರಪಾಲಿಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ಸಭೆ ಸಮಾವೇಶಗೊಂಡು ಚುನಾವಣಾ ಪ್ರಕ್ರಿಯೆ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No comments:
Post a Comment