Monday, 14 December 2015

 ಪ್ರಬಲ ಕ್ಷೇತ್ರ: ಅಂಶಿ ಪ್ರಸನ್ನಕುಮಾರ್
ಮೈಸೂರು,ಡಿಸೆಂಬರ್14. ಕನ್ನಡಿಯಾಗಿ ಕಾರ್ಯನಿರ್ವಹಿಸುತ್ತ ಬಂದಿರುವ   ಮಾಧ್ಯಮ ಕ್ಷೇತ್ರ ಇಂದು ಪ್ರಬಲ ಶಕ್ತಿಯಾಗಿ ಬೆಳೆದು ನಿಂತಿದೆ ಎಂದು ಕನ್ನಡ ಪ್ರಭ ದಿನ ಪತ್ರಿಕೆಯ ಸಹಾಯಕ ಸಂಪಾದಕರಾದ ಅಂಶಿ ಪ್ರಸನ್ನಕುಮಾರ್ ತಿಳಿಸಿದರು.
 ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಬಹುಮಾಧ್ಯಮ ಸಂಶೋಧನಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಇಎಂಆರ್‍ಸಿ ಎಜ್ಯುಸ್ಯಾಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಪರಿಶಿಷ್ಟ ಜಾತಿ ಮತ್ತು ವರ್ಗದ ಅಭ್ಯರ್ಥಿಗಳಿಗೆ ವೀಡಿಯೋ ಚಿತ್ರೀಕರಣ ಮತ್ತು ಸಂಕಲನ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
 ಪತ್ರಿಕಾ ಹಾಗೂ ವಿದ್ಯುನ್ಮಾನ ಮಾಧ್ಯಮಗಳು ಸಮಾಜದಲ್ಲಿ ಪ್ರಬಲವಾಗಿ ಬೆಳೆದಿದೆ. ಈ ಕ್ಷೇತ್ರದಲ್ಲಿ ಆಸಕ್ತಿಯಿಂದ ಕೆಲಸ ಮಾಡುವವರಿಗೆ ಸಾಕಷ್ಟು ಅವಕಾಶಗಳಿವೆ. ವೀಡಿಯೋ ಚಿತ್ರೀಕರಣ ಮತ್ತು ಸಂಕಲನದಲ್ಲಿ ತರಬೇತಿ ಪಡೆಯುವ ವಿದ್ಯಾರ್ಥಿಗಳಿಗೆ ವಿದ್ಯುನ್ಮಾನ ಮಾಧ್ಯಮ ಹಾಗೂ ಚಲನಚಿತ್ರ ಕ್ಷೇತ್ರದಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂದರು.
 ಸದೃಢ ರಾಷ್ಟ್ರ ನಿರ್ಮಾಣ ಮಾಡುವುದರಲ್ಲಿ ಯುವಕರ ಪಾತ್ರ ಪ್ರಮುಖವಾಗಿದೆ. ಯುವ ಜನರು ಪತ್ರಿಕೋದ್ಯಮ ಕ್ಷೇತ್ರದಂತ ಹೆಚ್ಚಿನ ಆಸಕ್ತಿ ಬೆಳಸಿಕೊಳ್ಳಬೇಕು. ಸಮಾಜದಲ್ಲಿರುವ ಭ್ರಷ್ಟ ವ್ಯವಸ್ಥೆಯನ್ನು ಸರಿಪಡಿಸುವುದಕ್ಕೆ ಪತ್ರಿಕೋದ್ಯಮ ಉತ್ತಮ ವೇದಿಕೆ. ಪ್ರತಿಕೋದ್ಯಮದ ಶಕ್ತಿ ದಿನ ದಿನಕ್ಕೆ ಪ್ರಬಲವಾಗಿ ಬೆಳೆಯುತ್ತಿದೆ ಎಂದು ಹೇಳಿದರು.
 ವಿದ್ಯಾರ್ಥಿಗಳು ಮೊದಲು ಜೀವನದಲ್ಲಿ ಶಿಸ್ತು ಬೆಳಸಿಕೊಳ್ಳಬೇಕು. ಯಾವುದೇ ಕ್ಷೇತ್ರದಲ್ಲಿ ಪ್ರಗತಿ ಹೊಂದಬೇಕಾದರೆ ಕ್ಷೇತ್ರದ ಬಗ್ಗೆ ತಿಳುವಳಿಕೆ ಅಗತ್ಯ. ತರಬೇತಿ ಪಡೆಯಲು ಇಚ್ಚಿಸುವವರು ಮೊದಲು ವಿಷಯ ಕುರಿತು ಆಸಕ್ತಿ ಬೆಳಸಿಕೊಳ್ಳಬೇಕು. ತರಬೇತಿಯ ಸಂಪೂರ್ಣ ಉಪಯೋಗ ಪಡೆದರೆ ಮಾತ್ರ ತರಬೇತಿಗೆ ನಿಜವಾದ ಅರ್ಥ ಸಿಕ್ಕಂತೆ ಎಂದರು.  
 ವಾರ್ತಾ ಮತ್ತು ಸಾರ್ವಜನಿಕ ಸಮಪರ್ಕ ಇಲಾಖೆ ಉಪ ನಿರ್ದೇಶಕರಾದ ಎ.ಆರ್.ಪ್ರಕಾಶ್, ಬಸವರಾಜು ಹಾಗೂ ಇಎಂಆರ್‍ಸಿ ನಿರ್ದೇಶಕರಾದ ನಿರಂಜನ ವಾನಳ್ಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

No comments:

Post a Comment