ಡಿ.1ರಂದು ವಿಶ್ವ ಏಡ್ಸ್ ದಿನಾಚರಣೆ
ಮಂಡ್ಯ ನ.30. ಜಿಲ್ಲಾಡಳಿತ ಮಂಡ್ಯ, ಜಿಲ್ಲಾ ಪಂಚಾಯತ್ ಕರ್ನಾಟಕ ರಾಜ್ಯ ಏಡ್ಸ್ ಪ್ರೆವೆನ್ಸನ್ ಸೋಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಡ್ಯ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂದಕ ಘಟಕ ಮಂಡ್ಯ, ಭಾರತೀ ರೆಡ್‍ಕ್ರಾಸ್ ಮಂಡ್ಯ, ಲಯನ್ಸ್ ಸಂಸ್ಥೆ ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ಡಿ.1ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯದ ತಾವರೆಗೆರೆಯ ಎಸ್.ಬಿ.ಸಮುದಾಯ ಭವನದಲ್ಲಿ ವಿಶ್ವ ಏಡ್ಸ್ ದಿನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ಶರತ್ ಬಿ. ಅವರು ಉದ್ಘಾಟಿಸುವರು. ಜಿಲ್ಲಾಧಿಕಾರಿಗಳಾದ ಡಾ.ಅಜಯ್ ನಾಗಭೂಷಣ್ ಅವರು ಅಧ್ಯಕ್ಷತೆ ವಹಿಸುವರು. ವಿಶೇಷ ಉಪನ್ಯಾಸವನ್ನು ಮಿಮ್ಸ್ ವೈದ್ಯಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕರಾದ ಡಾ.ಸುಭಾಷ್‍ಬಾಬು ನೀಡುವರು.
ಜಾಗøತಿ ಜಾಥಾವು ಅಂದು ಬೆಳಿಗ್ಗೆ 9.30ಕ್ಕೆ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಿಂದ ಆರಂಭವಾಗಿ ಎಸ್.ಬಿ.ಸಮುದಾಯಭವನದಲ್ಲಿ ಸಮಾವೇಶಗೊಳ್ಳಲಿದೆ. ಜಾಥಾವನ್ನು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳಾದ ಭೂಷಣ್‍ಜಿ.ಬೊರಸೆಯವರು ಚಾಲನೆ ನೀಡುವರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಮಂಚೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

No comments:
Post a Comment