Saturday, 28 November 2015

 ವಿಭಾಗದ ಕನ್ನಡ ಮಾಧ್ಯಮ ಪ್ರಶಸ್ತಿ ಸಮಾರಂಭ-2015-16
 ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪ್ರತಿಷ್ಠಿತ ಕಾರ್ಯಕ್ರಮಗಳಲ್ಲಿ ಕನ್ನಡ ಮಾಧ್ಯಮ ಪ್ರಶಸ್ತಿ ಕಾರ್ಯಕ್ರಮವೂ ಒಂದು. ರಾಜ್ಯದಲ್ಲಿ ಕನ್ನಡ ಮಾಧ್ಯಮದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಯನ್ನು ವ್ಯಾಸಂಗ ಮಾಡಿ, ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ದೃಷ್ಠಿಯಿಂದ ಈ ಕಾರ್ಯಕ್ರಮವನ್ನು ಕಳೆದ ಆರು ವರ್ಷಗಳಿಂದ ನಡೆಸುತ್ತಾ ಬಂದಿದೆ. ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿ, ಕನ್ನಡ ಮಾಧ್ಯಮ ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದ ಹಿನ್ನೆಲೆಯಲ್ಲಿ ಮೈಸೂರು ವಿಭಾಗ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ನವೆಂಬರ್ 29, 2015ರ ಬೆಳಗ್ಗೆ 10.30 ಗಂಟೆಗೆ ಮೈಸೂರಿನ ಕರ್ನಾಟಕ ಕಲಾ ಮಂದಿರದಲ್ಲಿ ಆಯೋಜಿಸಲಾಗಿದೆ.
 
       ಕನ್ನಡ ಮಾಧ್ಯಮ ಪ್ರಶಸ್ತಿಯನ್ನು ರಾಜ್ಯದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಎಸ್.ಎಸ್.ಎಲ್.ಸಿ.ಯ 1091 ವಿದ್ಯಾರ್ಥಿಗಳು ಮತ್ತು ಪಿ.ಯು.ಸಿ.ಯ 920 ವಿದ್ಯಾರ್ಥಿಗಳನ್ನು ಸೇರಿದಂತೆ ಒಟ್ಟು 1011 ವಿದ್ಯಾರ್ಥಿಗಳನ್ನು ಗೌರವಿಸಿ, ಪುರಸ್ಕರಿಸಲಾಗುತ್ತಿದೆ.  ಮೈಸೂರು ವಿಭಾಗದ ಪ್ರತಿ ತಾಲೂಕಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಐವರು ವಿದ್ಯಾಥಿಗಳಂತೆ ಎಸ್.ಎಸ್.ಎಲ್.ಸಿ.ಯ 285 ಹಾಗೂ ಪಿ.ಯು.ಸಿ.ಯ 232 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 517 ವಿದ್ಯಾರ್ಥಿಗಳನ್ನು ಗೌರವಿಸಿ ಸನ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ಯಶಸ್ಸಿಗೆ ಕಾರಣೀಭೂತರಾದ ಪೋಷಕರನ್ನು ಆಹ್ವಾನಿಸಿ, ಅವರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡುವುದು, ಇದರಿಂದ ವಿದ್ಯಾರ್ಥಿಗಳಲ್ಲಿ ಕನ್ನಡದ ಬಗ್ಗೆ ಹೆಚ್ಚಿನ ಒಲವು ಮೂಡಿಸಿದಂತಾಗುತ್ತದೆ. ಈ ಪುರಸ್ಕಾರವು ಪ್ರಥಮ ನಗದು ಬಹುಮಾನ ರೂ.10,000/-, ದ್ವಿತೀಯ ಬಹುಮಾನ ರೂ.9,000/-, ತೃತೀಯ ಬಹುಮಾನ ರೂ.8,000/- ಗಳಲ್ಲದೆ, ಸ್ಮರಣಿಕೆ, ಪ್ರಮಾಣಪತ್ರ, ಕೈಗಡಿಯಾರ, ಶಾಲಾ ಬ್ಯಾಗು, ಕನ್ನಡ-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು ಹಾಗೂ ಪೆನ್‍ಸೆಟ್‍ನ್ನು ಒಳಗೊಂಡಿರುತ್ತದೆ.

ಮೈಸೂರಿನ ಜಿಲ್ಲಾಧಿಕಾರಿಗಳಾದ ಶ್ರೀಮತಿ ಸಿ. ಶಿಖಾರವರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡುವವರು. ಮೈಸೂರಿನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ   ಶ್ರೀ ಪಿ.ಎ. ಗೋಪಾಲರವರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ            ಶ್ರೀ ಹೆಚ್. ಆರ್. ಬಸಪ್ಪರವರು ಮತ್ತು ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಎಂ. ಚಂದ್ರಶೇಖರ್‍ರವರು ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಸದಸ್ಯರಾದ ಶ್ರೀ ವಿಶ್ವನಾಥ್‍ರವರುಗಳು ಈ ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಿರುವರು. ಹಿರಿಯ ಸಾಹಿತಿಗಳಾದ ಡಾ. ಕಾಳೇಗೌಡ ನಾಗವಾರರವರು ವಿದ್ಯಾರ್ಥಿಗಳಿಗೆ ಹಿತನುಡಿಯನ್ನಾಡಲಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾನ್ಯ ಅಧ್ಯಕ್ಷರಾದ ಡಾ. ಎಲ್. ಹನುಮಂತಯ್ಯರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.

No comments:

Post a Comment