ನ.26 ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆ
ನ.26 ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯನ್ನು ಬೆಳ್ಳಿಗ್ಗೆ 10.30ಕ್ಕೆ ಮಾನ್ಯ ಜಿಲ್ಲಾಧಿಕಾರಿಗಳ ಕಚೇರಿ, ಸಭಾಂಗಣದಲ್ಲಿ ನಡೆಸಲು ಉದ್ದೇಶಿಸಲಾಗಿರುತ್ತದೆ. ಪ್ರಯುಕ್ತ ಈಗಾಗಲೇ ಪ್ರಾಧಿಕಾರಕ್ಕೆ ಅರ್ಜಿಗಳನ್ನು ಸಲ್ಲಿಸಿರುವ ಅರ್ಜಿದಾರರು ಸದರಿ ಸಭೆಗೆ ಅಗತ್ಯ ಮಾಹಿತಿ ಮತ್ತು ದಾಖಲಾತಿಗಳೊಂದಿಗೆ ಹಾಜರಾಗಲು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ.14 ರಂದು ಕೆ.ಆರ್.ಪೇಟೆಯಲ್ಲಿ ಟಿಪ್ಪುಸುಲ್ತಾನ್‍ರವರ ಜನ್ಮ ದಿನಾಚರಣೆ
ಕೆ.ಆರ್.ಪೇಟೆ ತಾಲ್ಲ್ಲೂಕು ಆಡಳಿತ ಹಾಗೂ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಮೈಸೂರು ಹುಲಿ ಹಜರತ್ ಟಿಪ್ಪುಸುಲ್ತಾನ್‍ರವರ ಜನ್ಮ ದಿನಾಚರಣೆಯನ್ನು ನವೆಂಬರ್ 14 ರಂದು ಬೆಳಿಗ್ಗೆ 10 ಗಂಟೆಗೆ ಕೆ.ಆರ್.ಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಆರ್.ಪೇಟೆ ಶಾಸಕರಾದ ನಾರಾಯಣ ಗೌಡ ಅವರು ವಹಿಸುವರು. ಈಕಾರ್ಯಕ್ರಮಕ್ಕೆ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಎಂದು ಕೆ.ಆರ್.ಪೇಟೆ ತಹಶೀಲ್ದಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಗುವಿನ ಪತ್ತೆಗಾಗಿ ಸಹಕರಿಸಲು ಮನವಿ
ದಿನಾಂಕ 26-10-2015 ರಂದು ತಾವರೆಗೆರೆ, ವಾಟರ್ ಟ್ಯಾಂಕ್ ಹತ್ತಿರ ಇರುವ ಎಸ್.ಬಿ. ಸಮುದಾಯ ಭವನದ ರಸ್ತೆ ಬದಿಯಲ್ಲಿ ಒಂದು ದಿನದ ನವಜಾತ ಗಂಡು ಮಗು ಪತ್ತೆಯಾಗಿದ್ದು, ಬಿಳಿ ಮೈ ಬಣ್ಣವನ್ನು ಹೊಂದಿರುತ್ತದೆ. ಪ್ರಸ್ತುತ ಮಗು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಆಶ್ರಯದಲ್ಲಿದ್ದು, ಮಗುವಿನ ಪೋಷಕರು ಇದ್ದಲ್ಲಿ, ಮಗು ಕಾಣೆಯಾಗಿರುವ ಕುರಿತು ನೀಡಿರುವ ದೂರಿನ ಪ್ರತಿಯ ಜೊತೆಗೆ ಅಗತ್ಯ ಮೂಲ ದಾಖಲಾತಿಗಳೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣ ಘಟಕ, ನಂ. 2083/5, 1 ನೇ ಕ್ರಾರ್ಶ, ಸುಭಾಷ್ ನಗರ, ಮಂಡ್ಯ ಇವರನ್ನು ಸಂಪರ್ಕಿಸುವಂತೆ ಅಥವ ದೂ. ಸಂಖ್ಯೆ 08232-223222 ಕರೆ ಮಾಡುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
ನ.19 ರಂದು ಕೃಷಿಮೇಳ
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ (ಜಿ.ಕೆ.ವಿ.ಕೆ) ದಿನಾಂಕ:19-11-2015 ರಿಂದ 22-11-2015 ರವರೆಗೆ ಪ್ರತಿದಿನ ಬೆಳಿಗ್ಗೆ 9.00 ರಿಂದ ಸಂಜೆ 6.00 ಗಂಟೆಯವರೆಗೆ ಕೃಷಿಮೇಳವನ್ನು ಏರ್ಪಡಿಸಲಾಗಿದೆ ಎಂದು ವಿಸ್ತರಣಾ ನಿರ್ದೇಶಕರು ಕೃಷಿ ವಿಶ್ವವಿದ್ಯಾನಿಲಯ, ಬೆಂಳೂರು ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

No comments:
Post a Comment